ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಕೋವಿಡ್ 2ನೇ ಅಲೆಯ ಪರಿಣಾಮ ಆರ್ಥಿಕ ಚಟುವಟಿಕೆಗಳಲ್ಲಿ ಏರಿಳಿತ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಹೊಸ ವಾಹನ ಮಾರಾಟದಲ್ಲಿ ಕುಸಿತ ಕಂಡುಬಂದಿದೆ. ಬಹುತೇಕ ಕಾರು ಕಂಪನಿಗಳ ಹೊಸ ವಾಹನಗಳ ಮಾರಾಟದಲ್ಲಿ ಭಾರೀ ಪ್ರಮಾಣದ ಇಳಿಕೆಯಾಗಿದ್ದು, ಹ್ಯುಂಡೈ ಕಂಪನಿಯು ಸೆಪ್ಟೆಂಬರ್ ಅವಧಿಯಲ್ಲಿ ಹೆಚ್ಚಿನ ಮಟ್ಟದ ಕುಸಿತ ಅನುಭವಿಸಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಹ್ಯುಂಡೈ ಕಂಪನಿಯ ಕೋವಿಡ್ ಪರಿಣಾಮ ಡಿಜಿಟಲ್ ಪ್ಲ್ಯಾಟ್‌ಫಾರ್ಮ್‌ಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಸುರಕ್ಷಿತ ಕಾರು ಮಾರಾಟ ಪ್ರಕ್ರಿಯೆಯ ನಡುವೆಯೂ ಹ್ಯುಂಡೈ ಕಂಪನಿಯ ಸೆಪ್ಟೆಂಬರ್ ಅವಧಿಯ ಕಾರು ಮಾರಾಟದಲ್ಲಿ ಹಿನ್ನಡೆ ಕಂಡಿದೆ. ಕಳೆದ ತಿಂಗಳು ಹ್ಯುಂಡೈ ಕಂಪನಿಯು 45,791 ಯುನಿಟ್ ಮಾರಾಟಗೊಳಿಸಿದ್ದು, ಕಳೆದ ವರ್ಷದ ಸೆಪ್ಟೆಂಬರ್ ಅವಧಿಗಿಂತಲೂ ಶೇ.35 ರಷ್ಟು ಇಳಿಕೆ ಕಂಡಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

