ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

By Manoj Bk

ಭಾರತೀಯ ಆಟೋಮೊಬೈಲ್ ಉದ್ಯಮದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಭಾವ್ಯ ಗ್ರಾಹಕರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗುತ್ತಿದ್ದಾರೆ.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

ಭಾರತದ ಎಲೆಕ್ಟ್ರಿಕ್ ವಾಹನಗಳ ವಿಭಾಗದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಭಾರತೀಯ ಆಟೋಮೊಬೈಲ್ ಉದ್ಯಮವು ಎಲೆಕ್ಟ್ರಿಕ್ ಕಾರುಗಳ ಮಾರಾಟದ ವಿಷಯದಲ್ಲಿ ತುಸು ಹಿಂದುಳಿದಿದೆ ಎಂದೇ ಹೇಳಬಹುದು. ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲು ಹಲವಾರು ಕಾರಣಗಳಿವೆ. ಆದರೆ ಎಲೆಕ್ಟ್ರಿಕ್ ಕಾರುಗಳನ್ನು ಏಕೆ ಖರೀದಿಸ ಬೇಕು ಎಂಬ 10 ಕಾರಣಗಳನ್ನು ಈ ಲೇಖನದಲ್ಲಿ ನೋಡೋಣ.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

1. ಗಗನಕ್ಕೇರುತ್ತಿರುವ ಇಂಧನ ಬೆಲೆಗಳು

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿವೆ. ಎಲೆಕ್ಟ್ರಿಕ್ ವಾಹನಗಳು ಎಲೆಕ್ಟ್ರಿಕ್ ಮೂಲಕ ಚಾರ್ಜ್ ಆಗುವುದರಿಂದ, ಇಂಧನ ಬೆಲೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿರುವುದಿಲ್ಲ.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

ಭಾರತದಲ್ಲಿರುವ ಕೆಲವು ಎಲೆಕ್ಟ್ರಿಕ್ ಕಾರುಗಳು ಪೂರ್ತಿಯಾಗಿ ಚಾರ್ಜ್ ಆದ ನಂತರ ಸುಮಾರು 300 ಕಿ.ಮೀಗಳಿಗಿಂತ ಹೆಚ್ಚು ದೂರ ಚಲಿಸುತ್ತವೆ. ಇನ್ನು ಕೆಲವು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಪೂರ್ತಿಯಾಗಿ ಆಗಿ ಚಾರ್ಜ್ ಆದ ನಂತರ 100 ಕಿ.ಮೀಗಳವರೆಗೆ ಚಲಿಸುತ್ತವೆ. ಪೆಟ್ರೋಲ್, ಡೀಸೆಲ್ ವಾಹನಗಳಲ್ಲಿ ಒಂದು ಕಿ.ಮೀ ಚಲಿಸಲು ರೂ. 9 ಖರ್ಚು ಮಾಡಬೇಕು. ಆದರೆ ಎಲೆಕ್ಟ್ರಿಕ್ ವಾಹನಗಳಲ್ಲಿ ಪ್ರತಿ ಕಿ.ಮೀ ಸಂಚರಿಸಲು ಒಂದು ರೂಪಾಯಿ ಖರ್ಚಾಗುತ್ತದೆ.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

2. ನಿರ್ವಹಣಾ ವೆಚ್ಚ ಕಡಿಮೆ

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳಿಗಿಂತ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲು ಕಾರಣವೆಂದರೆ ಅವುಗಳ ನಿರ್ವಹಣಾ ವೆಚ್ಚ. ಎಲೆಕ್ಟ್ರಿಕ್ ವಾಹನಗಳು ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳಿಗಿಂತ ಕಡಿಮೆ ಯಾಂತ್ರಿಕ ಭಾಗಗಳನ್ನು ಹೊಂದಿದ್ದು, ಅವುಗಳನ್ನು ಸುಲಭವಾಗಿ ನಿರ್ವಹಿಸಬಹುದು.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

3. ಸರ್ಕಾರಗಳ ಪ್ರೋತ್ಸಾಹ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ಇವಿ ತಯಾರಕ ಕಂಪನಿಗಳನ್ನು ಸಹ ಪ್ರೋತ್ಸಾಹಿಸುತ್ತಿದೆ. ದೇಶದ ಹಲವು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಗಳನ್ನು ಜಾರಿಗೊಳಿಸಿವೆ.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

