Just In
- 5 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 6 hrs ago
2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್‌ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 6 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 6 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿ ಚಾರ್ಜ್‌ಗೆ 450ಕಿ.ಮೀ ಮೈಲೇಜ್ ನೀಡುವ ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಹ್ಯುಂಡೈ
ಜಗತ್ತಿನಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ವಾಹನ ಉತ್ಪಾದನಾ ಕಂಪನಿಗಳು ಭವಿಷ್ಯ ಯೋಜನೆಗಳಿಗಾಗಿ ಮಹತ್ವದ ನಿರ್ಧಾರ ಕೈಗೊಳ್ಳುತ್ತಿವೆ. ಹ್ಯುಂಡೈ ಮೋಟಾರ್ಸ್ ಇದೇ ನಿಟ್ಟಿನಲ್ಲಿ ಹೊಸ ಯೋಜನೆಗೆ ಚಾಲನೆ ನೀಡಿದ್ದು, ಇವಿ ವಾಹನಗಳಿಗೆ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಸಿದ್ದಪಡಿಸುತ್ತಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಿದಂತೆ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ದಿಪಡಿಸುತ್ತಿರುವ ಹ್ಯುಂಡೈ ಕಂಪನಿಯು ಕೊನಾ ಎಲೆಕ್ಟ್ರಿಕ್ ಕಾರು ಮಾದರಿಯೊಂದಿಗೆ ಈಗಾಗಲೇ ಸಾಕಷ್ಟು ಬೇಡಿಕೆ ಪಡೆದುಕೊಂಡಿದೆ. ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹ್ಯುಂಡೈ ಹೊಸ ಇವಿ ವಾಹನ ಮಾದರಿಗಳು ಭಾರೀ ಸಂಚಲನ ಸೃಷ್ಠಿಸಲಿದ್ದು, ಅಂತರಾಷ್ಟ್ರೀಯ ಗುಣಮಟ್ಟದೊಂದಿಗೆ ಹೊಸ ಇವಿ ವಾಹನ ಮಾದರಿಗಳನ್ನು ಸಿದ್ದಪಡಿಸುತ್ತಿದೆ.

ಹೊಸ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ಅನ್ನು ಅನಾವರಣಗೊಳಿಸಿದ್ದು, ಹೊಸ ಪ್ಲ್ಯಾಟ್‌ಫಾರ್ಮ್ ಅನ್ನು ವಿಶೇಷವಾಗಿ ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್ (ಬಿಇವಿ) ಅಭಿವೃದ್ದಿಗಾಗಿ ಬಳಕೆ ಮಾಡಿಕೊಳ್ಳಲಿದೆ.

ಪ್ರಸಕ್ತ ವರ್ಷದಿಂದಲೇ ಹೊಸ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಹೊಸ ಬ್ಯಾಟರಿ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಲು ಆರಂಭಿರುವ ಹ್ಯುಂಡೈ ಕಂಪನಿಯು ಹೊಸ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೊಳಿಸಲಾದ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಐಯಾನಿಕ್ 5 ಎಲೆಕ್ಟ್ರಿಕ್ ಎಸ್‌ಯುವಿಯ ಮೊದಲ ಟೀಸರ್ ವಿಡಿಯೋ ಹಂಚಿಕೊಂಡಿದೆ.

ಹೊಸ ಐಯಾನಿಕ್ ಇವಿ ಕಾರು ಮಾದರಿಯು ಹೆಚ್ಚಿನ ಮಟ್ಟದ ಬ್ಯಾಟರಿ ರೇಂಜ್, ಅತಿ ಕಡಿಮೆ ಅವಧಿಯಲ್ಲಿ ಪೂರ್ಣಪ್ರಮಾಣದ ಚಾರ್ಜಿಂಗ್ ಮತ್ತು ಹೆಚ್ಚಿನ ಮಟ್ಟದ ಎಂಜಿನ್ ಕಾರ್ಯಕ್ಷಮತೆಯನ್ನು ಖಾತ್ರಿಪಡಿಸುತ್ತದೆ. ಐಯಾನಿಕ್ ಇವಿ ಕಾರು ಮಾದರಿಯಲ್ಲಿ ಹ್ಯುಂಡೈ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ತಂತ್ರಜ್ಞಾನ ಬಳಕೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 450 ಕಿ.ಮೀ ಮೈಲೇಜ್ ಹಿಂದಿರುಗಿಸುವುದರ ಜೊತೆಗೆ 309-ಬಿಎಚ್‌ಪಿ ಉತ್ಪಾದನೆಯೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಮಾದರಿಯಾಗಿಯೂ ಗುರುತಿಸಿಕೊಂಡಿದೆ.
ಮತ್ತೊಂದು ವಿಶೇಷತೆಯೆಂತೆ ಹೊಸ ಐಯಾನಿಕ್ ಕಾರನ್ನು ಅಲ್ಟ್ರಾ ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 5 ನಿಮಿಷ ಚಾರ್ಜ್ ಮಾಡುವ ಮೂಲಕ ಗರಿಷ್ಠ 100 ಕಿ.ಮೀ ತನಕ ಮೈಲೇಜ್ ಪಡೆಯಬಹುದಾಗಿದ್ದು, ಬ್ಯಾಟರಿ ತಂತ್ರಜ್ಞಾನ ಕುರಿತಂತೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಹೊಸ ಕಾರಿನ ಟೀಸರ್ ಮೂಲಕ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ನೀಡಿರುವ ಕಂಪನಿಯು ಮುಂಬರುವ 2022ರ ವೇಳೆಗೆ ಹೊಸ ಕಾರನ್ನು ಬಿಡುಗಡೆ ಮಾಡಲಿದ್ದು, ಹೊಸ ಕಾರು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳನ್ನು ಪ್ರವೇಶಿಸಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಇನ್ನು ಹ್ಯುಂಡೈ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅಡಿ ನಿರ್ಮಾಣ ಮಾಡಲಾಗುವ ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳು ಪ್ರತಿ ಚಾರ್ಜ್‌ಗೆ ಕನಿಷ್ಠ 400 ಕಿ.ಮೀ ನಿಂದ ಗರಿಷ್ಠ 550 ಕಿ.ಮೀ ಗಿಂತಲೂ ಅಧಿಕ ಮೈಲೇಜ್‌ನೊಂದಿಗೆ ರಸ್ತೆಗಿಳಿಯಲಿದ್ದು, ಬೆಲೆಯಲ್ಲೂ ಕೂಡಾ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭಾರೀ ಪೈಪೋಟಿ ನೀಡಲಿವೆ.

ಇದಕ್ಕಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಅಭಿವೃದ್ದಿಯ ಮೇಲೆ ಭಾರೀ ಪ್ರಮಾಣದ ಹೂಡಕೆ ಮಾಡಿರುವ ಹ್ಯುಂಡೈ ಕಂಪನಿಯು 2025ರ ವೇಳೆ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಒಟ್ಟು 16 ವಿವಿಧ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಅಭಿವೃದ್ದಿ ಮಾಡುವ ಗುರಿಹೊಂದಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇನ್ನು ಭಾರತ ಸೇರಿ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಹೆಚ್ಚಿನ ಬೇಡಿಕೆ ಉಂಟಾಗುತ್ತಿದ್ದು, ಹ್ಯುಂಡೈ ಕಂಪನಿಯು ತನ್ನ ಪ್ರಮುಖ ಬ್ರಾಂಡ್‌ಗಳ ಅಡಿಯಲ್ಲಿ ಹೊಸ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಬಜೆಟ್ ಬೆಲೆಯಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.