ಎಲೆಕ್ಟ್ರಿಕ್ ವಾಹನ ಬಳಸುವಂತೆ ಸುತ್ತೋಲೆ ಹೊರಡಿಸಿದ ಕೇಜ್ರಿವಾಲ್ ಸರ್ಕಾರ

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಗುರುವಾರ ಅಧಿಕೃತ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಈ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಎಲೆಕ್ಟ್ರಿಕ್ ವಾಹನ ಬಳಸುವಂತೆ ಸುತ್ತೋಲೆ ಹೊರಡಿಸಿದ ಕೇಜ್ರಿವಾಲ್ ಸರ್ಕಾರ

ಈ ಸುತ್ತೋಲೆಯಲ್ಲಿ ಸರ್ಕಾರದ ಎಲ್ಲಾ ಪೆಟ್ರೋಲ್, ಡೀಸೆಲ್ ವಾಹನಗಳನ್ನು ಮುಂದಿನ 6 ತಿಂಗಳಲ್ಲಿ ಎಲೆಕ್ಟ್ರಿಕ್ ವಾಹನಗಳಾಗಿ ಬದಲಿಸಲಾಗುವುದು ಎಂದು ತಿಳಿಸಲಾಗಿದೆ. ದೆಹಲಿಯನ್ನು ಎಲೆಕ್ಟ್ರಿಕ್ ವಾಹನಗಳ ಕೇಂದ್ರವನ್ನಾಗಿ ಮಾಡಲು ಸರ್ಕಾರವು ನಿರ್ಧರಿಸಿದೆ ಎಂದು ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

ಎಲೆಕ್ಟ್ರಿಕ್ ವಾಹನ ಬಳಸುವಂತೆ ಸುತ್ತೋಲೆ ಹೊರಡಿಸಿದ ಕೇಜ್ರಿವಾಲ್ ಸರ್ಕಾರ

ಇಂತಹ ನಿರ್ಧಾರ ತೆಗೆದುಕೊಂಡ ವಿಶ್ವದ ಮೊದಲ ನಗರ ದೆಹಲಿ ಎಂದು ಅವರು ಹೇಳಿದ್ದಾರೆ. ದೆಹಲಿ ಸರ್ಕಾರವು ಅಧಿಕೃತವಾಗಿ 2 ಸಾವಿರ ಕಾರುಗಳನ್ನು ಬಳಸುತ್ತದೆ. ಈ ಕ್ರಮ ಇತರ ರಾಜ್ಯಗಳಿಗೂ ಪ್ರೇರಣೆ ನೀಡಲಿದೆ ಎಂದು ಸರ್ಕಾರವು ತಿಳಿಸಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಎಲೆಕ್ಟ್ರಿಕ್ ವಾಹನ ಬಳಸುವಂತೆ ಸುತ್ತೋಲೆ ಹೊರಡಿಸಿದ ಕೇಜ್ರಿವಾಲ್ ಸರ್ಕಾರ

ದೆಹಲಿ ಸರ್ಕಾರವು ಕೇಂದ್ರ ಸರ್ಕಾರದ ಎನರ್ಜಿ ಎಫ್‌ಸಿಎನ್‌ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್) ನಿಂದ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲಿದೆ ಎಂದು ತಿಳಿಸಲಾಗಿದೆ. ಎಲ್ಲಾ ಎಲೆಕ್ಟ್ರಿಕ್ ವಾಹನಗಳಲ್ಲಿ ಜಿಪಿಎಸ್ ಆಧಾರಿತ ನ್ಯಾವಿಗೇಷನ್ ಸಿಸ್ಟಂ ಬಳಸಲಾಗುವುದು.

ಎಲೆಕ್ಟ್ರಿಕ್ ವಾಹನ ಬಳಸುವಂತೆ ಸುತ್ತೋಲೆ ಹೊರಡಿಸಿದ ಕೇಜ್ರಿವಾಲ್ ಸರ್ಕಾರ

ಇದರಿಂದಾಗಿ ಅವುಗಳನ್ನು ಟ್ರ್ಯಾಕ್ ಮಾಡಬಹುದು. ದೆಹಲಿಯಲ್ಲಿ ಮಾಲಿನ್ಯವನ್ನು ನಿಗ್ರಹಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ಕಳೆದ ವರ್ಷ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೆ ತಂದರು.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಎಲೆಕ್ಟ್ರಿಕ್ ವಾಹನ ಬಳಸುವಂತೆ ಸುತ್ತೋಲೆ ಹೊರಡಿಸಿದ ಕೇಜ್ರಿವಾಲ್ ಸರ್ಕಾರ

