Just In
- 3 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 4 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 5 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 5 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅತ್ಯಾಧುನಿಕ ಸೌಲಭ್ಯವುಳ್ಳ ಐಯಾನಿಕ್ 5 ಇವಿ ಕಾರಿನ ವಿಡಿಯೋ ಬಿಡುಗಡೆ ಮಾಡಿದ ಹ್ಯುಂಡೈ
ಜಾಗತಿಕ ಮಟ್ಟದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ದಕ್ಷಿಣ ಕೊರಿಯಾದ ಹ್ಯುಂಡೈ ಮೋಟಾರ್ಸ್ ಕಂಪನಿಯು ತನ್ನ ಹೊಚ್ಚ ಹೊಸ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಐಯಾನಿಕ್ 5 ಕ್ರಾಸ್ಓವರ್ ಎಸ್‌ಯುವಿ ಮಾದರಿಯ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸುವ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಕೊನಾ ಇವಿ ಮೂಲಕ ಈಗಾಗಲೇ ಜಾಗತಿಕ ಮಾರುಕಟ್ಟೆಗಳಲ್ಲಿ ಭಾರೀ ಬೇಡಿಕೆ ಪಡೆದುಕೊಂಡಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಇವಿ ಕಾರು ಉತ್ಪನ್ನಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗುತ್ತಿದ್ದು, ಮಹತ್ವಾಕಾಂಕ್ಷೆಯ ಐಯಾನಿಕ್ 5 ಎಲೆಕ್ಟ್ರಿಕ್ ಕಾರು ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗೆ ಸಿದ್ದವಾಗುತ್ತಿದೆ. 2025ರ ವೇಳೆಗೆ ಒಟ್ಟು 23 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಿರುವ ಹ್ಯುಂಡೈ ಕಂಪನಿಯು ಹೊಸ ಐಯಾನಿಕ್ 5 ಕಾರನ್ನು ಫ್ಯೂಚರಿಸ್ಟಿಕ್ ವಿನ್ಯಾಸಗಳೊಂದಿಗೆ ಅಭಿವೃದ್ದಿಗೊಳಿಸಿದೆ.

ವಿಸ್ತೃತ ವೀಲ್‌ಬೇಸ್‌ನ ಕಾರಣದಿಂದಾಗಿ ಐಯಾನಿಕ್ 5 ಕಾರು ಹಲವಾರು ವಿಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಎಲೆಕ್ಟ್ರಿಕ್ ಕಾರನ್ನು ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ತಂತ್ರಜ್ಞಾನದಡಿ ನಿರ್ಮಾಣ ಮಾಡಲಾಗಿದೆ.

ಹೊಸ ಕಾರು ಮಾದರಿಯನ್ನು ಆಧರಿಸಿ ಐಯಾನಿಕ್ 6 ಸಲೂನ್ ಮತ್ತು ಐಯಾನಿಕ್ 7 ಎಸ್‌ಯುವಿ ಕೂಡಾ ಒಂದೇ ವಾಸ್ತುಶಿಲ್ಪವನ್ನು ಆಧರಿಸಿ ನಿರ್ಮಾಣಗೊಳ್ಳಲಿದ್ದು, ಹೊಸ ಕಾರಿನ ವಿನ್ಯಾಸದ ಕುರಿತಾದ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ.

ಆಕರ್ಷಕ ವಿನ್ಯಾಸ ಹೊಂದಿರುವ ಹೊಸ ಐಯಾನಿಕ್ 5 ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿ ಡ್ಯುಯಲ್ ಸ್ಕ್ರೀನ್ ಸೆಟಪ್‌ನೊಂದಿಗೆ ಬ್ಲ್ಯೂ ಲಿಂಕ್ ಕಾರ್ ಕನೆಕ್ಟ್ ಒಳಗೊಂಡ 12 ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಸಮಾನವಾದ ದೊಡ್ಡ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದ್ದು, ಐಯಾನಿಕ್ 5 ಕಾರು ಮಾದರಿಯು 4635 ಎಂಎಂ ಉದ್ದ, 1890 ಎಂಎಂ ಅಗಲ, 1605 ಎಂಎಂ ಎತ್ತರ ಮತ್ತು 3000 ಎಂಎಂ ವೀಲ್‌ಬೇಸ್‌ನೊಂದಿಗೆ ವಿಶಾಲವಾದ ಕ್ಯಾಬಿನ್ ಒದಗಿಸಲಿದೆ.
ಹೊಸ ಕಾರು ಗ್ರಾಹಕರ ಬೇಡಕೆಯೆಂತೆ ಎರಡು ಪ್ರಮುಖ ಪವರ್‌ಟ್ರೇನ್ ಸೆಟಪ್ ಮತ್ತು ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿದ್ದು, ಹೊಸ ಕಾರಿನಲ್ಲಿ ಚಾರ್ಜಿಂಗ್ ತಂತ್ರಜ್ಞಾನವು ಎಲೆಕ್ಟ್ರಿಕ್ ವಾಹನ ಮಾರಾಟದಲ್ಲೇ ಹೊಸ ಆವಿಷ್ಕಾರಗಳಿಗೆ ಮುನ್ನಡೆ ಬರೆದಿದೆ.

