ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಹ್ಯುಂಡೈ ಕ್ರೆಟಾ ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಗುತ್ತಿರುವ ಮಿಡ್ ಸೈಜ್ ಎಸ್‍ಯುವಿಯಾಗಿದೆ. ಈ ಹ್ಯುಂಡೈ ಕ್ರೆಟಾ ಮಾದರಿಯು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿಯು ಕೂಡ ಜನಪ್ರಿಯ ಮಿಡ್ ಎಸ್‍ಯುವಿಯಾಗಿದೆ.

ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಈ ಹ್ಯುಂಡೈ ಕ್ರೆಟಾ ಮಾರಾಟದ ವೇಗವನ್ನು ಮತ್ತಷ್ಟು ಹೆಚ್ಚಿಸಲು ಕಂಪನಿಯು 2022ರ ಅಂತ್ಯದ ವೇಳೆಗೆ ಕ್ರೆಟಾಕ್ಕೆ ಮಿಡ್-ಲೈಫ್ ಅಪ್‌ಡೇಟ್ ನೀಡಲು ಯೋಜಿಸುತ್ತಿದೆ. ಹ್ಯುಂಡೈ ಕಂಪನಿಯು ಈ ತಿಂಗಳ ಕೊನೆಯಲ್ಲಿ ಬ್ರೆಜಿಲ್‌ನಲ್ಲಿ 2022ರ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ಮಾಡಲು ಸಿದ್ಧವಾಗಿದೆ. ಇನ್ನು ಕೊರಿಯಾದ ಕಾರು ತಯಾರಕರು ಆಗಸ್ಟ್ 25 ರಂದು ದಕ್ಷಿಣ ಅಮೆರಿಕಾದ ದೇಶದಲ್ಲಿ ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿಯ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಲಿದ್ದಾರೆ.

ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಈ ಹೊಸ ಕ್ರೆಟಾ ಎಸ್‌ಯುವಿ ಅಥವಾ ಕ್ರೀಟ್ ಬ್ರೆಜಿಲ್ ಮಾರುಕಟ್ಟೆಯಲ್ಲಿ ತಿಳಿದಿರುವಂತೆ, ಕೆಲವು ವಿನ್ಯಾಸದ ಟ್ವೀಕ್‌ಗಳನ್ನು ಹೊಂದಿದ್ದು, ಇದು ಪ್ರಸ್ತುತ ಭಾರತದಲ್ಲಿ ಮಾರಾಟದಲ್ಲಿರುವ ಆವೃತ್ತಿಗಳಿಗಿಂತ ಹೆಚ್ಚಿನ ಪ್ರೀಮಿಯಂ ಅನ್ನು ಕಾಣುವಂತೆ ಮಾಡುತ್ತದೆ.

ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಮರುವಿನ್ಯಾಸಗೊಳಿಸಲಾದ ಗ್ರಿಲ್‌ನಲ್ಲಿ ಒಂದು ಗಮನಾರ್ಹವಾದ ಬದಲಾವಣೆಗಳಿವೆ, ಇದು ಇತ್ತೀಚೆಗೆ ಬಿಡುಗಡೆಯಾದ ಹ್ಯುಂಡೈ ಅಲ್ಕಾಜರ್ ಮೂರು-ಸಾಲಿನ ಎಸ್‌ಯುವಿಯಲ್ಲಿ ಕಂಡುಬಂದಿದೆ. 2022ರ ಕ್ರೆಟಾ ಎಸ್‌ಯುವಿಯನ್ನು ಈ ವರ್ಷದ ಆರಂಭದಲ್ಲಿ ರಷ್ಯಾದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಯಿತು.

ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಇದು ಇತ್ತೀಚೆಗೆ ಚೀನಾದ ರಸ್ತೆಗಳಲ್ಲಿನ ಮರೆಮಾಚುವಿಕೆಯೊಂದಿಗೆ ಟೆಸ್ಟ್ ಮಾಡುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಇದು ಏಷ್ಯನ್ ಮಾರುಕಟ್ಟೆಯಲ್ಲಿ ಸನ್ನಿಹಿತವಾಗಿ ಪ್ರಾರಂಭವಾಗುವ ಸುಳಿವು ನೀಡಿದೆ. ಬ್ರೆಜಿಲ್‌ಗೆ, ಇದು 2016 ರಲ್ಲಿ ಬಂದ ನಂತರ ಕಾಂಪ್ಯಾಕ್ಟ್ ಎಸ್‌ಯುವಿಯ ಎರಡನೇ ತಲೆಮಾರಿನ ಮಾದರಿಯಾಗಿದೆ.

ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಹೊಸ ಕ್ರೆಟಾ ಎಸ್‍ಯುವಿಯ ಮುಂಭಾಗದ ಹೊರತಾಗಿ, ಎಸ್‌ಯುವಿಯ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ. ಬ್ರೆಜಿಲ್‌ನಲ್ಲಿ ಹ್ಯುಂಡೈ ಬಿಡುಗಡೆ ಮಾಡಿದ ಟೀಸರ್ ಇದೇ ರೀತಿಯ ಹೆಡ್‌ಲೈಟ್ ಮತ್ತು ಟೈಲ್‌ಲೈಟ್, ಅಲಯ್ ವ್ಹೀಲ್ ಗಳು ಮತ್ತು ಈಗಾಗಲೇ ಭಾರತೀಯ ಆವೃತ್ತಿಯಲ್ಲಿ ಕಾಣುವ ಇತರ ಬಾಹ್ಯ ಗುಣಲಕ್ಷಣಗಳನ್ನು ಹೊಂದಿದೆ.

ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಈ 2022ರ ಕ್ರೆಟಾ ಎಸ್‌ಯುವಿಯ ಒಳಭಾಗದಲ್ಲಿ ಹೆಚ್ಚಿನ ಬದಲಾವಣೆಗಳಿಲ್ಲ. ಬ್ರೆಜಿಲ್ ಆವೃತ್ತಿಗಾಗಿ, ಸನ್ ರೂಫ್ ಮತ್ತು ಡಿಜಿಟಲ್ ಪ್ಯಾನಲ್ ಅನ್ನು ಸೇರಿಸಿದೆ. ಇನ್ನು ಅದರಲ್ಲಿ ಅದೇ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು 7 ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಜೊತೆಗೆ ಕ್ರೆಟಾ ಒಳಗೆ ಕಾಣಿಸುತ್ತದೆ, ಅದು ಡ್ಯಾಶ್‌ಬೋರ್ಡ್‌ನಲ್ಲಿ ಪ್ರಾಬಲ್ಯ ಸಾಧಿಸುತ್ತದೆ.

ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಇನ್ನು ಈ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಇದರಲ್ಲಿ ಸುರಕ್ಷತೆಗಾಗಿ, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಲೇನ್ ಅಸಿಸ್ಟ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಬ್ಲೈಂಡ್ ಸ್ಪಾಟ್ ಮಾನಿಟರ್ ಅನ್ನು ಕ್ಯಾಮರಾವನ್ನು ಒಳಗೊಂಡಿದೆ.

ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಮಾದರಿಯು 1.0-ಲೀಟರ್ ಮೂರು ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು 2.0-ಲೀಟರ್ ಆಸ್ಪಿರೇಟೆಡ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಎರಡು ಎಂಜಿನ್ ಗಳನ್ನು ಆರು ಸ್ಪೀಡ್ ಮ್ಯಾನುವಲ್ ಅಥವಾ ಆಟೋಮ್ಯಾಟಿಕ್ ಟ್ರಾನ್ಸ್ ಮಿಷನ್ ಗೆ ಜೋಡಿಸುವ ಸಾಧ್ಯತೆಯಿದೆ. ಇನ್ನು 1.0-ಲೀಟರ್ ಮೂರು ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ 121 ಬಿಹೆಚ್‍ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಇನ್ನು 2-ಲೀಟರ್ ಎಂಜಿನ್ 168 ಬಿಹೆಚ್‍ಪಿ ಪವರ್ ಮತ್ತು 201 ಎನ್ಎಂ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಮಾರಟವಾಗುತ್ತಿರುವ ಕ್ರೆಟಾ ಎಸ್‍ಯುವಿಯು ಗ್ರಾಹಕರ ಬೇಡಿಕೆಯೆಂತೆ ಹಲವು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಕ್ರೆಟಾ ಎಸ್‍ಯುವಿಯಲ್ಲಿ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಒಳಗೊಂಡಿದೆ.

ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಕ್ರೆಟಾ ಎಸ್‍ಯುವಿಯ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ. ಇನ್ನು 1.5-ಲೀಟರ್ ಪೆಟ್ರೋಲ್ ಮಾದರಿಯೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115 ಬಿಎಚ್‌ಪಿ ಪವರ್ ಮತ್ತು 144 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿತ್ತದೆ.

ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಇನ್ನು ಹ್ಯುಂಡೈ ತನ್ನ ಹೊಸ ಐ20 ಎನ್ ಲೈನ್ ಪರ್ಫಾಮೆನ್ಸ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹ್ಯುಂಡೈ ಕಂಪನಿಯು ಎನ್ ಸರಣಿಯ ಪರ್ಫಾಮೆನ್ಸ್ ಕಾರುಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿದೆ. ಭಾರತದಲ್ಲಿ ಹ್ಯುಂಡೈ ಕಂಪನಿಯು ತನ್ನ ಎನ್ ಸರಣಿಯ ಕಾರುಗಳನ್ನು ಬಿಡುಗಡೆಗೊಳಿಸಲಿದೆ. ಇದೀಗ ಭಾರತೀಯ ಮಾರುಕಟ್ಟೆಯಲ್ಲಿ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳ ಬಿಡುಗಡೆಗೊಳಿಸಲಾಗುವುದು ಎಂದು ಹ್ಯುಂಡೈ ಕಂಪನಿಯು ಅಧಿಕೃತವಾಗಿ ಟೀಸರ್ ಬಿಡುಗಡೆಗೊಳಿಸುವ ಮೂಲಕ ಘೋಷಣೆ ಮಾಡಿದ್ದಾರೆ.

ಗರಿಷ್ಠ ಸುರಕ್ಷತೆ, ಅಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಕ್ರೆಟಾ

ಇನ್ನು 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ ಪವರ್ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು. ಓ ಹ್ಯುಂಡೈ ಕ್ರೆಟಾ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ರೆನಾಲ್ಟ್ ಡಸ್ಟರ್, ಎಂಜಿ ಹೆಕ್ಟರ್ ಹಾಗೂ ಟಾಟಾ ಹ್ಯಾರಿಯರ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Friday, August 13, 2021, 15:54 [IST]
English summary
Hyundai planning to launch 2022 creta facelift suv details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+