ಹತ್ತು ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ ಇಂಡಿಯನ್ ಆಯಿಲ್

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಭಾರತದ ಪ್ರಮುಖ ತೈಲ ಕಂಪನಿಗಳಲ್ಲಿ ಒಂದಾಗಿದೆ. ಕಂಪನಿಯು ಸಾಂಪ್ರದಾಯಿಕ ಪೆಟ್ರೋಲ್, ಡೀಸೆಲ್ ಹೊರತುಪಡಿಸಿ ಸಿಎನ್‌ಜಿಯಂತಹ ಮಾಲಿನ್ಯರಹಿತ ಇಂಧನಗಳನ್ನು ಸಹ ಮಾರಾಟ ಮಾಡುತ್ತದೆ. ಈಗ ವಿಶ್ವದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಅದರಂತೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಹ ಯೋಜನೆಗಳನ್ನು ಆರಂಭಿಸುತ್ತಿದೆ.

ಹತ್ತು ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ ಇಂಡಿಯನ್ ಆಯಿಲ್

ಭಾರತದಾದ್ಯಂತ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯಲು ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಿರ್ಧರಿಸಿದೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಮೂಲ ಸೌಕರ್ಯವನ್ನು ಸುಧಾರಿಸಲು 2024 ರ ವೇಳೆಗೆ ದೇಶದಾದ್ಯಂತ 10,000 ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯುವುದಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ತಿಳಿಸಿದೆ. ಈ ಸುದ್ದಿ ಎಲೆಕ್ಟ್ರಿಕ್ ವಾಹನ ಸವಾರರಿಗೆ ಸಂತಸ ಮೂಡಿಸಿದೆ.

ಹತ್ತು ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ ಇಂಡಿಯನ್ ಆಯಿಲ್

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಧ್ಯಕ್ಷರಾದ ಶ್ರೀಕಾಂತ್ ಮಾಧವ್ ವೈದ್ಯ ಮಾತನಾಡಿ, ಮೊದಲ ಹಂತದಲ್ಲಿ ಮುಂದಿನ 12 ತಿಂಗಳಲ್ಲಿ 2,000 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ 2 ವರ್ಷಗಳಲ್ಲಿ 8 ಸಾವಿರ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲಾಗುವುದು. ನಂತರ ಮುಂದಿನ ಮೂರು ವರ್ಷಗಳಲ್ಲಿ 10,000 ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಹತ್ತು ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ ಇಂಡಿಯನ್ ಆಯಿಲ್

ಇದಕ್ಕೂ ಮುನ್ನ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಧ್ಯಕ್ಷ ಶ್ರೀಕಾಂತ್ ಮಾಧವ್ ವೈದ್ಯ, ನಾವು ಕೇವಲ ಪೆಟ್ರೋಲಿಯಂ ಉತ್ಪನ್ನಗಳನ್ನು ಮಾರಾಟ ಮಾಡುವ ಕಂಪನಿಯಾಗಲು ಬಯಸುವುದಿಲ್ಲ. ಬದಲಿಗೆ, ನಾವು ಭಾರತದ ಇಂಧನ ಕಂಪನಿಯಾಗಲು ಬಯಸುತ್ತೇವೆ. ಈಗ ಜಗತ್ತು ಬದಲಾಗುತ್ತಿದೆ ಎಂದು ಹೇಳಿದ್ದರು.

ಹತ್ತು ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ ಇಂಡಿಯನ್ ಆಯಿಲ್

ಸಾಂಪ್ರದಾಯಿಕ ಇಂಧನಗಳನ್ನು ಮಾರಾಟ ಮಾಡುವುದರ ಜೊತೆಗೆ, ನಮ್ಮ ಪೆಟ್ರೋಲ್ ಬಂಕ್‌ಗಳಲ್ಲಿ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ತೆರೆಯಲು ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದರು. ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದರಿಂದ ಜನರು ಎಲೆಕ್ಟ್ರಿಕ್ ವಾಹನಗಳ ಖರೀದಿಯತ್ತ ಗಮನ ಹರಿಸುತ್ತಿದ್ದಾರೆ.

ಹತ್ತು ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ ಇಂಡಿಯನ್ ಆಯಿಲ್

ಆದರೆ ಭಾರತದಲ್ಲಿ ಈಗ ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆ ಕಡಿಮೆ ಸಂಖ್ಯೆಯಲ್ಲಿದೆ. ಈ ಸನ್ನಿವೇಶದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ತೆರೆಯಲಿರುವ ಚಾರ್ಜಿಂಗ್ ಕೇಂದ್ರಗಳಿಂದ ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಅನುಕೂಲವಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದರಿಂದ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸುವ ಸಾಧ್ಯತೆಗಳಿವೆ.

ಹತ್ತು ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ ಇಂಡಿಯನ್ ಆಯಿಲ್

ಈಗ ಚಾರ್ಜಿಂಗ್ ಕೇಂದ್ರಗಳು ಕಡಿಮೆ ಸಂಖ್ಯೆಯಲ್ಲಿರುವುದರಿಂದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂಜರಿಯುತ್ತಿದ್ದಾರೆ. ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಹೆಚ್ಚಾದಂತೆ, ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದೆ ಬರುತ್ತಾರೆ. ಆದರೆ ಭಾರತದಲ್ಲಿ ಇನ್ನೂ ಅಂತಹ ಪರಿಸ್ಥಿತಿ ಉದ್ಭವಿಸಿಲ್ಲ. ಭಾರತ ಮಾತ್ರವಲ್ಲದೆ ವಿಶ್ವದ ವಿವಿಧ ದೇಶಗಳು ಈಗ ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗುತ್ತಿವೆ.

