Just In
- 7 min ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 1 hr ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 2 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
- 3 hrs ago
ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ
Don't Miss!
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- News
ಹೆಲಿ ಟೂರಿಸಂ; 'ಸೇವ್ ಮೈಸೂರು' ಅಭಿಯಾನಕ್ಕೆ ಭಾರೀ ಬೆಂಬಲ
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Sports
ಚೇತನ್ ಸಕಾರಿಯಾ ಕುಟುಂಬದ ದುರಂತ ಕತೆ ಬಿಚ್ಚಿಟ್ಟ ಸೆಹ್ವಾಗ್
- Lifestyle
ಮಂಗಳವಾರದ ದಿನ ಭವಿಷ್ಯ: ಯುಗಾದಿಯಂದು ಹೇಗಿದೆ ನಿಮ್ಮ ರಾಶಿಫಲ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ಬಸ್ಸುಗಳಿಗೆ ಚಾಲನೆ ನೀಡಲಿದೆ ಕದಂಬ ಸಾರಿಗೆ ನಿಗಮ
ಈಗ ಎಲ್ಲಾ ಕಡೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಸರ್ಕಾರಗಳು ಸಹ ಎಲೆಕ್ಟ್ರಿಕ್ ಬಸ್ಸುಗಳಿಗೆ ಆದ್ಯತೆ ನೀಡುತ್ತಿವೆ. ಈಗ ಕೆಲವು ಎಲೆಕ್ಟ್ರಿಕ್ ಬಸ್ಸುಗಳನ್ನು ಗೋವಾಕ್ಕೆ ತಲುಪಿಸಲಾಗಿದೆ.

ಗೋವಾದ ಕದಂಬ ಸಾರಿಗೆ ನಿಗಮವು ಈ ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇವೆಯನ್ನು ಕೆಲವೇ ದಿನಗಳಲ್ಲಿ ಆರಂಭಿಸಲಿದೆ. ಈ ಬಗ್ಗೆ ಮಾತನಾಡಿರುವ ಕದಂಬ ಸಾರಿಗೆ ನಿಗಮದ ಅಧಿಕಾರಿಗಳು, ನಾವು ಈಗಾಗಲೇ ಈ ಹೊಸ ಎಲೆಕ್ಟ್ರಿಕ್ ಬಸ್‌ಗಳ ಪರೀಕ್ಷೆಯನ್ನು ನಡೆಸಿದ್ದೇವೆ. ಅವು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಈಗ ಈ ಎಲೆಕ್ಟ್ರಿಕ್ ಬಸ್ಸುಗಳನ್ನು ವರ್ನಾ ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಲಾಗಿದೆ ಎಂದು ಹೇಳಿದರು.

ಈ ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇವೆಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾರ್ಚ್ 23ರಂದು ಬೆಳಿಗ್ಗೆ 10.30ಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಮಾಯಿ ಗೊಡಿನ್ಹೋ ಹಾಗೂ ಕದಂಬ ಸಾರಿಗೆ ನಿಗಮದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಈ ಬಸ್‌ಗಳು ಕಾರ್ಯಾಚರಣೆಗೆ ಸಿದ್ಧವಾಗಿವೆ. ಏಪ್ರಿಲ್ 1ರಿಂದ ಗೋವಾದಲ್ಲಿ ಎಲೆಕ್ಟ್ರಿಕ್ ಬಸ್ಸುಗಳು ಕಾರ್ಯನಿರ್ವಹಿಸಲಿವೆ. ಗೋವಾದಾದ್ಯಂತ ಎಲೆಕ್ಟ್ರಿಕ್ ಬಸ್ಸುಗಳನ್ನು ರೀಚಾರ್ಜ್ ಮಾಡಲು ಚಾರ್ಜಿಂಗ್ ಸ್ಟೇಷನ್'ಗಳನ್ನು ಇನ್ನೂ ಸ್ಥಾಪಿಸಲಾಗಿಲ್ಲ.

ಸದ್ಯಕ್ಕೆ ಮಾರ್ಕೊದ ಕದಂಬ ಸಾರಿಗೆ ನಿಗಮದ ಡಿಪೋದಲ್ಲಿ ಒಂದೇ ಒಂದು ಚಾರ್ಜಿಂಗ್ ಕೇಂದ್ರವಿದೆ. ಬಸ್ಸುಗಳ ಬ್ಯಾಟರಿಗಳನ್ನು ರಿಚಾರ್ಜ್ ಮಾಡಲು ಹಾಗೂ ನಿರ್ವಹಿಸಲು ಇದು ಪ್ರಮುಖ ಕೇಂದ್ರವಾಗಿದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಇದೇ ವೇಳೆ ಗೋವಾದ ಇತರ ಭಾಗಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ಕದಂಬ ಸಾರಿಗೆ ನಿಗಮವು ಒಟ್ಟು 50 ಹೊಸ ಎಲೆಕ್ಟ್ರಿಕ್ ಬಸ್ಸುಗಳನ್ನು ಖರೀದಿಸಲಿದೆ. ಈಗ 30 ಎಲೆಕ್ಟ್ರಿಕ್ ಬಸ್‌ಗಳನ್ನು ತಲುಪಿಸಲಾಗುತ್ತಿದೆ.

ಗೋವಾದ ವಾಯುಮಾಲಿನ್ಯ ಸಮಸ್ಯೆಯನ್ನು ಪರಿಹರಿಸಲು ಈ ಎಲೆಕ್ಟ್ರಿಕ್ ಬಸ್ಸುಗಳು ಪ್ರಮುಖ ಪಾತ್ರ ವಹಿಸಲಿವೆ. ಗೋವಾ ಮಾತ್ರವಲ್ಲದೇ ಭಾರತದ ಇತರ ರಾಜ್ಯಗಳು ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿವೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಅದರಲ್ಲೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯಲ್ಲಿ ಇತರ ಎಲ್ಲ ರಾಜ್ಯಗಳಿಗಿಂತ ಒಂದು ಹೆಜ್ಜೆ ಮುಂದಿದೆ. ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ದೆಹಲಿ ಸರ್ಕಾರದ ಎಲೆಕ್ಟ್ರಿಕ್ ವಾಹನ ನೀತಿಯಡಿ ಸಬ್ಸಿಡಿ ನೀಡಲಾಗುತ್ತದೆ.

ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲು ದೆಹಲಿ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಪೆಟ್ರೋಲ್, ಡೀಸೆಲ್ ವಾಹನಗಳು ದೆಹಲಿಯ ವಾಯುಮಾಲಿನ್ಯ ಸಮಸ್ಯೆಗೆ ಪ್ರಮುಖ ಕಾರಣವಾಗಿವೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಈ ಕಾರಣಕ್ಕಾಗಿಯೇ ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಉತ್ತೇಜನ ನೀಡಲಾಗುತ್ತಿದೆ. ದೆಹಲಿ ಮಾತ್ರವಲ್ಲದೆ ಕರ್ನಾಟಕ, ಕೇರಳ, ತೆಲಂಗಾಣ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಗುಜರಾತ್ ರಾಜ್ಯಗಳಲ್ಲಿಯೂ ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲಾಗುತ್ತಿದೆ.

ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಉತ್ಸುಕವಾಗಿದೆ.
ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.