Just In
- 41 min ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 2 hrs ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 2 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
- 3 hrs ago
ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ
Don't Miss!
- News
ವಿವಿಧ ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣದಲ್ಲಿ ಭಾರೀ ಏರಿಕೆ!
- Sports
ಐಪಿಎಲ್ : ಈ ದಾಖಲೆ ಮಾಡಿದ್ದು ಕೊಹ್ಲಿ ಬಿಟ್ರೆ ಸಂಜು ಸ್ಯಾಮ್ಸನ್
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಯುಕೆಯಲ್ಲಿ ಬಿಡುಗಡೆಗೊಂಡ ಹ್ಯುಂಡೈ ನವೀಕೃತ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ
ಹ್ಯುಂಡೈ ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಕಾರು ಮಾದರಿಯಾದ ಕೊನಾ ಎಸ್‌ಯುವಿ ಮಾದರಿಯನ್ನು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟ ಮಾಡುತ್ತಿದ್ದು, ಕಂಪನಿಯು ಇದೀಗ ಕೊನಾ ನವೀಕೃತ ಮಾದರಿಯನ್ನು ಪರಿಚಯಿಸಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಈಗಾಗಲೇ ಭಾರೀ ಪ್ರಮಾಣದ ಮಾರಾಟ ಸಂಖ್ಯೆ ಹೊಂದಿರುವ ಹ್ಯುಂಡೈ ಕೊನಾ ಇವಿ ಕಾರು ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ನವೀಕೃತ ಮಾದರಿಯನ್ನು ಪರಿಚಯಿಸಿದ್ದು, ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ಭಾರತದಲ್ಲೂ ನವೀಕೃತ ಕೊನಾ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ. ನವೀಕೃತ ಮಾದರಿಯನ್ನು ಮೊದಲ ಬಾರಿಗೆ ಯುಕೆಯಲ್ಲಿ ಬಿಡುಗಡೆ ಮಾಡಿರುವ ಹ್ಯುಂಡೈ ಕಂಪನಿಯು ಹೊಸ ಕಾರಿನ ಬೆಲೆಯನ್ನು ರೂಪಾಯಿ ಮೌಲ್ಯದ ಪ್ರಕಾರ ರೂ. 33.58 ಲಕ್ಷಕ್ಕೆ ಬಿಡುಗಡೆ ಮಾಡಿದೆ.

2021ರ ಆವೃತ್ತಿಯಲ್ಲಿ ಪ್ರಮುಖ ತಾಂತ್ರಿಕ ಅಂಶಗಳಲ್ಲಿ ಹೊಸ ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಹೊಸ ವಿನ್ಯಾಸದ ಎಲ್ಇಡಿ ಡಿಆರ್‌ಎಲ್‌ಗಳು, ಟು ವರ್ಟಿಕಲ್ ಸ್ಲಾಟ್ ಹೊಂದಿರುವ ಬಂಪರ್, ಸಿಲ್ವರ್ ಆಕ್ಸೆಂಟ್ ಸೇರಿದಂತೆ ಪ್ರಮುಖ ಬದಲಾವಣೆಗಳು ಎಸ್‌ಯುವಿ ಪ್ರಿಯರನ್ನು ಆಕರ್ಷಿಸಲಿವೆ.

ಜೊತೆಗೆ ಹೊಸ ಕಾರಿನ ಹಿಂಭಾಗದ ವಿನ್ಯಾಸದಲ್ಲೂ ಪ್ರಮುಖ ಬದಲಾವಣೆಗಳಾಗಿದ್ದು, ಸ್ಪಿಟ್ ಟೈಲ್ ಲ್ಯಾಂಪ್ ಪ್ರತ್ಯೇಕಗೊಂಡಿರುವ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಸಿಗ್ನಲ್, ಆಕ್ಸಿಲರಿ ಟೈಲ್‌ಲ್ಯಾಂಪ್ ನೀಡಲಾಗಿದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಹೊಸ ವಿನ್ಯಾಸದ ಅಲಾಯ್ ವೀಲ್ಹ್, ಆಕರ್ಷಕ ವಿನ್ಯಾಸದ ರೂಫ್ ರೈಲ್ಸ್ ನೀಡಲಾಗಿದ್ದು, ಹೊಸ ಕಾರಿನ ಒಳಭಾಗದಲ್ಲಿ ಫುಲ್-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ ಸರ್ಪೊಟ್ ಮಾಡುವ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೋಡಿಸಲಾಗಿದೆ.

ಹೊಸ ಕಾರಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಪ್ರಮುಖ ಸೇಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದ್ದು, ಹೊಸ ಕಾರಿನಲ್ಲಿ 6 ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ ಸೇರಿದಂತೆ ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳಾದ ರಿಯರ್ ಟ್ರಾಫಿಕ್ ಕೂಲಿಷನ್ ಅವಾಯ್ಡೆನ್ಸ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಕೂಲಿಷನ್ ಅವಾಯ್ಡೆನ್ಸ್ ಅಸಿಸ್ಟ್‌ನಂತಹ ಸೌಲಭ್ಯ ಹೊಂದಿದೆ.

ಇನ್ನು ಹೊಸ ಕೊನಾ ಕಾರು ಪ್ರಮುಖ ಫೀಚರ್ಸ್‌ಗಳ ಬದಲಾಣೆ ಹೊರತುಪಡಿಸಿ ಈ ಹಿಂದಿನಂತೆಯೇ ಎರಡು ಪ್ರಮುಖ ಬ್ಯಾಟರಿ ಆಯ್ಕೆಯನ್ನು ಹೊಂದಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 64kWh ಮತ್ತು 39.2kWh ಬ್ಯಾಟರಿ ಪ್ಯಾಕ್ ಜೋಡಿಸಲಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಂಪನಿಯು 64kWh ಮತ್ತು 39.2kWh ಬ್ಯಾಟರಿ ಪ್ಯಾಕ್ ಮಾದರಿಯ ಕೊನಾ ಇವಿ ಮಾರಾಟ ಮಾಡುತ್ತಿದ್ದು, ಭಾರತದಲ್ಲಿ ಮಾತ್ರ ಸದ್ಯಕ್ಕೆ 39.2kWh ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯನ್ನು ಮಾತ್ರವೇ ಮಾರಾಟ ಮಾಡುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಪರ್ಫಾಮೆನ್ಸ್ ಕಾರುಗಳಂತೆಯೇ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

ಜೊತೆಗೆ ಸಾಮಾನ್ಯ ಕಾರುಗಳಿಂತ ಶೇ.80ರಷ್ಟು ಕಡಿಮೆ ರನ್ನಿಂಗ್ ಕಾಸ್ಟ್ ಹೊಂದಿರುವ ಕೊನಾ ಕಾರು ಪ್ರತಿ ಕಿ.ಮೀ ಗೆ ರೂ.1 ಕ್ಕಿಂತಲೂ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕೊನಾ ಕಾರು 155ಕಿ.ಮಿ ಟಾಪ್ ಸ್ಪೀಡ್ ಸೌಲಭ್ಯವನ್ನು ಹೊಂದಿದ್ದು, ಪೂರ್ಣ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜ್ ಆಗಲು ಕನಿಷ್ಠ 8 ಗಂಟೆ ತೆಗೆದುಕೊಳ್ಳಲಿದೆ. ಹೀಗಾಗಿ ಕೋನಾ ಕಾರಿನಲ್ಲಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಆಕರ್ಷಕವಾಗಿದೆ.