ಕಾರ್ಮಿಕರ ಪ್ರತಿಭಟನೆ: ತಾತ್ಕಾಲಿಕವಾಗಿ ಕಾರು ಉತ್ಪಾದನಾ ಘಟಕ ಮುಚ್ಚಿದ ಹ್ಯುಂಡೈ

ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಲಾಕ್‌ಡೌನ್ ಜಾರಿಗೆ ತರಲಾಗಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮವಾಗಿ ಆಟೋ ಉದ್ಯಮವು ಮತ್ತೆ ಸಂಕಷ್ಟದ ಸುಳಿಯಲ್ಲಿ ಸಿಲುಕಿದೆ.

ಕಾರ್ಮಿಕರ ಪ್ರತಿಭಟನೆ: ತಾತ್ಕಾಲಿಕವಾಗಿ ಕಾರು ಉತ್ಪಾದನಾ ಘಟಕ ಮುಚ್ಚಿದ ಹ್ಯುಂಡೈ

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಿಸಿಕೊಳ್ಳುತ್ತಿದ್ದ ಆಟೋ ಉದ್ಯಮವು ಇದೀಗ ಮತ್ತೊಮ್ಮೆ ಲಾಕ್‌ಡೌನ್ ಸಂಕಷ್ಟ ಎದುರಿಸುತ್ತಿದ್ದು, ದೇಶಾದ್ಯಾಂತ ನೆಲೆಗೊಂಡಿರುವು ಹಲವು ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದರೆ ಇನ್ನು ಕೆಲವು ಕಂಪನಿಗಳು ಉತ್ಪಾದನೆಯನ್ನು ಬಂದ್ ಮಾಡಿವೆ. ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೆ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಲಾಕ್‌ಡೌನ್ ನಿಯಮಗಳು ಉದ್ಯಮ ಚಟುವಟಿಕೆಗಳಿಗೆ ಬಿಸಿತುಪ್ಪವಾಗಿ ಪರಿಣಿಮಿಸಿದೆ.

ಕಾರ್ಮಿಕರ ಪ್ರತಿಭಟನೆ: ತಾತ್ಕಾಲಿಕವಾಗಿ ಕಾರು ಉತ್ಪಾದನಾ ಘಟಕ ಮುಚ್ಚಿದ ಹ್ಯುಂಡೈ

ಕೋವಿಡ್ 2ನೇ ಅಲೆ ಹೆಚ್ಚಳ ನಂತರ ಪ್ರಮುಖ ಆಟೋ ಕಂಪನಿಗಳು ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡುತ್ತಿದ್ದು, ವಾಹನ ಮಾರಾಟದಲ್ಲೂ ಕೂಡಾ ಹೊಸ ತಂತ್ರಗಳನ್ನು ಅಳವಡಿಸಿಕೊಂಡು ವೈರಸ್ ಹರಡುವಿಕೆ ತಡೆಯೊಂದಿಗೆ ಉದ್ಯಮ ವ್ಯವಹಾರ ಕೈಗೊಳ್ಳುತ್ತಿವೆ.

ಕಾರ್ಮಿಕರ ಪ್ರತಿಭಟನೆ: ತಾತ್ಕಾಲಿಕವಾಗಿ ಕಾರು ಉತ್ಪಾದನಾ ಘಟಕ ಮುಚ್ಚಿದ ಹ್ಯುಂಡೈ

ಇದರ ನಡುವೆ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ ಪ್ರಮುಖ ವಾಹನ ಕಂಪನಿಗಳು ಹೊಸ ವಾಹನ ಉತ್ಪಾದನೆಯನ್ನು ಸುಮಾರು ಒಂದು ವಾರ ಬಂದ್ ಮಾಡುವುದಾಗಿ ಘೋಷಣೆ ಮಾಡಿದ್ದವು.

ಕಾರ್ಮಿಕರ ಪ್ರತಿಭಟನೆ: ತಾತ್ಕಾಲಿಕವಾಗಿ ಕಾರು ಉತ್ಪಾದನಾ ಘಟಕ ಮುಚ್ಚಿದ ಹ್ಯುಂಡೈ

ಈ ತಿಂಗಳ ಮಧ್ಯಂತರದಲ್ಲಿ ವಾಹನ ಉತ್ಪಾದನೆ ಬಂದ್ ಮಾಡಿದ್ದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಈ ತಿಂಗಳ ಕೊನೆಯ ವಾರದಲ್ಲಿ ಲಾಕ್‌ಡೌನ್‌ನಿಂದ ವಿನಾಯ್ತಿ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದವು. ಆದರೆ ವಿವಿಧ ರಾಜ್ಯ ಸರ್ಕಾರಗಳು ಉತ್ಪಾದನಾ ವಲಯಕ್ಕೆ ಕೆಲವು ವಿನಾಯ್ತಿ ನೀಡಿದರೂ ಲಾಕ್‌ಡೌನ್ ಕಠಿಣ ನಿಯಮಗಳಿಂದ ಹಿಂದೆ ಸರಿಯದೆ ಇನ್ನು ಎರಡು ವಾರಗಳ ಕಾಲ ನಿರ್ಬಂಧ ಹೇರಿವೆ.

