ಇವಿ ವಾಹನಗಳಿಗೆ ಹೆಚ್ಚಿದ ಬೇಡಿಕೆ- ಬಜೆಟ್ ಬೆಲೆಯ ಹೊಸ ಇವಿ ಕಾರುಗಳ ಬಿಡುಗಡೆಯತ್ತ ಗಮನಹರಿಸಿದ ಹ್ಯುಂಡೈ

ಇಂಧನಗಳ ಮೇಲೆ ಕೇಂದ್ರ ಸರ್ಕಾರದ ತೆರಿಗೆ ಹೆಚ್ಚಳ ನಂತರ ಇವಿ ವಾಹನ ಮಾರಾಟದಲ್ಲಿ ಭಾರೀ ಬೇಡಿಕೆ ಕಂಡುಬಂದಿದ್ದು, ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಕೂಡಾ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಹೊಸ ವಾಹನ ಖರೀದಿದಾರರು ಎಲೆಕ್ಟ್ರಿಕ್ ವಾಹನಗಳ ಖರೀದಿ ಕುರಿತಂತೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ.

ಬಜೆಟ್ ಬೆಲೆಯ ಹೊಸ ಇವಿ ಕಾರುಗಳ ಬಿಡುಗಡೆಯತ್ತ ಗಮನಹರಿಸಿದ ಹ್ಯುಂಡೈ

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿರುವುದು ಕೂಡಾ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಗ್ರಾಹಕರು ಆಸಕ್ತಿ ತೋರುತ್ತಿದ್ದು, ಹ್ಯುಂಡೈ ಕಂಪನಿಯು ಗ್ರಾಹಕರ ಆದ್ಯತೆ ಅನುಸಾರವಾಗಿ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಯತ್ತ ಗಮನಹರಿಸಿದೆ. ಮಾರುಕಟ್ಟೆಯಲ್ಲಿ ಈಗಾಗಲೇ ಕೊನಾ ಇವಿ ಮಾರಾಟ ಹೊಂದಿದ್ದರೂ ಕೂಡಾ ಗ್ರಾಹಕರು ಬಜೆಟ್ ಬೆಲೆಯಲ್ಲಿರುವ ಉತ್ತಮ ಮೈಲೇಜ್ ಪ್ರೇರಿತ ಇವಿ ವಾಹನಗಳಿಗೆ ಬೇಡಿಕೆ ಸಲ್ಲಿಸುತ್ತಿರುವುದಕ್ಕೆ ಹ್ಯುಂಡೈ ಹೊಸ ಇವಿ ಉತ್ಪನ್ನಗಳ ಬಿಡುಗಡೆ ಪ್ರಕ್ರಿಯೆಯನ್ನು ತೀವ್ರಗೊಳಿಸುತ್ತಿದೆ.

ಬಜೆಟ್ ಬೆಲೆಯ ಹೊಸ ಇವಿ ಕಾರುಗಳ ಬಿಡುಗಡೆಯತ್ತ ಗಮನಹರಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ಹೊಸ ಇವಿ ಕಾರುಗಳನ್ನು ಎಲ್ಲಾ ವರ್ಗದ ಗ್ರಾಹಕರನ್ನು ಗಮದಲ್ಲಿಟ್ಟುಕೊಂಡು ವಿವಿಧ ಮಾದರಿಯ ಇವಿ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಮಾರುಕಟ್ಟೆಯಲ್ಲಿರುವ ಕೊನಾ ಇವಿ ಹೆಚ್ಚಿನ ಮಟ್ಟದ ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ತುಸು ದುಬಾರಿ ಎನ್ನಿಸಲಿದೆ.

