ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ
ಹ್ಯುಂಡೈ ಇಂಡಿಯಾ ಕಂಪನಿಯು ಕಾರು ಮಾರಾಟದಲ್ಲಿ ಸದ್ಯ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದು, ಪ್ರಮುಖ ಕಾರು ಮಾದರಿಗಳೊಂದಿಗೆ ಮಾರುತಿ ಮತ್ತು ಟಾಟಾ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಹೊಸ ಕಾರು ಉತ್ಪನ್ನಗಳಲ್ಲಿ ನಿರಂತರವಾಗಿ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿರುವ ಹ್ಯುಂಡೈ ಕಂಪನಿಯು ವೆನ್ಯೂ ಮಾದರಿಯಲ್ಲಿ ಕೆಲವು ವೆರಿಯೆಂಟ್‌ಗಳನ್ನು ತೆಗೆದುಹಾಕಿದೆ. ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ಕೆಲವು ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಲಾಗಿದ್ದು, ಅಸ್ತಿತ್ವದಲ್ಲಿ ಕೆಲವು ವೆರಿಯೆಂಟ್‌ಗಳನ್ನು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಉನ್ನತೀಕರಿಸಿದೆ.

ವೆನ್ಯೂ ಮಾದರಿಯಲ್ಲಿ ಹ್ಯುಂಡೈ ಕಂಪನಿಯು ಇ 1.5 ಡೀಸೆಲ್ ಮ್ಯಾನುವಲ್, ಎಸ್ 1.5 ಡೀಸೆಲ್ ಮ್ಯಾನುವಲ್, ಎಸ್ 1.0 ಲೀಟರ್ ಪೆಟ್ರೋಲ್ ಐಎಂಟಿ, ಎಸ್ 1.0 ಲೀಟರ್ ಪೆಟ್ರೋಲ್ ಡಿಸಿಟಿ ಮತ್ತು ಎಸ್ಎಕ್ಸ್ (ಒ) 1.0 ಲೀಟರ್ ಪೆಟ್ರೋಲ್ ಮ್ಯಾನುಯಲ್ ರೂಪಾಂತರಗಳನ್ನು ಕೈಬಿಟ್ಟಿದೆ.

ಮೇಲಿನ ಐದು ವೆರಿಯೆಂಟ್ ಸ್ಥಗಿತದ ನಂತರ ಎಸ್‌ಎಕ್ಸ್ ವೆರಿಯೆಂಟ್‌ನಲ್ಲಿ ಇದೀಗ ಸಾಮಾನ್ಯ ಅಲಾಯ್ ವ್ಹೀಲ್ ಬದಲಾಗಿ ಸ್ಟೈಲಿಶ್ ಅಲಾಯ್ ಚಕ್ರಗಳನ್ನು ನೀಡುತ್ತಿದ್ದು, ಎಸ್ (ಒ) ಮತ್ತು ಎಸ್ಎಕ್ಸ್ (ಒ) ಎಕ್ಸಿಕ್ಲೂಟಿವ್ ಹೊಸ ರೂಪಾಂತರಗಳನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ.

ಎಸ್ (ಒ) ಆವೃತ್ತಿಯು 1.0 ಲೀಟರ್ ಪೆಟ್ರೋಲ್ ಐಎಂಟಿ, ಡಿಸಿಟಿ ಮತ್ತು 1.5 ಲೀಟರ್ ಡೀಸೆಲ್ ಮ್ಯಾನುವಲ್ ಕಾನ್ಫಿಗರೇಶನ್‌ಗಳಲ್ಲಿ ಲಭ್ಯವಿದ್ದು, ಎಸ್‌ಎಕ್ಸ್ (ಒ) ಎಕ್ಸಿಕ್ಲೂಟಿವ್ ಮಾದರಿಯು 1.5-ಲೀಟರ್ ಡೀಸೆಲ್ ಮ್ಯಾನುಯಲ್ ಆವೃತ್ತಿಯೊಂದಿಗೆ ಮಾತ್ರ ಖರೀದಿಗೆ ಲಭ್ಯವಿದೆ. ಹೊಸ ವೆನ್ಯೂ ಕಾರು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 6. 92 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.78 ಲಕ್ಷ ಬೆಲೆ ಹೊಂದಿದೆ.

