Just In
- 10 hrs ago
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 12 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 14 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 24 hrs ago
ಎಕ್ಸ್ಯುವಿ700 ಎಸ್‌ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- Sports
ದಿನೇಶ್ ಕಾರ್ತಿಕ್ ನನಗೆ ಸಂಪೂರ್ಣ ಬೆಂಬಲವನ್ನು ನೀಡುತ್ತಿದ್ದಾರೆ: ಇಯಾನ್ ಮಾರ್ಗನ್
- News
ನಾರ್ವೆ ಪ್ರಧಾನಿಗೆ ವಿಧಿಸಿದ 1.71 ಲಕ್ಷ ರೂ. ದಂಡದ ಹಿಂದಿನ ಕುತೂಹಲಕಾರಿ ಕಾರಣ?
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಮಾಂಡರ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಜೀಪ್ ಹೊಸ 7 ಸೀಟರ್ ಕಾರು?
ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಪ್ರಮುಖ ಬದಲಾವಣೆಗಳನ್ನು ಪರಿಚಯಿಸುತ್ತಿರುವ ಜೀಪ್ ಇಂಡಿಯಾ ಕಂಪನಿಯು ಮುಂದಿನ ಎರಡು ವರ್ಷಗಳಿಗೆ ನಾಲ್ಕು ಹೊಸ ಕಾರುಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸುತ್ತಿದ್ದು, ಹೊಸ 7 ಸೀಟರ್ ಎಸ್‌ಯುವಿ ಆವೃತ್ತಿಯನ್ನು ಮುಂಬರುವ ಕೆಲವೇ ದಿನಗಳಲ್ಲಿ ಅನಾವರಣಗೊಳಿಸುತ್ತಿದೆ.

ಜೀಪ್ ಇಂಡಿಯಾ ಕಂಪನಿಯು ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಕಂಪಾಸ್ ಮತ್ತು ರ‍್ಯಾಂಗ್ಲರ್ ಆಫ್ ರೋಡ್ ಎಸ್‌ಯುವಿ ಆವೃತ್ತಿಯನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳ ಮಾರಾಟ ಆರಂಭಿಸುವ ಸಿದ್ದತೆಯಲ್ಲಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 7 ಸೀಟರ್ ಸೌಲಭ್ಯದ ಫುಲ್ ಸೈಜ್ ಎಸ್‌ಯುವಿ ಮತ್ತು ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಸಹ ಬಿಡುಗಡೆ ಮಾಡುತ್ತಿದೆ.

2020ರಲ್ಲೇ ಬಿಡುಗಡೆಯಾಗಬೇಕಿದ್ದ ಎರಡು ಹೊಸ ಕಾರು ಮಾದರಿಗಳನ್ನು ಕೋವಿಡ್‌ನಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಬಿಡುಗಡೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದ ಜೀಪ್ ಕಂಪನಿಯು ಇದೀಗ ಹೊಸ ಕಾರುಗಳ ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ತೀವ್ರಗೊಳಿಸುವುದರ ಜೊತೆಗೆ ಹೊಸ ಕಾರಿನ ಟೀಸರ್ ಚಿತ್ರ ಹಂಚಿಕೊಂಡಿದೆ.

ಟೀಸರ್ ಚಿತ್ರದಲ್ಲಿ ನೇಮ್ ಪ್ಲೇಟ್‌ನಲ್ಲಿ ಹೊಸ 7 ಸೀಟರ್ ಎಸ್‌ಯುವಿ ಕಾರು ಕಮಾಂಡರ್ ಹೆಸರಿನೊಂದಿಗೆ ಬಿಡುಗಡೆಯಾಗುವುದು ಖಚಿತವಾಗಿದ್ದು, ಹೊಸ ಕಾರು ಫುಲ್ ಸೈಜ್ ಮಾದರಿಗಳಲ್ಲಿ ಉತ್ತಮ ಪೈಪೋಟಿ ನೀಡಲಿದೆ.

