ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

Hyundai India ಕಂಪನಿಯು ತನ್ನ ಜನಪ್ರಿಯ i20 ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಪರ್ಫಾಮೆನ್ಸ್ ಪ್ರಿಯರಿಗಾಗಿ N Line ವರ್ಷನ್ ಬಿಡುಗಡೆ ಮಾಡುತ್ತಿದ್ದು, ಹೊಸ ಆವೃತ್ತಿಯನ್ನು ಅನಾವರಣಗೊಳಿಸಿರುವ ಕಂಪನಿಯು ಮುಂದಿನ ತಿಂಗಳು ಸೆಪ್ಟೆಂಬರ್ 2ಕ್ಕೆ ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

ಜಗತ್ತಿನ ಎಂಟನೇ ಅತಿ ದೊಡ್ಡ ಕಾರು ಉತ್ಪಾದನಾ ಕಂಪನಿಯಾಗಿರುವ Hyundai ಜಗತ್ತಿನಾದ್ಯಂತ 193 ರಾಷ್ಟ್ರಗಳಲ್ಲಿ ಮಾರಾಟ ಜಾಲ ಹೊಂದಿದ್ದು, ಕೆಲವೇ ರಾಷ್ಟ್ರಗಳಲ್ಲಿ ಮಾತ್ರ ತನ್ನ ಪ್ರಮುಖ ಕಾರುಗಳ ಪರ್ಫಾಮೆನ್ಸ್ ಆವೃತ್ತಿಗಳನ್ನು ಮಾರಾಟ ಮಾಡುತ್ತಿದೆ. Hyundai ಕಾರುಗಳ N Line ಆವೃತ್ತಿಗಳು ಜಾಗತಿಕ ಆಟೋ ಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕಂಪನಿಯು ಮೊದಲ ಬಾರಿಗೆ ಭಾರತದಲ್ಲೂ ಹೊಸ ಕಾರುಗಳನ್ನು ಪರಿಚಯಿಸುತ್ತಿದೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

N Line ಆವೃತ್ತಿಗಳು ಹ್ಯುಂಡೈ ಕಾರುಗಳಿಗೆ ಮತ್ತಷ್ಟು ಬೇಡಿಕೆ ಹೆಚ್ಚಿಸಲಿದ್ದು, ಕಂಪನಿಯು ಮೊದಲ ಹಂತವಾಗಿ i20 ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

ಹೊಸ ಪರ್ಫಾಮೆನ್ಸ್ ಆವೃತ್ತಿಯನ್ನು ಅನಾಣವರಣಗೊಳಿಸಿರುವ Hyundai ಕಂಪನಿಯು ರೂ.25 ಸಾವಿರ ಮುಂಗಡಗೊಂದಿಗೆ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸಿದ್ದು, ಸೆಪ್ಟೆಂಬರ್ 2ರಂದು ಹೊಸ ಕಾರಿನ ಅಧಿಕೃತ ಬೆಲೆ ಮಾಹಿತಿಯು ಲಭ್ಯವಾಗಲಿದೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

i20 N Line ಕಾರು ಗ್ರಾಹಕರು ತಮ್ಮ ಬೇಡಿಕೆಗೆ ಪ್ರಮುಖ ಮೂರು ವೆರಿಯೆಂಟ್‌‌ಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಗೇರ್‌ಬಾಕ್ಸ್ ಆಯ್ಕೆಯನ್ನು ಆಧರಿಸಿ N6 iMT, N8 iMT ಮತ್ತು N8 DCT ಆವೃತ್ತಿಗಳನ್ನು ಹೊಂದಿದೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

Hyundai ಕಂಪನಿಯು i20 N Line ವರ್ಷನ್ ಬಿಡುಗಡೆ ನಂತರ ಇತರೆ ಪ್ರಮುಖ ಕಾರು ಮಾದರಿಗಳಲ್ಲೂ N Line ಮಾದರಿಯನ್ನು ಹಂತ-ಹಂತವಾಗಿ ಬಿಡುಗಡೆ ಮಾಡಲಿದ್ದು, N Line ಆವೃತ್ತಿಗಳು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚು ಪರ್ಫಾಮೆನ್ಸ್ ಮತ್ತು ಸ್ಪೋರ್ಟಿ ವಿನ್ಯಾಸಗಳನ್ನು ಹೊಂದಿರಲಿವೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

i20 N Line ಮಾದರಿಯನ್ನು Hyundai ಕಂಪನಿಯು 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರ ಬಿಡುಗಡೆ ಮಾಡಲಿದ್ದು, 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಮತ್ತು 6-ಸ್ಪೀಡ್ ಇಂಟಲಿಜೆಂಟ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ಆಯ್ಕೆ ಹೊಂದಿರಲಿದೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಅತ್ಯುತ್ತಮ ಪರ್ಫಮೆನ್ಸ್ ಹಿಂದಿರುಗಿಸಲಿದ್ದು, i20 N Line ಮಾದರಿಯು 120-ಬಿಎಚ್‌ಪಿ ಮತ್ತು 172-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಸೊನ್ನೆಯಿಂದ 100 ಕಿ.ಮೀ ಕ್ವಿಕ್ ಸ್ಪೀಡ್ ಪಡೆದುಕೊಳ್ಳುತ್ತದೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

ಇನ್ನು ಪರ್ಫಾಮೆನ್ಸ್ ಮಾದರಿಗೆ ಪೂರಕವಾಗಿ ಹೊಸ ಕಾರಿನಲ್ಲಿ ಹಲವಾರು ಸ್ಪೋರ್ಟಿ ವಿನ್ಯಾಸಗಳನ್ನು ನೀಡಲಾಗಿದ್ದು, ಡ್ಯುಯಲ್ ಟೋನ್ ಫ್ರಂಟ್ ಬಂಪರ್, ಸ್ಪೋರ್ಟಿಯಾಗಿರುವ ರೆಡ್ ಆಕ್ಸೆಂಟ್, ಫ್ರಂಟ್ ಫಾಸಿಯಾದಲ್ಲಿಯೇ N Line ಲೊಗೊ ನೀಡಲಾಗಿದೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

