ಭಾರತದಲ್ಲಿ ಬಿಡುಗಡೆಯಾಗಲಿವೆ ಹ್ಯುಂಡೈ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳು

ಭಾರತೀಯ ಮಾರುಕಟ್ಟೆಯಲ್ಲಿ ಸದ್ಯ ಪರ್ಫಾಮೆನ್ಸ್ ಕಾರುಗಳ ಸಂಖ್ಯೆಯು ವಿರಳವಾಗಿದೆ. ಆದರೆ ಈ ಮೊದಲು ಭಾರತದಲ್ಲಿ ಹಲವು ಜನಪ್ರಿಯ ಕಾರು ತಯಾರಕ ಕಂಪನಿಗಳು ಪರ್ಫಾಮೆನ್ಸ್ ಕಾರುಗಳನ್ನು ಬಿಡುಗಡೆಗೊಳಿಸಲಾಗಿತ್ತು. ಆದರೆ ಆ ಪರ್ಫಾಮೆನ್ಸ್ ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ದೊಡ್ಡ ಯಶಸ್ವಿಯನ್ನು ಗಳಿಸಿಲ್ಲ.

ಭಾರತದಲ್ಲಿ ಬಿಡುಗಡೆಯಗಲಿದೆ ಹ್ಯುಂಡೈ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳು

ಇದೀಗ ದೇಶದ ಎರಡನೇ ಅತಿ ದೊಡ್ಡ ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಹೊಸ ಐ20 ಎನ್ ಲೈನ್ ಪರ್ಫಾಮೆನ್ಸ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹ್ಯುಂಡೈ ಕಂಪನಿಯು ಎನ್ ಸರಣಿಯ ಪರ್ಫಾಮೆನ್ಸ್ ಕಾರುಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿದೆ. ಭಾರತದಲ್ಲಿ ಹ್ಯುಂಡೈ ಕಂಪನಿಯು ತನ್ನ ಎನ್ ಸರಣಿಯ ಕಾರುಗಳನ್ನು ಬಿಡುಗಡೆಗೊಳಿಸಲಿದೆ. ಇದೀಗ ಭಾರತೀಯ ಮಾರುಕಟ್ಟೆಯಲ್ಲಿ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳ ಬಿಡುಗಡೆಗೊಳಿಸಲಾಗುವುದು ಎಂದು ಹ್ಯುಂಡೈ ಕಂಪನಿಯು ಅಧಿಕೃತವಾಗಿ ಟೀಸರ್ ಬಿಡುಗಡೆಗೊಳಿಸುವ ಮೂಲಕ ಘೋಷಣೆ ಮಾಡಿದ್ದಾರೆ.

ಭಾರತದಲ್ಲಿ ಬಿಡುಗಡೆಯಗಲಿದೆ ಹ್ಯುಂಡೈ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳು

ಇದರಲ್ಲಿ ಐ20 ಎನ್ ಲೈನ್ ಕಾರನ್ನು ಭಾರತದಲ್ಲಿ ಮೊದಲಿಗೆ ಬಿಡುಗಡೆಗೊಳಿಸಲಿದೆ. ಈ ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರು ಪರ್ಫಾಮೆನ್ಸ್ ಕಾರಿನ ಬಗ್ಗೆ ಹೇಳುವುದಾದರೆ, ಇದು ಪರ್ಫಾಮೆನ್ಸ್ ಕಾರು ಆಗಿರುವುದರಿಂದ ಹೆಚ್ಚು ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಪರ್ಫಾಮೆನ್ಸ್ ಕಾರು ಹೊಸ ಫ್ರಂಟ್ ಮತ್ತು ರೇರ್ ಬಂಪರ್, ಸೈಡ್ ಸ್ಕರ್ಟ್ ಗಳು ಮತ್ತು ವಿಭಿನ್ನ ವಿನ್ಯಾಸದ ಅಲಾಯ್ ವ್ಹಿಲ್ ಗಳನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಗಲಿದೆ ಹ್ಯುಂಡೈ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳು

ಇನ್ನು ಕ್ರೋಪ್ ಟ್ರಿಪ್ಡ್ ಡ್ಯುಯಲ್ ಎಕ್ಸಾಸ್ಟ್ ಅನ್ನು ಹೊಂದಿದೆ. ಸ್ಟ್ಯಾಂಡರ್ಡ್ ಐ20 ಮಾದರಿಗೆ ಹೋಲಿಸಿದರೆ ಐ20 ಎನ್ ಲೈನ್ ಕಾರು ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಒಟ್ಟಾರೆಯಾಗಿ ಈ ಐ20 ಎನ್ ಲೈನ್ ಮಾದರಿಯು ಕಾರು ಪ್ರಿಯರನ್ನು ಸೆಳೆಯುಂತಹ ಆಕರ್ಷಕ ಲುಕ್ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಗಲಿದೆ ಹ್ಯುಂಡೈ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳು

