ಅತ್ಯುತ್ತಮ ಫೀಚರ್ಸ್ ಒಳಗೊಂಡ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ

ಜಾಗ್ವಾರ್ ಲ್ಯಾಂಡ್ ರೋವರ್ ತನ್ನ ಮೊದಲ ಆಲ್-ಎಲೆಕ್ಟ್ರಿಕ್ ಎಸ್‌ಯುವಿ ಐ-ಪೇಸ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಅತ್ಯುತ್ತಮ ಫೀಚರ್ಸ್‌ ಒಳಗೊಂಡಿರುವ ಹೊಸ ಕಾರು ಐಷಾರಾಮಿ ಕಾರುಗಳ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸುವ ತವಕದಲ್ಲಿದೆ.

ಅತ್ಯುತ್ತಮ ಫೀಚರ್ಸ್ ಒಳಗೊಂಡ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ

ಜಾಗತಿಕ ಮಾರುಕಟ್ಟೆಗಳಲ್ಲಿ ಈಗಾಗಲೇ ಖರೀದಿಗೆ ಲಭ್ಯವಿರುವ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯು ಇದೀಗ ಭಾರತದಲ್ಲೂ ಬಿಡುಗಡೆಗೊಂಡಿದ್ದು, ಹೊಸ ಕಾರು ಎಸ್, ಎಸ್ಇ ಮತ್ತು ಹೆಚ್ಎಸ್ಇ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಲಭ್ಯವಿರುತ್ತದೆ. ಹೊಸ ಕಾರಿನ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 1.06 ಕೋಟಿಯಿಂದ ಟಾಪ್ ಎಂಡ್ ಮಾದರಿಯು ರೂ. 1.12 ಕೋಟಿ ಬೆಲೆ ಪಡೆದುಕೊಂಡಿದೆ.

ಅತ್ಯುತ್ತಮ ಫೀಚರ್ಸ್ ಒಳಗೊಂಡ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ

ಹೊಸ ಕಾರು ಬಿಡುಗಡೆಯೊಂದಿಗೆ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿರುವ ಜಾಗ್ವಾರ್ ಕಂಪನಿಯು ಶೀಘ್ರದಲ್ಲೇ ಹೊಸ ಕಾರಿನ ವಿತರಣೆಯನ್ನು ಆರಂಭಿಸಲಿದ್ದು, ಐಷಾರಾಮಿ ಎಲೆಕ್ಟ್ರಿಕ್ ಕಾರು ಮಾದರಿಯಲ್ಲೇ ಐ-ಪೇಸ್ ವಿಭಿನ್ನವಾದ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದೆ.

ಅತ್ಯುತ್ತಮ ಫೀಚರ್ಸ್ ಒಳಗೊಂಡ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ

ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಮೂಲಕ ಗರಿಷ್ಠ 400-ಬಿಎಚ್‌ಪಿ ಮತ್ತು 696-ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಐ-ಪೇಸ್ ಕಾರು ಮಾದರಿಯು 90kWh ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಜ್‌ಗೆ 470 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಅತ್ಯುತ್ತಮ ಫೀಚರ್ಸ್ ಒಳಗೊಂಡ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ

2.2 ಟನ್ ತೂಕ ಹೊಂದಿರುವ ಐ-ಪೇಸ್ ಕಾರಿಗೆ ಬಲಿಷ್ಠ ಮೋಟಾರ್ ಒದಗಿಸಿರುವ ಜಾಗ್ವಾರ್ ಕಂಪನಿಯು ಪರ್ಫಾಮೆನ್ಸ್ ಜೊತೆಗೆ ಉತ್ತಮ ಮೈಲೇಜ್ ರೇಂಜ್ ಖಾತ್ರಿಪಡಿಸಿದ್ದು, ಕೇವಲ 4.8 ಸೇಕೆಂಡುಗಳಲ್ಲಿ ಸೊನ್ನೆಯಿಂದ ನೂರು ಕಿ.ಮೀ ಸಾಗುವ ಹೊಸ ಕಾರು ಪ್ರತಿ ಗಂಟೆಗೆ 200ಕಿ.ಮೀ ಟಾಪ್ ಸ್ಪೀಡ್ ತಲುಪಬಲ್ಲದು. ಹೊಸ ಕಾರಿಗಾಗಿ 7.4kW ವಾಲ್ ಮೌಂಟ್ ಎಸಿ ಚಾರ್ಜರ್ ನೀಡಲಿರುವ ಕಂಪನಿಯು ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಟಾಟಾ ಪವರ್ ಜೊತೆಗೂಡಿದೆ.

