ಐಷಾರಾಮಿ ಸೌಲಭ್ಯವುಳ್ಳ ಸ್ಟಾರಿಯಾ ಎಂಪಿವಿ ಅನಾವರಣಗೊಳಿಸಿದ ಹ್ಯುಂಡೈ

ದಕ್ಷಿಣ ಕೊರಿಯಾದ ಹ್ಯುಂಡೈ ಕಂಪನಿಯು ಜಾಗತಿಕ ಮಾರುಕಟ್ಟೆಯಲ್ಲಿನ ಯಶಸ್ವಿ ಕಾರ್ಯಾಚರಣೆಯೊಂದಿಗೆ ವಿಶ್ವದ 8ನೇ ಅತಿದೊಡ್ಡ ಕಾರು ಮಾರಾಟ ಕಂಪನಿಯಾಗಿ ಹೊರಹೊಮ್ಮಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದೆ.

ಐಷಾರಾಮಿ ಸೌಲಭ್ಯವುಳ್ಳ ಸ್ಟಾರಿಯಾ ಎಂಪಿವಿ ಅನಾವರಣಗೊಳಿಸಿದ ಹ್ಯುಂಡೈ

ಪ್ರಸ್ತುತ ಮಾರುಕಟ್ಟೆಯಲ್ಲಿ ಹ್ಯುಂಡೈ ಮೋಟಾರ್ಸ್ ಕಂಪನಿಯು ಹ್ಯಾಚ್‌ಬ್ಯಾಕ್, ಕಂಪ್ಯಾಕ್ಟ್ ಎಸ್‌ಯುವಿ, ಎಸ್‌ಯುವಿ, ಸೆಡಾನ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸಿದ್ದು, ಎಂಪಿವಿ ಕಾರುಗಳ ಮಾರಾಟ ವಿಭಾಗದಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಕಂಪನಿಯು ಹೊಸ ಉತ್ಪನ್ನಗಳೊಂದಿಗೆ ಆಕರ್ಷಿಸಲು ಯತ್ನಿಸುತ್ತಿದೆ. ಎಂಪಿವಿ ಕಾರು ಮಾದರಿಗಳನ್ನು ಈಗಾಗಲೇ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟ ಸೌಲಭ್ಯ ಹೊಂದಿದ್ದರೂ ಸಹ ಅವುಗಳ ಕೆಲವೇ ರಾಷ್ಟ್ರಗಳಿಗೆ ಮಾತ್ರ ಸೀಮಿತವಾಗಿವೆ.

ಐಷಾರಾಮಿ ಸೌಲಭ್ಯವುಳ್ಳ ಸ್ಟಾರಿಯಾ ಎಂಪಿವಿ ಅನಾವರಣಗೊಳಿಸಿದ ಹ್ಯುಂಡೈ

ಜಾಗತಿಕ ಮಾರುಕಟ್ಟೆಯಲ್ಲಿನ ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ವಿಭಾಗದಲ್ಲಿ ಉತ್ತಮ ಬೇಡಿಕೆ ಕಾಯ್ದುಕೊಳ್ಳಲು ಯತ್ನಿಸುತ್ತಿರುವ ಹ್ಯುಂಡೈ ಕಂಪನಿಯು ಶೀಘ್ರದಲ್ಲೇ ತನ್ನ ಕಾನ್ಸೆಪ್ಟ್ ಎಂಪಿವಿ ಕಾರುಗಳ ಉತ್ಪಾದನೆ ಚಾಲನೆ ನೀಡುತ್ತಿದ್ದು, ಹೊಸ ಯೋಜನೆ ಅಡಿ ನಿರ್ಮಾಣವಾಗುತ್ತಿರುವ ಮೊದಲ ಎಂಪಿವಿ ಕಾರು ಮಾದರಿಯನ್ನು ಅನಾವರಣಗೊಳಿಸಿದೆ.

