ರೂ.25 ಸಾವಿರ ಮುಂಗಡದೊಂದಿಗೆ ಅಲ್ಕಾಜರ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸಿದ ಹ್ಯುಂಡೈ

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಯನ್ನು ಇದೇ ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಆಸಕ್ತ ಗ್ರಾಹಕರಿಂದ ಅಧಿಕೃತ ಬುಕ್ಕಿಂಗ್ ಸ್ವಿಕರಿಸಲು ಆರಂಭಿಸಲಾಗಿದೆ.

ಅಲ್ಕಾಜರ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸಿದ ಹ್ಯುಂಡೈ

ಅಲ್ಕಾಜರ್ ಕಾರು ಮಾದರಿಯನ್ನು ಖರೀದಿಸಲು ರೂ.25 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಆರಂಭಿಸಿರುವ ಹ್ಯುಂಡೈ ಕಂಪನಿಯು ಇದೇ ತಿಂಗಳಾಂತ್ಯಕ್ಕೆ ಹೊಸ ಕಾರಿನ ಬೆಲೆ ಮತ್ತು ಎಂಜಿನ್ ಮಾಹಿತಿ ಹಂಚಿಕೊಳ್ಳಲಿದ್ದು, ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಟಾಟಾ ಸಫಾರಿ ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರುಗಳಿಗೆ ಅಲ್ಕಾಜರ್ ಉತ್ತಮ ಪೈಪೋಟಿ ನೀಡಲಿದೆ.

ಅಲ್ಕಾಜರ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸಿದ ಹ್ಯುಂಡೈ

ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಧರಿಸಿ ನಿರ್ಮಾಣವಾಗಿರುವ ಹೊಸ ಅಲ್ಕಾಜರ್ ಕಾರು ಮಾದರಿಯು ವಿವಿಧ ಆರು ವೆರಿಯೆಂಟ್‌ಗಳೊಂದಿಗೆ ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಮಾದರಿಯಲ್ಲಿ ಖರೀದಿಗೆ ಲಭ್ಯವಿರಲಿದೆ.

ಅಲ್ಕಾಜರ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸಿದ ಹ್ಯುಂಡೈ

ಎಸ್‌ಯುವಿ ಸರಣಿಯಲ್ಲಿರುವ ತನ್ನ ವೆನ್ಯೂ, ಕ್ರೆಟಾ, ಟಕ್ಸನ್ ಮತ್ತು ಕೊನಾ ಇವಿ ಮಾದರಿಗಳಂತೆ ಅಲ್ಕಾಜರ್ ಮಾದರಿಯ ಮಾರಾಟದಲ್ಲೂ ಕೂಡಾ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿರುವ ಹ್ಯುಂಡೈ ಕಂಪನಿಯು ಹೊಸ ಕಾರನ್ನು ವಿವಿಧ ಆರು ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡುತ್ತಿದೆ.

ಅಲ್ಕಾಜರ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸಿದ ಹ್ಯುಂಡೈ

ಹೊಸ ಕಾರು ಪ್ಲ್ಯಾಟಿನಂ, ಪ್ರೆಸ್ಟಿಜ್, ಸಿಗ್ನಿಚೆರ್, ಪ್ಲ್ಯಾಟಿನಂ ಆಪ್ಷನ್, ಪ್ರೆಸ್ಟಿಜ್ ಆಪ್ಷನ್ ಮತ್ತು ಸಿಗ್ನಿಚೆರ್ ಆಪ್ಷನ್ ಎನ್ನುವ ಆರು ವೆರಿಯೆಂಟ್‌ಗಳೊಂದಿಗೆ ಟೈಪೂನ್ ಸಿಲ್ವರ್, ಟೈಟಾನ್ ಗ್ರೇ, ಟೈಗಾ ಬ್ರೌನ್, ಸ್ಟೇರಿ ನೈಟ್, ಪೊಲಾರ್ ವೈಟ್ ಮತ್ತು ಪ್ಯಾಂಥಮ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿವೆ.

ಅಲ್ಕಾಜರ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸಿದ ಹ್ಯುಂಡೈ

ಇನ್ನು ವಿಸ್ತರಿತ ಕ್ಯಾಬಿನ್‌ ಮೂಲಕ ಮೂರು ಸಾಲಿನ ಆಸನ ಸೌಲಭ್ಯವನ್ನು ಅಚ್ಚುಕಟ್ಟಾದ ಜೋಡಣೆ ಹೊಂದಿದ್ದು, ಹೊಸ ಕಾರಿನಲ್ಲಿ ಪ್ರತ್ಯೇಕ ಆಸನ ಸೌಲಭ್ಯ ಹೊಂದಿರುವ 6 ಸೀಟರ್ ಮಾದರಿಯೇ ಹೈ ಎಂಡ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ.

ಅಲ್ಕಾಜರ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸಿದ ಹ್ಯುಂಡೈ

ಹೈ ಎಂಡ್ ಮಾದರಿಯ ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದ್ದು, ಹಿಂಬದಿಯ ಸವಾರರಿಗೂ ಆರಾಮದಾಯಕ ಪ್ರಯಾಣಕ್ಕಾಗಿ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳನ್ನು ನೀಡಲಾಗಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಅಲ್ಕಾಜರ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸಿದ ಹ್ಯುಂಡೈ

ಅಲ್ಕಾಜರ್ ಕಾರಿನ 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದ್ದು, ವಿವಿಧ ಮಾದರಿಗಳಿಗೆ ಅನುಗುಣವಾಗಿ ಎರಡು ಎಂಜಿನ್ ಆಯ್ಕೆ ನೀಡಲಾಗುತ್ತಿದೆ.

ಅಲ್ಕಾಜರ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ಹೊಸ ಅಲ್ಕಾಜರ್ ಕಾರಿನಲ್ಲಿ ಎರಡು ಎಂಜಿನ್ ಆಯ್ಕೆ ನೀಡುತ್ತಿದ್ದು, ಹೈ ಎಂಡ್ ಮಾದರಿಗಳಲ್ಲಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಆರಂಭಿಕ ಮಾದರಿಗಳಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, 2.0-ಲೀಟರ್ ಎಂಜಿನ್ ಮಾದರಿಯನ್ನು ಟ್ಯುಸಾನ್ ಮತ್ತು ಎಲಾಂಟ್ರಾ ಮಾದರಿಗಳಲ್ಲಿ ಈಗಾಗಲೇ ಬಳಕೆ ಮಾಡಲಾಗುತ್ತಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಅಲ್ಕಾಜರ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸಿದ ಹ್ಯುಂಡೈ

ಹೊಸ ಅಲ್ಕಾಜರ್ ಕಾರು ಕ್ರೆಟಾ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಎಂಜಿನ್ ಆಯ್ಕೆಯೊಂದಿಗೆ ಫುಲ್ ಸೈಜ್ ಎಸ್‌ಯುವಿ ಕಾರು ಖರೀದಿದಾರರನ್ನು ಮಾತ್ರವಲ್ಲ ಎಂಪಿವಿ ಖರೀದಿದಾರರನ್ನು ಸಹ ಸೆಳೆಯಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14 ಲಕ್ಷದಿಂದ ರೂ.19 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.

Most Read Articles

Kannada
English summary
Hyundai Alcazar Bookings Open, India Launch Soon. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X