ಹೊಸ ಹ್ಯುಂಡೈ ಎನ್ ಲೈನ್ ಕಾರಿನ ಇಂಟಿರಿಯರ್ ಹೆಚ್ಚಾಗಿ ಸ್ಟ್ಯಾಂಡರ್ಡ್ ಮಾದರಿಗೆ ಹೋಲುತ್ತದೆ. ಈ ಕಾರಿನ ಒಳಭಾಗದಲ್ಲಿ ಹೊಸ ಸ್ಟೀರಿಂಗ್ ವ್ಹೀಲ್, ಮೆಟಲ್ ಪೆಡಲ್ ಗಳು, ಲೆದರ್ ಗೇರ್ ನಾಬ್ ಸೇರಿದಂತೆ ಕೆಲವು ಬದಲಾವಣೆಗಳನ್ನು ಹೊಂದಿವೆ.ಕಾರಿನ ಒಳಭಾಗದ ಹಲವು ಕಡೆಗಳಲ್ಲಿ ಎನ್ ಬ್ಯಾಡ್ಜ್ ಅನ್ನು ಹೊಂದಿರಲಿದೆ

ಭಾರತದಲ್ಲಿ ಬಿಡುಗಡೆಯಗಲಿದೆ ಹ್ಯುಂಡೈ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳು

ಹೊಸ ಹ್ಯುಂಡೈ ಎನ್ ಲೈನ್ ಕಾರಿನಲ್ಲಿ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಒಳಗೊಂಡಿರುತ್ತದೆ. ಈ ಕಾರಿನಲ್ಲಿ ಆಫಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ಟಚ್ ಸ್ಕ್ರೀನ್ ಇನ್ಫೋಟೈನ್ ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ. ಇದರೊಂದಿಗೆ ಫುಲ್ ಡಿಜಿಟಲ್ ಇನ್ಸ್ ಟ್ರೂಮಂಟ್ ಕ್ಲಸ್ಟರ್ ಅನ್ನು ಕೂಡ ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಯಗಲಿದೆ ಹ್ಯುಂಡೈ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳು

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹ್ಯುಂಡೈ ಐ20 ಎನ್ ಲೈನ್ ಕಾರಿನಲ್ಲಿ 1.6 ಎಲ್ 4 ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 204 ಬಿಹೆಚ್‍ಪಿ ಪವರ್ ಮತ್ತು 275 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ಬಿಡುಗಡೆಯಗಲಿದೆ ಹ್ಯುಂಡೈ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳು

ಇನ್ನು ಭಾರತದಲ್ಲಿ ಬಿಡುಗಡೆಯಾಗಲಿರುವ ಹ್ಯುಂಡೈ ಐ20 ಎನ್ ಲೈನ್ ಕಾರು 1.2 ಎನ್ ಪೆಟ್ರೋಲ್ ಎಂಜಿನ್ ಮತ್ತು 1.0 ಎಲ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ. ಇದು ಸ್ಟ್ಯಾಂಡರ್ಡ್ ಐ20 ಕಾರಿನಲ್ಲಿಯು ಸಹ ಲಭ್ಯವಿದೆ.

ಭಾರತದಲ್ಲಿ ಬಿಡುಗಡೆಯಗಲಿದೆ ಹ್ಯುಂಡೈ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳು

ಇನ್ನು ಈ ಪರ್ಫಾಮೆನ್ಸ್ ಕಾರಿನಲ್ಲಿ ಇಂಟರ್ಕೂಲರ್, ಹ್ಯುಂಡೈನ ಹೊಸ ಸಿವಿವಿಡಿ (ನಿರಂತರವಾಗಿ ವೇರಿಯಬಲ್ ವಾಲ್ವ್ ಅವಧಿ) ತಂತ್ರಜ್ಞಾನ ಮತ್ತು 350 ಬಾರ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂನೊಂದಿಗೆ ಮೋಟರ್ ಅನ್ನು ಹೆಚ್ಚಿಸಲಾಗಿದೆ. ಸಿವಿವಿಡಿ ತಂತ್ರಜ್ಞಾನವು ಎಂಜಿನ್‌ನ ಕಾರ್ಯಕ್ಷಮತೆ ಮತ್ತು ಇಂಧನ ದಕ್ಷತೆಯನ್ನು ಸುಧಾರಿಸುತ್ತದೆ ಎಂದು ಹೇಳಲಾಗುತ್ತಿದೆ.

ಭಾರತದಲ್ಲಿ ಬಿಡುಗಡೆಯಗಲಿದೆ ಹ್ಯುಂಡೈ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳು

ಈಗಗಾಲೇ ಯುರೋಪ್ ಮಾರುಕಟ್ಟೆಯಲ್ಲಿ ಐ20 ಎನ್ ಲೈನ್‌ ಅನ್ನು ಪರಿಚಯಿಸಲಾಗಿದೆ. ಅದೇ ಮಾದರಿಯಲ್ಲಿ ಸಣ್ಣ ನವೀಕರಣದೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಭಾರತದಲ್ಲಿ ಬಿಡುಗಡೆಯಗಲಿದೆ ಹ್ಯುಂಡೈ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳು

ಈ ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಹ್ಯುಂಡೈ ಕಂಪನಿಯು ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರನ್ನು ಯುವ ಗ್ರಾಹಕರನ್ನು ಗಿರಿಯಾಗಿಸಿಕೊಂಡು ಬಿಡುಗಡೆಗೊಳಿಸುತ್ತಿದ್ದಾರೆ.

Most Read Articles

Kannada
English summary
Hyundai teased for n line series upcoming car details
Story first published: Monday, August 9, 2021, 19:47 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X