ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಭಾರತದ ಪ್ರಮುಖ ಕಂಪನಿಗಳಲ್ಲಿ ಒಂದಾದ ಜೆಎಸ್‌ಡಬ್ಲ್ಯು (JSW) ಗ್ರೂಪ್ ತನ್ನ ಉದ್ಯೋಗಿಗಳಿಗೆ ಹೊಸ ವರ್ಷದ ಕೊಡುಗೆಗಳನ್ನು ಘೋಷಿಸಿದೆ. ಜೆಎಸ್‌ಡಬ್ಲ್ಯು ಗ್ರೂಪ್ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ತನ್ನ ಉದ್ಯೋಗಿಗಳಿಗೆ ರೂ. 3 ಲಕ್ಷ ನೀಡಲಿದೆ. ಈ ಯೋಜನೆಯು ಜನವರಿ 1 ರಂದು ಆರಂಭವಾಗುತ್ತದೆ. ಭಾರತದ ಪ್ರಮುಖ ಕಾರ್ಪೊರೇಟ್ ಸಂಸ್ಥೆಯೊಂದು ಇಂತಹ ಯೋಜನೆಯನ್ನು ಆರಂಭಿಸುತ್ತಿರುವುದು ಇದೇ ಮೊದಲು ಎಂದು ಹೇಳಲಾಗಿದೆ.

ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಈ ಯೋಜನೆಯು ಭಾರತದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಜೆಎಸ್‌ಡಬ್ಲ್ಯು ಗ್ರೂಪ್‌ನ ಎಲ್ಲಾ ಉದ್ಯೋಗಿಗಳಿಗೆ ಅನ್ವಯಿಸುತ್ತದೆ. ಕಂಪನಿಯ ಈ ನಿರ್ಧಾರದಿಂದಾಗಿ ಜೆಎಸ್‌ಡಬ್ಲ್ಯು ಗ್ರೂಪ್‌ನ ಸಿಬ್ಬಂದಿ ಸಂತಸಗೊಂಡಿದ್ದಾರೆ. ಭಾರತದಲ್ಲಿ ವಾಯು ಮಾಲಿನ್ಯದ ಸಮಸ್ಯೆಯನ್ನು ಕಡಿಮೆ ಮಾಡಲು, ಪೆಟ್ರೋಲ್, ಡೀಸೆಲ್ ವಾಹನಗಳ ಬದಲಿಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲಾಗುತ್ತಿದೆ.

ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಇದರ ಭಾಗವಾಗಿ ಕೇಂದ್ರ ಸರ್ಕಾರ ಹಾಗೂ ವಿವಿಧ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿಗಳನ್ನು ನೀಡುತ್ತಿವೆ. ಸರ್ಕಾರಗಳು ತಮ್ಮ ಎಲೆಕ್ಟ್ರಿಕ್ ವಾಹನ ನೀತಿಗಳ ಅಡಿಯಲ್ಲಿ ಈ ಕೊಡುಗೆಗಳನ್ನು ನೀಡುತ್ತಿವೆ. ಇದೇ ರೀತಿಯಲ್ಲಿ ಜೆಎಸ್‌ಡಬ್ಲ್ಯು ಗ್ರೂಪ್ ತನ್ನ ಜೆಎಸ್‌ಡಬ್ಲ್ಯು ಎಲೆಕ್ಟ್ರಿಕ್ ವೆಹಿಕಲ್ ಪಾಲಿಸಿಯ ಅಡಿಯಲ್ಲಿ ಈ ಹೊಸ ಯೋಜನೆಯನ್ನು ಆರಂಭಿಸಿದೆ.

ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್, ಡೀಸೆಲ್ ವಾಹನಗಳ ಬೆಲೆಗಿಂತ ಹೆಚ್ಚು ದುಬಾರಿ. ಈ ಕಾರಣಕ್ಕಾಗಿಯೇ ಬಹುತೇಕ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂಜರಿಯುತ್ತಾರೆ. ಈ ಸನ್ನಿವೇಶದಲ್ಲಿ ಜೆಎಸ್‌ಡಬ್ಲ್ಯು ಗ್ರೂಪ್‌ನ ಈ ಯೋಜನೆಯು ದೂರದೃಷ್ಟಿ ಕ್ರಮವಾಗಿ ಕಂಡುಬರುತ್ತದೆ. ಕಂಪನಿಯು ರೂ. 3 ಲಕ್ಷ ನೀಡುವುದರಿಂದ ಆ ಕಂಪನಿಯ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವುದು ಸುಲಭವಾಗಲಿದೆ.

ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಇದು ಭಾರತದ ಪರಿಸರ ಹಾಗೂ ಆರ್ಥಿಕತೆಗೂ ಲಾಭದಾಯಕವಾಗಿದೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾದಂತೆ ಕಚ್ಚಾ ತೈಲ ಆಮದಿನ ಮೇಲೆ ವ್ಯಯಿಸುವ ಮೊತ್ತ ಕಡಿಮೆಯಾಗಿ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಎಂಬುದು ಗಮನಾರ್ಹ. ಇದರ ಜೊತೆಗೆ ಜೆಎಸ್‌ಡಬ್ಲ್ಯು ಗ್ರೂಪ್ ತನ್ನ ಎಲ್ಲಾ ಕಚೇರಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲಿದೆ.

ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಜೆಎಸ್‌ಡಬ್ಲ್ಯು ಗ್ರೂಪ್ ತನ್ನ ಎಲೆಕ್ಟ್ರಿಕ್ ವಾಹನ ನೀತಿಯ ಉದ್ದೇಶವು ಉದ್ಯೋಗಿಗಳನ್ನು ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಯಿಸುವುದಾಗಿದೆ ಎಂದು ಹೇಳಿದೆ. ಮುಂಬರುವ ದಿನಗಳಲ್ಲಿ ಭಾರತದಲ್ಲಿರುವ ಇತರ ಕಂಪನಿಗಳು ಸಹ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಜೆಎಸ್‌ಡಬ್ಲ್ಯು ಗ್ರೂಪ್‌ನ ಈ ಕ್ರಮವು ಒಂದು ಪೂರ್ವನಿದರ್ಶನವಾಗಿ ಕಂಡು ಬರುತ್ತದೆ.

ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನಗಳು ಪರಿಸರ ಸ್ನೇಹಿಯಾಗಿರುತ್ತವೆ. ಜೊತೆಗೆ ಆರ್ಥಿಕವಾಗಿರುತ್ತವೆ ಎಂಬುದು ಗಮನಾರ್ಹ. ಎಲೆಕ್ಟ್ರಿಕ್ ವಾಹನಗಳ ನಿರ್ವಹಣೆಗೆ ಹೆಚ್ಚು ಖರ್ಚು ಮಾಡುವ ಅಗತ್ಯವಿಲ್ಲ. ಜೆಎಸ್‌ಡಬ್ಲ್ಯು ಗ್ರೂಪ್‌ನ ಈ ಕ್ರಮವು ಅದರ ಸಿಬ್ಬಂದಿಯಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ. ಜೆಎಸ್‌ಡಬ್ಲ್ಯು ಗ್ರೂಪ್‌ನ ನಿರ್ಧಾರವು ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಸರ್ಕಾರದ ಕ್ರಮಕ್ಕೆ ಪೂರಕವಾಗಿದೆ.

ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಎಥೆನಾಲ್, ಸಿಎನ್‌ಜಿಯಂತಹ ಪರ್ಯಾಯ ಇಂಧನಗಳಲ್ಲಿ ಚಲಿಸುವ ವಾಹನಗಳ ಬಳಕೆಗೂ ಉತ್ತೇಜನ ನೀಡಲಾಗುತ್ತಿದೆ. ಫ್ಲಕ್ಸ್ ಫ್ಯುಯೆಲ್ ಎಂಜಿನ್ ಹೊಂದಿದ ವಾಹನಗಳನ್ನು ಆದಷ್ಟು ಬೇಗ ಭಾರತದಲ್ಲಿ ಪರಿಚಯಿಸಲಾಗುವುದು ಎಂದು ಇತ್ತೀಚಿಗಷ್ಟೇ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರು ಕುರಿತು ಮಾಹಿತಿ ನೀಡಿದ್ದರು.

ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಇತ್ತೀಚೆಗಷ್ಟೇ ನಿತಿನ್ ಗಡ್ಕರಿರವರು ಹೈಡ್ರೋಜನ್ ಕಾರನ್ನು ಖರೀದಿಸಿದ್ದಾರೆ. ಪರ್ಯಾಯ ಇಂಧನಗಳತ್ತ ಜನರನ್ನು ಉತ್ತೇಜಿಸಲು ಸಚಿವ ನಿತಿನ್ ಗಡ್ಕರಿ ಈ ಕ್ರಮ ಕೈಗೊಂಡಿದ್ದಾರೆ. ಅವರು ಬಹಳ ಹಿಂದಿನಿಂದಲೂ ಪರ್ಯಾಯ ಇಂಧನಗಳಿಗೆ ಬದಲಾಗುವ ಅಗತ್ಯವನ್ನು ಒತ್ತಿ ಹೇಳುತ್ತಿದ್ದಾರೆ.

ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಪೆಟ್ರೋಲ್, ಡೀಸೆಲ್ ವಾಹನಗಳು ಚಲಿಸುವಾಗ ಶಬ್ದವನ್ನುಂಟು ಮಾಡುತ್ತವೆ. ಆದರೆ ಎಲೆಕ್ಟ್ರಿಕ್ ವಾಹನಗಳು ಚಲಿಸುವಾಗ ಯಾವುದೇ ರೀತಿಯ ಶಬ್ದ ಉಂಟಾಗುವುದಿಲ್ಲ. ಎಲೆಕ್ಟ್ರಿಕ್ ವಾಹನಗಳು ಶಬ್ದ ಮಾಡದಿರುವುದು ಸಮಸ್ಯೆಗಳಿಗೆ ಕಾರಣವಾಗಬಹುದು. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಿಗೆ ಸಂಬಂಧಿಸಿದ ಈ ಸಮಸ್ಯೆಯನ್ನು ಪರಿಹರಿಸಲು ಮುಂದಾಗಿದೆ.

ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಎಲೆಕ್ಟ್ರಿಕ್ ವಾಹನಗಳು ಚಲಿಸುವಾಗ ಶಬ್ದ ಉಂಟಾಗದೇ ಇರುವುದರಿಂದ ರಸ್ತೆಯಲ್ಲಿ ನಡೆಯುವ ಪಾದಚಾರಿಗಳಿಗೆ ವಾಹನಗಳ ಆಗಮನದ ಬಗ್ಗೆ ತಿಳಿಯುವುದಿಲ್ಲ. ಇದರಿಂದ ಅಪಘಾತಗಳಾಗುವ ಸಾಧ್ಯತೆಗಳಿರುತ್ತವೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ. ವರದಿಗಳ ಪ್ರಕಾರ ರಸ್ತೆಯಲ್ಲಿರುವವರನ್ನು ಸುರಕ್ಷಿತವಾಗಿಸಲು ಎಲೆಕ್ಟ್ರಿಕ್ ವಾಹನಗಳಲ್ಲಿ ಕೃತಕ ಶಬ್ದವನ್ನು ಅಳವಡಿಸುವ ಬಗ್ಗೆ ಕೇಂದ್ರ ಸರ್ಕಾರವು ಚಿಂತನೆ ನಡೆಸುತ್ತಿದೆ.

ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಈ ಮೂಲಕ ರಸ್ತೆಯಲ್ಲಿ ಸಾಗುವ ಪಾದಚಾರಿಗಳಿಗೆ ಎಲೆಕ್ಟ್ರಿಕ್ ವಾಹನದ ಸದ್ದು ಕೇಳಿಸುವಂತೆ ಹಾಗೂ ರಸ್ತೆಯಲ್ಲಿ ನಡೆಯುವಾಗ ಜಾಗೃತರಾಗಿರುವಂತೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಸಾಧ್ಯತೆಗಳನ್ನು ಅನ್ವೇಷಿಸುವಂತೆ ಭಾರೀ ಕೈಗಾರಿಕೆಗಳ ಇಲಾಖೆಯು ಸಂಬಂಧ ಪಟ್ಟ ಇಲಾಖೆಗಳಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಕ್ರಮವನ್ನು ಅನುಮೋದಿಸಿದರೆ, ಶಬ್ದ ಮಾಲಿನ್ಯದ ಮಿತಿಗಳನ್ನು ಗಣನೆಗೆ ತೆಗೆದುಕೊಂಡು ಎಲೆಕ್ಟ್ರಿಕ್ ವಾಹನಗಳಲ್ಲಿ ಕೃತಕ ಶಬ್ದಗಳನ್ನು ಅಳವಡಿಸಲಾಗುತ್ತದೆ.

ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಸಲು ರೂ. 3 ಲಕ್ಷ ನೀಡಲಿದೆ JSW ಗ್ರೂಪ್

ಅನುಮೋದನೆಗೊಂಡ ನಂತರ ರಸ್ತೆಗಳಲ್ಲಿ ಸಂಚರಿಸುವ ಎಲೆಕ್ಟ್ರಿಕ್ ವಾಹನಗಳಲ್ಲಿ ಈ ವಿಧಾನವನ್ನು ಅಳವಡಿಸಿಕೊಳ್ಳಲಾಗುವುದು. ಹೊಸ ನಿಯಮಗಳಿಂದಾಗಿ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ಶಬ್ದ ಉತ್ಪಾದಿಸುವ ಯಂತ್ರಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸುವ ಸಾಧ್ಯತೆಗಳಿವೆ. ಧ್ವನಿಯನ್ನು ಉತ್ಪಾದಿಸುವ ಯಂತ್ರಗಳನ್ನು ಅಕೌಸ್ಟಿಕ್ ವಾಹನ ಎಚ್ಚರಿಕೆ ವ್ಯವಸ್ಥೆಗಳು (AVAS) ಎಂದು ಕರೆಯುವ ಸಾಧ್ಯತೆಗಳಿವೆ.

Most Read Articles

Kannada
English summary
Jsw group to give rs 3 lakh incentive to its employees to buy electric vehicles details
Story first published: Tuesday, December 28, 2021, 17:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X