Just In
- 30 min ago
ಅನಾವರಣವಾಯ್ತು 2021ರ ಹ್ಯುಂಡೈ ಸೊನಾಟಾ ಎನ್ ಲೈನ್ ಪರ್ಫಾಮೆನ್ಸ್ ಕಾರು
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 14 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
Don't Miss!
- News
ವಿಜಯನಗರ ಜಿಲ್ಲೆ; ಮೇಲುಸ್ತುವಾರಿಗೆ ಐಎಎಸ್ ಅಧಿಕಾರಿ ನೇಮಕ
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
7 ಸೀಟರ್ ಎಸ್‌ಯುವಿ ಬಿಡುಗಡೆ ಕುರಿತು ಮಾಹಿತಿ ಬಹಿರಂಗಪಡಿಸಿದ ಜೀಪ್ ಇಂಡಿಯಾ
ಜೀಪ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸುತ್ತಿದ್ದು, ಕಳೆದ ತಿಂಗಳು ಕಂಪಾಸ್ ಫೇಸ್‌ಲಿಫ್ಟ್ ಬಿಡುಗಡೆಗೊಳಿಸುವ ಮೂಲಕ ಹೊಸ ಕಾರುಗಳ ಬಿಡುಗಡೆಯತ್ತ ಸಿದ್ದತೆ ನಡೆಸುತ್ತಿದೆ.

ಜೀಪ್ ಇಂಡಿಯಾ ಕಂಪನಿಯು ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಕಂಪಾಸ್ ಮತ್ತು ರ‍್ಯಾಂಗ್ಲರ್ ಆಫ್ ರೋಡ್ ಎಸ್‌ಯುವಿ ಆವೃತ್ತಿಯನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳ ಮಾರಾಟ ಆರಂಭಿಸುವ ಸಿದ್ದತೆಯಲ್ಲಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 7 ಸೀಟರ್ ಸೌಲಭ್ಯದ ಫುಲ್ ಸೈಜ್ ಎಸ್‌ಯುವಿ ಮತ್ತು ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಬಿಡುಗಡೆ ಮಾಡುತ್ತಿದೆ.

2020ರಲ್ಲೇ ಬಿಡುಗಡೆಯಾಗಬೇಕಿದ್ದ ಎರಡು ಹೊಸ ಕಾರು ಮಾದರಿಗಳನ್ನು ಕೋವಿಡ್‌ನಿಂದ ಉಂಟಾದ ಆರ್ಥಿಕ ಬಿಟ್ಟಕ್ಕಟಿನಿಂದಾಗಿ ಬಿಡುಗಡೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದ ಜೀಪ್ ಕಂಪನಿಯು ಇದೀಗ ಹೊಸ ಕಾರುಗಳ ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ತೀವ್ರಗೊಳಿಸಿದೆ.

ಹೊಸ ಕಾರುಗಳ ಬಿಡುಗಡೆ ಕುರಿತಂತೆ ಈಗಾಗಲೇ ಮಾಧ್ಯಮ ಸಂವಾದದೊಂದರಲ್ಲಿ ಖಚಿತಪಡಿಸಿರುವ ಜೀಪ್ ಮಾತೃಸಂಸ್ಥೆ ಎಫ್‌ಸಿಎ ಕಂಪನಿಯ ಇಂಡಿಯಾ ವಿಭಾಗದ ಅಧ್ಯಕ್ಷ ಪಾರ್ಥ ದತ್ತು ಅವರು ಅಭಿವೃದ್ಧಿ ಪಥದಲ್ಲಿರುವ ಭಾರತದಲ್ಲಿ ಪ್ರೀಮಿಯಂ ಕಾರುಗಳ ಮಾರಾಟವು ತ್ವರಿತಗತಿಯಲ್ಲಿ ಬೆಳವಣಿಗೆ ಕಾಣುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಕೆಲವು ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸಲು ಇದು ಸೂಕ್ತ ಸಮಯ ಎಂದಿದ್ದಾರೆ.

