ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲಿ ದೆಹಲಿ ಸರ್ಕಾರವು ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ತದನಂತರ ವಿವಿಧ ಸರ್ಕಾರವು ಸಹ ರಾಜ್ಯ ಮಟ್ಟದಲ್ಲಿ ಹೊಸ ಇವಿ ನೀತಿ ಅಳವಡಿಸಿಕೊಳ್ಳುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಹೊರತುಪಡಿಸಿ ವಿವಿಧ ರಾಜ್ಯ ಸರ್ಕಾರಗಳು ರಾಜ್ಯ ಮಟ್ಟದಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ಇತ್ತೀಚೆಗೆ ಕೇರಳ ಸರ್ಕಾರವು ರಾಜ್ಯಾದ್ಯಂತ ಇವಿ ವಾಹನಗಳ ಉತ್ತೇಜನಕ್ಕಾಗಿ ಬೃಹತ್ ಯೋಜನೆಯೊಂದಿಗೆ ಚಾಲನೆ ನೀಡಿದ್ದು, ಖಾಸಗಿ ಇವಿ ವಾಹನಗಳಿಗೆ ಮಾತ್ರ ಸಾರ್ವಜನಿಕ ಬಳಕೆಯ ಇವಿ ವಾಹನಗಳಿಗೂ ಹೆಚ್ಚಿನ ಮಟ್ಟದ ಚಾರ್ಜಿಂಗ್ ಸೌಲಭ್ಯ ಒದಗಿಸಲು ಮುಂದಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ಸಾರ್ವಜನಿಕ ಬಳಕೆಯ ಇವಿ ವಾಹನಗಳಿಗೆ ಹೆಚ್ಚಿನ ಸಂಖ್ಯೆಯ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲು ಮುಂದಾಗಿರುವ ಕೇರಳ ಸರ್ಕಾರವು ಎಲೆಕ್ಟ್ರಿಕ್ ಪೋಲ್ ಮೌಂಟೆಡ್ ಚಾರ್ಜಿಂಗ್ ಸ್ಟೇಷನ್‌ಗಳ ನಿರ್ಮಾಣ ಯೋಜನೆ ಆರಂಭಿಸಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ಕೇರಳ ರಾಜ್ಯ ವಿದ್ಯುಚ್ಛಕ್ತಿ ಮಂಡಳಿ(KSEB)ಯು ಎಲೆಕ್ಟ್ರಿಕ್ ಪೋಲ್ ಮೌಂಟೆಡ್ ಚಾರ್ಜಿಂಗ್ ಸ್ಟೇಷನ್‌ಗಳ ನಿರ್ಮಾಣ ಯೋಜನೆಯನ್ನು ಮುನ್ನಡೆಸಲಿದ್ದು, ಎಲೆಕ್ಟ್ರಿಕ್ ಪೋಲ್‌ಗಳಲ್ಲಿ ರಾಜ್ಯದ್ಯಾಂತ ಚಾರ್ಜಿಂಗ್ ಸೌಲಭ್ಯ ಅಳವಡಿಸಲು ಟೆಂಡರ್ ಕರೆಯಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ಪೈಲಟ್ ಯೋಜನೆಯಾಗಿ ಕೋಝಿಕ್ಕೋಡ್‌ನಲ್ಲಿ 10 ಚಾರ್ಜಿಂಗ್ ಪಾಯಿಂಟ್ ಗಳನ್ನು ಸ್ಥಾಪಿಸಲಾಗಿದ್ದು, ಎಲೆಕ್ಟ್ರಿಫೈ' ಮೊಬೈಲ್ ಅಪ್ಲಿಕೇಶನ್ ಮೂಲಕ ಚಾರ್ಜಿಂಗ್ ನಿಲ್ದಾಣಗಳ ಮಾಹಿತಿ ಮತ್ತು ಚಾರ್ಜಿಂಗ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಪಾಯಿಂಟ್ ಲಭ್ಯತೆ ಕುರಿತಂತೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ಚಾರ್ಜಿಂಗ್ ನಿಲ್ದಾಣ ನಿರ್ಮಾಣ ವೆಚ್ಚ ತಗ್ಗಿಸಲು ಅತಿ ಕಡಿಮೆ ವೆಚ್ಚದಲ್ಲಿ ಎಲೆಕ್ಟ್ರಿಕ್ ಪೋಲ್ ಮೌಂಟೆಡ್ ಚಾರ್ಜಿಂಗ್ ಸ್ಟೇಷನ್‌ಗಳ ನಿರ್ಮಾಣ ಯೋಜನೆ ಆರಂಭಿದ್ದು, ಹೊಸ ಚಾರ್ಜಿಂಗ್ ನಿಲ್ದಾಣಗಳಲ್ಲಿ ಮುಂದಿನ ಕೆಲ ದಿನಗಳ ತನಕ ಉಚಿತವಾಗಿ ಬಳಕೆ ಮಾಡಿಕೊಳ್ಳಬಹುದಾಗಿ ಕೇರಳ ರಾಜ್ಯ ವಿದ್ಯುಚ್ಛಕ್ತಿ ಮಂಡಳಿಯು ಹೊಸ ಆಫರ್ ಘೋಷಣೆ ಮಾಡಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ಹೊಸ ಚಾರ್ಜಿಂಗ್ ನಿಲ್ದಾಣಗಳಲ್ಲಿ ಆಟೋರಿಕ್ಷಾ ಮತ್ತು ಸ್ಕೂಟರ್‌ಗಳಿಗೆ ಅಗ್ಗದ ದರದಲ್ಲಿ ಚಾರ್ಜಿಂಗ್ ಸೌಲಭ್ಯ ದೊರೆಯಲಿದ್ದು, ಮೊಬೈಲ್ ಅಪ್ಲಿಕೇಶನ್ ಮತ್ತು ಪ್ರಿಪೇಯ್ಡ್ ಸಿಸ್ಟಮ್ ಮೂಲಕ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಚಾರ್ಜಿಂಗ್ ಮೊತ್ತವನ್ನು ಸುಲಭವಾಗಿ ಪಾವತಿಸಬಹುದಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ಈ ಮೂಲಕ ಶೀಘ್ರದಲ್ಲೇ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚಾಗುವ ನಿರೀಕ್ಷೆ ಹೊಂದಿದ್ದು, ಹೆಚ್ಚಿನ ಸಂಖ್ಯೆಯ ಚಾರ್ಜಿಂಗ್ ನಿಲ್ದಾಣಗಳ ಲಭ್ಯವಾದಲ್ಲಿ ಇವಿ ವಾಹನಗಳ ಬಳಕೆಯು ಸಹಜವಾಗಿಯೇ ಹೆಚ್ಚಳವಾಗಲಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತಂದ ಕೇರಳ ಸರ್ಕಾರ

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆಯನ್ನು ಆರಂಭಿಸುತ್ತಿವೆ.

Article Published On: Saturday, December 18, 2021, 13:03 [IST]
English summary
Kerala state government planning to more ev charging points in electric poles
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+