ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hyundai i20 N Line ಕಾರು

ಕೆಲವೇ ವಾರಗಳ ಹಿಂದೆ ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ಕಂಪನಿಯು ತನ್ನ ಐ20 ಎನ್ ಲೈನ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಹೊಸ ಹ್ಯುಂಡೈ ಐ20 ಎನ್ ಲೈನ್(Hyundai i20 N Line) ಪರ್ಫಾಮೆನ್ಸ್ ಕಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hyundai i20 N Line ಕಾರು

ಹ್ಯುಂಡೈ ಕಂಪನಿಯು 2021ರ ಅಕ್ಟೋಬರ್ ತಿಂಗಳಿನಲ್ಲಿ ಹ್ಯುಂಡೈ ಐ20 ಎನ್ ಲೈನ್ ಮಾದರಿಯ 700ಕ್ಕೂ ಹೆಚ್ಚು ಯುನಿಟ್‌ಗಳನ್ನು ಮಾರಾಟಗೊಳಿಸಿವೆ, ಈ ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರು ದೇಶದ 97 ನಗರಗಳಾದ್ಯಂತ ಇರುವ 188 ಸಿಗ್ನೇಚರ್ ಔಟ್‌ಲೆಟ್‌ಗಳ ಮೂಲಕ ಲಭ್ಯವಿದೆ. ಸ್ಟ್ಯಾಂಡರ್ಡ್ ಐ20 ಕಾರನ್ನು ನ್ಯೂ ಜನರೇಷನ್ ಮಾದರಿಯಾಗಿ ಸುಮಾರು 12 ತಿಂಗಳ ಹಿಂದೆ ಸ್ವೀಕರಿಸಿದೆ ಮತ್ತು ಆ ಸಂದರ್ಭದಲ್ಲಿಯು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hyundai i20 N Line ಕಾರು

ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರಿನಲ್ಲಿ ಸ್ಪೋರ್ಟಿ ವಿನ್ಯಾಸದ 16-ಇಂಚಿನ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಸೈಡ್ ಗಾರ್ನಿಶ್ ಜೊತೆ ರೆಡ್ ಇನ್ಸರ್ಟ್, ಮುಂಭಾಗದ ಚಕ್ರಗಳಲ್ಲಿ ರೆಡ್ ಬ್ರೇಕ್ ಕ್ಯಾಲಿಪರ್‌ನೊಂದಿಗೆ ಕಾರಿನ ಹಿಂಬದಿಯಲ್ಲಿ ಸ್ಪೋರ್ಟಿ ಬಂಪರ್, ಡಿಫ್ಯೂಸರ್, ಟ್ವಿನ್ ಎಕ್ಸಾಸ್ಟ್, ಟೈಲ್ ಗೇಡ್ ಸ್ಪಾಯ್ಲರ್, ಟೈಲ್ ಲ್ಯಾಂಪ್ ನೊಂದಿಗೆ ಡಾರ್ಕ್ ಕ್ರೋಮ್ ನೀಡಲಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hyundai i20 N Line ಕಾರು

ಹೊರಭಾಗದಲ್ಲಿ ಮಾತ್ರವಲ್ಲ ಹೊಸ ಕಾರಿನ ಒಳಭಾಗದಲ್ಲೂ ಹಲವಾರು ಸ್ಪೋರ್ಟಿ ಅಂಶಗಳನ್ನು ಒಳಗೊಂಡಿದೆ. ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೊಸ ಕಾರಿನ ಡ್ಯಾಶ್‌ಬೋರ್ಡ್ ಆಕರ್ಷಕವಾಗಿದೆ. ಹೊಸ ಕಾರಿನಲ್ಲಿ ಆಲ್ ಬ್ಲ್ಯಾಕ್ ಥೀಮ್ ನೀಡಲಾಗಿದ್ದು, ರೆಡ್ ಆಕ್ಸೆಂಟ್ ಜೊತೆ ಆ್ಯಂಬಿಯೆಂಟ್ ಲೈಟಿಂಗ್ಸ್ ಒಳಗೊಂಡಿದೆ,

