ಹೊಸ ಐಷಾರಾಮಿ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್

ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ತಮ್ಮ ತಂದೆ ಮೃತಪಟ್ಟರೂ ಭಾರತಕ್ಕೆ ವಾಪಸಾಗದೇ ದೇಶದ ಪರವಾಗಿ ಆಡಿ ಹೊಸ ದಾಖಲೆ ನಿರ್ಮಿಸಿದರು. ಜೊತೆಗೆ ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಗೆಲುವು ದಾಖಲಿಸಲು ನೆರವಾದರು.

ಹೊಸ ಐಷಾರಾಮಿ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್

ಈಗ ಮೊಹಮ್ಮದ್ ಸಿರಾಜ್ ಹೊಸ ಐಷಾರಾಮಿ ಕಾರು ಖರೀದಿಸಿರುವ ಬಗ್ಗೆ ಎಂದು ವರದಿಯಾಗಿದೆ. ಈ ಬಗ್ಗೆ ಮೊಹಮ್ಮದ್ ಸಿರಾಜ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್'ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಪ್ರಕಾರ ಅವರು ಬಿಎಂಡಬ್ಲ್ಯು ಐಷಾರಾಮಿ ಕಾರು ಖರೀದಿಸಿರುವುದು ತಿಳಿದು ಬಂದಿದೆ. ಆದರೆ ಈ ಕಾರು ಯಾವ ಮಾದರಿ ಹಾಗೂ ಅದರ ಬೆಲೆ ಎಷ್ಟು ಎಂಬುದು ತಿಳಿದು ಬಂದಿಲ್ಲ.

ಹೊಸ ಐಷಾರಾಮಿ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್

ಕಾರಿನ ವಿನ್ಯಾಸ ಹಾಗೂ ಶೈಲಿಯನ್ನು ಗಮನಿಸಿದರೆ ಈ ಕಾರು ಬಿಎಂಡಬ್ಲ್ಯು 5 ಸೀರಿಸ್'ನಂತೆ ಕಾಣುತ್ತದೆ. ಈ ಕಾರಿನ ಆರಂಭಿಕ ಬೆಲೆ ಎಕ್ಸ್ ಶೋರೂಂ ದರದಂತೆ ರೂ.55.99 ಲಕ್ಷಗಳಾಗಿದೆ. ಭಾರತದ ಗೆಲುವಿನ ಗುಂಗಿನಲ್ಲಿರುವ ಮೊಹಮ್ಮದ್ ಸಿರಾಜ್ ದುಬಾರಿ ಬೆಲೆಯ ಕಾರನ್ನು ಖರೀದಿಸಿದ್ದಾರೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಹೊಸ ಐಷಾರಾಮಿ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್ ತಮ್ಮ ಇನ್ಸ್ಟಾಗ್ರಾಮ್ ಪೇಜ್'ನಲ್ಲಿ ಇದಕ್ಕೆ ಸಂಬಂಧಿಸಿದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅವರು ತಮ್ಮ ಹೊಸ ಕಾರಿನೊಂದಿಗೆ ಹೈದರಾಬಾದ್ ರಸ್ತೆಯಲ್ಲಿ ಪ್ರಯಾಣಿಸುತ್ತಿರುವುದನ್ನು ಕಾಣಬಹುದು.

ಹೊಸ ಐಷಾರಾಮಿ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್

ಈ ವೀಡಿಯೊವನ್ನು ಅವರ ಅಭಿಮಾನಿಗಳು ಶೇರ್ ಮಾಡುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿದ್ದಾಗ ತಂದೆಯ ಸಾವಿನ ಸುದ್ದಿ ತಿಳಿದ ನಂತರವೂ ಅವರು ತಾಯ್ನಾಡಿಗೆ ಮರಳಲಿಲ್ಲ. ಹೀಗಾಗಿ ಅವರು ಭಾರತೀಯ ಕ್ರಿಕೆಟ್ ಪ್ರಿಯರು ಮಾತ್ರವಲ್ಲದೆ ಪ್ರಪಂಚದಾದ್ಯಂತದ ಅನೇಕ ಜನರ ಗಮನವನ್ನು ಸೆಳೆದರು.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಹೊಸ ಐಷಾರಾಮಿ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್

ಆಸ್ಟ್ರೇಲಿಯಾ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಮನೆಗೆ ಮರಳಿದ ನಂತರ ಅವರು ತಮ್ಮ ತಂದೆಯ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದರು. ಇದಾದ ನಂತರ ಅವರು ಇತರ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಹೊಸ ಐಷಾರಾಮಿ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್

ತಂದೆಯನ್ನು ಕಳೆದುಕೊಂಡ ದುಃಖದ ನಡುವೆಯೂ ಅವರು ಆಸ್ಟ್ರೇಲಿಯಾ ನೆಲದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದರು. ಅವರು ಮೆಲ್ಬೋರ್ನ್‌ನಲ್ಲಿ ನಡೆದ ಪಂದ್ಯದಲ್ಲಿ ಚೊಚ್ಚಲ ಟೆಸ್ಟ್ ಪಂದ್ಯಾವನ್ನಾಡಿದರು. ಈ ಟೆಸ್ಟ್ ಪಂದ್ಯದಲ್ಲಿ ಅವರು ಒಟ್ಟು 13 ವಿಕೆಟ್ ಪಡೆದರು.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಹೊಸ ಐಷಾರಾಮಿ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್

ಬ್ರಿಸ್ಬೇನ್‌ನಲ್ಲಿ ನಡೆದ 4ನೇ ಪಂದ್ಯದಲ್ಲಿ 5 ವಿಕೆಟ್ ಪಡೆದು ಭಾರತವು ಐತಿಹಾಸಿಕ ಗೆಲುವು ದಾಖಲಿಸಲು ನೆರವಾದರು. ಮೊಹಮ್ಮದ್ ಸಿರಾಜ್ ತನ್ನ ತಂದೆಯನ್ನು ಕಳೆದುಕೊಂಡ ದುಃಖದ ನಡುವೆಯೂ ಸಾಧನೆ ಮಾಡಿದ್ದಾರೆ.

ಹೊಸ ಐಷಾರಾಮಿ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್ ಭಾರತಕ್ಕೆ ವಾಪಸ್ ಆಗಲು ಅನುಮತಿ ಪಡೆಯದೇ ಟೆಸ್ಟ್ ಪಂದ್ಯಾವನ್ನಾಡುವ ಮೂಲಕ ತಮ್ಮ ತಂದೆಯ ಕನಸನ್ನು ಈಡೇರಿಸಿದ್ದಾರೆ. ತಮ್ಮ ತಂದೆ ಬದುಕಿದ್ದರೆ ಹೆಚ್ಚು ಸಂತಸ ಪಡುತ್ತಿದ್ದರು ಎಂದು ಸಿರಾಜ್ ಹೇಳಿದ್ದಾರೆ.

Most Read Articles

Kannada
English summary
Indian fast bowler Mohammed Siraj buys new BMW car. Read in Kannada.
Story first published: Saturday, January 23, 2021, 14:35 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X