ಅತ್ಯುತ್ತಮ ಫೀಚರ್ಸ್ ಒಳಗೊಂಡ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ

ಟಾಟಾ ಪವರ್ ಕಂಪನಿಯು ವಿವಿಧ ಕಂಪನಿಗಳ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಸುಗಮಗೊಳಿಸುತ್ತಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 45 ನಿಮಿಷದಲ್ಲಿ ಶೇ.80 ಚಾರ್ಜಿಂಗ್ ಮಾಡಬಹುದಾಗಿದೆ. ಹೋಂ ಚಾರ್ಜರ್ ಮೂಲಕ ಚಾರ್ಜ್ ಮಾಡುವುದಾದರೇ ಬರೋಬ್ಬರಿ 12 ಗಂಟೆಗಳ ಸಮಯಾವಕಾಶ ತೆಗೆದುಕೊಳ್ಳಲಿದ್ದು, ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೆಚ್ಚಿನ ಮಟ್ಟದ ಹೂಡಿಕೆ ಮಾಡಲಾಗುತ್ತಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಅತ್ಯುತ್ತಮ ಫೀಚರ್ಸ್ ಒಳಗೊಂಡ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ

ಜಾಗ್ವಾರ್ ಐ-ಪೇಸ್ ಕಾರಿಗೂ ಕೂಡಾ ದೇಶದ ಪ್ರಮುಖ ನಗರಗಳಲ್ಲಿ ಸ್ಥಾಪನೆಗೊಂಡಿರುವ ಟಾಟಾ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ದೊರೆಯಲಿದ್ದು, ಹೊಸ ಕಾರಿನ ಕಂಪನಿಯು 5 ವರ್ಷಗಳ ಸರ್ವಿಸ್ ಪ್ಯಾಕೇಜ್ ಜೊತೆಗೆ 8 ವರ್ಷ ಅಥವಾ 1.60 ಲಕ್ಷ ಕಿ.ಮೀ ಮೇಲೆ ಬ್ಯಾಟರಿ ವಾರಂಟಿ ದೊರೆಯಲಿದೆ.

ಅತ್ಯುತ್ತಮ ಫೀಚರ್ಸ್ ಒಳಗೊಂಡ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ

ಇನ್ನು ಹೊಸ ಕಾರಿನಲ್ಲಿ ಹೊರ ಮತ್ತು ಒಳಭಾಗದ ಫೀಚರ್ಸ್‌ಗಳು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದ್ದು, ಎಲ್ಇಡಿ ಹೆಡ್‌ಲ್ಯಾಂಪ್ಸ್, ಟೈಲ್ ಲೈಟ್ಸ್, ಫುಲ್ ಸೈಜ್ ಫಿಕ್ಸ್ಡ್ ಗ್ಲಾಸ್ ರೂಫ್, ಡ್ಯುಯಲ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಇನ್ ಕಂಟ್ರೊಲ್ ಕನೆಕ್ಟೆಡ್ ಟೆಕ್ನಾಲಜಿ ನೀಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಅತ್ಯುತ್ತಮ ಫೀಚರ್ಸ್ ಒಳಗೊಂಡ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ

ಹಾಗೆಯೇ ಹೊಸ ಕಾರಿನ ಹೈ ಎಂಡ್ ಮಾದರಿಯಲ್ಲಿ ಮ್ಯಾಟ್ರಿಕ್ಸ್ ಎಲ್ಇಡಿ ಹೆಡ್‌ಲ್ಯಾಂಪ್, ಹ್ಯಾಂಡ್ ಫ್ರೀ ಬೂಟ್ ಓಪನ್, ಅಡಾಪ್ಟಿವ್ ಕ್ರೂಸ್ ಕಂಟ್ರೊಲ್, ಹೆಡ್‌ಅಪ್ ಡಿಸ್‌ಪ್ಲೇ, ವಿಂಡ್‌ಸಾರ್ ಲೆದರ್ ಸ್ಪೋಟ್ ಸೀಟ್, ಫೋರ್ ಜೋನ್ ಕ್ಲೈಮೆಟ್ ಕಂಟ್ರೊಲ್ ಸೇರಿದಂತೆ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

Most Read Articles

Kannada
English summary
Jaguar I-Pace Launched In India Starting At Rs 1.05 Crore. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X