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hyundai i20 N Line ಕಾರು

ಕೆಲವು ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಜೋಡಣೆ ಮಾಡಲಾಗಿದ್ದು, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಸಿಂಗಲ್ ಪ್ಯಾನ್ ಸನ್‌ರೂಫ್, ಬಾಷ್ ಕಂಪನಿಯ 7-ಸ್ಪೀಕರ್ಸ್ ಸೌಂಡ್ ಸಿಸ್ಟಂ ಸೇರಿದಂತೆ ಹಲವಾರು ಹೊಸ ಫೀಚರ್ಸ್ ಗಳಿವೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hyundai i20 N Line ಕಾರು

ಈ ಹ್ಯುಂಡೈ ಹ್ಯುಂಡೈ ಐ20 ಎನ್ ಲೈನ್ ಕಾರಿನಲ್ಲಿ 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ನೀಡಲಾಗಿದೆ, ಈ ಎಂಜಿನ್ 120 ಬಿಹೆಚ್‍ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು ಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಮತ್ತು 6-ಸ್ಪೀಡ್ ಇಂಟಲಿಜೆಂಟ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗುತ್ತದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hyundai i20 N Line ಕಾರು

ಈ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರುಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಗಳನ್ನು ಗಳಿಸಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸದ್ಯ ಪರ್ಫಾಮೆನ್ಸ್ ಕಾರುಗಳ ಸಂಖ್ಯೆಯು ವಿರಳವಾಗಿದೆ. ಆದರೆ ಈ ಮೊದಲು ಭಾರತದಲ್ಲಿ ಹಲವು ಜನಪ್ರಿಯ ಕಾರು ತಯಾರಕ ಕಂಪನಿಗಳು ಪರ್ಫಾಮೆನ್ಸ್ ಕಾರುಗಳನ್ನು ಬಿಡುಗಡೆಗೊಳಿಸಲಾಗಿತ್ತು. ಆದರೆ ಆ ಪರ್ಫಾಮೆನ್ಸ್ ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ದೊಡ್ಡ ಯಶಸ್ವಿಯನ್ನು ಗಳಿಸಿಲ್ಲ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hyundai i20 N Line ಕಾರು

ಆದರೆ ಇದೀಗ ಜನಪ್ರಿಯ ಹ್ಯುಂಡೈ ಕಂಪನಿಯು ಹೊಸ 20 ಎನ್ ಲೈನ್ ಪರ್ಫಾಮೆನ್ಸ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಆರಂಭಿಕ ಯಶಸ್ವಿಯನ್ನು ಗಳಿಸಿದೆ. ಒಟ್ಟಾರೆಯಾಗಿ ಈ ಹ್ಯುಂಡೈ ಐ20 ಎನ್ ಲೈನ್ ಮಾದರಿಯು ಕಾರು ಪ್ರಿಯರನ್ನು ಸೆಳೆಯುಂತಹ ಆಕರ್ಷಕ ಲುಕ್ ಒಳಗೊಂಡಿದೆ. ಈ ಕಾರು ಹೆಚ್ಚಾಗಿ ಯುವ ಗ್ರಾಹಕರನ್ನು ಮತ್ತು ಪರ್ಫಾಮೆನ್ಸ್ ಕಾರು ಪ್ರಿಯರನ್ನು ಸೆಳೆಯುತ್ತಿದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hyundai i20 N Line ಕಾರು

ಹುಂಡೈ ಮೋಟಾರ್ ಇಂಡಿಯಾ ಕಂಪನಿಯು ಅಕ್ಟೋಬರ್ ತಿಂಗಳ ತನ್ನ ಮಾರಾಟದ ಅಂಕಿ ಅಂಶಗಳನ್ನು ಇತ್ತೀಚೆಗೆ ಬಿಡುಗಡೆಗೊಳಿಸಿದೆ. ಕಂಪನಿಯು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಕಂಪನಿಯು ಕಳೆದ ತಿಂಗಳು ಒಟ್ಟು 43,556 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಕಂಪನಿಯು 68,835 ಯುನಿಟ್ ಕಾರುಗಳನ್ನು ಮಾರಾಟ ಮಾಡಿತ್ತು.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hyundai i20 N Line ಕಾರು