ಬಜೆಟ್ ಬೆಲೆಯ ಹೊಸ ಇವಿ ಕಾರುಗಳ ಬಿಡುಗಡೆಯತ್ತ ಗಮನಹರಿಸಿದ ಹ್ಯುಂಡೈ

ಹೀಗಾಗಿ ಸುಧಾರಿತ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿರುವ ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರುಗಳು ಇವಿ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದ್ದು, ಮಾಧ್ಯಮ ಸಂದರ್ಶನವೊಂದರಲ್ಲಿ ಭವಿಷ್ಯದ ಯೋಜನೆ ಬಗೆಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಬಜೆಟ್ ಬೆಲೆಯ ಹೊಸ ಇವಿ ಕಾರುಗಳ ಬಿಡುಗಡೆಯತ್ತ ಗಮನಹರಿಸಿದ ಹ್ಯುಂಡೈ

2025ರ ವೇಳೆಗೆ ಜಾಗತಿಕ ಮಾರುಕಟ್ಟೆಯಲ್ಲಿ 30ಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಹೊಂದಲಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಗ್ರಾಹಕರ ಬೇಡಿಕೆಯೆಂತೆ ಮುಂದಿನ ಕೆಲವೇ ವರ್ಷಗಳಲ್ಲಿ 10ಕ್ಕೂ ಹೆಚ್ಚು ಎಲೆಕ್ಟ್ರಿಕ್ ಮಾದರಿಗಳನ್ನು ಮಾರಾಟ ಮಾಡಲಿದ್ದು, ಎಲ್‌ಜಿ ಕಂಪನಿ ಜೊತೆಗೂಡಿ ಬ್ಯಾಟರಿ ಸೌಲಭ್ಯಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ಬಜೆಟ್ ಬೆಲೆಯ ಹೊಸ ಇವಿ ಕಾರುಗಳ ಬಿಡುಗಡೆಯತ್ತ ಗಮನಹರಿಸಿದ ಹ್ಯುಂಡೈ

ಸದ್ಯ ಎಲೆಕ್ಟ್ರಿಕ್ ಕಾರು ಮಾದರಿಗಳ ಮುಖ್ಯ ತಾಂತ್ರಿಕ ಅಂಶವಾಗಿ ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯಕ್ಕಾಗಿ ಸಂಪೂರ್ಣವಾಗಿ ಚೀನಿ ಮತ್ತು ಥೈವಾನ್ ಮಾರುಕಟ್ಟೆಯನ್ನು ನೆಚ್ಚಿಕೊಂಡಿರುವುದೇ ಇವಿ ಕಾರುಗಳ ಬೆಲೆ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಬೆಲೆ ಪಡೆದುಕೊಂಡಿರುವುದಕ್ಕೆ ಪ್ರಮುಖ ಕಾರಣವಾಗಿದೆ.

ಬಜೆಟ್ ಬೆಲೆಯ ಹೊಸ ಇವಿ ಕಾರುಗಳ ಬಿಡುಗಡೆಯತ್ತ ಗಮನಹರಿಸಿದ ಹ್ಯುಂಡೈ

ಈ ಹಿನ್ನಲೆ ಬೆಲೆ ಇಳಿಕೆಗಾಗಿ ಭಾರತದಲ್ಲಿ ಪೂರ್ಣ ಪ್ರಮಾಣದ ಲೀಥಿಯಂ ಅಯಾನ್ ಬ್ಯಾಟರಿ ಉತ್ಪಾದನಾ ಘಟಕಗಳಿಗೆ ಹಲವು ಆಟೋ ಕಂಪನಿಗಳು ಸಹಭಾಗೀತ್ವದ ಯೋಜನೆಯನ್ನು ಕೈಗೊಂಡಿದ್ದು, ಮೇಡ್ ಇನ್ ಇಂಡಿಯಾ ಬ್ಯಾಟರಿ ಲಭ್ಯವಾದಲ್ಲಿ ಇವಿ ಕಾರುಗಳ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಮಾಡಬಹುದುದಾಗಿದೆ.

