ಅಲ್ಕಾಜರ್ ಎಸ್‍ಯುವಿಯ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಹ್ಯುಂಡೈ

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಎಸ್‍ಯುವಿ ಪೋರ್ಟ್ಫೋಲಿಯೊವನ್ನು ಮತ್ತಷ್ಟು ಬಲಪಡಿಸಲು 7-ಸೀಟರ್ ಅಲ್ಕಾಜರ್ ಮಾದರಿಯನ್ನು ಇತ್ತೀಚೆಗೆ ತಿಂಗಳು ಬಿಡುಗಡೆಗೊಳಿಸಿತು, ಈ ಹೊಸ ಹ್ಯುಂಡೈ ಅಲ್ಕಾಜರ್ 7-ಸೀಟರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

ಅಲ್ಕಾಜರ್ ಎಸ್‍ಯುವಿಯ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಹ್ಯುಂಡೈ

ಹೊಸ ಹ್ಯುಂಡೈ ಅಲ್ಕಾಜರ್ 7-ಸೀಟರ್ ಮಾದರಿಯು ಪ್ರಸ್ತುತ ತಲೆಮಾರಿನ ಹ್ಯುಂಡೈ ಕ್ರೆಟಾವನ್ನು ಆಧರಿಸಿದೆ, ಇದು ಕಳೆದ ವರ್ಷ ಮಾರುಕಟ್ಟೆಯಲ್ಲಿ ಬಿಡುಗಡೆಯಾಯಿತು. ಇನ್ನು ಈ ಹ್ಯುಂಡೈ ಈಗ ಅಲ್ಕಾಜಾರ್‌ಗಾಗಿ ಹೊಸ ಟಿವಿಸಿಯನ್ನು ಬಿಡುಗಡೆ ಮಾಡಿದೆ, ಇನ್ನು ಈ ಹ್ಯುಂಡೈ ಅಲ್ಕಾಜಾರ್‌ನ ಒಳಭಾಗದಲ್ಲಿ ಉತ್ತಮ ಸ್ಪೇಸ್ ಅನ್ನು ಹೊಂದಿದ್ದು, 7 ಜನರು ಉತ್ತಮವಾಗಿ ಕುಳಿತು ಪ್ರಯಾಣಿಸಬಹುದು. ಈ ಹ್ಯುಂಡೈ ಅಲ್ಕಾಜರ್ 7-ಸೀಟರ್ ಆಕರ್ಷಕ ವಿನ್ಯಾಸ, ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ.

ಅಲ್ಕಾಜರ್ ಎಸ್‍ಯುವಿಯ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ಅಲ್ಕಾಜರ್ ಎಸ್‍ಯುವಿಯ ಹೊಸ ಟಿವಿಸಿಯನ್ನು ಬಿಡುಗಡೆ ಮಾಡಿದೆ. ಈ ವಿಡಿಯೋವನ್ನು ಹ್ಯುಂಡೈ ಇಂಡಿಯಾ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದೆ. ಈ ಹ್ಯುಂಡೈ ಅಲ್ಕಾಜರ್ 7-ಸೀಟರ್ ಮಾದರಿಯನ್ನು 6 ಮತ್ತು 7 ಆಸನಗಳ ಸಂರಚನೆಗಳಲ್ಲಿ ಅನ್ನು ನೀಡುತ್ತದೆ.

ಅಲ್ಕಾಜರ್ ಎಸ್‍ಯುವಿಯ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಹ್ಯುಂಡೈ

ಈ ಅಲ್ಕಾಜಾರ್ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಸೀಟುಗಳನ್ನು ಸೆಂಟರ್ ಕನ್ಸೋಲ್‌ನೊಂದಿಗೆ ಪಡೆಯುತ್ತದೆ, ಇದರಲ್ಲಿ ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಕಪ್‌ಹೋಲ್ಡರ್‌ಗಳಿವೆ. ಎಲ್ಲಾ ಮೂರು ಸಾಲುಗಳ ಸೀಟುಗಳೊಂದಿಗೆ 180 ಲೀಟರ್ ಬೂಟ್ ಸ್ಪೇಸ್ ನೀಡುತ್ತದೆ.

ಅಲ್ಕಾಜರ್ ಎಸ್‍ಯುವಿಯ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಹ್ಯುಂಡೈ

ಇನ್ನು ಹೊಸ ಹ್ಯುಂಡೈ ಅಲ್ಕಾಜರ್ 7-ಸೀಟರ್ ಮಾದರಿಯಲ್ಲಿ 579 ಲೀಟರ್ ನಷ್ಟು ಬೂಟ್ ಸ್ಪೇಸ್ ಅನ್ನು ಹೊಂದಿದೆ. ಇದನ್ನು 1051 ಲೀಟರ್'ಗೆ ಹೆಚ್ಚಿಸಬಹುದು. ಇನ್ನು ಈ ಎಸ್‍ಯುವಿಯ ಡೈವಿಂಗ್ ಸೀಟ್ ಎಲೆಕ್ಟ್ರಿಕ್ ಆಗಿ ಅಡೆಜಸ್ಟ್ ಮಾಡಿಕೊಳ್ಳಬಹುದು. ಇದರ ಎರಡನೇ ಸಾಲಿನ ಸೀಟನ್ನು ಮಡಿಚುವ ಮೂಲಕ ಮೂರನೇ ಸಾಲಿನ ಸೀಟನ್ನು ಸುಲಭವಾಗಿ ಪ್ರವೇಶಿಸಬಹುದು.

