ಈ ತಿಂಗಳು ಅನಾವರಣಗೊಳ್ಳಲಿದೆ ಪ್ರತಿ ಚಾರ್ಜ್‌ಗೆ 450ಕಿ.ಮೀ ಮೈಲೇಜ್ ನೀಡುವ ಹ್ಯುಂಡೈ ಹೊಸ ಇವಿ ಕಾರು

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಕೊನಾ ಇವಿ ಮೂಲಕ ಈಗಾಗಲೇ ಜಾಗತಿಕ ಮಾರುಕಟ್ಟೆಗಳಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಶೀಘ್ರದಲ್ಲೇ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಉತ್ಪನ್ನಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗುತ್ತಿದೆ.

ಪ್ರತಿ ಚಾರ್ಜ್‌ಗೆ 450ಕಿ.ಮೀ ಮೈಲೇಜ್ ನೀಡುತ್ತೆ ಹ್ಯುಂಡೈ ಹೊಸ ಕಾರು

ಮಾರುಕಟ್ಟೆಯಲ್ಲಿ ಇಂಧನಗಳ ಬೆಲೆ ಹೆಚ್ಚುತ್ತಿರುವ ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ವಾಹನ ಉತ್ಪಾದನಾ ಕಂಪನಿಗಳು ಭವಿಷ್ಯ ಯೋಜನೆಗಳಿಗಾಗಿ ಮಹತ್ವದ ನಿರ್ಧಾರ ಕೈಗೊಳ್ಳುತ್ತಿವೆ. ಹ್ಯುಂಡೈ ಮೋಟಾರ್ಸ್ ಇದೇ ನಿಟ್ಟಿನಲ್ಲಿ ಹೊಸ ಯೋಜನೆಗೆ ಚಾಲನೆ ನೀಡಿದ್ದು, ಇವಿ ವಾಹನಗಳಿಗೆ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಸಿದ್ದಪಡಿಸುವ ಮೂಲಕ ಹೊಸ ಮಾದರಿಯ ಇವಿ ಕಾರುಗಳನ್ನು ಅಭಿವೃದ್ದಿಗೊಳಿಸುತ್ತಿದೆ.

ಪ್ರತಿ ಚಾರ್ಜ್‌ಗೆ 450ಕಿ.ಮೀ ಮೈಲೇಜ್ ನೀಡುತ್ತೆ ಹ್ಯುಂಡೈ ಹೊಸ ಕಾರು

ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಿದಂತೆ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ದಿಪಡಿಸುತ್ತಿರುವ ಹ್ಯುಂಡೈ ಕಂಪನಿಯು ಕೊನಾ ಎಲೆಕ್ಟ್ರಿಕ್ ಕಾರು ಮಾದರಿಯೊಂದಿಗೆ ಈಗಾಗಲೇ ಸಾಕಷ್ಟು ಬೇಡಿಕೆ ಪಡೆದುಕೊಂಡಿದೆ.

ಪ್ರತಿ ಚಾರ್ಜ್‌ಗೆ 450ಕಿ.ಮೀ ಮೈಲೇಜ್ ನೀಡುತ್ತೆ ಹ್ಯುಂಡೈ ಹೊಸ ಕಾರು

ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹ್ಯುಂಡೈ ಹೊಸ ಇವಿ ವಾಹನ ಮಾದರಿಗಳು ಭಾರೀ ಸಂಚಲನ ಸೃಷ್ಠಿಸಲಿದ್ದು, ಅಂತರಾಷ್ಟ್ರೀಯ ಗುಣಮಟ್ಟದೊಂದಿಗೆ ಹೊಸ ಇವಿ ವಾಹನ ಮಾದರಿಗಳನ್ನು ಸಿದ್ದಪಡಿಸುತ್ತಿದೆ.

ಪ್ರತಿ ಚಾರ್ಜ್‌ಗೆ 450ಕಿ.ಮೀ ಮೈಲೇಜ್ ನೀಡುತ್ತೆ ಹ್ಯುಂಡೈ ಹೊಸ ಕಾರು

ಹೊಸ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ಅನ್ನು ಅನಾವರಣಗೊಳಿಸಿದ್ದು, ಹೊಸ ಪ್ಲ್ಯಾಟ್‌ಫಾರ್ಮ್ ಅನ್ನು ವಿಶೇಷವಾಗಿ ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್ (ಬಿಇವಿ) ಅಭಿವೃದ್ದಿಗಾಗಿ ಬಳಕೆ ಮಾಡಿಕೊಳ್ಳಲಿದೆ. ಪ್ರಸಕ್ತ ವರ್ಷದಿಂದಲೇ ಹೊಸ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಹೊಸ ಬ್ಯಾಟರಿ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಲು ಆರಂಭಿಸಿರುವ ಹ್ಯುಂಡೈ ಕಂಪನಿಯು ಹೊಸ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೊಳಿಸಲಾದ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಐಯಾನಿಕ್5 ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ಪ್ರತಿ ಚಾರ್ಜ್‌ಗೆ 450ಕಿ.ಮೀ ಮೈಲೇಜ್ ನೀಡುತ್ತೆ ಹ್ಯುಂಡೈ ಹೊಸ ಕಾರು

ಹೊಸ ಐಯಾನಿಕ್ 5 ಇವಿ ಕಾರು ಮಾದರಿಯು ಹೆಚ್ಚಿನ ಮಟ್ಟದ ಬ್ಯಾಟರಿ ರೇಂಜ್, ಅತಿ ಕಡಿಮೆ ಅವಧಿಯಲ್ಲಿ ಪೂರ್ಣಪ್ರಮಾಣದ ಚಾರ್ಜಿಂಗ್ ಮತ್ತು ಹೆಚ್ಚಿನ ಮಟ್ಟದ ಎಂಜಿನ್ ಕಾರ್ಯಕ್ಷಮತೆಯನ್ನು ಹೊಂದಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ತಂತ್ರಜ್ಞಾನ ಬಳಕೆಯು ಈ ಕಾರಿನ ಪ್ರಮುಖ ಆಕರ್ಷಣೆಯಾಗಿದೆ.