ಐಷಾರಾಮಿ ಸೌಲಭ್ಯವುಳ್ಳ ಸ್ಟಾರಿಯಾ ಎಂಪಿವಿ ಅನಾವರಣಗೊಳಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ಎಂಪಿವಿ ಕಾರುಗಳ ವಿಭಾಗದಲ್ಲಿ ಹೊಸ ಬೇಡಿಕೆಯ ನೀರಿಕ್ಷೆಯೊಂದಿಗೆ ವಿನೂತನ ವಿನ್ಯಾಸದ ಸ್ಟಾರಿಯಾ ಕಾರು ಆವೃತ್ತಿಯನ್ನು ಬಿಡುಗಡೆ ಮಾಡಲು ಮುಂದಾಗಿದ್ದು, ಹೊಸ ಕಾರು ಮೂರು ಸಾಲುಗಳ ಆಸನ ಮತ್ತು ನಾಲ್ಕು ಸಾಲಗಳ ಆಸನ ಸೌಲಭ್ಯದೊಂದಿಗೆ 7 ಸೀಟರ್, 9 ಸೀಟರ್ ಮತ್ತು 11 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಾಗುತ್ತಿದೆ.

ಐಷಾರಾಮಿ ಸೌಲಭ್ಯವುಳ್ಳ ಸ್ಟಾರಿಯಾ ಎಂಪಿವಿ ಅನಾವರಣಗೊಳಿಸಿದ ಹ್ಯುಂಡೈ

ಸರಳವಾದ ವಿನ್ಯಾಸದೊಂದಿಗೆ ಹಲವಾರು ಐಷಾರಾಮಿ ಫೀಚರ್ಸ್‌ಗಳನ್ನು ಹೊಂದಿರುವ ಹ್ಯುಂಡೈ ಹೊಸ ಸ್ಟಾರಿಯಾ ಕಾರು ಮಾದರಿಯು ಏಷ್ಯಾದ ಪ್ರಮುಖ ರಾಷ್ಟ್ರಗಳಿಗಾಗಿ ಅಭಿವೃದ್ದಿಪಡಿಸುತ್ತಿದ್ದು, ಹೊಸ ಕಾರು ಭಾರತದಲ್ಲಿ ಮಾತ್ರವಲ್ಲ ಮಲೇಷಿಯಾ, ಥೈಲ್ಯಾಂಡ್‍ನಲ್ಲೂ ಮಾರಾಟಗೊಳ್ಳುವ ನೀರಿಕ್ಷೆಯಲ್ಲಿದೆ. ಕಳೆದ ವಾರವಷ್ಟೇ ಹೊಸ ಕಾರಿನ ಚಿತ್ರಗಳನ್ನು ಹಂಚಿಕೊಂಡಿದ್ದ ಕಂಪನಿಯು ಇದೀಗ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳಿಸುತ್ತಿದ್ದು, ಹೊಸ ಕಾರು ಹಲವಾರು ಹೊಸ ಸೌಲಭ್ಯಗಳನ್ನು ಹೊಂದಿದೆ.

ಐಷಾರಾಮಿ ಸೌಲಭ್ಯವುಳ್ಳ ಸ್ಟಾರಿಯಾ ಎಂಪಿವಿ ಅನಾವರಣಗೊಳಿಸಿದ ಹ್ಯುಂಡೈ

ಪ್ರಸ್ತುತ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಎಂಪಿವಿ ಕಾರನ್ನು ಸಿದ್ದಪಡಿಸಿದ್ದು, ಹೊಸ ಕಾರನ್ನು ನ್ಯೂ ಜನರೇಷನ್ ಕ್ರೆಟಾ ಕಾರಿನ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣ ಮಾಡುವ ಸಾಧ್ಯತೆಗಳಿವೆ.