ಅಲ್ಕಾಜರ್ ಎಸ್‍ಯುವಿಯ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಹ್ಯುಂಡೈ

ಎರಡನೇ ಸಾಲಿನ ಅಥವಾ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚು ಲೆಗ್ ರೂಂ ರಚಿಸಲು ಎರಡನೇ ಸಾಲಿನ ಸೀಟುಗಳನ್ನು ಸರಿಹೊಂದಿಸಬಹುದು. ಹ್ಯುಂಡೈ ಅಲ್ಕಾಜಾರ್ ನೀಡುತ್ತಿರುವ ಮತ್ತೊಂದು ಆರಾಮದಾಯಕ ವೈಶಿಷ್ಟ್ಯವೆಂದರೆ ಎರಡನೇ ಸಾಲಿನ ಪ್ರಯಾಣಿಕರಿಗೆ ಟ್ರೇ ಟೇಬಲ್ ಲಭ್ಯವಿರುತ್ತದೆ, ಪ್ರಯಾಣಿಕರಿಗೆ ಹುಂಡೈ ಎಸಿ ವೆಂಟ್‌ಗಳನ್ನು ನೀಡುತ್ತಿದ್ದು, ಕಾರಿನಲ್ಲಿ ಇಂಟಿಗ್ರೇಟೆಡ್ ಏರ್ ಪ್ಯೂರಿಫೈಯರ್ ಅನ್ನು ಸಹ ಅಳವಡಿಸಲಾಗಿದೆ.

ಅಲ್ಕಾಜರ್ ಎಸ್‍ಯುವಿಯ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಹ್ಯುಂಡೈ

ಈ ಹೊಸ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯು ಸ್ಪ್ಲಿಟ್-ಶೈಲಿಯ ಎಲ್ಇಡಿ ಹೆಡ್‌ಲ್ಯಾಂಪ್‌, 3ಡಿ ಹನಿಕೊಂಬ್ ಗ್ರಿಲ್, ಹೊಸ ವಿನ್ಯಾಸದ ಬಂಪರ್ ವಿನ್ಯಾಸ, ಎಲ್ಇಡಿ ಟೈಲ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್, ವಿವಿಧ ಮಾದರಿಗಳಿಗೆ ಅನುಗುಣವಾಗಿ 17 ಮತ್ತು 18-ಇಂಚಿನ ಅಲಾಯ್ ವೀಲ್ಹ್, ರೂಫ್ ರೈಲ್ಸ್, ಫ್ಲಕ್ಸ್ ಸ್ಕಫ್ ಪ್ಲೇಟ್, ಶಾರ್ಕ್ ಫಿನ್ ಅಂಟೆನಾ ಮತ್ತು ಬಾಡಿ ಕ್ಲ್ಯಾಡಿಂಗ್ ಹೊಂದಿದೆ.

ಅಲ್ಕಾಜರ್ ಎಸ್‍ಯುವಿಯ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಹ್ಯುಂಡೈ

ಇನ್ನು ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ, 10.25 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 10.25 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಬ್ಲ್ಯೂ ಲಿಂಕ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಕಮಾಂಡರ್, ಮೂರು ಸಾಲಿಗೂ ಎಸಿ ವೆಂಟ್ಸ್, ಬ್ಲೈಂಡ್ ವಿಂಡೋ ಮಾನಿಟರ್ ಮತ್ತು ಆ್ಯಂಬಿಯೆಂಟ್ ಲೈಟಿಂಗ್ ಅನ್ನು ಕೂಡ ಹೊಂದಿದೆ.

ಅಲ್ಕಾಜರ್ ಎಸ್‍ಯುವಿಯ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಹ್ಯುಂಡೈ

ಇದರೊಂದಿಗೆ ಸೀಟ್ ಬ್ಲ್ಯಾಟ್ ಟೇಬಲ್, ಆಟೋ ಏರ್ ಪ್ಯೂರಿಫೈರ್, ರಿಮೋಟ್ ಎಂಜಿನ್ ಸ್ಟಾರ್ಟ್, ಕ್ಲೈಮೆಟ್ ಕಂಟ್ರೋಲ್, ಪನೊರಮಿಕ್ ಸನ್‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಪೀಚರ್ಸ್ ಗಳನ್ನು ಕೂಡ ಹೊಂದಿವೆ. ಇನ್ನು ಈ ಹೊಸ ಎಸ್‍ಯುವಿಯಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಗಳನ್ನು ಹೊಂದಿವೆ.

ಈ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯಲ್ಲಿ 2.0 ಲೀಟರ್ ಎಂಜಿನ್ 159 ಬಿಹೆಚ್‍ಪಿ ಪವರ್ ಮತ್ತು 191 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಡೀಸೆಲ್ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಅಲ್ಕಾಜರ್ ಎಸ್‍ಯುವಿಯ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಹ್ಯುಂಡೈ

ಈ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಗಳೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ನೀಡಲಾಗಿದೆ. ಈ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯ ಆರಂಭವಾಗಿ ಬೆಲೆಯು ರೂ.16.30 ಲಕ್ಷಗಳಾಗಿದೆ. ಈ ಬೆಲೆಯು ಎಕ್ಸ್ ಶೋರೂಂ ಪ್ರಕಾರವಾಗಿದೆ.

Most Read Articles

Kannada
English summary
Hyundai released new tvc for alcazar suv details
Story first published: Monday, August 9, 2021, 10:15 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X