Just In
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- News
ಸಮೀಕ್ಷೆ: ಅಸ್ಸಾಂನಲ್ಲಿ ಕಾಂಗ್ರೆಸ್ ಮಣಿಸಿ ಬಿಜೆಪಿ ಅಧಿಕಾರಕ್ಕೆ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭವಿಷ್ಯದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರವೇ ಉತ್ಪಾದಿಸಲಿವೆ ಜಾಗ್ವಾರ್ ಲ್ಯಾಂಡ್ ರೋವರ್
ಟಾಟಾ ಮೋಟಾರ್ಸ್ ಒಡೆತನದ ಜಾಗ್ವಾರ್ ಲ್ಯಾಂಡ್ ರೋವರ್ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳಿಗೆ ಸಂಬಂಧಿಸಿದಂತೆ ಬಹು ದೊಡ್ಡ ಘೋಷಣೆಯನ್ನು ಮಾಡಿವೆ. ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡಿರುವ ಕಂಪನಿಗಳು 2030ರ ವೇಳೆಗೆ ಪೆಟ್ರೋಲ್, ಡೀಸೆಲ್ ವಾಹನಗಳ ಉತ್ಪಾದನೆಯನ್ನು ನಿಲ್ಲಿಸುವುದಾಗಿ ತಿಳಿಸಿವೆ.

ಎರಡೂ ಕಂಪನಿಗಳು 2030ರಿಂದ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ. ಈ ಮೂಲಕ ಕಂಪನಿಗಳು ಭವಿಷ್ಯದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಉತ್ಪಾದಿಸುವುದಾಗಿ ಸ್ಪಷ್ಟಪಡಿಸಿವೆ. ಜಾಗ್ವಾರ್ ಕಂಪನಿಯು 2025ರಿಂದ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡುವುದಾಗಿ ಹೇಳಿದೆ.

ಲ್ಯಾಂಡ್ ರೋವರ್ ಕಂಪನಿಯು 2030ರ ವೇಳೆಗೆ ಆರು ಸಂಪೂರ್ಣ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಿದೆ. ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಕಾರ್ ಅನ್ನು 2024ರಲ್ಲಿ ಬಿಡುಗಡೆಗೊಳಿಸಲಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಈ ಎಲೆಕ್ಟ್ರಿಕ್ ಕಾರುಗಳನ್ನು ಮಾಡ್ಯುಲರ್ ಲಾಂಗಿಟ್ಯೂಡಿನಲ್ ಆರ್ಕಿಟೆಕ್ಚರ್'ನಲ್ಲಿ ಉತ್ಪಾದಿಸಲಾಗುವುದು ಎಂದು ಲ್ಯಾಂಡ್ ರೋವರ್ ತಿಳಿಸಿದೆ. 2030ರ ನಂತರ ಕಂಪನಿಯು ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರವೇ ಮಾರಾಟ ಮಾಡುವುದಾಗಿ ತಿಳಿಸಿದೆ.

ಜಾಗ್ವಾರ್ ಹಾಗೂ ಲ್ಯಾಂಡ್ ರೋವರ್ ಕಂಪನಿಗಳು ತಮ್ಮ ಜಂಟಿ ಯೋಜನೆಯ ಭಾಗವಾಗಿ ಎಲೆಕ್ಟ್ರಿಕ್ ಕಾರುಗಳಿಗಾಗಿ 2.5 ಬಿಲಿಯನ್ ಪೌಂಡ್ ಹೂಡಿಕೆ ಮಾಡಲಿವೆ. ಈ ಹೂಡಿಕೆಯು ಎಲೆಕ್ಟ್ರಿಕ್ ಕಾರು ಪ್ಲಾಟ್‌ಫಾರಂ ಹಾಗೂ ಕನೆಕ್ಟೆಡ್ ಕಾರು ಟೆಕ್ನಾಲಜಿಯ ಅಭಿವೃದ್ಧಿಗೆ ನೆರವಾಗಲಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಈ ಘೋಷಣೆಯ ನಂತರ ಟಾಟಾ ಮೋಟಾರ್ಸ್ ಕಂಪನಿಯ ಷೇರುಗಳು 3% ಹೆಚ್ಚಾಗಿವೆ. ಯುರೋಪ್ ಹಾಗೂ ಏಷ್ಯಾದ ದೇಶಗಳಲ್ಲಿ ಕಟ್ಟುನಿಟ್ಟಿನ ಮಾಲಿನ್ಯ ನಿಯಮಗಳನ್ನು ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಕಾರು ತಯಾರಕ ಕಂಪನಿಗಳು ಶೂನ್ಯ-ಹೊರಸೂಸುವಿಕೆ ಮಾನದಂಡಗಳನ್ನು ಅಳವಡಿಸಿಕೊಳ್ಳಲು ಮುಂದಾಗಿವೆ.