ಈ ವರ್ಷ ಕಂಪನಿಯ ಮಾರಾಟವು ಪ್ರಮಾಣವು 36.7% ನಷ್ಟು ಕುಸಿತವನ್ನು ಕಂಡಿದೆ. ಹ್ಯುಂಡೈ ಮೋಟಾರ್ ಇಂಡಿಯಾದ ದೇಶಿಯ ಮಾರಾಟದ ಬಗ್ಗೆ ಹೇಳುವುದಾದರೆ ಕಂಪನಿಯು ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ 37,021 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದರೆ, 2020ರ ಅಕ್ಟೋಬರ್ ತಿಂಗಳಿನಲ್ಲಿ ಕಂಪನಿಯು 56,605 ಯುನಿಟ್ ಕಾರುಗಳನ್ನು ಮಾರಾಟ ಮಾಡಲಾಗಿತ್ತು.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hyundai i20 N Line ಕಾರು

ಕಂಪನಿಯ ದೇಶಿಯ ಮಾರಾಟವು ಈ ವರ್ಷ 34.6% ನಷ್ಟು ಕುಸಿತವನ್ನು ದಾಖಲಿಸಿದೆ. ಹ್ಯುಂಡೈ ಇಂಡಿಯಾದ ರಫ್ತು ಬಗ್ಗೆ ಹೇಳುವುದಾದರೆ, ಈ ವರ್ಷದ ಅಕ್ಟೋಬರ್‌ನಲ್ಲಿ ಕಂಪನಿಯು ಒಟ್ಟು 6,535 ಯುನಿಟ್ ಕಾರುಗಳನ್ನು ಭಾರತದಿಂದ ವಿದೇಶಿ ಮಾರುಕಟ್ಟೆಗಳಿಗೆ ರಫ್ತು ಮಾಡಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕಂಪನಿಯು ಒಟ್ಟು 12,230 ಯುನಿಟ್ ಕಾರುಗಳನ್ನು ರಫ್ತು ಮಾಡಿತ್ತು. ಈ ವರ್ಷ ಕಂಪನಿಯ ರಫ್ತು ಪ್ರಮಾಣವು 46.6% ನಷ್ಟು ಕುಸಿದಿದೆ. ಸೆಮಿ ಕಂಡಕ್ಟರ್'ಗಳ ಕೊರರೆಯಿಂದಾಗಿ ಹ್ಯುಂಡೈ ಕಂಪನಿಯ ಮಾರಾಟದಲ್ಲಿ ಕುಸಿತ ಕಂಡು ಬಂದಿದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hyundai i20 N Line ಕಾರು

ಸೆಮಿಕಂಡಕ್ಟರ್ ಕೊರತೆಯು ಭಾರತೀಯ ಆಟೋ ಮೊಬೈಲ್ ಉದ್ಯಮವನ್ನು ಮಾತ್ರವಲ್ಲದೆ ಜಾಗತಿಕ ಆಟೋ ಮೊಬೈಲ್ ಉದ್ಯಮವನ್ನು ಅಸ್ತವ್ಯಸ್ತಗೊಳಿಸಿದೆ. ಕಂಪನಿಯು ತನ್ನ ಅಧಿಕೃತ ಹೇಳಿಕೆಯಲ್ಲಿ ಸೆಮಿ ಕಂಡಕ್ಟರ್ ಕೊರತೆಯ ಬಗ್ಗೆ ಮಾಹಿತಿ ನೀಡಿದೆ. ಇನ್ನು ಈ ಹಬ್ಬದ ಸೀಸನ್ ನಲ್ಲಿ ಹ್ಯುಂಡೈ ಕಾರುಗಳ ಬೇಡಿಕೆಯು ಹೆಚ್ಚಾಗಬಹುದು. ಸೆಮಿಕಂಡಕ್ಟರ್ ಕೊರತೆಯನ್ನು ಪರಿಹರಿಸಿ ಮಾರಾಟವನ್ನು ಹೆಚ್ಚಿಸಲು ಈ ಹಬ್ಬದ ಸೀಸನ್ ಉತ್ತಮ ಸಂದರ್ಭವಾಗಿದೆ.

Article Published On: Thursday, November 4, 2021, 10:23 [IST]
English summary
Hyundai sold over 700 units of i20 n line october 2021 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+