ಕೋವಿಡ್ ಸಂಕಷ್ಟ: ಹೊಸ ಅಲ್ಕಾಜರ್ ಕಾರು ಬಿಡುಗಡೆ ಮುಂದೂಡಿದ ಹ್ಯುಂಡೈ
ದೇಶಾದ್ಯಂತ ಕೋವಿಡ್ ಎರಡನೇ ಅಲೆಯಿಂದಾಗಿ ಆರ್ಥಿಕ ಚಟುವಟಿಕೆಗಳಲ್ಲಿ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಕೋವಿಡ್ ಸಂಕಷ್ಟದಿಂದ ಆಟೋ ಉದ್ಯಮ ಸೇರಿದಂತೆ ಎಲ್ಲಾ ವಲಯಗಳು ಆರ್ಥಿಕ ಮುಗ್ಗಟ್ಟು ಎದುರಿಸುತ್ತಿವೆ.

ಕೋವಿಡ್ ಮೊದಲ ಅಲೆ ನಂತರ ಮಧ್ಯಂತರದಲ್ಲಿ ತುಸು ಸುಧಾರಣೆ ಉದ್ಯಮ ಚಟುವಟಿಕೆಗಳು ಇದೀಗ ಮತ್ತೆ ನಷ್ಟದ ಪರಿಸ್ಥಿತಿಗೆ ಸಿಲುಕಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಆಟೋ ಉತ್ಪಾದನಾ ಕಂಪನಿಗಳು ಕೂಡಾ ತಮ್ಮ ಹೊಸ ಯೋಜನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿವೆ. ಹ್ಯುಂಡೈ ಮೋಟಾರ್ಸ್ ಕಂಪನಿಯು ಕೂಡಾ ಇದೇ ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡಬೇಕಿದ್ದ ಅಲ್ಕಾಜರ್ ಕಾರು ಮಾದರಿಯನ್ನು ಸದ್ಯಕ್ಕೆ ಬಿಡುಗಡೆ ಮಾಡದಿರಲು ನಿರ್ಧರಿಸಿದೆ.

ಸದ್ಯದ ಪರಿಸ್ಥಿತಿ ನೆಲಚ್ಚುತ್ತಿರುವ ಆರ್ಥಿಕ ಪರಿಸ್ಥಿತಿಯು ತುಸು ಸುಧಾರಣೆಗೊಂಡ ನಂತರವಷ್ಟೇ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಸದ್ಯಕ್ಕೆ ಮಾರುಕಟ್ಟೆಯಲ್ಲಿರುವ ಕಾರು ಮಾದರಿಗಳ ಮಾರಾಟದ ಮೇಲೆ ಮಾತ್ರವೇ ಗಮನಹರರಿಸಲು ಮುಂದಾಗಿದೆ.

ಹ್ಯುಂಡೈ ಮಾತ್ರವಲ್ಲ ಹಲವಾರು ವಾಹನ ಕಂಪನಿಗಳು ಈ ತಿಂಗಳಾಂತ್ಯಕ್ಕೆ ತಮ್ಮ 2021ರ ವಾಹನ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದವು. ಆದರೆ ಕೋವಿಡ್ ಅಬ್ಬರ ಹಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಯಲ್ಲಿ ಭಾರೀ ಪ್ರಮಾಣದಲ್ಲಿ ಕುಸಿತ ಕಾಣುವ ಲಕ್ಷಣಗಳು ದಟ್ಟವಾಗಿದ್ದು, ಹೊಸ ವಾಹನಗಳ ಬಿಡುಗಡೆಯು ಇನ್ನು ಕೆಲ ತಿಂಗಳನ್ನೇ ತೆಗೆದುಕೊಳ್ಳಬಹುದು.