ಐಯಾನಿಕ್ 5 ಕಾರಿನಲ್ಲಿ ಹ್ಯುಂಡೈ ಕಂಪನಿಯು 58 ಕಿ.ವ್ಯಾ ಮತ್ತು 72.6 ಕಿ.ವ್ಯಾ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲು ನಿರ್ಧರಿಸಿದ್ದು, ಆರಂಭಿಕ ಮಾದರಿಯು 167 ಬಿಹೆಚ್‌ಪಿ ಉತ್ಪಾದಿಯೊಂದಿಗೆ ಕೇವಲ 8.5 ಸೆಕೆಂಡುಗಳಲ್ಲಿ ಗಂಟೆಗೆ ಸೊನ್ನೆಯಿಂದ ನೂರು ಕಿಮೀ ವೇಗವನ್ನು ತಲುಪುತ್ತದೆ.

ದೊಡ್ಡ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರುವ ಐಯಾನಿಕ್ 5 ಮಾದರಿಯು 302 ಬಿಹೆಚ್‌ಪಿ ಮತ್ತು 605 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಈ ಕೇವಲ 5.2 ಸೆಕೆಂಡುಗಳಲ್ಲಿ ಗಂಟೆಗೆ 0-100 ಕಿ.ಮೀ ವೇಗದೊಂದಿಗೆ ಪ್ರತಿ ಗಂಟೆಗೆ 185 ಕಿ.ಮೀ ಟಾಪ್ ಸ್ಪೀಡ್ ತಲುಪುತ್ತದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಐಯಾನಿಕ್ 5 ಕಾರು ಬ್ಯಾಟರಿ ಪ್ಯಾಕ್ ಆಧಾರದ ಪ್ರತಿ ಚಾರ್ಜ್‌ಗೆ 470-480 ಕಿ.ಮೀ ಮೈಲೇಜ್ ಹಿಂದಿಗಿರುಗಿಸಲಿದ್ದು, ಆಧುನಿಕ ತಂತ್ರಜ್ಞಾನ ಪ್ರೇರಿತ ಚಾರ್ಜಿಂಗ್ ಸೌಲಭ್ಯದೊಂದಿಗೆ ಕೇವಲ 5 ನಿಮಿಷಗಳಲ್ಲಿ ಚಾರ್ಜ್ ಮಾಡುವ ಮೂಲಕ ಗರಿಷ್ಠ 100 ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

ಹ್ಯುಂಡೈ ಕಂಪನಿಯು ಹೊಸದಾಗಿ ನಿರ್ಮಾಣ ಮಾಡಿರುವ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಕಂಪನಿಯ ಭವಿಷ್ಯದ ಕಾರು ಮಾದರಿಗಳ ನಿರ್ಮಾಣಕ್ಕೆ ಉತ್ತಮ ವೇದಿಕೆಯಾಗಿದ್ದು, ಐಯಾನಿಕ್ 5 ಕಾರು ಇದೇ ವರ್ಷಾಂತ್ಯದೊಳಗೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಬಿಡುಗಡೆಯಾಗಲಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಭಾರತದಲ್ಲಿ ಸದ್ಯಕ್ಕೆ ಕೊನಾ ಮಾದರಿಯ ಮಾರಾಟವನ್ನು ಹೆಚ್ಚಿಸುವತ್ತ ಮಾತ್ರ ಯೋಜನೆ ಹೊಂದಿರುವ ಹ್ಯುಂಡೈ ಕಂಪನಿಯು ಮುಂದಿನ ಕೆಲವು ವರ್ಷಗಳಲ್ಲಿ ಹಂತ ಹಂತವಾಗಿ ಬಜೆಟ್ ಮಾದರಿಗಳಿಂದ ಫ್ಯೂಚರಿಸ್ಟಿಕ್ ವಿನ್ಯಾಸವುಳ್ಳ ಎಲೆಕ್ಟ್ರಿಕ್ ಕಾರುಗಳನ್ನು ವಿಶ್ವಾದ್ಯಂತ ಮಾರಾಟ ಮಾಡುವ ಗುರಿಹೊಂದಿದೆ.