ಬಜೆಟ್ ಬೆಲೆಯ ಹೊಸ ಇವಿ ಕಾರುಗಳ ಬಿಡುಗಡೆಯತ್ತ ಗಮನಹರಿಸಿದ ಹ್ಯುಂಡೈ

ಈ ಮೂಲಕ ಪ್ರೀಮಿಯಂ ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ಮಾರಾಟ ಮಾಡಲಿರುವ ಹ್ಯುಂಡೈ ಕಂಪನಿಯು ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿದ್ದು, ಮೊದಲ ಬಾರಿಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಬಜೆಟ್ ಬೆಲೆಯ ಹೊಸ ಇವಿ ಕಾರುಗಳ ಬಿಡುಗಡೆಯತ್ತ ಗಮನಹರಿಸಿದ ಹ್ಯುಂಡೈ

ದಕ್ಷಿಣ ಕೊರಿಯಾದಲ್ಲಿ ಹೊಸ ಬಜೆಟ್ ಬೆಲೆಯ ಕಂಪ್ಯಾಕ್ಟ್ ಎಸ್‌ಯುವಿ ಎಲೆಕ್ಟ್ರಿಕ್ ಕಾರಿನ ಪ್ರಾಥಮಿಕ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗಿದ್ದು, ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಾಗಿ ಶೀಘ್ರದಲ್ಲೇ ಭಾರತದಲ್ಲೂ ಟೆಸ್ಟಿಂಗ್ ನಡೆಸುವ ಸಾಧ್ಯತೆಗಳಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಜೆಟ್ ಬೆಲೆಯ ಹೊಸ ಇವಿ ಕಾರುಗಳ ಬಿಡುಗಡೆಯತ್ತ ಗಮನಹರಿಸಿದ ಹ್ಯುಂಡೈ

ವೆನ್ಯೂ ಕಾರಿನ ವಿನ್ಯಾಸವನ್ನು ಆಧರಿಸಿರುವ ಹೊಸ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಸದ್ಯಕ್ಕೆ ಎಎಕ್ಸ್1 ಎನ್ನುವ ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹೊಸ ಕಾರು ರೂ. 10 ಲಕ್ಷದಿಂದ ರೂ. 14 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳು ನೀರಿಕ್ಷೆಯಿದೆ.

ಬಜೆಟ್ ಬೆಲೆಯ ಹೊಸ ಇವಿ ಕಾರುಗಳ ಬಿಡುಗಡೆಯತ್ತ ಗಮನಹರಿಸಿದ ಹ್ಯುಂಡೈ

ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿರುವ ಹೊರತಾಗಿ ತಾಂತ್ರಿಕ ಮಾಹಿತಿಗಳ ಸಿಕ್ಕಿಲ್ಲವಾದರೂ ಹೊಸ ಕಾರು ಪ್ರತಿ ಚಾರ್ಜ್‌ಗೆ 300 ರಿಂದ 350 ಕಿ.ಮೀ ಮೈಲೇಜ್ ರೇಂಜ್ ಪಡೆದುಕೊಳ್ಳಲಿದ್ದು, ಅತಿ ಕಡಿಮೆ ಅವಧಿಯಲ್ಲಿ ಪೂರ್ಣಪ್ರಮಾಣದ ಚಾರ್ಜಿಂಗ್ ಸೌಲಭ್ಯಕ್ಕಾಗಿ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಬಜೆಟ್ ಬೆಲೆಯ ಹೊಸ ಇವಿ ಕಾರುಗಳ ಬಿಡುಗಡೆಯತ್ತ ಗಮನಹರಿಸಿದ ಹ್ಯುಂಡೈ

ಮಾಹಿತಿಗಳ ಪ್ರಕಾರ ಹೊಸ ಎಲೆಕ್ಟ್ರಿಕ್ ಕಾರು ಮುಂಬರುವ 2022ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದ್ದು, ತದನಂತರವಷ್ಟೇ ಹೊಸ ಕಾರು ಮಾರಾಟಕ್ಕೆ ಲಭ್ಯವಾಗಿದೆ. ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಹೆಚ್ಚಳವಾಗುತ್ತಿದ್ದು, ಇದು ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯನ್ನು ನಿರ್ಧರಿಸಲಿದೆ.

Article Published On: Saturday, February 20, 2021, 8:45 [IST]
English summary
Hyundai is planning to launch affordable electric car models in India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+