ಆಟೋ ಕಂಪನಿಗಳ ಪ್ರಕಾರ ರೂ.10 ಲಕ್ಷದಿಂದ ರೂ.15 ಲಕ್ಷ ಬೆಲೆಯೊಳಗಿನ ಕಾರುಗಳು ಸಾಕಷ್ಟು ಲಾಭದಾಯಕವಾಗಲಿದ್ದರೆ, ಪ್ರೀಮಿಯಂ ಕಾರುಗಳು ಬ್ರಾಂಡ್ ಮೌಲ್ಯವನ್ನು ಹೆಚ್ಚಿಸುತ್ತವೆ ಎನ್ನುವ ಲೆಕ್ಕಾಚಾರವಿದೆ. ಹೀಗಾಗಿ ಎರಡು ಮಾದರಿಯಲ್ಲೂ ಕಾರುಗಳನ್ನು ಹೊರತರುತ್ತಿರುವ ಜೀಪ್ ಇಂಡಿಯಾ ಕಂಪನಿಯು ಈಗಾಗಲೇ ಹೊಸ ಕಾರುಗಳ ತಾಂತ್ರಿಕ ಅಂಶಗಳ ಕುರುತು ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, 7 ಸೀಟರ್ ಎಸ್‌ಯುವಿ ಮಾದರಿಯು ಇದೇ ವರ್ಷಾಂತ್ಯಕ್ಕೆ ಇಲ್ಲವೇ 2022ರ ಆರಂಭದಲ್ಲಿ ರಸ್ತೆಗಿಳಿಯಲಿದೆ.

ಹೊಸ ಕಾರು ವಿದೇಶಿ ಮಾರುಕಟ್ಟೆಯಲ್ಲಿರುವ ಗ್ರ್ಯಾಂಡ್ ಕಂಪಾಸ್ ಅಥವಾ ಗ್ರಾಂಡ್ ಕಮಾಂಡರ್ ಮಾದರಿಯಲ್ಲೇ ಬಿಡುಗಡೆಯಾಗುತ್ತಿದ್ದರೂ ಹೊಸ ಎಸ್‌ಯುವಿ ಕಾರು ಭಾರತದಲ್ಲಿ ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗುವ ಮಾಹಿತಿಗಳಿದ್ದು, ಹೊಸ ಕಾರನ್ನು ಸದ್ಯ ಜೀಪ್ ಕಂಪನಿಯು ಹೆಚ್6 ಎನ್ನುವ ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಕಾರುನ್ನು ಜೀಪ್ ಕಂಪನಿಯು ಡೀಸೆಲ್ ಎಂಜಿನ್‌ನಲ್ಲಿ ಮಾತ್ರವೇ ಬಿಡುಗಡೆ ಮಾಡಲಿದೆ ಎನ್ನಲಾಗಿದ್ದು, 2.0-ಲೀಟರ್ ಸಾಮರ್ಥ್ಯದ ನಾಲ್ಕು ಸಿಲಿಂಡರ್ ಪ್ರೇರಣೆಯ ಮಲ್ಟಿಜೆಟ್ ಟರ್ಬೊ-ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ.

ಹೊಸ ಮಲ್ಟಿ ಜೆಟ್ ಟರ್ಬೊ ಡೀಸೆಲ್ ಮಾದರಿಯು ಗರಿಷ್ಠ 200-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಂಜಿ ಗ್ಲೊಸ್ಟರ್, ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರು ಮಾದರಿಗಳಿಗೆ ಹೊಸ ಕಾರು ಪ್ರಬಲ ಪೈಪೋಟಿ ನೀಡಲಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಫುಲ್ ಸೈಜ್ ಎಸ್‌ಯುವಿ ಆವೃತ್ತಿಯಾಗಿರುವ ಜೀಪ್ ಹೊಸ ಎಸ್‌ಯುವಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.26 ಲಕ್ಷದಿಂದ ರೂ.30 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು, ಹೊಸ ಕಾರು ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಸ್ಥಳಾವಕಾಶದೊಂದಿಗೆ 3 ಸಾಲಿನ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣ ಒದಗಿಸುತ್ತದೆ.