ಇನ್ನು ಹ್ಯುಂಡೈ ಕಂಪನಿಯು ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಧರಿಸಿ ಹೊಸ ಅಲ್ಕಾಜರ್ ಕಾರು ಮಾದರಿಯನ್ನು ಅಭಿವೃದ್ದಿಗೊಳಿಸಿದ್ದು, ಅಲ್ಕಾಜರ್ ಕಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ 6 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಮಾರಾಟಗೊಳ್ಳಲು ಸಜ್ಜಾಗಿದೆ. ಹೊಸ ಅಲ್ಕಾಜರ್ ಕಾರು ಮಾದರಿಯು ಕ್ರೆಟಾ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಖರೀದಿಗೆ ಲಭ್ಯವಾಗಲಿದ್ದು, ವಿಸ್ತರಿತ ಕ್ಯಾಬಿನ್ ಮೂಲಕ ಮೂರು ಸಾಲಿನ ಆಸನಗಳೊಂದಿಗೆ 7 ಸೀಟರ್ ಸೌಲಭ್ಯವನ್ನು ಅಚ್ಚುಕಟ್ಟಾಗಿ ಜೋಡಣೆ ಮಾಡಲಾಗಿದೆ.

ಹೊಸ ಕಾರಿನಲ್ಲಿ ಹೈ ಎಂಡ್ ಮಾದರಿಯಾಗಿ 6 ಸೀಟರ್ ಆವೃತ್ತಿಯು ಮಾರಾಟಗೊಳ್ಳಲಿದ್ದು, ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದೆ.

ಅಲ್ಕಾಜರ್ ಕಾರಿನ 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದ್ದು, ಹಿಂಬದಿಯ ಸವಾರರಿಗೂ ಆರಾಮದಾಯಕ ಪ್ರಯಾಣಕ್ಕಾಗಿ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳನ್ನು ನೀಡಲಾಗಿದೆ.

ಅಲ್ಕಾಜರ್ ಕಾರು ಕ್ರೆಟಾ 5 ಸೀಟರ್ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಇತ್ತೀಚೆಗೆ ಪ್ರಮುಖ ಕಾರು ಕಂಪನಿಗಳು 5 ಸೀಟರ್ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲಿ 5 ಸೀಟರ್ ಜೊತೆಗೆ 7 ಸೀಟರ್ ಮಾದರಿಯನ್ನು ಪರಿಚಯಿಸುತ್ತಿರುವ ಅಲ್ಕಾಜರ್ ಬಿಡುಗಡೆಗೆ ಪ್ರಮುಖ ಕಾರಣವಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹ್ಯುಂಡೈ ಕಂಪನಿಯು ಹೊಸ ಅಲ್ಕಾಜರ್ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ನೀಡುತ್ತಿದ್ದು, ಹೈ ಎಂಡ್ ಮಾದರಿಗಳಲ್ಲಿ 2.0-ಲೀಟರ್ ಎಂಜಿನ್ ಮತ್ತು 1.5-ಲೀಟರ್ ಎಂಜಿನ್ ಜೋಡಣೆ ಮಾಡಲಾಗಿದ್ದು, 2.0-ಲೀಟರ್ ಎಂಜಿನ್ ಮಾದರಿಯನ್ನು ಟ್ಯುಸಾನ್ ಮತ್ತು ಎಲಾಂಟ್ರಾ ಮಾದರಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.

1.5-ಲೀಟರ್ ಪೆಟ್ರೋಲ್ ಮಾದರಿಯನ್ನು ಕ್ರೆಟಾ ಮಾದರಿಯಿಂದ ಪಡೆದುಕೊಳ್ಳಲಾಗಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 2.0-ಲೀಟರ್ ಮಾದರಿಯು 159-ಬಿಎಚ್‌ಪಿ, 192-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಎಂಜಿನ್ ಮಾದರಿಯು 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಸದ್ಯ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಂಡಿರುವ ಹೊಸ ಕೋವಿಡ್ ಪರಿಣಾಮ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ತುಸು ಸುಧಾರಣೆಗೊಂಡ ನಂತರವಷ್ಟೇ ಖರೀದಿಗೆ ಲಭ್ಯವಾಗಲಿದ್ದು, ಹೊಸ ಕಾರು ಕ್ರೆಟಾ ಮಾದರಿಗಿಂತಲೂ ಹೆಚ್ಚುವರಿಯಾಗಿ ರೂ. 1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.


Click it and Unblock the Notifications








