ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

ಭಾರತೀಯ ಆಟೋಮೊಬೈಲ್ ಉದ್ಯಮವು ಪ್ರಸ್ತುತ ಭಾರೀ ಕುಸಿತವನ್ನು ಎದುರಿಸುತ್ತಿದೆ. ಭಾರತದಲ್ಲಿನ ಹಲವು ವಾಹನ ತಯಾರಕರ ಪ್ರಮುಖ ಮಾದರಿಗಳು ಕಳೆದ ತಿಂಗಳು ಮಾರಾಟ ಸಂಖ್ಯೆಯಲ್ಲಿ ಕುಸಿತವನ್ನು ಕಂಡಿದ್ದಾರೆ. ಈ ನಡುವೆ ಜೀಪ್ ಕಂಪನಿಯ ಕಂಪಾಸ್ ಮಾದರಿಯು ಮಾರಾಟದಲ್ಲಿ ಭರ್ಜರಿ ಬೆಳವಣಿಗೆಯನ್ನು ಸಾಧಿಸಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

2021ರ ನವೆಂಬರ್ ತಿಂಗಳಿನಲ್ಲಿ ಜೀಪ್ ಕಂಪಾಸ್‌ನ ಒಟ್ಟು 1,052 ಯುನಿಟ್‌ಗಳನ್ನು ಭಾರತದಲ್ಲಿ ಮಾರಾಟ ಮಾಡಲಾಗಿದೆ, ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 702 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇಕಡಾ 49.86 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಈ ವರ್ಷದ ಅಕ್ಟೋಬರ್ ಕಂಪಾಸ್‌ನ 1,324 ಯೂನಿಟ್‌ಗಳು ಮಾರಾಟವಾಗಿತ್ತು, ಇದನ್ನು ತಿಂಗಳಿನಿಂದ ತಿಂಗಳ ಆಧಾರದ ಮೇಲೆ ಮಾರಾಟದಲ್ಲಿ 20.54 ರಷ್ಟು ಕುಸಿತವಾಗಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

ಜೀಪ್ ಕಂಪನಿಯು ಈ ವರ್ಷದ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತು. ಈ ಹೊಸ ಜೀಪ್ ಕಂಪಾಸ್ ಎಸ್‍ಯುವಿಯನ್ನು ಆಂತರಿಕ ಮತ್ತು ಬಾಹ್ಯ ನವೀಕರಣಗಳೊಂದಿಗೆ ಪರಿಚಯಿಸಿದ್ದರು.

ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

2021ರ ಜೀಪ್ ಕಂಪಾಸ್ ಎಸ್‍ಯುವಿಯು ಸ್ಪೋರ್ಟ್ಸ್, ಲಾಂಗಿಟ್ಯೂಡ್, ಲಿಮಿಟೆಡ್, ಲಿಮಿಟೆಡ್ (ಒ),ಮತ್ತು ಹೊಸದಾಗಿ ಸೇರಿಸಲಾದ ಟಾಪ್-ಎಂಡ್ ಮಾಡೆಲ್ ಎಸ್ ಎಂಬ ವೆರಿಯೆಂಟ್ ಗಳಲ್ಲಿ ಲಭ್ಯವಿದೆ. ಮೂರು ವರ್ಷಗಳ ಬಳಿಕ ಜೀಪ್ ಕಂಪಾಸ್ ಮಿಡ್-ಲೈಫ್ ನವೀಕರಣವನ್ನು ಪಡೆದುಕೊಂಡಿತ್ತು, ಜೀಪ್ ಇಂಡಿಯಾ ಕಂಪನಿಯು ತನ್ನ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಬೆಲೆ ಏರಿಕೆಯನ್ನು ಮೊದಲ ಬಾರಿಗೆ ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಮಾಡಲಾಯಿತು.

ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

ಇತ್ತೀಚೆಗೆ ಎರಡನೇ ಬಾರಿ ಈ ಎಸ್‍ಯುವಿಯ ಬೆಲೆಯನ್ನು ಏರಿಸಿದೆ. ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಂಡ 2021ರ ಜೀಪ್ ಕಂಪಾಸ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ, ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದ್ದರೆ, ಫೀಚರ್ ಗಳ ವಿಭಾಗದಲ್ಲಿ ಗಣನೀಯ ನವೀಕರಣಗಳನ್ನು ಪಡೆದುಕೊಂಡಿದೆ. ಈ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ. ಈ ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಕೂಡ ಒಳಗೊಂಡಿವೆ. ಈ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಹೊಂದಿದೆ. ಇದು ಆಂಡ್ರಾಯ್ಡ್ ಆಧಾರಿತ ಆಪರೇಟಿಂಗ್ ಸಿಸ್ಟಂ ಹೊಂದಿರುವ ಎಫ್‌ಸಿಎಯ ಹೊಸ ಯುಕನೆಕ್ಟ್ 5 ತಂತ್ರಜ್ಞಾನವನ್ನು ಕೂಡ ಒಳಗೊಂಡಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

ಇದರಿಂದ ವಾಯ್ಸ್ ಕಮಾಂಡ್ ಅಸಿಸ್ಟ್ ಮತ್ತು ಓವರ್-ದಿ-ಏರ್ (ಒಟಿಎ) ಅಪ್‌ಡೇಟ್‌ ಫೀಚರ್ ಗಳನ್ನು ಕೂಡ ಹೊಂದಿದೆ. ಈ ಎಸ್‍ಯುವಿಯಲ್ಲಿ ಹಿಲ್ ಅಸಿಸ್ಟ್ (ಎಚ್‌ಎ) ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ (ಎಚ್‌ಡಿಸಿ) ಎಂಬ ಮೋಡ್ ಗಳನ್ನು ಈ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಕೂಡ ಹೊಂದಿದೆ. ಇನ್ನು ಜೀಪ್ ಕಂಪನಿಯು ಕಂಪಾಸ್ ಮಾಡೆಲ್ ಎಸ್ ವೆರಿಯಂಟ್ ಅನ್ನು ಇತ್ತೀಚೆಗೆ ನವೀಕರಿಸಿದೆ. ಈ ವೆರಿಯೆಂಟ್ ನಲ್ಲಿ ಹೊಸ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಆಟೋಮ್ಯಾಟಿಕ್ ವೆಂಟಿಲೇಟೆಡ್ ಡ್ರೈವರ್ ಸೀಟ್‌ನೊಂದಿಗೆ ನವೀಕರಿಸಿದ್ದಾರೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

ಈ ಮಾಡೆಲ್ ಎಸ್ (ಒ 2) ವೆರಿಯೆಂಟ್ ಐದನೇ ತಲೆಮಾರಿನ ಆರ್ 1 ಹೈ 10.1 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯುತ್ತದೆ. ಇದು ಈಗ ನ್ಯಾವಿಗೇಷನ್ ಸಿಸ್ಟಂ ಜೊತೆಗೆ ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗೆ ಹೊಂದಿಕೊಳ್ಳುತ್ತದೆ. ಜೊತೆಗೆ ಫೋನ್, ಮೀಡಿಯಾ, ರೇಡಿಯೋ, ಕ್ಲೈಮೇಂಟ್ ಕಂಟ್ರೋಲ್ ಮತ್ತು ಸಂಚರಣೆಗಳ ಹ್ಯಾಂಡ್ಸ್-ಫ್ರೀ ಕಾರ್ಯಾಚರಣೆಗಾಗಿ ಯುನಿಟ್ ವಾಯ್ಸ್ ಕಾಮೆಂಡ್ ಗಳನ್ನು ಬೆಂಬಲಿಸುತ್ತದೆ .

ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

ಈ ಹೊಸ ಇನ್ಫೋಟೈನ್‌ಮೆಂಟ್ ಯುನಿಟ್ 6 ಜಿಬಿ RAM ಮತ್ತು 40 ಕೆ ಎಂಐಪಿಎಸ್ ಚಿಪ್‌ಸೆಟ್‌ನೊಂದಿಗೆ ಬರುತ್ತದೆ, ಇದು ಹಳೆಯ ಯುನಿಟ್ ಗಿಂತ ವೇಗವಾಗಿದೆ ಎಂದು ಹೇಳಲಾಗಿದೆ. ಮಾಡೆಲ್ ಎಸ್ ವೆರಿಯೆಂಟ್ ಕ್ಯಾಬಿನ್ ತಾಪಮಾನ 26.5 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾದಾಗ ಆನ್ ಆಗುವ ಆಟೋಮ್ಯಾಟಿಕ್ ವೆಂಟಿಲೇಟೆಡ್ ಡ್ರೈವರ್ ಸೀಟ್‌ ಅನ್ನು ಹೊಂದಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

ಕಂಪಾಸ್ ಎಸ್‍ಯುವಿಯಲ್ಲಿ ಹೊಸದಾಗಿ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ. ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 163 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

ಈ ಎರಡು ಎಂಜಿನ್‌ಗಳೊಂದಿಗೆ ಸ್ಟ್ಯಾಂಡರ್ಡ್‌ ಆಗಿ ಆರು-ಸ್ಪೀಡ್ ಮ್ಯಾನ್ಯುವಲ್‌ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಕಂಪಾಸ್ ಪೆಟ್ರೋಲ್ ಏಳು-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆಯುತ್ತದೆ ಮತ್ತು ಡೀಸೆಲ್ ಒಂಬತ್ತು-ಸ್ಪೀಡ್ ಟಾರ್ಕ್ ಕರ್ನವಾಟರ್ ಆಯ್ಕೆಯನ್ನು ಪಡೆಯುತ್ತದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

ಇನ್ನು ಜೀಪ್ ಕಂಪನಿಯು ತನ್ನ ಹೊಸ ಕಮಾಂಡರ್ ಎಸ್‌ಯುವಿಯನ್ನು ಬ್ರೆಜಿಲ್‌ನಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಇದನ್ನು ಕಂಪಾಸ್ ಐದು ಸೀಟಿನ ಮಾದರಿಗೆ ಹೋಲಿಸಿದರೆ ಗಮನಾರ್ಹ ವ್ಯತ್ಯಾಸಗಳನ್ನು ಹೊಂದಿದೆ. ಅಲ್ಲದೇ ಹೊಸ ಜೀಪ್ ಕಮಾಂಡರ್ ಎಸ್‍ಯುವಿಯು ಹೆಚ್ಚು ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಹೊಸ ಮಾದರಿಯನ್ನು ಆಂತರಿಕವಾಗಿ ಜೀಪ್ ಲೋ-ಡಿ ಎಂದು ಕರೆಯಲಾಗುತ್ತಿತ್ತು. ಇದು ಕಂಪಾಸ್ ಎಸ್‌ಯುವಿಗಿಂತ ಉದ್ದವಾದ ಹೆಚ್ಚು ವಿಶಾಲವಾದ ಮತ್ತು ಪ್ರೀಮಿಯಂ ಆವೃತ್ತಿಯಾಗಿದೆ. ಇನ್ನು ಈ ಹೊಸ 7-ಸೀಟರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಜೀಪ್ ಮೆರಿಡಿಯನ್ ಎಂಬ ಹೆಸರಿನಲ್ಲಿ ಬಿಡುಗಡೆಯಾಗಲಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Jeep Compass ಎಸ್‍ಯುವಿ

ಈ ಜೀಪ್ 7-ಸೀಟರ್ ಎಸ್‌ಯುವಿಯು ಮೊದಲು ಬ್ರೆಜಿಲ್‌ನಲ್ಲಿ ಬಿಡುಗಡೆಯಾಗಲಿದೆ, ಭಾರತದಲ್ಲಿ ಈ ಎಸ್‍ಯುವಿಯು ಮುಂದಿನ ವರ್ಷದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಇನ್ನು ಒಟ್ಟಾರೆಯಾಗಿ ಜೀಪ್ ಕಂಪಾಸ್ ಎಸ್‍ಯುವಿಯು ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ.

More from DriveSpark

Article Published On: Tuesday, December 14, 2021, 10:33 [IST]
English summary
Jeep compass suv registers nearly 50 percent sales growth in november 2021 details
Read more on ಜೀಪ್ jeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+