ಹತ್ತು ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ ಇಂಡಿಯನ್ ಆಯಿಲ್

ವಿಶ್ವದಾದ್ಯಂತ ವಾಯು ಮಾಲಿನ್ಯ ಸಮಸ್ಯೆಯನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದೆ. ವಾಯು ಮಾಲಿನ್ಯ ಸಮಸ್ಯೆಗೆ ಪೆಟ್ರೋಲ್, ಡೀಸೆಲ್ ವಾಹನಗಳು ಪ್ರಮುಖ ಕಾರಣವೆಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಪಂಚದ ವಿವಿಧ ದೇಶಗಳು ಈಗಾಗಲೇ ಪೆಟ್ರೋಲ್, ಡೀಸೆಲ್ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ ಎಲೆಕ್ಟ್ರಿಕ್ ವಾಹನ ಬಳಕೆಗೆ ಆದ್ಯತೆ ನೀಡುತ್ತಿವೆ.

ಹತ್ತು ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ ಇಂಡಿಯನ್ ಆಯಿಲ್

ಇನ್ನು ಕೆಲವೇ ವರ್ಷಗಳಲ್ಲಿ ಆಟೋ ಮೊಬೈಲ್ ಉದ್ಯಮವು ಸಂಪೂರ್ಣವಾಗಿ ಎಲೆಕ್ಟ್ರಿಕ್ ಮಯವಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಮಾಲಿನ್ಯಕ್ಕೆ ಪರಿಹಾರ ನೀಡಲು ಭಾರತದಲ್ಲಿ ವಾಹನಗಳಲ್ಲಿ ಎಥೆನಾಲ್ ಬಳಸುವಂತೆ ಉತ್ತೇಜಿಸಲಾಗುತ್ತಿದೆ. ಭಾರತ ಮಾತ್ರವಲ್ಲದೇ ಬ್ರೆಜಿಲ್‌ನಂತಹ ದೇಶಗಳಲ್ಲಿಯೂ ಎಥೆನಾಲ್ ಬಳಕೆಗೆ ಪ್ರಚಾರ ನೀಡಲಾಗುತ್ತಿದೆ. ಎಥೆನಾಲ್ ಪರಿಸರವನ್ನು ಕಲುಷಿತಗೊಳಿಸದ ಇಂಧನವಾಗಿದೆ.

ಹತ್ತು ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ ಇಂಡಿಯನ್ ಆಯಿಲ್

ಎಥೆನಾಲ್ ಅನ್ನು ಕಬ್ಬು ಹಾಗೂ ಮೆಕ್ಕೆ ಜೋಳದಂತಹ ಕೃಷಿ ಉತ್ಪನ್ನಗಳಿಂದ ಉತ್ಪಾದಿಸಲಾಗುತ್ತದೆ. ಎಥೆನಾಲ್ ಅನ್ನು ಇಂಧನವಾಗಿ ಬಳಸುವುದರಿಂದ ಭಾರತದ ರೈತರಿಗೆ ವಿವಿಧ ರೀತಿಯಲ್ಲಿ ಪ್ರಯೋಜನಗಳಾಗಲಿವೆ. ಪೆಟ್ರೋಲ್ ನೊಂದಿಗೆ ಮಿಶ್ರಣ ಮಾಡುತ್ತಿರುವ ಎಥೆನಾಲ್ ಪ್ರಮಾಣವನ್ನು ಸರಕಾರವು ಹಂತ ಹಂತವಾಗಿ ಹೆಚ್ಚಿಸುತ್ತಿದೆ ಎಂಬುದು ಗಮನಾರ್ಹ.

ಹತ್ತು ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ ಇಂಡಿಯನ್ ಆಯಿಲ್

ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಹಾಗೂ ವಿವಿಧ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡುತ್ತದೆ. ಇದರ ಜೊತೆಗೆ ಗುಜರಾತ್, ದೆಹಲಿ ರಾಜ್ಯ ಸರ್ಕಾರಗಳೂ ಸಹ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ನೀಡುತ್ತಿವೆ.

ಹತ್ತು ಸಾವಿರಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ ಇಂಡಿಯನ್ ಆಯಿಲ್

ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಾಹನ ತಯಾರಕ ಕಂಪನಿಗಳು ಮಾತ್ರವಲ್ಲದೇ ಸೆಲ್ ಫೋನ್ ತಯಾರಕ ಕಂಪನಿಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸಲು ಮುಂದಾಗಿವೆ. ಕೆಲವು ತಿಂಗಳ ಹಿಂದಷ್ಟೇ Lenovo ಕಂಪನಿಯು ತನ್ನ ಸ್ಕೂಟರ್ ಮಾದರಿಯ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆಗೊಳಿಸಿತ್ತು. ಈ ಹಿಂದೆ Apple, Huwai ನಂತಹ ಕಂಪನಿಗಳು ಸಹ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿರುವ ಬಗ್ಗೆ ವರದಿಯಾಗಿತ್ತು.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Indian oil corporation to start 10000 electric vehicle charging stations in next 3 years details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X