ಈಗಾಗಲೇ ಹಲವು ದೇಶಗಳು ಪೆಟ್ರೋಲ್, ಡೀಸೆಲ್ ವಾಹನಗಳ ಮಾರಾಟವನ್ನು ನಿಷೇಧಿಸುವುದಾಗಿ ಘೋಷಿಸಿವೆ. 2030ರಿಂದ ಇಂಗ್ಲೆಂಡ್ ಹಾಗೂ ಜಪಾನ್‌ನಲ್ಲಿಪೆಟ್ರೋಲ್, ಡೀಸೆಲ್ ವಾಹನಗಳು ನಿಷೇಧವಾಗಲಿವೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಭಾರತದಲ್ಲಿಯೂ ಐಷಾರಾಮಿ ಕಾರು ತಯಾರಕ ಕಂಪನಿಗಳು ತಮ್ಮ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ. ಕಳೆದ ವರ್ಷ ಮರ್ಸಿಡಿಸ್ ಬೆಂಝ್ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಕಾರ್ ಆದ ಇಕ್ಯೂಸಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು.

ಈಗ ಜಾಗ್ವಾರ್ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಕಂಪನಿಯ ಐ-ಪೇಸ್ ಕಾರು ಮಾರ್ಚ್ 9ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಜಾಗ್ವಾರ್ ಐ-ಪೇಸ್ ಕಂಪನಿಯ ಅತ್ಯುತ್ತಮ ಎಲೆಕ್ಟ್ರಿಕ್ ಎಸ್‌ಯುವಿಗಳಲ್ಲಿ ಒಂದಾಗಿದೆ. ಐ-ಪೇಸ್ ಎಸ್‌ಯುವಿಯ ಬಗೆಗಿನ ಮಾಹಿತಿಯನ್ನು ಜನವರಿ ತಿಂಗಳಿನಲ್ಲಿಯೇ ಕಂಪನಿಯ ಭಾರತದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಬುಕ್ಕಿಂಗ್'ಗಳನ್ನು ಆರಂಭಿಸಲಾಗಿದೆ.

ಐ-ಪೇಸ್ ಜಾಗ್ವಾರ್ ಕಂಪನಿಯ ಮೊದಲ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ಎಸ್‌ಯುವಿಯನ್ನು 2018ರಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

10 ಲಕ್ಷ 50 ಸಾವಿರ ಕಿ.ಮೀ ಚಾಲನೆ ಮಾಡುವ ಮೂಲಕ ಈ ಎಸ್‌ಯುವಿಯ 200 ಮೂಲಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಕಂಪನಿ ಹೇಳಿಕೊಂಡಿದೆ. ಈ ಮೂಲಕ ಕಂಪನಿಯು ಐ-ಪೇಸ್ ಎಸ್‌ಯುವಿಯನ್ನು ವಿಶ್ವ ದರ್ಜೆಯ ಎಲೆಕ್ಟ್ರಿಕ್ ಎಸ್‌ಯುವಿ ಎಂದು ಹೇಳಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜಾಗ್ವಾರ್ ಐ-ಪೇಸ್ ಬೇಸ್ ಮಾದರಿಯ ಆರಂಭಿಕ ಬೆಲೆ 70,875 ಡಾಲರ್ ಅಂದರೆ ರೂ.50.88 ಲಕ್ಷಗಳಾಗಿದೆ. ಕಳೆದ ವರ್ಷವೇ ಈ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಬೇಕಿತ್ತು. ಆದರೆ ಕರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಕಾರಿನ ಬಿಡುಗಡೆಯನ್ನು ಮುಂದೂಡಲಾಗಿತ್ತು.
ಗಮನಿಸಿ: ಕೆಲವು ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.