2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೊಸ ವೀಡಿಯೋ ಬಿಡುಗಡೆಗೊಳಿಸಿದ ಜೀಪ್

ಅಮೆರಿಕಾ ಮೂಲದ ವಾಹನ ತಯಾರಕ ಕಂಪನಿಯಾದ ಜೀಪ್ ತನ್ನ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತದಲ್ಲಿ ಇತ್ತೀಚೆಗೆ ಪರಿಚಯಿಸಿತು. ಈ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಹಲವಾರು ನವೀಕರಣಗಳನ್ನು ಪಡೆದುಕೊಂಡಿದೆ.

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೊಸ ವೀಡಿಯೋ ಬಿಡುಗಡೆಗೊಳಿಸಿದ ಜೀಪ್

ಇದೀಗ ಜೀಪ್ ಕಂಪನಿಯು ಈ ಎಸ್‍ಯುವಿಯ ಹೊಸ ವೀಡಿಯೋವನ್ನು ಬಿಡುಗಡೆಗೊಳಿಸಿದೆ. ವೀಡಿಯೋದಲ್ಲಿ ಜನಪ್ರಿಯ ನಟಿ ಚಿತ್ರಾಂಗದ ಸಿಂಗ್ ಅವರು ಕಾಣಿಸಿಕೊಂಡಿದ್ದಾರೆ. ಈ ವೀಡಿಯೋವನ್ನು ಜೀಪ್ ಇಂಡಿಯಾ ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದೆ. ವೀಡಿಯೋದಲ್ಲಿ ಅವರು ಚಿತ್ರರಂಗದಲ್ಲಿ ತಮ್ಮ ಪ್ರಯಾಣದ ಬಗ್ಗೆ ಮಾತನಾಡುತ್ತಾರೆ. ಇನ್ನು ನಟಿ ಜೀಪ್ ಬ್ರ್ಯಾಂಡ್‌ನೊಂದಿಗೆ ಹೇಗೆ ಸಂಬಂಧ ಹೊಂದಿದ್ದಾಳೆ ಎಂಬುದರ ಬಗ್ಗೆಯೂ ಮಾತನಾಡುತ್ತಾರೆ.

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೊಸ ವೀಡಿಯೋ ಬಿಡುಗಡೆಗೊಳಿಸಿದ ಜೀಪ್

ವೀಡಿಯೋದಲ್ಲಿ ಕಾಡಿನ ನಡುವೆ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ನಟಿ ಚಾಲನೆ ಮಾಡುತ್ತಿದ್ದಾರೆ. 2021ರ ಜೀಪ್ ಕಂಪಾಸ್ ಎಸ್‍ಯುವಿಯು ಸ್ಪೋರ್ಟ್ಸ್, ಲಾಂಗಿಟ್ಯೂಡ್, ಲಿಮಿಟೆಡ್, ಲಿಮಿಟೆಡ್ (ಒ), ಮತ್ತು ಹೊಸದಾಗಿ ಸೇರಿಸಲಾದ ಟಾಪ್-ಎಂಡ್ ಎಸ್ ಎಂಬ ವೆರಿಯೆಂಟ್ ಗಳಲ್ಲಿ ಲಭ್ಯವಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೊಸ ವೀಡಿಯೋ ಬಿಡುಗಡೆಗೊಳಿಸಿದ ಜೀಪ್

ಮೂರು ವರ್ಷಗಳ ಬಳಿಕ ಜೀಪ್ ಕಂಪಾಸ್ ಮಿಡ್-ಲೈಫ್ ನವೀಕರಣವನ್ನು ಪಡೆದುಕೊಂಡಿದೆ. ಈ ಎಸ್‌ಯುವಿಯು ವಿನ್ಯಾಸದ ಬಗ್ಗೆ ಹೇಳುದಾದರೆ, ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದ್ದರೆ, ಫೀಚರ್ ಗಳ ವಿಭಾಗದಲ್ಲಿ ಗಣನೀಯ ನವೀಕರಣಗಳನ್ನು ಪಡೆದುಕೊಂಡಿದೆ. ಹೊರಗಿನ ನವೀಕರಣಗಳು ಹತ್ತಿರದಿಂದ ಸೂಕ್ಷವಾಗಿ ಗಮನಿಸಿದರೆ ಮಾತ್ರ ತಿಳಿದುಬರುತ್ತದೆ.

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೊಸ ವೀಡಿಯೋ ಬಿಡುಗಡೆಗೊಳಿಸಿದ ಜೀಪ್

ಈ ಹೊಸ ಎಸ್‍ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ. ಇದರ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಅಳವಡಿಸಲಾಗಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೊಸ ವೀಡಿಯೋ ಬಿಡುಗಡೆಗೊಳಿಸಿದ ಜೀಪ್

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ. 2021 ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ.ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೊಸ ವೀಡಿಯೋ ಬಿಡುಗಡೆಗೊಳಿಸಿದ ಜೀಪ್

ಈ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ ಆಧಾರಿತ ಆಪರೇಟಿಂಗ್ ಸಿಸ್ಟಂ ಹೊಂದಿರುವ ಎಫ್‌ಸಿಎಯ ಹೊಸ ಯುಕನೆಕ್ಟ್ 5 ತಂತ್ರಜ್ಞಾನವನ್ನು ಆಧರಿಸಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೊಸ ವೀಡಿಯೋ ಬಿಡುಗಡೆಗೊಳಿಸಿದ ಜೀಪ್

ಆದ್ದರಿಂದ ಇದು ಈಗ ವಾಯ್ಸ್ ಕಮಾಂಡ್ ಅಸಿಸ್ಟ್ ಮತ್ತು ಓವರ್-ದಿ-ಏರ್ (ಒಟಿಎ) ಅಪ್‌ಡೇಟ್‌ ಫೀಚರ್ ಗಳನ್ನು ಒಳಗೊಂಡಿವೆ. ಹಿಲ್ ಅಸಿಸ್ಟ್ (ಎಚ್‌ಎ) ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ (ಎಚ್‌ಡಿಸಿ) ಎಂಬ ಮೋಡ್ ಗಳನ್ನು ಈ ಹೊಸ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಗೆ ನೀಡಲಾಗಿದೆ.

2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ನಲ್ಲಿ ಹೊಸದಾಗಿ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ. ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 163 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೊಸ ವೀಡಿಯೋ ಬಿಡುಗಡೆಗೊಳಿಸಿದ ಜೀಪ್

ಎರಡೂ ಎಂಜಿನ್‌ಗಳು ಸ್ಟ್ಯಾಂಡರ್ಡ್‌ನಂತೆ ಆರು-ಸ್ಪೀಡ್ ಮ್ಯಾನ್ಯುವಲ್‌ನೊಂದಿಗೆ ಬರುತ್ತವೆ. ಕಂಪಾಸ್ ಪೆಟ್ರೋಲ್ ಏಳು-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಆಯ್ಕೆಯನ್ನು ಪಡೆಯುತ್ತದೆ ಮತ್ತು ಡೀಸೆಲ್ ಒಂಬತ್ತು-ಸ್ಪೀಡ್ ಟಾರ್ಕ್ ಕರ್ನವಾಟರ್ ಆಯ್ಕೆಯನ್ನು ಪಡೆಯುತ್ತದೆ.

More from DriveSpark

Article Published On: Monday, March 1, 2021, 19:27 [IST]
English summary
Jeep India Releases New Video For 2021 Compass. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+