ದೆಹಲಿ ಸರ್ಕಾರದ ಎಲೆಕ್ಟ್ರಿಕ್ ವಾಹನ ನೀತಿಯಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕ ಹಾಗೂ ರಸ್ತೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ. ದೆಹಲಿ ಸರ್ಕಾರವು ಇತ್ತೀಚೆಗೆ ಸ್ವಿಚ್ ದೆಹಲಿ ಅಭಿಯಾನವನ್ನು ಆರಂಭಿಸಿದ್ದು, ಜನರು ಎಲೆಕ್ಟ್ರಿಕ್ ವಾಹನಗಳನ್ನು ಬಳಸುವಂತೆ ಮನವಿ ಮಾಡಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನ ಬಳಸುವಂತೆ ಸುತ್ತೋಲೆ ಹೊರಡಿಸಿದ ಕೇಜ್ರಿವಾಲ್ ಸರ್ಕಾರ

ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನ ನೀತಿಯಡಿ 12 ಎಲೆಕ್ಟ್ರಿಕ್ ಕಾರುಗಳನ್ನು ರಿಜಿಸ್ಟರ್ ಮಾಡಲಾಗಿದೆ. ಈ ಕಾರುಗಳಿಗೆ ರೂ.1.5 ಲಕ್ಷಗಳವರೆಗೆ ಸಬ್ಸಿಡಿ ನೀಡಲಾಗುತ್ತದೆ. ದೆಹಲಿಯ ಗಾಳಿಯ ಗುಣಮಟ್ಟವು ಭಾರತದಲ್ಲಿ ಮಾತ್ರವಲ್ಲದೇ ವಿಶ್ವದಲ್ಲಿಯೇ ಅತ್ಯಂತ ಕಡಿಮೆ ಮಟ್ಟದಲ್ಲಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಎಲೆಕ್ಟ್ರಿಕ್ ವಾಹನ ಬಳಸುವಂತೆ ಸುತ್ತೋಲೆ ಹೊರಡಿಸಿದ ಕೇಜ್ರಿವಾಲ್ ಸರ್ಕಾರ

ವರದಿಗಳ ಪ್ರಕಾರ ದೆಹಲಿಯ ವಾಯುಮಾಲಿನ್ಯಕ್ಕೆ ಪೆಟ್ರೋಲ್, ಡೀಸೆಲ್ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದೇ ಪ್ರಮುಖ ಕಾರಣ. ಈ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡಿದರೆ ದೆಹಲಿಯನ್ನು ಮಾಲಿನ್ಯದಿಂದ ಮುಕ್ತಗೊಳಿಸಬಹುದು ಎಂಬುದು ಸರ್ಕಾರದ ಅಭಿಪ್ರಾಯ.

ಎಲೆಕ್ಟ್ರಿಕ್ ವಾಹನ ಬಳಸುವಂತೆ ಸುತ್ತೋಲೆ ಹೊರಡಿಸಿದ ಕೇಜ್ರಿವಾಲ್ ಸರ್ಕಾರ

ಪೆಟ್ರೋಲ್, ಡೀಸೆಲ್ ಕಾರುಗಳನ್ನು ಎಲೆಕ್ಟ್ರಿಕ್ ಕಾರುಗಳಿಗೆ ಬದಲಿಸಲು ದೆಹಲಿ ಸಾರಿಗೆ ಇಲಾಖೆಯನ್ನು ನೋಡಲ್ ಇಲಾಖೆಯನ್ನಾಗಿ ಮಾಡಲಾಗಿದೆ. ಇಲಾಖೆಯು ಎಲೆಕ್ಟ್ರಿಕ್ ಕಾರುಗಳ ಖರೀದಿ ಹಾಗೂ ಯೋಜನೆಯ ಪ್ರಗತಿ ವರದಿಯನ್ನು ದೆಹಲಿ ಸರ್ಕಾರಕ್ಕೆ ಸಲ್ಲಿಸಲಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಎಲೆಕ್ಟ್ರಿಕ್ ವಾಹನ ಬಳಸುವಂತೆ ಸುತ್ತೋಲೆ ಹೊರಡಿಸಿದ ಕೇಜ್ರಿವಾಲ್ ಸರ್ಕಾರ

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ತಾವು ಖರೀದಿಸಿದ ಎಲೆಕ್ಟ್ರಿಕ್ ವಾಹನಗಳ ಮಾಹಿತಿಯನ್ನು ಪ್ರತಿ ತಿಂಗಳ 5ನೇ ತಾರೀಖಿನಂದು ನೋಡಲ್ ಇಲಾಖೆಗೆ ಸಲ್ಲಿಸಬೇಕಾಗುತ್ತದೆ. ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲು ದೆಹಲಿಯ ಹಲವು ಭಾಗಗಳಲ್ಲಿ ಚಾರ್ಜಿಂಗ್ ಸ್ಟೇಷನ್'ಗಳನ್ನು ನಿರ್ಮಿಸಲಾಗುತ್ತಿದೆ.

Most Read Articles

Kannada
English summary
Kejriwal government switches to electric vehicles. Read in Kannada.
Story first published: Friday, February 26, 2021, 16:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X