ಹೊಸ ಕಾರಿನಲ್ಲಿ ಸ್ಪೋರ್ಟಿ ವಿನ್ಯಾಸದ 16-ಇಂಚಿನ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಸೈಡ್ ಗಾರ್ನಿಶ್ ಜೊತೆ ರೆಡ್ ಇನ್ಸರ್ಟ್, ಮುಂಭಾಗದ ಚಕ್ರಗಳಲ್ಲಿ ರೆಡ್ ಬ್ರೇಕ್ ಕ್ಯಾಲಿಪರ್‌ನೊಂದಿಗೆ ಕಾರಿನ ಹಿಂಬದಿಯಲ್ಲಿ ಸ್ಪೋರ್ಟಿ ಬಂಪರ್, ಡಿಫ್ಯೂಸರ್, ಟ್ವಿನ್ ಎಕ್ಸಾಸ್ಟ್, ಟೈಲ್ ಗೇಡ್ ಸ್ಪಾಯ್ಲರ್, ಟೈಲ್ ಲ್ಯಾಂಪ್ ಜೋಡಣೆಗಾಗಿ ಡಾರ್ಕ್ ಕ್ರೋಮ್ ನೀಡಲಾಗಿದೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

ಹೊಸ ಕಾರಿನ ಹೊರಭಾಗದಂತೆ ಕಾರಿನ ಒಳಭಾಗದಲ್ಲೂ ಹಲವಾರು ಸ್ಪೋರ್ಟಿ ಫೀಚರ್ಸ್ ನೀಡಲಾಗಿದ್ದು, ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೊಸ ಕಾರಿನ ಡ್ಯಾಶ್‌ಬೋರ್ಡ್ ಆಕರ್ಷಕವಾಗಿದೆ. ಹೊಸ ಕಾರಿನಲ್ಲಿ ಆಲ್ ಬ್ಲ್ಯಾಕ್ ಥೀಮ್ ನೀಡಲಾಗಿದ್ದು, ರೆಡ್ ಆಕ್ಸೆಂಟ್ ಜೊತೆ ಆ್ಯಂಬಿಯೆಂಟ್ ಲೈಟಿಂಗ್ಸ್ ನೀಡಲಾಗಿದೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

ಕೆಲವು ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಜೋಡಣೆ ಮಾಡಲಾಗಿದ್ದು, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಸಿಂಗಲ್ ಪ್ಯಾನ್ ಸನ್‌ರೂಫ್, ಬಾಷ್ ಕಂಪನಿಯ 7-ಸ್ಪೀಕರ್ಸ್ ಸೌಂಡ್ ಸಿಸ್ಟಂ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳಿವೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

Hyundai ಕಂಪನಿಯು N Line ಮಾದರಿಯನ್ನು i20 ಮಾದರಿಯ ಟಾಪ್ ಎಂಡ್ ಮಾದರಿಗಳಲ್ಲಿ ಮಾತ್ರ ಪರಿಚಯಿಸಲಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಎಕ್ಸ್‌ಶೋರೂಂ ಪ್ರಕಾರ ರೂ. 1 ಲಕ್ಷದಿಂದ ರೂ.1.50 ಲಕ್ಷದಷ್ಟು ಹೆಚ್ಚುವರಿ ಬೆಲೆ ಹೊಂದಿರಲಿದೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

ಸದ್ಯ ಮಾರುಕಟ್ಟೆಯಲ್ಲಿ i20 ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯು ಮ್ಯಾಗ್ನಾ, ಸ್ಪೋರ್ಟ್ಜ್, ಆಸ್ಟಾ ಮತ್ತು ಆಸ್ಟಾ ಆಪ್ಷನ್ ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.91 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 11.40 ಲಕ್ಷ ಬೆಲೆ ಹೊಂದಿದೆ.

ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ Hyundai i20 N Line ವರ್ಷನ್

ನ್ಯೂ ಜನರೇಷನ್ i20 ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಒಂದು ಡೀಸೆಲ್ ಮತ್ತು ಎರಡು ಪೆಟ್ರೋಲ್ ಎಂಜಿನ್‌ಗಳ ಆಯ್ಕೆ ನೀಡಿದಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.0-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಕಪ್ಪಾ ಪೆಟ್ರೋಲ್ ಮತ್ತು 1.5-ಲೀಟರ್ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದೆ.ಹೊಸ ತಲೆಮಾರಿನ i20 ಕಾರು ಆಕರ್ಷಕ ಎಕ್ಸ್‌ಟಿರಿಯರ್ ಡಿಸೈನ್‌ನೊಂದಿಗೆ ಏರೋ ಡೈನಾಮಿಕ್ ಸ್ಪೋರ್ಟಿ ಲುಕ್ ಹೊಂದಿದ್ದು, ಹೊಸ ಕಾರು ಹಳೆಯ ಮಾದರಿಗಿಂತಲೂ ಹೆಚ್ಚಿನ ಮಟ್ಟದ ವೀಲ್ಹ್ ಬೆಸ್‌ನೊಂದಿಗೆ ಆರಾಮದಾಯಕ ಸ್ಥಳಾವಕಾಶ ಹೊಂದಿದೆ.

Article Published On: Thursday, August 26, 2021, 8:45 [IST]
English summary
Hyundai new i20 n line india launch on 2nd september
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+