4x4 ಡ್ರೈವ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಜೀಪ್ ಹೊಸ 7 ಸೀಟರ್ ಎಸ್‌ಯುವಿ

ಜೀಪ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮುಂದಿನ ಎರಡು ವರ್ಷಗಳಿಗೆ ನಾಲ್ಕು ಹೊಸ ಕಾರುಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸುತ್ತಿದ್ದು, ಕಳೆದ ತಿಂಗಳು ಕಂಪಾಸ್ ಫೇಸ್‌ಲಿಫ್ಟ್ ಬಿಡುಗಡೆಗೊಳಿಸುವ ಮೂಲಕ ಹೊಸ ಕಾರುಗಳ ಬಿಡುಗಡೆಯತ್ತ ಸಿದ್ದತೆ ನಡೆಸುತ್ತಿದೆ.

4x4 ಡ್ರೈವ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಜೀಪ್ ಹೊಸ 7 ಸೀಟರ್ ಎಸ್‌ಯುವಿ

ಜೀಪ್ ಇಂಡಿಯಾ ಕಂಪನಿಯು ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಕಂಪಾಸ್ ಮತ್ತು ರ‍್ಯಾಂಗ್ಲರ್ ಆಫ್ ರೋಡ್ ಎಸ್‌ಯುವಿ ಆವೃತ್ತಿಯನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳ ಮಾರಾಟ ಆರಂಭಿಸುವ ಸಿದ್ದತೆಯಲ್ಲಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 7 ಸೀಟರ್ ಸೌಲಭ್ಯದ ಫುಲ್ ಸೈಜ್ ಎಸ್‌ಯುವಿ ಮತ್ತು ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಸಹ ಬಿಡುಗಡೆ ಮಾಡುತ್ತಿದೆ.

4x4 ಡ್ರೈವ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಜೀಪ್ ಹೊಸ 7 ಸೀಟರ್ ಎಸ್‌ಯುವಿ

2020ರಲ್ಲೇ ಬಿಡುಗಡೆಯಾಗಬೇಕಿದ್ದ ಎರಡು ಹೊಸ ಕಾರು ಮಾದರಿಗಳನ್ನು ಕೋವಿಡ್‌ನಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಬಿಡುಗಡೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದ ಜೀಪ್ ಕಂಪನಿಯು ಇದೀಗ ಹೊಸ ಕಾರುಗಳ ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ತೀವ್ರಗೊಳಿಸಿದೆ.

4x4 ಡ್ರೈವ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಜೀಪ್ ಹೊಸ 7 ಸೀಟರ್ ಎಸ್‌ಯುವಿ

ಹೊಸ ಕಾರುಗಳ ಬಿಡುಗಡೆ ಕುರಿತಂತೆ ಈಗಾಗಲೇ ಖಚಿತಪಡಿಸಿರುವ ಜೀಪ್ ಇಂಡಿಯಾ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನಾಲ್ಕು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಈಗಾಗಲೇ ಹೊಸ ಕಾರುಗಳ ತಾಂತ್ರಿಕ ಅಂಶಗಳ ಕುರಿತು ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದೆ.

4x4 ಡ್ರೈವ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಜೀಪ್ ಹೊಸ 7 ಸೀಟರ್ ಎಸ್‌ಯುವಿ

ಆಟೋ ಕಂಪನಿಗಳ ಪ್ರಕಾರ ರೂ.10 ಲಕ್ಷದಿಂದ ರೂ.15 ಲಕ್ಷ ಬೆಲೆಯೊಳಗಿನ ಕಾರುಗಳು ಸಾಕಷ್ಟು ಲಾಭದಾಯಕವಾಗಲಿದ್ದರೆ, ಪ್ರೀಮಿಯಂ ಕಾರುಗಳು ಬ್ರಾಂಡ್ ಮೌಲ್ಯವನ್ನು ಹೆಚ್ಚಿಸುತ್ತವೆ ಎನ್ನುವ ಲೆಕ್ಕಾಚಾರವಿದೆ. ಹೀಗಾಗಿ ಎರಡು ಮಾದರಿಯಲ್ಲೂ ಕಾರುಗಳನ್ನು ಹೊರತರುತ್ತಿರುವ ಜೀಪ್ ಇಂಡಿಯಾ ಕಂಪನಿಯು 5 ಸೀಟರ್ ಕಂಪ್ಯಾಕ್ಟ್ ಎಸ್‌ಯುವಿ ಜೊತೆ 7 ಸೀಟರ್ ಎಸ್‌ಯುವಿ ಮಾದರಿಯನ್ನು ಮುಂದಿನ ಕೆಲವೇ ತಿಂಗಳಿನಲ್ಲಿ ರಸ್ತೆಗಿಳಿಸಲಿದೆ.

