ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ನ್ಯೂ ಜನರೇಷನ್ ಟ್ಯೂಸಾನ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್(Hyundai Tucson) ಆವೃತ್ತಿಯ ವಿನ್ಯಾಸದಲ್ಲಿ ಹಲವಾರು ಅಪ್ದೇಟ್ ಗಳನ್ನು ಮಾಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಭಾರತದಲ್ಲಿ ಕಾಣಿಸಿಕೊಂಡ ಸ್ಪೈ ಚಿತ್ರ ಇತ್ತೀಚೆಗೆ ಬಹಿರಂಗವಾಗಿತ್ತು. ಭಾರತದಲ್ಲಿ ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಬಹಿರಂಗವಾಗಿರುವುದು ಎಂದು ನಿರೀಕ್ಷಿಸುತ್ತೇವೆ. ವರದಿಗಳ ಪ್ರಕಾರ ಈಟ್ಯೂಸಾನ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಈ ಟ್ಯೂಸಾನ್ ಎಸ್‍ಯುವಿಯ ಮುಂಭಾಗ ಆಕರ್ಷಕ ಲುಕ್ ಅನ್ನು ಹೊಂದಿದ, ಈ ಹೊಸ ಎಸ್‍ಯುವಿಯು ಸ್ಪೋರ್ಟಿ ಲುಕ್ ನಲ್ಲಿ ಕಾಣುವಂತೆ ಅಗ್ರೇಸಿವ್ ವಿನ್ಯಾಸವನ್ನು ಹೊಂದಿದೆ. ಈ ಹೂಸ ಟ್ಯೂಸಾನ ಹೆಡ್‌ಲ್ಯಾಂಪ್ ಯುನಿಟ್ ಆಕರ್ಷಕವಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯಲ್ಲಿ ಕ್ರೋಮ್ ಸ್ಟ್ರಿಪ್ ಹೊಂದಿದೆ. ಈ ಎಸ್‍ಯುವಿಯ ಕೊನೆಯಲ್ಲಿ ವಿಶಿಷ್ಟವಾದ ಸಿ-ಪಿಲ್ಲರ್ ಆಕಾರವನ್ನು ರೂಪಿಸಿದೆ. ಈ ಹೊಸ ಎಸ್‍ಯುವಿಯ ಹಿಂದಿನ ಪ್ರೊಫೈಲ್‌ನಲ್ಲಿ ಉದ್ದವಾದ ಬೆಲ್ಟ್‌ಲೈನ್ಗಳಿವೆ. ಈ ಎಸ್‍ಯುವಿಯಲ್ಲಿ 19 ಇಂಚಿನ ವ್ಹೀಲ್ಸ್ ಅನ್ನು ಅಳವಡಿಸಿದೆ. ಈ ವ್ಹೀಲ್ ಗಳು ವಿಭಿನ್ನವಾದ ವಿನ್ಯಾಸದಿಂದ ಕೂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿ ಶಾರ್ಕ್ ಫಿನ್ ಆಂಟೆನಾ, ಬಾಡಿ ಕಲರ್‌ನಲ್ಲಿ ರೂಫ್-ರೈಲ್ ಮತ್ತು ಫ್ಲೋಟಿಂಗ್ ರೂಫ್‌ಲೈನ್ ಹೊಂದಿದೆ. ಹಿಂಭಾಗದಲ್ಲಿ ಅಗಲವಾಗಿ ಉದ್ದಕೂ ರೆಡ್ ಎಲ್ಇಡಿ ಲೈಟ್ ಅನ್ನು ಅಳವಡಿಸಿದೆ. ಇದು ಟೈಲ್-ಲ್ಯಾಂಪ್‌ಗಳನ್ನು ಕನೆಕ್ಟ್ ಆಗಿದೆ. ಇನ್ನು ಟ್ಯೂಸನ್ ಎಸ್‍ಯುವಿಯಲಿರುವ ಟೈಲ್-ಲೈಟ್ ಕ್ರೆಟಾದ ಟೈಲ್-ಲ್ಯಾಂಪ್‌ನ ವಿಕಾಸಗೊಂಡ ಆವೃತ್ತಿಯಂತೆ ಕಾಣುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಇದರ ಕೆಳಗಿನ ಬಂಪರ್ ಸಿಲ್ವರ್ ಸ್ಕಿಡ್ ಪ್ಲೇಟ್, ಸ್ಟಾಪ್ ಲ್ಯಾಂಪ್‌ಗಳು ಮತ್ತು ಏರ್ ವೆಂಟ್ಸ್ ಗಳನ್ನು