Just In
Don't Miss!
- Sports
ಕೋಲ್ಕತ್ತಾ, ಅಹ್ಮದಾಬಾದ್ ಸೇರಿ 5 ತಾಣಗಳಲ್ಲಿ 2021ರ ಐಪಿಎಲ್
- News
"ಕಾಂಗ್ರೆಸ್ ಈಗ ಒಡೆದ ಮನೆ; ಮೂರು ಗುಂಪುಗಳ ನಡುವೆ ನಿರಂತರ ಗುದ್ದಾಟ''
- Finance
30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ ಕ್ಯಾಪ್ಜೆಮಿನಿ
- Movies
ರಾಬರ್ಟ್ ಸಂಭ್ರಮ: ವಿನಯದಿಂದ ತೆಲುಗು ಅಭಿಮಾನಿಗಳ ಮನಸು ಕದ್ದ ದರ್ಶನ್
- Lifestyle
ಮಾರ್ಚ್ ತಿಂಗಳಲ್ಲಿ ವಿವಾಹವಾಗಲು ಇಲ್ಲಿದೆ ಶುಭದಿನಾಂಕಗಳು
- Education
RBI Grade B Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ರ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ಹ್ಯುಂಡೈ
ಹೊಸ ವಾಹನಗಳ ಉತ್ಪಾದನಾ ವೆಚ್ಚ ನಿರ್ವಹಣೆಗಾಗಿ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ತಮ್ಮ ವಿವಿಧ ವಾಹನ ಮಾದರಿಗಳ ಬೆಲೆಯನ್ನು ಹೆಚ್ಚಿಸುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರುಗಳ ಬೆಲೆ ಹೆಚ್ಚಳ ಮಾಡಿದೆ.

ಹೊಸ ವಾಹನಗಳ ಬಿಡಿಭಾಗಗಳ ಬೆಲೆಯು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳಕ್ಕಾಗಿ ನಿರ್ಧರಿಸಿದ್ದು, ಹ್ಯುಂಡೈ ಮೋಟಾರ್ಸ್ ಕೂಡಾ ಮೊದಲ ಹಂತದಲ್ಲಿ ಕ್ರೆಟಾ ಕಾರು ಮಾದರಿಯ ಬೆಲೆಯಲ್ಲಿ ಶೇ. 1.50 ರಿಂದ ಶೇ. 3 ರಷ್ಟು ಬೆಲೆ ಹೆಚ್ಚಿಸಿದೆ. ಕ್ರೆಟಾ ಹೊಸ ದರ ಪಟ್ಟಿ ಪ್ರಕಟದ ನಂತರ ಕಾರಿನ ಬೆಲೆಯಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕನಿಷ್ಠ ರೂ. 16,900 ಮತ್ತು ಗರಿಷ್ಠ ರೂ. 31,500 ಬೆಲೆ ಹೆಚ್ಚಳ ಮಾಡಿದೆ.

ಪರಿಸ್ಕೃತ ದರ ಪಟ್ಟಿಯಲ್ಲಿ ಕ್ರೆಟಾ ಕಂಪ್ಯಾಕ್ಟ್ ಎಸ್‌ಯವಿ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಬೆಲೆಯು ರೂ. 9.81 ಲಕ್ಷದಿಂದ ರೂ. 9.99 ಲಕ್ಷಕ್ಕೆ ಏರಿಕೆಯಾಗಿದ್ದು, ಟಾಪ್ ಎಂಡ್ ಕಾರಿನ ಬೆಲೆಯು ರೂ.17.33 ಲಕ್ಷದಿಂದ ರೂ.17.53 ಲಕ್ಷಕ್ಕೆ ಏರಿಕೆಯಾಗಿದೆ.

ಹ್ಯುಂಡೈ ಮೋಟಾರ್ಸ್ ಕಂಪನಿಯು ಕ್ರೆಟಾ ಹೊಸ ದರವನ್ನು ಇಂದಿನಿಂದಲೇ ಅನ್ವಯವಾಗುವಂತೆ ಅಧಿಕೃತವಾಗಿ ಜಾರಿಗೊಳಿಸಿದ್ದು, ನ್ಯೂ ಜನರೇಷನ್ ಕ್ರೆಟಾ ಬಿಡುಗಡೆಯ ನಂತರ ಇದು ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡಂತಾಗಿದೆ.

2020ರ ಮಾರ್ಚ್‌ನಲ್ಲಿ ಬಿಡುಗಡೆಯಾಗಿದ್ದ ನ್ಯೂ ಜನರೇಷನ್ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಎಮಿಷನ್ ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮಾರಾಟವನ್ನು ಹೊಂದಿದೆ.

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಹೊಸ ಎಮಿಷನ್ ಜಾರಿ ನಂತರ ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ.

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡು ಯಶಸ್ವಿ ಐದು ವರ್ಷಗಳನ್ನು ಪೂರೈಸಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಮಾರಾಟದಲ್ಲಿ ಇಂದಿಗೂ ಕೂಡಾ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ಆಕರ್ಷಕ ಬೆಲೆ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ವಿನೂತನ ವಿನ್ಯಾಸದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಹೊಂದಿರುವ ಕ್ರೆಟಾ ಕಾರು ಕಾಲ ಕಾಲಕ್ಕೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳುತ್ತಾ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕ್ರೆಟಾ ಕಾರು ಭಾರತದಲ್ಲಿ ಇದುವರೆಗೆ ಬರೋಬ್ಬರಿ 5 ಲಕ್ಷ ಯುನಿಟ್ ಮಾರಾಟಗೊಳ್ಳುವ ಮೂಲಕ ಹ್ಯುಂಡೈ ಕಂಪನಿಗೆ ಭಾರೀ ಪ್ರಮಾಣದ ಆದಾಯ ತಂದುಕೊಟ್ಟಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.