ಐಷಾರಾಮಿ ಸೌಲಭ್ಯವುಳ್ಳ ಸ್ಟಾರಿಯಾ ಎಂಪಿವಿ ಅನಾವರಣಗೊಳಿಸಿದ ಹ್ಯುಂಡೈ

ಸ್ಟಾರಿಯಾ ಎಂಪಿವಿಯು ಬರೋಬ್ಬರಿ 5,253 ಎಂಎಂ ಉದ್ದ, 1,997 ಎಂಎಂ ಅಗಲ, 1,990 ಎಂಎಂ ಎತ್ತರ ಮತ್ತು 3,273 ಎಂಎಂ ವೀಲ್ಹ್‌ಬೆಸ್ ಹೊಂದಿದ್ದು, 7 ಸೀಟರ್ ಮಾದರಿಯಲ್ಲಿ 2+2+3 ಮಾದರಿಯ ಆಸನ, 9 ಸೀಟರ್ ಮಾದರಿಯಲ್ಲಿ 2+2+2+3 ಮಾದರಿ ಆಸನ ಮತ್ತು 11 ಸೀಟರ್ ಮಾದರಿಯಲ್ಲಿ 2+3+3+3 ಮಾದರಿಯ ಆಸನಗಳನ್ನು ಜೋಡಿಸಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಐಷಾರಾಮಿ ಸೌಲಭ್ಯವುಳ್ಳ ಸ್ಟಾರಿಯಾ ಎಂಪಿವಿ ಅನಾವರಣಗೊಳಿಸಿದ ಹ್ಯುಂಡೈ

ಹೊಸ ಕಾರಿನಲ್ಲಿ ಹ್ಯುಂಡೈ ಕಂಪನಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಅಳವಡಿಸಿದ್ದು, ದೊಡ್ಡದಾದ ಗ್ರಿಲ್ ಸಿಸ್ಟಂ, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್, ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ ಕ್ಲಸ್ಟರ್ ಮತ್ತು ಸ್ಲೈಡಿಂಗ್ ಡೋರ್ ಜೊತೆಗೆ ಪನೊರಮಿಕ್ ವ್ಯೂ ಹೊಂದಿರುವ ಸೈಡ್ ವಿಂಡೋಗಳನ್ನು ನೀಡಲಾಗಿದೆ.

ಐಷಾರಾಮಿ ಸೌಲಭ್ಯವುಳ್ಳ ಸ್ಟಾರಿಯಾ ಎಂಪಿವಿ ಅನಾವರಣಗೊಳಿಸಿದ ಹ್ಯುಂಡೈ

ಕಾರಿನ ಒಳಭಾಗವು ಕೂಡಾ ಗ್ರಾಹಕರನ್ನು ಆಕರ್ಷಿಸಲಿದ್ದು, 10.25-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಕನೆಕ್ಟಿವಿ ಸೌಲಭ್ಯಗಳು, ಪನೊರಮಿಕ್ ವ್ಯೂ, ಅರಾಮದಾಯಕವಾದ ಆಸನಗಳೊಂದಿಗೆ ಎಂಪಿವಿ ಕಾರು ಖರೀದಿದಾರರನ್ನು ಸೆಳೆಯಲಿದ್ದು, ಹೊಸ ಕಾರಿನಲ್ಲಿ ವಿವಿಧ ಮಾದರಿಗಳಿಗಾಗಿ 2.2-ಲೀಟರ್ ಟರ್ಬೊ ಡೀಸೆಲ್ ಮತ್ತು 7 ಸೀಟರ್‌ನೊಂದಿಗೆ ಐಷಾರಾಮಿ ಫೀಚರ್ಸ್ ಹೊಂದಿರುವ ಹೈ ಎಂಡ್ ಮಾದರಿಯಲ್ಲಿ 3.5-ಲೀಟರ್ ವಿ6 ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗುತ್ತಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಐಷಾರಾಮಿ ಸೌಲಭ್ಯವುಳ್ಳ ಸ್ಟಾರಿಯಾ ಎಂಪಿವಿ ಅನಾವರಣಗೊಳಿಸಿದ ಹ್ಯುಂಡೈ

2.2-ಲೀಟರ್ ಟರ್ಬೊ ಡೀಸೆಲ್ ಮಾದರಿಯು 177-ಬಿಹೆಚ್‌ಪಿ, 431-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದಲ್ಲಿ 3.5-ಲೀಟರ್ ವಿ6 ಪೆಟ್ರೋಲ್ ಎಂಜಿನ್ ಮಾದರಿಯು 272-ಬಿಹೆಚ್‌ಪಿ, 331-ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

Article Published On: Tuesday, April 13, 2021, 22:45 [IST]
English summary
Hyundai Revealed Futuristic Looking Staria MPV. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+