ಈ ಎಲೆಕ್ಟ್ರಿಕ್ ವಾಹನ ನೀತಿಗಳ ಅನ್ವಯ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹಣಕಾಸು ಸಬ್ಸಿಡಿ, ಸಾಲದ ಮೇಲೆ ಕಡಿಮೆ ಬಡ್ಡಿ ದರ, ರಸ್ತೆ ತೆರಿಗೆಯಿಂದ ವಿನಾಯಿತಿ, ನೋಂದಣಿ ಶುಲ್ಕದಿಂದ ವಿನಾಯಿತಿ ಸೇರಿದಂತೆ ಹಲವು ಕೊಡುಗೆಗಳನ್ನು ನೀಡಲಾಗುತ್ತದೆ.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

4. ಇಂಧನ ತುಂಬಿಸುವ ಅಗತ್ಯವಿಲ್ಲ

ಇವಿ ಬಳಕೆಯಿಂದ ಜನ ದಟ್ಟಣೆ ಸಂದರ್ಭಗಳಲ್ಲಿ ವಾಹನಕ್ಕೆ ಇಂಧನ ತುಂಬಿಸಲು ಸರತಿ ಸಾಲಿನಲ್ಲಿ ಕಾಯುವುದು ತಪ್ಪುತ್ತದೆ. ಇವಿ ಮಾಲೀಕರು ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಕೆಲವು ಗಂಟೆಗಳ ಕಾಲ ತಮ್ಮ ವಾಹನಗಳನ್ನು ಆರಾಮವಾಗಿ ಚಾರ್ಜ್ ಮಾಡಬಹುದು. ನಂತರ ವಾಹನ ಚಾಲನೆ ಮಾಡಿಕೊಂಡು ಹೋಗಬಹುದು. ಮಾರುಕಟ್ಟೆಯಲ್ಲಿ ಪೈಪೋಟಿ ಹೆಚ್ಚಿದಂತೆ ಕಡಿಮೆ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡುವ ಸುಧಾರಿತ ತಂತ್ರಜ್ಞಾನವನ್ನು ನೀಡಲಾಗುತ್ತಿದೆ.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

5. ಚಾಲನೆ ಸುಲಭ

ಟ್ರಾಫಿಕ್‌ನಲ್ಲಿ ದೀರ್ಘಕಾಲ ಸಿಕ್ಕಿಹಾಕಿಕೊಳ್ಳುವುದರಿಂದ ಹಾಗೂ ಪದೇ ಪದೇ ಗೇರ್ ಬದಲಾಯಿಸುವುದರಿಂದ ಹಲವರಿಗೆ ಒಮ್ಮೆಯಾದರೂ ಗೇರ್‌ಲೆಸ್ ವಾಹನವೇ ಒಳ್ಳೆಯದು ಎಂಬ ಅಭಿಪ್ರಾಯ ಬರಬಹುದು. ಎಲೆಕ್ಟ್ರಿಕ್ ಸ್ಕೂಟರ್, ಎಲೆಕ್ಟ್ರಿಕ್ ಕಾರ್ ಸೇರಿದಂತೆ ಬಹುತೇಕ ಎಲ್ಲಾ ಎಲೆಕ್ಟ್ರಿಕ್ ವಾಹನಗಳು ಗೇರ್ ರಹಿತವಾಗಿವೆ. ವಾಹನ ಚಾಲನೆ ಮಾಡುವ ಆರಂಭಿಕರಿಗೆ ಎಲೆಕ್ಟ್ರಿಕ್ ವಾಹನಗಳು ಸೂಕ್ತ ಆಯ್ಕೆಯಾಗಿವೆ.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

6. ಪೆಟ್ರೋಲ್, ಡೀಸೆಲ್ ವಾಹನಗಳಿಂದ ರಕ್ಷಣೆ

ಎಲೆಕ್ಟ್ರಿಕ್ ವಾಹನಗಳು ಸಾಂಪ್ರದಾಯಿಕ ಪೆಟ್ರೋಲ್ / ಡೀಸೆಲ್ ಕಾರುಗಳಿಗಿಂತ ಕಡಿಮೆ ಗುರುತ್ವಾಕರ್ಷಣೆಯ ಕೇಂದ್ರವನ್ನು ಹೊಂದಿರುತ್ತವೆ. ಈ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳು ಕೆಳಗೆ ಬೀಳುವ ಸಾಧ್ಯತೆಗಳು ಕಡಿಮೆ. ಎಲೆಕ್ಟ್ರಿಕ್ ವಾಹನಗಳಲ್ಲಿ ದೋಷ ಕಂಡು ಬಂದರೆ, ವಿದ್ಯುತ್ ಹರಿವು ಆಟೋಮ್ಯಾಟಿಕ್ ಆಗಿ ಕಡಿತಗೊಳ್ಳುತ್ತದೆ.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