ಜೀಪ್ ಇಂಡಿಯಾ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನಾಲ್ಕು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹೊಸ 7 ಸೀಟರ್ ಮಾದರಿಯನ್ನು ಈ ತಿಂಗಳಾಂತ್ಯಕ್ಕೆ ಇಲ್ಲವೇ ಮೇ ಮಧ್ಯಂತರ ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳಿಸುವ ಸಾಧ್ಯತೆಗಳಿವೆ. ಹೊಸ ಎಸ್‌ಯುವಿ ಕಾರನ್ನು ಜೀಪ್ ಕಂಪನಿಯು ಈಗಾಗಲೇ ವಿದೇಶಿ ಮಾರುಕಟ್ಟೆಯಲ್ಲಿ ಗ್ರ್ಯಾಂಡ್ ಕಂಪಾಸ್ ಅಥವಾ ಗ್ರಾಂಡ್ ಕಮಾಂಡರ್ ಹೆಸರಿನಲ್ಲಿ ಮಾರಾಟಗೊಳ್ಳುತ್ತಿದ್ದು, ಹೊಸ ಎಸ್‌ಯುವಿ ಕಾರು ಭಾರತದಲ್ಲೂ ಕಮಾಂಡರ್ ಹೆಸರಿನೊಂದಿಗೆ ಬಿಡುಗಡೆಗೊಳಿಸುವ ಸುಳಿವು ಸಿಕ್ಕಿದೆ.

ಸದ್ಯಕ್ಕೆ ಜೀಪ್ ಕಂಪನಿಯು ಹೆಚ್6 ಎನ್ನುವ ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಎರಡು ಮಾದರಿಯಲ್ಲೂ ಕಾರುಗಳನ್ನು ಹೊರತರುತ್ತಿರುವ ಜೀಪ್ ಇಂಡಿಯಾ ಕಂಪನಿಯು 5 ಸೀಟರ್ ಕಂಪ್ಯಾಕ್ಟ್ ಎಸ್‌ಯುವಿ ಜೊತೆ 7 ಸೀಟರ್ ಎಸ್‌ಯುವಿ ಬಿಡುಗಡೆಗೊಳಿಸುತ್ತಿದೆ.

ಜೀಪ್ ಹೊಸ 7 ಸೀಟರ್ ಎಸ್‌ಯುವಿ ಕಾರುನ್ನು ಜೀಪ್ ಕಂಪನಿಯು ಡೀಸೆಲ್ ಎಂಜಿನ್‌ನಲ್ಲಿ ಮಾತ್ರವೇ ಬಿಡುಗಡೆ ಮಾಡಲಿದೆ ಎನ್ನಲಾಗಿದ್ದು, 2.0-ಲೀಟರ್ ಸಾಮರ್ಥ್ಯದ ನಾಲ್ಕು ಸಿಲಿಂಡರ್ ಪ್ರೇರಣೆಯ ಮಲ್ಟಿಜೆಟ್ ಟರ್ಬೊ-ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹೊಸ ಮಲ್ಟಿ ಜೆಟ್ ಟರ್ಬೊ ಡೀಸೆಲ್ ಮಾದರಿಯು ಗರಿಷ್ಠ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಮದಿಗೆ 200-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಆಫ್ ರೋಡ್ ಕೌಶಲ್ಯದಲ್ಲೂ ಗಮನಸೆಳೆಯಲಿರುವ ಹೊಸ ಕಾರಿನಲ್ಲಿ 4x4 ಡ್ರೈವ್ ಸಿಸ್ಟಂ ಜೋಡಣೆ ಮಾಡಲಾಗುತ್ತಿದೆ.

ಆ ಮೂಲಕ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಂಜಿ ಗ್ಲೊಸ್ಟರ್, ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರು ಮಾದರಿಗಳಿಗೆ ಹೊಸ ಕಾರು ಪ್ರಬಲ ಪೈಪೋಟಿ ನೀಡಲಿದ್ದು, ಹೊಸ ಕಾರಿನ ಬೆಲೆ ಕೂಡಾ ಪ್ರತಿಸ್ಪರ್ಧಿ ಕಾರುಗಳಿಂತಲೂ ಉತ್ತಮವಾಗಿರಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಫುಲ್ ಸೈಜ್ ಎಸ್‌ಯುವಿ ಆವೃತ್ತಿಯಾಗಿರುವ ಜೀಪ್ ಹೊಸ ಎಸ್‌ಯುವಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.27 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.32 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು, ಹೊಸ ಕಾರು ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಕ್ಯಾಬಿನ್ ಸ್ಥಳಾವಕಾಶದೊಂದಿಗೆ 3 ಸಾಲಿನ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣ ಒದಗಿಸಲಿದೆ.