ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ಭಾರತದಲ್ಲಿ ಕಳೆದ ಐದಾರು ವರ್ಷಗಳಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟವು ಅತಿ ವೇಗವಾಗಿ ಬೆಳವಣಿಗೆ ಹೊಂದಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಬಿಡುಗಡೆಯಾಗಿರುವ ಬಹುತೇಕ ಕಾರು ಮಾದರಿಗಳು ಭಾರೀ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿವೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ಸಬ್ ಫೋರ್ ಮೀಟರ್ ವಿನ್ಯಾಸದ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ಕಂಪನಿಯ ವೆನ್ಯೂ ಮಾದರಿಯು ಕೂಡಾ ಅತ್ಯುತ್ತಮ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ವೆನ್ಯೂ ಕಾರು ಮಾದರಿಯು ಬಿಡುಗಡೆಯಾದ ನಂತರ ಇದುವರೆಗೆ ಸುಮಾರು 2.50 ಲಕ್ಷ ಯುನಿಟ್ ಮಾರಾಟಗೊಳ್ಳುವ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಮಾರಾಟವಾದ ಕಾರು ಆವೃತ್ತಿಯಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ಭಾರತದಲ್ಲಿ 2019ರ ಮೇ ತಿಂಗಳಿನಲ್ಲಿ ಬಿಡುಗಡೆಯಾಗಿದ್ದ ಹೊಸ ವೆನ್ಯೂ ಕಾರು ಮಾದರಿಯು ಬಿಡುಗಡೆ ನಂತರ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಬಿಡುಗಡೆಯಾದ 33 ತಿಂಗಳ ಅವಧಿಯಲ್ಲಿ ಬರೋಬ್ಬರಿ 2.50 ಲಕ್ಷ ಯುನಿಟ್ ಮಾರಾಟ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಗೆ ಅತಿ ಹೆಚ್ಚು ಬೇಡಿಕೆಯಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾದರಗಳ ನಡುವೆ ಭಾರೀ ಪೈಪೋಟಿಯಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿನ ಅಗ್ರಸ್ಥಾನಕ್ಕಾಗಿ ಎಕ್ಸ್‌ಯುವಿ300 ಮತ್ತು ನೆಕ್ಸಾನ್ ಮಾದರಿಗಳಿಂತಲೂ ಹ್ಯುಂಡೈ ವೆನ್ಯೂ ಮತ್ತು ಮಾರುತಿ ಸುಜುಕಿ ಬ್ರೆಝಾ ನಡುವೆ ಭಾರೀ ಪೈಪೋಟಿಯಿದ್ದು, ಹೊಸ ಕಾರು ಪ್ರಮುಖ ಬದಲಾವಣೆಗಳೊಂದಿಗೆ ಪ್ರತಿ ತಿಂಗಳು ಸರಾಸರಿಯಾಗಿ 7 ಸಾವಿರ 8 ಸಾವಿರ ಯುನಿಟ್ ಮಾರಾಟವಾಗುತ್ತಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ವೆನ್ಯೂ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಹೊಂದಿದ್ದು, ಟಾಪ್ ಎಂಡ್ ಮಾದರಿಯಾದ 1.0-ಲೀಟರ್ ಟರ್ಬೋ ಎಂಜಿನ್ ಮಾದರಿಗೆ ಅತಿ ಹೆಚ್ಚು ಬೇಡಿಕೆಯಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ಹ್ಯುಂಡೈ ಕಂಪನಿಯು ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವೆನ್ಯೂ ಮಾದರಿಯಲ್ಲಿ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದ್ದು, ಇದು ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ಗಿಂತಲೂ ಹೆಚ್ಚಿನ ಪರ್ಫಾಮೆನ್ಸ್ ಮತ್ತು ತಾಂತ್ರಿಕವಾಗಿ ಬಲಿಷ್ಠ ಕಾರು ಮಾದರಿಯಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ವೆನ್ಯೂ ಕಾರು ಸದ್ಯ ಹ್ಯುಂಡೈ ನಿರ್ಮಾಣದ ಇತರೆ ಕಾರುಗಳಿಂತಲೂ ಅತಿ ವಿನೂತನ ತಂತ್ರಜ್ಞಾನ ಸೌಲಭ್ಯಗಳನ್ನು ಹೊತ್ತು ಬಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 5 ವೆರಿಯೆಂಟ್‌ಗಳಲ್ಲಿ ಲಭ್ಯವಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.99 