ಹೊಂದಿರುತ್ತದೆ. ಇದು ಇಂಟಿಗ್ರೇಟೆಡ್ ಬ್ರೇಕ್ ಲೈಟ್ ಗಳೊಂದಿಗೆ ರೂಫ್ ಸ್ಪಾಯ್ಲರ್ ಅನ್ನು ಹೊಂದಿದೆ. ಈ ಹೊಸ ಟ್ಯೂಸಾನ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ದೊಡ್ಡದಾದ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಇದರೊಂದಿಗೆ ಎಸಿ ಮತ್ತು ಇತರ ಕಂಟ್ರೋಲ್ ಗಳಿಗಾಗಿ ಟಚ್-ಪ್ಯಾನೆಲ್‌ಗಳು, ಅನನ್ಯವಾಗಿ ವಿನ್ಯಾಸಗೊಳಿಸಲಾದ ಮಲ್ಟಿ-ಫಂಕ್ಷನಲ್ ಸ್ಟೀಯರಿಂಗ್ ವ್ಹೀಲ್, ಗೇರ್‌ಬಾಕ್ಸ್, ಪಾರ್ಕಿಂಗ್ ಬ್ರೇಕ್ ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿದೆ. ವೈರ್‌ಲೆಸ್ ಚಾರ್ಜಿಂಗ್ ಮತ್ತು ನೂತನ ಕನೆಕ್ಟಿವಿಟಿ ಫೀಚರ್ ಗಳನ್ನು ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯಲ್ಲಿ ಎರಡನೇ ಸಾಲಿನ ಸೀಟುಗಳ ಫ್ಲಾಟ್ ಫೋಲ್ಡಿಂಗ್ ಸಕ್ರಿಯಗೊಳಿಸಿದಾಗ 1,095 ಲೀಟರ್ ಸ್ಪೇಸ್ ಲಭ್ಯವಿರುತ್ತದೆ.2021ರ ಟ್ಯೂಸಾನ್ ಎಸ್‍ಯುವಿಯಲ್ಲಿ 2.5-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 187 ಬಿಹೆಚ್‍ಪಿ ಪವರ್ ಮತ್ತು 417 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಎಂಜಿನ್ ನೊಂದಿಗೆ 8-ಸ್ಪೀಡ್ ಎಂಜಿನ್ ನೊಂದಿಗೆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಇದರೊಂದಿಗೆ ಈ ಹೊಸ ಎಸ್‍ಯುವಿಯಲ್ಲಿ 1.6-ಲೀಟರ್ ಟರ್ಬೊ ಹೈಬ್ರಿಡ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 227 ಬಿಹೆಚ್‍ಪಿ ಪವರ್ ಮತ್ತು 350 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ 1.6-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ನೀಡಬಹುದು

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಹ್ಯುಂಡೈ ಈ ಹೊಸ ಟ್ಯೂಸಾನ್ ಎಸ್‍ಯುವಿಯನ್ನು ಇತ್ತೀಚೆಗೆ ಯುರೋ NCAP ಕ್ರ್ಯಾಶ್ ಟೆಸ್ಟ್‌ಗೆ ಒಳಪಡಿಸಿತ್ತು. ಈ ಕ್ರ್ಯಾಶ್ ಟೆಸ್ಟ್‌ನಲ್ಲಿ ಹ್ಯುಂಡೈ ಟ್ಯೂಸಾನ್(Hyundai Tucson) ಎಸ್‍ಯುವಿಯು 5-ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಪಡೆದುಕೊಂಡಿದೆ. ಯುರೋ NCAP