ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಜೀಪ್ ಕಂಪಾಸ್

ಅಮೆರಿಕಾ ಮೂಲದ ವಾಹನ ತಯಾರಕ ಕಂಪನಿಯಾದ ಜೀಪ್ ಕೆಲವು ತಿಂಗಳ ಹಿಂದೆ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತು. ಈ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಹಲವಾರು ನವೀಕರಣಗಳನ್ನು ಪಡೆದುಕೊಂಡಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಜೀಪ್ ಕಂಪಾಸ್

ಈ ನವೀಕರಣವು ಖಂಡಿತವಾಗಿಯೂ ಹೆಚ್ಚಿನ ಖರೀದಿದಾರರನ್ನು ಆಕರ್ಷಿಸಲು ಸಹಾಯ ಮಾಡಿದೆ. ಜೀಪ್ ಕಂಪನಿಯು 2021ರ ಮರ್ಚ್ ತಿಂಗಳಿನಲ್ಲಿ ಕಂಪಾಸ್‌ನ 1,360 ಯುನಿಟ್‌ಗಳನ್ನು ಮಾರಾಟ ಮಾಡಲು ಯಶಸ್ವಿಯಾಗಿದೆ. ಕಳೆದ ವರ್ಷದ ಮರ್ಚ್ ತಿಂಗಳಲ್ಲಿ ಕಂಪಾಸ್‌ನ 163 ಯುನಿಟ್‌ಗಳು ಮಾತ್ರ ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.734ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಜೀಪ್ ಕಂಪಾಸ್

2021ರ ಜೀಪ್ ಕಂಪಾಸ್ ಎಸ್‍ಯುವಿಯು ಸ್ಪೋರ್ಟ್ಸ್, ಲಾಂಗಿಟ್ಯೂಡ್, ಲಿಮಿಟೆಡ್, ಲಿಮಿಟೆಡ್ (ಒ), ಮತ್ತು ಹೊಸದಾಗಿ ಸೇರಿಸಲಾದ ಟಾಪ್-ಎಂಡ್ ಎಸ್ ಎಂಬ ವೆರಿಯೆಂಟ್ ಗಳಲ್ಲಿ ಲಭ್ಯವಿದೆ. ಮೂರು ವರ್ಷಗಳ ಬಳಿಕ ಜೀಪ್ ಕಂಪಾಸ್ ಮಿಡ್-ಲೈಫ್ ನವೀಕರಣವನ್ನು ಪಡೆದುಕೊಂಡಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಜೀಪ್ ಕಂಪಾಸ್

ಈ ಎಸ್‌ಯುವಿಯು ವಿನ್ಯಾಸದ ಬಗ್ಗೆ ಹೇಳುದಾದರೆ, ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದ್ದರೆ, ಫೀಚರ್ ಗಳ ವಿಭಾಗದಲ್ಲಿ ಗಣನೀಯ ನವೀಕರಣಗಳನ್ನು ಪಡೆದುಕೊಂಡಿದೆ. ಹೊರಗಿನ ನವೀಕರಣಗಳು ಹತ್ತಿರದಿಂದ ಗಮನಿಸಿದರೆ ಮಾತ್ರ ತಿಳಿದುಬರುತ್ತದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಜೀಪ್ ಕಂಪಾಸ್

ಈ ಹೊಸ ಎಸ್‍ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ. ಇದರ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಜೀಪ್ ಕಂಪಾಸ್

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ. 2021 ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ.ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಜೀಪ್ ಕಂಪಾಸ್

ಈ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಹೊಂದಿದೆ. ಇದು ಆಂಡ್ರಾಯ್ಡ್ ಆಧಾರಿತ ಆಪರೇಟಿಂಗ್ ಸಿಸ್ಟಂ ಹೊಂದಿರುವ ಎಫ್‌ಸಿಎಯ ಹೊಸ ಯುಕನೆಕ್ಟ್ 5 ತಂತ್ರಜ್ಞಾನವನ್ನು ಆಧರಿಸಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಜೀಪ್ ಕಂಪಾಸ್

ಆದ್ದರಿಂದ ಇದು ಈಗ ವಾಯ್ಸ್ ಕಮಾಂಡ್ ಅಸಿಸ್ಟ್ ಮತ್ತು ಓವರ್-ದಿ-ಏರ್ (ಒಟಿಎ) ಅಪ್‌ಡೇಟ್‌ ಫೀಚರ್ ಗಳನ್ನು ಒಳಗೊಂಡಿವೆ. ಹಿಲ್ ಅಸಿಸ್ಟ್ (ಎಚ್‌ಎ) ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ (ಎಚ್‌ಡಿಸಿ) ಎಂಬ ಮೋಡ್ ಗಳನ್ನು ಈ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಗೆ ನೀಡಲಾಗಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಜೀಪ್ ಕಂಪಾಸ್

ಜೀಪ್ ಕಂಪಾಸ್ ಫೇಸ್‌ಲಿಫ್ಟ್ ನಲ್ಲಿ ಹೊಸದಾಗಿ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ. ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 163 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಜೀಪ್ ಕಂಪಾಸ್

ಎರಡೂ ಎಂಜಿನ್‌ಗಳು ಸ್ಟ್ಯಾಂಡರ್ಡ್‌ ಆಗಿ ಆರು-ಸ್ಪೀಡ್ ಮ್ಯಾನ್ಯುವಲ್‌ನೊಂದಿಗೆ ಬರುತ್ತವೆ. ಕಂಪಾಸ್ ಪೆಟ್ರೋಲ್ ಏಳು-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆಯುತ್ತದೆ ಮತ್ತು ಡೀಸೆಲ್ ಒಂಬತ್ತು-ಸ್ಪೀಡ್ ಟಾರ್ಕ್ ಕರ್ನವಾಟರ್ ಆಯ್ಕೆಯನ್ನು ಪಡೆಯುತ್ತದೆ.

Most Read Articles

Kannada
English summary
Jeep Compass Sales Up By 734% In March 2021. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X