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.11.85 ಲಕ್ಷ ಬೆಲೆ ಹೊಂದಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ವೆನ್ಯೂ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದ್ದರೆ ಡಿಸೇಲ್ ಎಂಜಿನ್‌ನಲ್ಲಿ ಒಂದು ಆಯ್ಕೆಯನ್ನು ನೀಡಲಾಗಿದ್ದು, ಇ, ಎಸ್, ಎಸ್ಎಕ್ಸ್, ಎಸ್ಎಕ್ಸ್(0) ಮತ್ತು ಎಸ್ಎಕ್ಸ್ ಪ್ಲಸ್ ವೆರಿಯೆಂಟ್‌ಗಳಲ್ಲಿ ಹೊಸ ವೆನ್ಯೂ ಕಾರು ಖರೀದಿಗೆ ಲಭ್ಯವಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ಮೊದಲ ಬಾರಿಗೆ ಬಿಡುಗಡೆಯಾದ ಸಂದರ್ಭದಲ್ಲಿ ಬಿಎಸ್-4 ಎಂಜಿನ್ ಹೊಂದಿದ್ದ ವೆನ್ಯೂ ಕಾರು ಇದೀಗ ಹೊಸ ಎಮಿಷನ್ ನಿಯಮದಂತೆ ಬಿಎಸ್-6 ಎಂಜಿನ್ ಆಯ್ಕೆ ಹೊಂದಿದ್ದು, 1.2-ಲೀಟರ್ ಕಪ್ಪಾ ಪೆಟ್ರೋಲ್, 1.5-ಲೀಟರ್ ಡೀಸೆಲ್ ಎಂಜಿನ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯನ್ನು ಜೋಡಣೆ ಮಾಡಲಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ಬಿಎಸ್-4 ಎಂಜಿನ್ ಆಯ್ಕೆಯಲ್ಲಿ 1.2-ಲೀಟರ್ ಪೆಟ್ರೋಲ್, 1.4-ಲೀಟರ್ ಡೀಸೆಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದ ವೆನ್ಯೂ ಕಾರಿನಲ್ಲಿ ಬಿಎಸ್-6 ಎಮಿಷನ್ ಕಡ್ಡಾಯ ನಂತರ 1.4-ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಹೊಸದಾಗಿ ಅಭಿವೃದ್ದಿಪಡಿಸಲಾಗಿದ್ದ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಪವರ್‌ಪುಲ್ ಎಂಜಿನ್ ಆಯ್ಕೆ ಹೊಂದಿರುವ ವೆನ್ಯೂ ಕಾರಿನಲ್ಲಿ 1.0-ಲೀಟರ್ ಟರ್ಬೋ ಮಾದರಿಯು ಅತಿ ಹೆಚ್ಚು ಬೇಡಿಕೆಯ ವೆರಿಯೆಂಟ್ ಆಗಿ ಹೊರಹೊಮ್ಮಿದ್ದು, 6-ಸ್ಪೀಡ್ ಐಎಂಟಿ(ಇಂಟೆಲಿಜೆಂಟ್ ಮ್ಯಾನುವಲ್ ಟ್ರಾನ್ಸ್‌ಮಿಷನ್) ಮತ್ತು ಟರ್ಬೋ ಪೆಟ್ರೋಲ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 120-ಬಿಎಚ್‌ಪಿ ಮತ್ತು 170-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ಇನ್ನುಳಿದ 1.2-ಲೀಟರ್ ಕಪ್ಪಾ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 82-ಬಿಎಚ್‌ಪಿ, 115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮಾದರಿಯು 99-ಬಿಎಚ್‌ಪಿ, 240-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ಇನ್ನುಳಿದಂತೆ ತಾಂತ್ರಿಕವಾಗಿ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿರುವ ವೆನ್ಯೂ ಕಾರು 33 ಫೀಚರ್ಸ್‌ಗಳನ್ನು ಹೊಂದಿರುವ ಬ್ಯೂ ಲಿಂಕ್ ಕನೆಕ್ಟಿವಿಟಿ ಸೌಲಭ್ಯವನ್ನು ಸಹ ಹೊಂದಿದ್ದು, ಹೊಸ ಕಾರಿಗೆ ಗರಿಷ್ಠ ಭದ್ರತೆಯನ್ನು ದೊರೆಯಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹ್ಯುಂಡೈ ವೆನ್ಯೂ ಹೊಸ ದಾಖಲೆ

ಹೊಸ ಕಾರಿನಲ್ಲಿ ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.

More from DriveSpark

Article Published On: Wednesday, December 22, 2021, 12:52 [IST]
English summary
Hyundai venue compact suv achieved 2 50 lakh sales milestone
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+