4x4 ಡ್ರೈವ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಜೀಪ್ ಹೊಸ 7 ಸೀಟರ್ ಎಸ್‌ಯುವಿ

ಹೊಸ ಕಾರು ವಿದೇಶಿ ಮಾರುಕಟ್ಟೆಯಲ್ಲಿರುವ ಗ್ರ್ಯಾಂಡ್ ಕಂಪಾಸ್ ಅಥವಾ ಗ್ರಾಂಡ್ ಕಮಾಂಡರ್ ಮಾದರಿಯಲ್ಲೇ ಬಿಡುಗಡೆಯಾಗುತ್ತಿದ್ದರೂ ಹೊಸ ಎಸ್‌ಯುವಿ ಕಾರು ಭಾರತದಲ್ಲಿ ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗುವ ಮಾಹಿತಿಗಳಿದ್ದು, ಹೊಸ ಕಾರನ್ನು ಸದ್ಯ ಜೀಪ್ ಕಂಪನಿಯು ಹೆಚ್6 ಎನ್ನುವ ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ.

4x4 ಡ್ರೈವ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಜೀಪ್ ಹೊಸ 7 ಸೀಟರ್ ಎಸ್‌ಯುವಿ

ಜೀಪ್ ಹೊಸ 7 ಸೀಟರ್ ಎಸ್‌ಯುವಿ ಕಾರುನ್ನು ಜೀಪ್ ಕಂಪನಿಯು ಡೀಸೆಲ್ ಎಂಜಿನ್‌ನಲ್ಲಿ ಮಾತ್ರವೇ ಬಿಡುಗಡೆ ಮಾಡಲಿದೆ ಎನ್ನಲಾಗಿದ್ದು, 2.0-ಲೀಟರ್ ಸಾಮರ್ಥ್ಯದ ನಾಲ್ಕು ಸಿಲಿಂಡರ್ ಪ್ರೇರಣೆಯ ಮಲ್ಟಿಜೆಟ್ ಟರ್ಬೊ-ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

4x4 ಡ್ರೈವ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಜೀಪ್ ಹೊಸ 7 ಸೀಟರ್ ಎಸ್‌ಯುವಿ

ಹೊಸ ಮಲ್ಟಿ ಜೆಟ್ ಟರ್ಬೊ ಡೀಸೆಲ್ ಮಾದರಿಯು ಗರಿಷ್ಠ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆಯೊಮದಿಗೆ 200-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಆಫ್ ರೋಡ್ ಕೌಶಲ್ಯದಲ್ಲೂ ಗಮನಸೆಳೆಯಲಿರುವ ಹೊಸ ಕಾರಿನಲ್ಲಿ 4x4 ಡ್ರೈವ್ ಸಿಸ್ಟಂ ಜೋಡಣೆ ಮಾಡಲಾಗುತ್ತಿದೆ.

4x4 ಡ್ರೈವ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಜೀಪ್ ಹೊಸ 7 ಸೀಟರ್ ಎಸ್‌ಯುವಿ

ಆ ಮೂಲಕ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಂಜಿ ಗ್ಲೊಸ್ಟರ್, ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರು ಮಾದರಿಗಳಿಗೆ ಹೊಸ ಕಾರು ಪ್ರಬಲ ಪೈಪೋಟಿ ನೀಡಲಿದ್ದು, ಹೊಸ ಕಾರಿನ ಬೆಲೆ ಕೂಡಾ ಪ್ರತಿಸ್ಪರ್ಧಿ ಕಾರುಗಳಿಂತಲೂ ಉತ್ತಮವಾಗಿರಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

4x4 ಡ್ರೈವ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಜೀಪ್ ಹೊಸ 7 ಸೀಟರ್ ಎಸ್‌ಯುವಿ

ಫುಲ್ ಸೈಜ್ ಎಸ್‌ಯುವಿ ಆವೃತ್ತಿಯಾಗಿರುವ ಜೀಪ್ ಹೊಸ ಎಸ್‌‌ಯುವಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.27 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.32 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು, ಹೊಸ ಕಾರು ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಕ್ಯಾಬಿನ್ ಸ್ಥಳಾವಕಾಶದೊಂದಿಗೆ 3 ಸಾಲಿನ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣ ಒದಗಿಸಲಿದೆ.

More from DriveSpark

Article Published On: Wednesday, March 3, 2021, 11:20 [IST]
English summary
Jeep 7 Seater SUV Will Offer 4x4 System And Off-Road Capabilities. Read in Kannada.
Read more on ಜೀಪ್ jeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+