2020ರ ಸೆಪ್ಟೆಂಬರ್ ಅವಧಿಯಲ್ಲಿ ಸುಮಾರು 59,913 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಹ್ಯುಂಡೈ ಕಂಪನಿಯು ಈ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿ ಶೇ. 35 ರಷ್ಟು ಹಿನ್ನಡೆ ಕಂಡಿದ್ದು, ಮುಂಬರುವ ದಸರಾ ಮತ್ತು ದೀಪಾವಳಿ ವೇಳೆಗೆ ಕಾರು ಮಾರಾಟವು ಸುಧಾರಿಸುವ ನೀರಿಕ್ಷೆಗಳಿವೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಹ್ಯುಂಡೈ ಕಂಪನಿಯು 45,791 ಯನಿಟ್ ಕಾರು ಮಾರಾಟದಲ್ಲಿ 33,087 ಯುನಿಟ್ ಕಾರುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದು, 12,704 ಯುನಿಟ್‌ಗಳನ್ನು ವಿದೇಶಿ ಮಾರುಕಟ್ಟೆಗೆ ರಫ್ತು ಮಾಡಿದ್ದು, ಕಳೆದ ವರ್ಷದ ಸೆಪ್ಟೆಂಬರ್ ಅವಧಿಗಿಂತಲೂ ಈ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿನ ಕಾರು ರಫ್ತು ಪ್ರಮಾಣವು ಶೇ.32ರಷ್ಟು ಹೆಚ್ಚಳವಾಗಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಹ್ಯುಂಡೈ ಕಂಪನಿಯು ಕಾರು ಮಾರಾಟ ಹೆಚ್ಚಳಕ್ಕಾಗಿ ಹಲವಾರು ಹೊಸ ಉಪಕ್ರಮಗಳನ್ನು ಪ್ರಕಟಿಸಿದ್ದು, ನ್ಯೂ ಜನರೇಷನ್ ಕ್ರೆಟಾ ಮತ್ತು ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಹ್ಯುಂಡೈ ಕಂಪನಿಯು ಕಳೆದ ಜೂನ್‌ನಲ್ಲಿ ತನ್ನ ಬಹುನೀರಿಕ್ಷಿತ ಅಲ್ಕಾಜರ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸುವ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ವೆರಿಯೆಂಟ್ ಒಂದನ್ನು ಪರಿಚಯಿಸಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಹೊಸ ಅಲ್ಕಾಜರ್ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿ ಹಲವಾರು ಹೊಸ ತಾಂತ್ರಿಕ ಸೌಲಭ್ಯ, ಅತ್ಯುತ್ತಮ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆಯೊಂದಿಗೆ ಮಾರಾಟ ಮಾರಾಟವಾಗುತ್ತಿದ್ದು, ಹೊಸ ಕಾರಿ ಪ್ಲ್ಯಾಟಿನಂ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಹೊಂದಿರುವ 7 ಸೀಟರ್ ಸೌಲಭ್ಯದ ಪ್ಲ್ಯಾಟಿನಂ(ಆಪ್ಷನ್) ಮಾದರಿಯನ್ನು ಬಿಡುಗಡೆ ಮಾಡಲಾಗಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಪ್ಲ್ಯಾಟಿನಂ ಮಾದರಿಯಲ್ಲಿ ಈ ಹಿಂದೆ 6 ಸೀಟರ್ ಮಾದರಿಯನ್ನು ಮಾತ್ರವೇ ಬಿಡುಗಡೆ ಮಾಡಿದ್ದ ಹ್ಯುಂಡೈ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ 7 ಸೀಟರ್ ಸೌಲಭ್ಯ ಹೊಂದಿರುವ ಡೀಸೆಲ್ ಮ್ಯಾನುವಲ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಹೊಸ 7 ಸೀಟರ್ ಮಾದರಿಯು 6 ಸೀಟರ್ ಹೊಂದಿರುವ ಪ್ಲ್ಯಾಟಿನಂ ಮಾದರಿಗಿಂತಲೂ ರೂ. 15 ಸಾವಿರ ಕಡಿಮೆ ಬೆಲೆ ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ.19.63 ಲಕ್ಷ ಬೆಲೆ ಹೊಂದಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಅಲ್ಕಾಜರ್ ಕಾರು ಪ್ಲ್ಯಾಟಿನಂ, ಪ್ರೆಸ್ಟೀಜ್, ಸಿಗ್ನೆಚೆರ್, ಪ್ಲ್ಯಾಟಿನಂ ಆಪ್ಷನ್, ಪ್ರೆಸ್ಟೀಜ್ ಆಪ್ಷನ್ ಮತ್ತು ಸಿಗ್ನೆಚೆರ್ ಆಪ್ಷನ್ ಎನ್ನುವ ಆರು ವೆರಿಯೆಂಟ್‌ಗಳೊಂದಿಗೆ ಟೈಪೂನ್ ಸಿಲ್ವರ್, ಟೈಟಾನ್ ಗ್ರೇ, ಟೈಗಾ ಬ್ರೌನ್, ಸ್ಟೇರಿ ನೈಟ್, ಪೊಲಾರ್ ವೈಟ್ ಮತ್ತು ಪ್ಯಾಂಥಮ್ ಬ್ಲ್ಯಾಕ್ ಬಣ್ಣ ಸೇರಿ ಎರಡು ಡ್ಯುಯಲ್ ಟೋನ್ ಮಾದರಿಗಳು ಖರೀದಿಗೆ ಲಭ್ಯವಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಇನ್ನು ಹೊಸ ಅಲ್ಕಾಜರ್ ಕಾರು ಅತ್ಯುತ್ತಮ ಫೀಚರ್ಸ್‌, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆ ಹೊಂದಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಆರಂಭಿಕ ಮಾದರಿಗಳಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.30 ಲಕ್ಷದಿಂದ ಟಾಪ್ ಎಂಡ್ ಮಾದರಿಯ ರೂ. 19.99 ಲಕ್ಷ ಬೆಲೆ ಹೊಂದಿದ್ದು, 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಹೊಸ ಕಾರು 4,500 ಎಂಎಂ ಉದ್ದ, 1,790 ಎಂಎಂ ಅಗಲ, 1,675 ಎಂಎಂ ಎತ್ತರ ಮತ್ತು 2,760 ಎಂಎಂ ವೀಲ್ಹ್‌ಬೆಸ್ ಪಡೆದುಕೊಂಡಿದ್ದು, ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಧರಿಸಿರುವ ಹೊಸ ಅಲ್ಕಾಜರ್‌ನಲ್ಲಿ ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ನೀಡಲಾಗಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಹೊಸ ಕಾರಿನಲ್ಲಿರುವ 2.0-ಲೀಟರ್ ಎಂಪಿಐ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಮಾದರಿಗಳು ಉತ್ತಮ ಇಂಧನ ದಕ್ಷತೆಯೊಂದಿಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದ್ದು, ಪೆಟ್ರೋಲ್ ಮಾದರಿಯು 159-ಬಿಎಚ್‌ಪಿ ಉತ್ಪಾದಿಸಿದ್ದಲ್ಲಿ ಡೀಸೆಲ್ ಮಾದರಿಯು 115-ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲಿ ಶೇ.35ರಷ್ಟು ಇಳಿಕೆ ಕಂಡ Hyundai ಕಾರು ಮಾರಾಟ

ಎರಡು ಎಂಜಿನ್‌ಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಆಯ್ಕೆಗಳಿದ್ದು, ಪೆಟ್ರೋಲ್ ಮಾದರಿಯ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 14.5 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 14.5 ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ 1.5 ಲೀಟರ್ ಡೀಸೆಲ್ ಮಾದರಿಯ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 20.4 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 18.1 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

Most Read Articles

Kannada
English summary
Hyundai motor india sales 45791 units in september.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X