2019 ಮೇ ಅವಧಿಯಲ್ಲಿ ಬಿಡುಗಡೆಗೊಂಡಿದ್ದ ಹ್ಯುಂಡೈ ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಬಿಡುಗಡೆಯಾದ ಕೆಲವೇ ಒಂದೇ ವರ್ಷದ ಅವಧಿಯಲ್ಲಿ 1 ಲಕ್ಷಕ್ಕೂ ಅಧಿಕ ಕಾರು ಮಾರಾಟ ದಾಖಲೆ ಕಂಡಿದ್ದು, ಟಾಪ್ ಎಂಡ್ ಮಾದರಿಯಾದ 1.0-ಲೀಟರ್ ಟರ್ಬೋ ಎಂಜಿನ್ ಮಾದರಿಗೆ ಅತಿ ಹೆಚ್ಚು ಬೇಡಿಕೆ ಹೊಂದಿದೆ.

ಹ್ಯುಂಡೈ ಕಂಪನಿಯು ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವೆನ್ಯೂ ಮಾದರಿಯಲ್ಲಿ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದ್ದು, ಇದು ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ಗಿಂತಲೂ ಹೆಚ್ಚಿನ ಪರ್ಫಾಮೆನ್ಸ್ ಮತ್ತು ತಾಂತ್ರಿಕವಾಗಿ ಬಲಿಷ್ಠ ಕಾರು ಮಾದರಿಯಾಗಿದೆ. ಹೀಗಾಗಿ ಸಾಕಷ್ಟು ಗ್ರಾಹಕರು ಬೆಲೆ ದುಬಾರಿಯಾಗಿದ್ದರೂ ಸಹ ಟಾಪ್ ಎಂಡ್ ಮಾದರಿಯ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಹ್ಯುಂಡೈ ಕಂಪನಿಗೂ ಇದು ಭಾರೀ ಪ್ರಮಾಣದ ಲಾಭ ತಂದುಕೊಟ್ಟಿದೆ.

ವೆನ್ಯೂ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದರೆ ಡಿಸೇಲ್ ಎಂಜಿನ್‌ನಲ್ಲಿ ಒಂದು ಆಯ್ಕೆಯನ್ನು ನೀಡಲಾಗಿದ್ದು, ಇ, ಎಸ್, ಎಸ್ಎಕ್ಸ್, ಎಸ್ಎಕ್ಸ್(0) ಮತ್ತು ಎಸ್ಎಕ್ಸ್ ಪ್ಲಸ್ ವೆರಿಯೆಂಟ್‌ಗಳಲ್ಲಿ ಹೊಸ ವೆನ್ಯೂ ಕಾರು ಖರೀದಿಗೆ ಲಭ್ಯವಿದೆ.

ಮೊದಲ ಬಾರಿಗೆ ಬಿಡುಗಡೆಯಾದ ಸಂದರ್ಭದಲ್ಲಿ ಬಿಎಸ್-4 ಎಂಜಿನ್ ಹೊಂದಿದ್ದ ವೆನ್ಯೂ ಕಾರು ಇದೀಗ ಹೊಸ ಎಮಿಷನ್ ನಿಯಮದಂತೆ ಬಿಎಸ್-6 ಎಂಜಿನ್ ಆಯ್ಕೆ ಹೊಂದಿದ್ದು, 1.2-ಲೀಟರ್ ಕಪ್ಪಾ ಪೆಟ್ರೋಲ್, 1.5-ಲೀಟರ್ ಡೀಸೆಲ್ ಎಂಜಿನ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯನ್ನು ಜೋಡಣೆ ಮಾಡಲಾಗಿದೆ.

ಬಿಎಸ್-4 ಎಂಜಿನ್ ಆಯ್ಕೆಯಲ್ಲಿ 1.2-ಲೀಟರ್ ಪೆಟ್ರೋಲ್, 1.4-ಲೀಟರ್ ಡೀಸೆಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದ ವೆನ್ಯೂ ಕಾರಿನಲ್ಲಿ ಬಿಎಸ್-6 ಎಮಿಷನ್ ಕಡ್ಡಾಯ ನಂತರ 1.4-ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಹೊಸದಾಗಿ ಅಭಿವೃದ್ದಿಪಡಿಸಲಾಗಿದ್ದ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಹೊಸ ಕಾರಿನಲ್ಲಿ ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.


Click it and Unblock the Notifications