ಕಾರ್ಮಿಕರ ಪ್ರತಿಭಟನೆ: ತಾತ್ಕಾಲಿಕವಾಗಿ ಕಾರು ಉತ್ಪಾದನಾ ಘಟಕ ಮುಚ್ಚಿದ ಹ್ಯುಂಡೈ

ಕಳೆದ ವಾರ ಚೆನ್ನೈ ಹೊರವಲಯದಲ್ಲಿರುವ ಕಾರು ಉತ್ಪಾದನಾ ಘಟಕವನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ್ದ ಹ್ಯುಂಡೈ ಕಂಪನಿಯು ಲಾಕ್‌ಡೌನ್ ವಿಸ್ತರಣೆಯ ನಡುವೆಯೂ ಹೊಸ ಸುರಕ್ಷಾ ಕ್ರಮಗಳೊಂದಿಗೆ ಈ ವಾರದ ಆರಂಭದಲ್ಲಿ ಉತ್ಪಾದನೆಯನ್ನು ಪುನಾರಂಭಿತ್ತು.

ಕಾರ್ಮಿಕರ ಪ್ರತಿಭಟನೆ: ತಾತ್ಕಾಲಿಕವಾಗಿ ಕಾರು ಉತ್ಪಾದನಾ ಘಟಕ ಮುಚ್ಚಿದ ಹ್ಯುಂಡೈ

ಆದರೆ ಕಾರು ಉತ್ಪಾದನಾ ಘಟಕದಲ್ಲಿ ಹೆಚ್ಚಿನ ಮಟ್ಟದ ಸುರಕ್ಷತೆ ಇಲ್ಲದಿರುವ ಬಗ್ಗೆ ಆಡಳಿತ ಮಂಡಳಿಯ ವಿರುದ್ದ ಆಕ್ರೋಶ ಹೊರಹಾಕಿದ ಕಾರ್ಮಿಕರು ಕಾರು ಉತ್ಪಾದನೆಗೆ ಸಹಕರಿಸದೆ ಸುರಕ್ಷತೆಗೆ ಆದ್ಯತೆ ನೀಡುವಂತೆ ಉತ್ಪಾದನಾ ಘಟಕದ ಆವರಣದಲ್ಲಿ ಪ್ರತಿಭಟಿಸಿದ್ದಾರೆ.

ಕಾರ್ಮಿಕರ ಪ್ರತಿಭಟನೆ: ತಾತ್ಕಾಲಿಕವಾಗಿ ಕಾರು ಉತ್ಪಾದನಾ ಘಟಕ ಮುಚ್ಚಿದ ಹ್ಯುಂಡೈ

ಕೋವಿಡ್ ಹೆಚ್ಚಳ ಪರಿಣಾಮ ಕಳೆದ ಕೆಲ ತಿಂಗಳಿನಿಂದ ಹಲವಾರು ಕಾರ್ಮಿಕರು ಮೃತಪಟ್ಟರು ಕಾರ್ಮಿಕರ ಭವಿಷ್ಯದ ಬಗೆಗೆ ಕಂಪನಿಯು ಯಾವುದೇ ಪರಿಹಾರ ಕ್ರಮಗಳನ್ನು ಪ್ರಕಟಿಸುವುದರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಕಾರ್ಮಿಕರ ಪ್ರತಿಭಟನೆ: ತಾತ್ಕಾಲಿಕವಾಗಿ ಕಾರು ಉತ್ಪಾದನಾ ಘಟಕ ಮುಚ್ಚಿದ ಹ್ಯುಂಡೈ

ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಂತೆ ಮುಂದಿನ ಐದು ದಿನಗಳ ಕಾಲ ಮತ್ತೆ ಕಾರು ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿರುವ ಹ್ಯುಂಡೈ ಕಂಪನಿಯು ಶೀಘ್ರದಲ್ಲೇ ಎಲ್ಲಾ ಅಗತ್ಯ ಸುರಕ್ಷ ಕ್ರಮಗಳೊಂದಿಗೆ ಉತ್ಪಾದನೆ ಪುನಾರಂಭಿಸುವ ಭರವಸೆ ನೀಡಿದ್ದು, ಕಾರ್ಮಿಕರ ಸುರಕ್ಷತೆಯೇ ಮೊದಲ ಆದ್ಯತೆ ಎಂದಿದೆ.

ಕಾರ್ಮಿಕರ ಪ್ರತಿಭಟನೆ: ತಾತ್ಕಾಲಿಕವಾಗಿ ಕಾರು ಉತ್ಪಾದನಾ ಘಟಕ ಮುಚ್ಚಿದ ಹ್ಯುಂಡೈ

ಇನ್ನು ಆರ್ಥಿಕ ಸಂಕಷ್ಟದ ನಡುವೆಯೂ ಆಟೋ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡುತ್ತಿದ್ದು, ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳಲ್ಲಿ ಒಂದಾಗಿರುವ ಹ್ಯುಂಡೈ ಮೋಟಾರ್ಸ್ ಕೂಡಾ ಕೋವಿಡ್ ನಿಯಂತ್ರಣಕ್ಕಾಗಿ ಹಲವಾರು ರೀತಿಯ ನೆರವು ನೀಡಿದೆ.

Most Read Articles

Kannada
English summary
Hyundai management has decided to temporarily suspend the plant operations for a period of 5 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X