ಪ್ರತಿ ಚಾರ್ಜ್‌ಗೆ 450ಕಿ.ಮೀ ಮೈಲೇಜ್ ನೀಡುತ್ತೆ ಹ್ಯುಂಡೈ ಹೊಸ ಕಾರು

ಹೊಸ ಮಾದರಿಯ ಬ್ಯಾಟರಿ ಪ್ಯಾಕ್ ಹೊಂದಿರುವ ಐಯಾನಿಕ್ 5 ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 450 ಕಿ.ಮೀ ಮೈಲೇಜ್ ಹಿಂದಿರುಗಿಸುವುದರ ಜೊತೆಗೆ 309-ಬಿಎಚ್‌ಪಿ ಉತ್ಪಾದನೆಯೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಮಾದರಿಯಾಗಿಯೂ ಗುರುತಿಸಿಕೊಳ್ಳಲಿದೆ.

ಪ್ರತಿ ಚಾರ್ಜ್‌ಗೆ 450ಕಿ.ಮೀ ಮೈಲೇಜ್ ನೀಡುತ್ತೆ ಹ್ಯುಂಡೈ ಹೊಸ ಕಾರು

ಮತ್ತೊಂದು ವಿಶೇಷತೆಯೆಂತೆ ಹೊಸ ಐಯಾನಿಕ್ 5 ಕಾರಿನಲ್ಲಿ ಅಲ್ಟ್ರಾ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ನೀಡಲಾಗುತ್ತಿದ್ದು, ಹೊಸ ಚಾರ್ಜಿಂಗ್ ಸೌಲಭ್ಯದೊಂದಿಗೆ ಕೇವಲ 5 ನಿಮಿಷಗಳಲ್ಲಿ ಚಾರ್ಜ್ ಮಾಡುವ ಮೂಲಕ ಗರಿಷ್ಠ 100 ಕಿ.ಮೀ ತನಕ ಮೈಲೇಜ್ ಪಡೆಯಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಪ್ರತಿ ಚಾರ್ಜ್‌ಗೆ 450ಕಿ.ಮೀ ಮೈಲೇಜ್ ನೀಡುತ್ತೆ ಹ್ಯುಂಡೈ ಹೊಸ ಕಾರು

ಆದರೆ ಹೊಸ ಕಾರಿನ ಬ್ಯಾಟರಿ ತಂತ್ರಜ್ಞಾನ ಕುರಿತಂತೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಡದ ಹ್ಯುಂಡೈ ಕಂಪನಿಯು ಇದೇ ತಿಂಗಳು 23ರಂದು ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುತ್ತಿದ್ದು, ಅನಾವರಣಗೊಂಡ ನಂತರ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ಪಡೆದುಕೊಳ್ಳಲಿದೆ.

ಪ್ರತಿ ಚಾರ್ಜ್‌ಗೆ 450ಕಿ.ಮೀ ಮೈಲೇಜ್ ನೀಡುತ್ತೆ ಹ್ಯುಂಡೈ ಹೊಸ ಕಾರು

ಇನ್ನು ಹ್ಯುಂಡೈ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅಡಿ ನಿರ್ಮಾಣ ಮಾಡಲಾಗುವ ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳು ಪ್ರತಿ ಚಾರ್ಜ್‌ಗೆ ಕನಿಷ್ಠ 400 ಕಿ.ಮೀ ನಿಂದ ಗರಿಷ್ಠ 550 ಕಿ.ಮೀ ಗಿಂತಲೂ ಅಧಿಕ ಮೈಲೇಜ್‌ನೊಂದಿಗೆ ರಸ್ತೆಗಿಳಿಯಲಿದ್ದು, ಬೆಲೆಯಲ್ಲೂ ಕೂಡಾ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭಾರೀ ಪೈಪೋಟಿ ನೀಡಲಿವೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಪ್ರತಿ ಚಾರ್ಜ್‌ಗೆ 450ಕಿ.ಮೀ ಮೈಲೇಜ್ ನೀಡುತ್ತೆ ಹ್ಯುಂಡೈ ಹೊಸ ಕಾರು

ಇದಕ್ಕಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಅಭಿವೃದ್ದಿಯ ಮೇಲೆ ಭಾರೀ ಪ್ರಮಾಣದ ಹೂಡಕೆ ಮಾಡಿರುವ ಹ್ಯುಂಡೈ ಕಂಪನಿಯು 2025ರ ವೇಳೆ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಒಟ್ಟು 16 ವಿವಿಧ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಅಭಿವೃದ್ದಿ ಮಾಡುವ ಗುರಿಹೊಂದಿದೆ.

Most Read Articles

Kannada
English summary
Hyundai Ioniq 5 All Electric Car To Be Unveiled On 23 Feb Features. Read in Kannada.
Story first published: Saturday, February 20, 2021, 13:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X