ಕ್ರ್ಯಾಶ್ ಟೆಸ್ಟ್‌ನಲ್ಲಿ ಟ್ಯೂಸಾನ್ ಎಸ್‍ಯುವಿಯು ವಯಸ್ಕ ಪ್ರಯಾಣಿಕರ ವಿಭಾಗದಲ್ಲಿ ಶೇ.86 ರಷ್ಟು ಮತ್ತು ಮಕ್ಕಳ ಸುರಕ್ಷತಾ ವಿಭಾಗದಲ್ಲಿ ಶೇ.87 ರಷ್ಟು ಅಂಕಗಳನ್ನು ಗಳಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಯುರೋ NCAP ಪ್ರಕಾರ, ಟ್ಯೂಸಾನ್ ಎಸ್‍ಯುವಿ ಮುಂಭಾಗದ ಆಫ್‌ಸೆಟ್ ಪರೀಕ್ಷೆಯಲ್ಲಿ ಸ್ಥಿರವಾಗಿತ್ತು. ಕಾರು ಚಾಲಕ ಮತ್ತು ಪ್ರಯಾಣಿಕ ಇಬ್ಬರ ಮೊಣಕಾಲುಗಳು ಮತ್ತು ತೊಡೆಗಳಿಗೆ ಉತ್ತಮ ರಕ್ಷಣೆ ನೀಡಿತು. ಇನ್ನು ಚಾಲಕನ ಎದೆಗೆ ರಕ್ಷಣೆಯು ಕನಿಷ್ಠವಾಗಿತ್ತು. ಪೂರ್ಣ-ಅಗಲದ ಕಟ್ಟುನಿಟ್ಟಿನ ತಡೆಗೋಡೆ ಟೆಸ್ಟ್‌ನಲ್ಲಿ, ದೇಹದ ಅತ್ಯಂತ ಪ್ರಮುಖ ಅಂಗಗಳಿಗೆ ಸಾಕಷ್ಟು ಉತ್ತಮ ರಕ್ಷಣೆ ಒದಗಿಸಲಾಗಿದೆ. ಆದರೆ ಚಾಲಕ ಎದೆಯ ರಕ್ಷಣೆಯನ್ನು ಕನಿಷ್ಠ ಎಂದು ರೇಟ್ ಮಾಡಲಾಗಿದೆ. ಅಡ್ಡ ತಡೆ ಟೆಸ್ಟ್‌ನಲ್ಲಿ, ದೇಹದ ಪ್ರಮುಖ ಅಂಗಗಳಿಗೂ ರಕ್ಷಣೆ ಉತ್ತಮ ಅಥವಾ ಸಮರ್ಪಕವಾಗಿದೆ

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಇನ್ನು ಸೈಡ್ ಪೋಲ್ ಇಂಪ್ಯಾಕ್ಟ್ ಟೆಸ್ಟ್‌ನಲ್ಲಿ, ಪ್ರಯಾಣಿಕರಿಗೆ ರಕ್ಷಣೆ ಉತ್ತಮವಾಗಿತ್ತು ಮತ್ತು ಕಾರು ಗರಿಷ್ಠ ಅಂಕಗಳನ್ನು ಗಳಿಸಿತು. ಮುಂಭಾಗದ ಆಫ್‌ಸೆಟ್ ಟೆಸ್ಟ್ ಮತ್ತು ಅಡ್ಡ ತಡೆ ಪರಿಣಾಮ ಎರಡರಲ್ಲೂ, ಎರಡೂ ಮಕ್ಕಳ ಡಮ್ಮಿಗಳಿಗೆ ರಕ್ಷಣೆ ಉತ್ತಮವಾಗಿತ್ತು. ಒಟ್ಟಾರೆಯಾಗಿ ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಗರಿಷ್ಠ ಸುರಕ್ಷತೆಯನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ವಿದೇಶಗಳಲ್ಲಿನ ಮಾರುಕಟ್ಟೆಗಳಲ್ಲಿ ಕಳೆದ ವರ್ಷ ಪರಿಚಯಿಸಿದ್ದರು. ಇದೀಗ ಈ ಹೊಸ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ. ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಮುಂದಿನ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ.

Most Read Articles

Kannada
English summary
Hyundai planning to launch the new gen tucson suv in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X