ಬಿಡುಗಡೆಗಾಗಿ ಡೀಲರ್ಸ್ ಯಾರ್ಡ್ ತಲುಪಿದ 2021ರ ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ಅಪ್
ಇಸುಝು ಕಂಪನಿಯು ತನ್ನ ಜನಪ್ರಿಯ ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ಅಪ್ ಹೊಸ ಆವೃತ್ತಿಯನ್ನು ಇದೇ ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಆವೃತ್ತಿಗಿಂತಲೂ ಹಲವಾರು ಹೊಸ ಬದಲಾವಣೆಗಳೊಂದಿಗೆ ಅಭಿವೃದ್ದಿಗೊಂಡಿದೆ.

ಕೋವಿಡ್ ಪರಿಣಾಮ ಆಟೋ ಉದ್ಯಮದಲ್ಲಿನ ಏರಿಳಿತದಿಂದಾಗಿ ಬಿಎಸ್-6 ಡಿ-ಕ್ರಾಸ್ ವಿ-ಕ್ರಾಸ್ ಲೈಫ್‌ಸ್ಟೈಲ್ ಪಿಕ್‌ಅಪ್ ಟ್ರಕ್ ಮಾದರಿಯ ಬಿಡುಗಡೆಯನ್ನು ಮುಂದೂಡಿಕೆ ಮಾಡುತ್ತಾ ಬಂದಿದ್ದ ಇಸುಝು ಕಂಪನಿಯ ಇದೀಗ ಬಿಡುಗಡೆಗಾಗಿ ಸಿದ್ದಗೊಳ್ಳುತ್ತಿದ್ದು, ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡುವ ಮೂಲಕ ಉತ್ಪಾದನಾ ಮಾದರಿಯ ಟೀಸರ್ ಚಿತ್ರವನ್ನು ಸಹ ಹಂಚಿಕೊಂಡಿದೆ.

ಹೊಸ ಎಮಿಷನ್‌ಗೆ ಅನುಗುಣವಾಗಿ ಎಂಜಿನ್ ಹೊಂದಿರುವ ವಿ-ಕ್ರಾಸ್ ಪಿಕ್‌ಅಪ್ ಎಸ್‌ಯುವಿ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಸದ್ಯ ಸ್ಟ್ಯಾಂಡರ್ಡ್, ಹೈ ಜೆಡ್, ಜೆಡ್ ಪ್ರೆಸ್ಟಿಸ್ ಮಾದರಿಗಳನ್ನು ಹೊಂದಿದ್ದು, ಗ್ರಾಹಕರ ಬೇಡಿಕೆ ಅನುಸಾರವಾಗಿ ಹೊಸದಾಗಿ ಹೈ ಲ್ಯಾಂಡರ್ ಬೆಸ್ ವೆರಿಯೆಂಟ್ ಪಡೆದುಕೊಳ್ಳಲಿದೆ.

ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಯು ಸದ್ಯ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿದ್ದು, ಹೊಸ ವಾಹನ ಬಿಡುಗಡೆಗೂ ಮುನ್ನ ಪ್ರಮುಖ ಡೀಲರ್ಸ್ ಯಾರ್ಡ್‌ಗಳಲ್ಲಿ ಹೊಸ ವಾಹನವನ್ನು ಸ್ಟಾಕ್ ಮಾಡುತ್ತಿರುವುದು ಕಂಡುಬಂದಿದೆ.

ಹೊಸ ಪಿಕ್‌ಅಪ್ ವಾಹನದಲ್ಲಿ ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಟೈಲ್‌ಗೆಟ್ ವಿಭಾಗವನ್ನು ಬದಲಾವಣೆಯಾಗಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿದ್ದು, ಹೊಸ ಪಿಕ್ಅಪ್ ಎಸ್‌ಯುವಿಯ ಒಳಭಾಗದ ತಾಂತ್ರಿಕ ಅಂಶಗಳಲ್ಲೂ ಬದಲಾವಣೆ ಮಾಡಲಾಗಿದೆ. ಡೀಲರ್ಸ್ ಯಾರ್ಡ್ ನಲ್ಲಿ ಕಂಡುಬಂದ ಬೆಸ್ ವೆರಿಯೆಂಟ್‌ನಲ್ಲೇ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿದ್ದು, ಹೈ ಎಂಡ್ ಮಾದರಿಯಲ್ಲಿ ಮತ್ತಷ್ಟು ಹೊಸ ಫೀಚರ್ಸ್ ಜೋಡಣೆಯಾಗಿರಲಿವೆ.

ಬಿಎಸ್-6 ವಿ-ಕ್ರಾಸ್ ಮಾದರಿಯು ಈ ಬಾರಿ ಬಿಎಸ್-4 ಮಾದರಿಯೆಂತೆ ಎರಡು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗಲಿದ್ದು, ಗ್ರಾಹಕರ ತಮ್ಮ ಬೇಡಿಕೆಗೆ ಅನುಗುಣವಾಗಿ 1.9-ಲೀಟರ್ ಡೀಸೆಲ್ ಮತ್ತು 2.5-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದರಲ್ಲಿ 1.9-ಲೀಟರ್ ಡೀಸೆಲ್ ಮಾದರಿಯೇ ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗಲಿದ್ದು, 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 148-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

2.5-ಲೀಟರ್ ಡೀಸೆಲ್ ಮಾದರಿಯು 5 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 135-ಬಿಎಚ್‌ಪಿ ಮತ್ತು 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಎರಡು ಮಾದರಿಗಳಲ್ಲೂ 4x4 ಡ್ರೈವ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹೊಸ ಎಂಜಿನ್‌ನಿಂದಾಗಿ ಪಿಕ್‌ಅಪ್ ಎಸ್‌ಯುವಿ ಬೆಲೆಯಲ್ಲೂ ತುಸು ದುಬಾರಿಯಾಗಲಿದ್ದು, ಬಿಎಸ್ 4 ಮಾದರಿಗಿಂತಲೂ ತುಸು ದುಬಾರಿಯಾಗಲಿರುವ ಹೊಸ ಪಿಕ್ಅಪ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 18 ಲಕ್ಷದಿಂದ ರೂ. 21 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.


Click it and Unblock the Notifications