ಒಂದು ಸೆಕೆಂಡ್‌ಗಿಂತಲೂ ಕಡಿಮೆ ಅವಧಿಯಲ್ಲಿ ಬ್ಯಾಟರಿಯು ಹೈ ವೋಲ್ಟೇಜ್ ಅಂಶಗಳಿಂದ ಆಟೋಮ್ಯಾಟಿಕ್ ಆಗಿ ಸಂಪರ್ಕ ಕಡಿತಗೊಳ್ಳುತ್ತದೆ. ಇದರಿಂದ ವಾಹನವು ಬೆಂಕಿಗೆ ಆಹುತಿಯಾದರೂ ಸುಲಭವಾಗಿ ಹೊರ ಬರಬಹುದು.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

7. ಉತ್ತಮ ಚಾಲನಾ ಅನುಭವ

ಎಲೆಕ್ಟ್ರಿಕ್ ವಾಹನಗಳು ವೇಗವಾಗಿ ಟಾರ್ಕ್ ಉತ್ಪಾದಿಸುವುದರಿಂದ ವಾಹನ ಸವಾರರಿಗೆ ಉತ್ತಮ ಚಾಲನಾ ಅನುಭವವನ್ನು ನೀಡುತ್ತವೆ. ಅಂದರೆ ವಾಹನವು ವೇಗವಾಗಿ ಸ್ಪಂದಿಸುವ ವೇಗವರ್ಧನೆಯನ್ನು ಉತ್ಪಾದಿಸುತ್ತದೆ. ಇದರ ಪರಿಣಾಮವಾಗಿ ಮೃದುವಾದ ಹಾಗೂ ಅತ್ಯುತ್ತಮವಾದ ಚಾಲನಾ ಅನುಭವವನ್ನು ನೀಡುತ್ತದೆ.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

8. ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳ ವಿಸ್ತರಣೆ

ಹೆದ್ದಾರಿಗಳಲ್ಲಿ ಹಾಗೂ ಎಕ್ಸ್‌ಪ್ರೆಸ್‌ವೇಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಕುರಿತು ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ಪ್ರತಿದಿನವೂ ಘೋಷಣೆ ಮಾಡುತ್ತಿವೆ. ಇದರಿಂದ ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡುವ ಬಗ್ಗೆ ವಾಹನ ಸವಾರರು ಚಿಂತಿಸಬೇಕಾಗಿಲ್ಲ. ಹೆದ್ದಾರಿಯಲ್ಲಿ ಚಾರ್ಜ್ ಖಾಲಿಯಾದರೆ ತಕ್ಷಣವೇ ಅವುಗಳನ್ನು ಸುಲಭವಾಗಿ ಚಾರ್ಜ್ ಮಾಡಬಹುದು.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

9. ಆಯ್ಕೆ ಮಾಡಲು ಉತ್ತಮ ಆಯ್ಕೆಗಳು

ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯನ್ನು ಭಾಗಶಃ ಅಥವಾ ಸಂಪೂರ್ಣವಾಗಿ ಬದಲಾಯಿಸುವ ಮಹತ್ವಾಕಾಂಕ್ಷೆಯ ಗುರಿಗಳನ್ನು ಹೊಂದಿದ್ದು, ಮಾರುಕಟ್ಟೆಯಲ್ಲಿ ಆಕರ್ಷಕವಾದ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.

ಎಲೆಕ್ಟ್ರಿಕ್ ಕಾರು ಖರೀದಿಸಲು ಸೂಕ್ತ ಕಾರಣಗಳಿವು

10. ಪರಿಸರ ಸ್ನೇಹಿ

ಎಲೆಕ್ಟ್ರಿಕ್ ಕಾರ್ ಅನ್ನು ಹೊಂದುವುದರಿಂದ ಮಾಲಿನ್ಯ ಮುಕ್ತ ಪರಿಸರಕ್ಕೆ ಕೊಡುಗೆ ನೀಡಬಹುದು. ಎಲೆಕ್ಟ್ರಿಕ್ ವಾಹನಗಳಿಂದ ಯಾವುದೇ ಮಾಲಿನ್ಯ ಉಂಟಾಗುವುದಿಲ್ಲ. ಹೀಗಾಗಿ ವಾಯು ಮಾಲಿನ್ಯವನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ಎಲೆಕ್ಟ್ರಿಕ್ ವಾಹನಗಳು ಆರ್ಥಿಕ ಮಿತವ್ಯಯಕಾರಿಯಾಗಿರುವುದರ ಜೊತೆಗೆ ಪರಿಸರಕ್ಕೂ ಪ್ರಯೋಜನಕಾರಿಯಾಗಿವೆ.

Most Read Articles

Kannada
English summary
Impotant reasons to buy a electric car details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X