ಏಪ್ರಿಲ್ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾಯ್ತು ಹ್ಯುಂಡೈ ಐ20 ಕಾರು
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಬಹುನಿರೀಕ್ಷಿತ ಮೂರನೇ ತಲೆಮಾರಿನ ಐ20 ಪ್ರೀಮಿಯಂ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಳಿಸಿತ್ತು. ಹ್ಯುಂಡೈ ಕಾರು ವಿನ್ಯಾಸ ಮತ್ತು ಫೀಚರ್ಸ್ ವಿಭಾಗದಲ್ಲಿ ಸಾಕಷ್ಟು ನವೀಕರಣಗಳನ್ನು ಈ ಹೊಸ ಹ್ಯುಂಡೈ ಐ20 ಕಾರು ಪಡೆದುಕೊಂಡಿದೆ.

2021ರ ಏಪ್ರಿಲ್ ತಿಂಗಳಿನಲ್ಲಿ ಹ್ಯುಂಡೈ ಐ20 ಮಾದರಿಯ 5,002 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇದು ಕಳೆದ ತಿಂಗಳಿನಲ್ಲಿ ನಾಲ್ಕನೇ ಅತಿ ಹೆಚ್ಚು ಮಾರಾಟವಾದ ಹ್ಯುಂಡೈ ಕಾರು ಆಗಿದೆ. ಈ ಹೊಸ ಹ್ಯುಂಡೈ ಐ20 ಪ್ರೀಮಿಯಂ ಹ್ಯಾಚ್‌ಬ್ಯಾಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಆರಂಭದಲ್ಲಿ ಹೊಸ ಸಂಚಲವನ್ನು ಮೂಡಿಸಿತು. ಆದರೆ ನಂತರದಲ್ಲಿ ಈ ನ್ಯೂ ಜನರೇಷನ್ ಕಾರಿನ ಮಾರಾಟದಲ್ಲಿ ಕೊಂಚ ಇಳಿಯಿತು.

ಆದರೆ ಕರೋನಾ ಆತಂಕ ಮತ್ತು ಕಳೆದ ತಿಂಗಳಿನಲ್ಲಿ ದೇಶದಲ್ಲಿ ಹಲವು ಕಡೆಗಳಲ್ಲಿ ಲಾಕ್ ಡೌನ್ ಕೂಡ ಜಾರಿಯಲ್ಲಿತ್ತು. ಇದರ ನಡುವೆ ಹ್ಯುಂಡೈ ಐ20 ಕಾರು ಉತ್ತಮ ಮಾರಾಟವನ್ನು ಕಂಡಿದೆ ಎಂಬುವುದು ಗಮನಿಸಬೇಕಾದ ವಿಷಯವಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ನ್ಯೂ ಜನರೇಷನ್ ಹ್ಯುಂಡೈ ಐ20 ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಹೆಚ್ಚು ಸ್ಪೋರ್ಟಿ ಮತ್ತು ಬೋಲ್ಡ್ ಲುಕ್ ಅನ್ನು ಹೊಂದಿದೆ. ಹ್ಯುಂಡೈ ಐ20 ಹ್ಯಾಚ್‌ಬ್ಯಾಕ್ ಕಾರಿನ ಹಿಂದಿನ ಮಾದರಿಯು ಕೂಡ ಆಕರ್ಷಕ ಲುಕ್ ಅನ್ನು ಹೊಂದಿತ್ತು. ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಹ್ಯುಂಡೈ ಐ20 ಗ್ರಾಹಕರನ್ನು ತನ್ನತ ಸೆಳೆಯುವಂತಹ ಆಕರ್ಷಕ ಲುಕ್ ಮತ್ತು ಸ್ಟೈಲಿಶ್ ನಿಂದ ಹೆಚ್ಚು ಜನಪ್ರಿಯವಾಗಿದೆ.

ಇನ್ನು ಈ ಹೊಸ ಹ್ಯುಂಡೈ ಐ20 ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಹೊಂದಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಹುಂಡೈ ಐ20 ಕಾರಿನ ಪಿಲ್ಲರ್‍ಗಳು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ವಿಡಬ್ಲ್ಯೂ ಟೈಗನ್‍ನಲ್ಲಿ ಇರುವಂತಹ ಕೆಂಪು ಇಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಇಲ್‍ಇಡಿ ಟೇಲ್‍ಲೈಟ್ ಹೊಂದಿದೆ. ಇನ್ನು ಹೊಸ ಹ್ಯುಂಡೈ ಕಾರಿನ ಇಂಟಿರಿಯರ್‍ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಿದೆ.

ಹೊಸ ಹ್ಯುಂಡೈ ಐ20 ಕಾರು ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 83 ಬಿಹೆಚ್‌ಪಿ ಪವರ್ ಮತ್ತು 114 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇದರೊಂದಿಗೆ 1.0ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 120 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 1.5ಎಲ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿಯು ಕೂಡ ಲಭ್ಯವಿದೆ.

ನ್ಯೂ ಜನರೇಷನ್ ಹ್ಯುಂಡೈ ಐ20 ಕಾರು ಅತ್ಯಾಧುನಿಕ ಫೀಚರ್, ಆಕರ್ಷಕ ವಿನ್ಯಾಸ ಮತ್ತು ಪವರ್ ಫುಲ್ ಎಂಜಿನ್ ಅನ್ನು ಹೊಂದಿದೆ. ಈ ಎಲ್ಲಾ ಕಾರಣದಿಂದ ಈ ಹೊಸ ಹ್ಯುಂಡೈ ಕಾರು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚಿನ ಗ್ರಾಹಕರನ್ನು ಸೆಳೆದಿದೆ.

ಹೊಸ ಹ್ಯುಂಡೈ ಐ20 ಕಾರು ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಬಲೆನೊ, ಟಾಟಾ ಆಲ್ಟ್ರೋಜ್, ಫೋಕ್ಸ್‌ವ್ಯಾಗನ್ ಪೊಲೊ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications