ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಳ್ಳಲಿದೆ ಕಿಯಾ ಹೊಸ ಸೊನೆಟ್

ಕಿಯಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಪ್ರಮುಖ ಕಾರುಗಳಲ್ಲಿ 2021ರ ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಗ್ರಾಹಕರ ಬೇಡಿಕೆ ಆಧರಿಸಿ ಸೊನೆಟ್ ಮಾದರಿಯಲ್ಲಿ ಕಂಪನಿಯು ಹಲವಾರು ಬದಲಾವಣೆಗಳನ್ನು ಪರಿಚಯಿಸುತ್ತಿದೆ.

ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಳ್ಳಲಿದೆ ಕಿಯಾ ಹೊಸ ಸೊನೆಟ್

ಕಿಯಾ ಮೋಟಾರ್ಸ್ ಕಂಪನಿಯು ಸೊನೆಟ್ ಕಾರು ಮಾದರಿಯಲ್ಲಿ ಸದ್ಯ ವಿವಿಧ ಎಂಜಿನ್ ಮತ್ತು ಗೇರ್‌ಬಾಕ್ಸ್ ಆಯ್ಕೆಗಳಿಗೆ ಅನುಗುಣವಾಗಿ 24 ವೆರಿಯೆಂಟ್‌ಗಳನ್ನು ಮಾರಾಟ ಮಾಡುತ್ತಿದ್ದು, ಹೊಸ ಆವೃತ್ತಿಗಳಲ್ಲಿ ಕೆಲವು ಬೇಡಿಕೆಯಿಲ್ಲದ ವೆರಿಯೆಂಟ್‌ಗಳನ್ನು ವೀಲಿನಗೊಳಿಸಿ ಹೊಸ ವೆರಿಯೆಂಟ್‌ಗಳೊಂದಿಗೆ ಗ್ರಾಹಕರ ಆಯ್ಕೆಯನ್ನು ಸರಳಗೊಳಿಸಲು ನಿರ್ಧರಿಸಲಾಗಿದೆ. ಹೆಚ್ಚುವರಿ ವೆರಿಯೆಂಟ್‌ಗಳಿಂದಾಗಿ ಗ್ರಾಹಕರ ಆಯ್ಕೆಯಲ್ಲಿ ಗೊಂದಲ ಉಂಟಾಗುತ್ತಿದ್ದು, ಹೊಸ ವೆರಿಯೆಂಟ್‌ಗಳು ಸೊನೆಟ್ ಕಾರಿನ ಬೇಡಿಕೆ ಹೆಚ್ಚಿಸಲಿವೆ.

ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಳ್ಳಲಿದೆ ಕಿಯಾ ಹೊಸ ಸೊನೆಟ್

ಕಿಯಾ ಮೋಟಾರ್ಸ್ ಕಂಪನಿಯು ಕೆಲವು ಪೆಟ್ರೋಲ್ ಮ್ಯಾನುವಲ್ ಮಾದರಿಗಳನ್ನು ಸ್ಥಗಿತಗೊಳಿಸುವ ಸಿದ್ದತೆಯಲ್ಲಿದ್ದು, 2021ರ ಮಾದರಿಯಲ್ಲಿ ಹೆಚ್‌ಟಿಎಕ್ಸ್ ಡಿಸಿಟಿ ಪೆಟ್ರೋಲ್ ಮತ್ತು ಹೆಚ್‌ಟಿಎಕ್ಸ್ ಡೀಸೆಲ್ ಮಾದರಿಯು ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಳ್ಳಲಿದೆ ಕಿಯಾ ಹೊಸ ಸೊನೆಟ್

ಹೊಸದಾಗಿ ಪರಿಚಯಿಸಲಾಗುತ್ತಿರುವ ಹೆಚ್‌ಟಿಎಕ್ಸ್ ಮಾದರಿಯಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಅಲಾಯ್ ವೀಲ್ಹ್, ಟ್ರಾಕ್ಷನ್ ಕಂಟ್ರೊಲ್ ಸೌಲಭ್ಯಗಳನ್ನು ಹೆಚ್ಚುವರಿಯಾಗಿ ಜೋಡಣೆ ಮಾಡುತ್ತಿದ್ದು, ಹೈ ಎಂಡ್ ಟರ್ಬೊ ಮಾದರಿಗಳಲ್ಲಿ ಕ್ವಿಕ್ ಗೇರ್ ಚೆಂಜ್ ಮಾಡಬಹುದಾದ ಪ್ಯಾಡಲ್ ಶಿಫ್ಟರ್ ಜೊತೆಗೆ ಹೊಸ ಲೊಗೊ ನೀಡಿರುವುದು ಹೊಸ ಕಾರಿನ ಚಿತ್ರಗಳಲ್ಲಿ ಸ್ಪಷ್ಟವಾಗಿದೆ.

ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಳ್ಳಲಿದೆ ಕಿಯಾ ಹೊಸ ಸೊನೆಟ್

ಸೊನೆಟ್ ಕಾರು ಮಾದರಿಯು ಸದ್ಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಉತ್ತಮ ಫೀಚರ್ಸ್ ಹೊಂದಿದೆ. ಭಾರತದಲ್ಲಿ ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಸಾಮಾನ್ಯ ಮಾದರಿಯ ಪೆಟ್ರೋಲ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.

ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಳ್ಳಲಿದೆ ಕಿಯಾ ಹೊಸ ಸೊನೆಟ್

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಸೊನೆಟ್ ಕಾರು ಆರಂಭಿಕವಾಗಿ ರೂ. 6.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.20 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರನ್ನು ಜಿಟಿ-ಲೈನ್ ಮತ್ತು ಟೆಕ್-ಲೈನ್ ವೆರಿಯೆಂಟ್‌ಗಳಲ್ಲಿ ಖರೀದಿ ಮಾಡಬಹುದಾಗಿದೆ.

ಜಿಟಿ-ಲೈನ್ ಮಾದರಿಯಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದಲ್ಲಿ ಜಿಟಿ ಲೈನ್‌ನಲ್ಲಿ ಜಿಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದೆ.

ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಳ್ಳಲಿದೆ ಕಿಯಾ ಹೊಸ ಸೊನೆಟ್

ಹೊಸ ಸೊನೆಟ್ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಳ್ಳಲಿದೆ ಕಿಯಾ ಹೊಸ ಸೊನೆಟ್

ಹೊಸ ಕಾರು ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ ಹೊಸ ಕಾರು ಭಾರೀ ಪ್ರಮಾಣದಲ್ಲಿ ಮಾರಾಟವಾಗಿದ್ದು, ಶೀಘ್ರದಲ್ಲೇ ಹೊಸ ಕಾರು ವಿನೂತನ ಲೊಗೊ ಸೌಲಭ್ಯದೊಂದಿಗೆ 2021ರ ಮಾದರಿಯೊಂದಿಗೆ ಮಾರಾಟಗೊಳ್ಳುವ ಸಿದ್ದತೆಯಲ್ಲಿದೆ.

Most Read Articles

Kannada
English summary
Kia Sonet Spied With Paddle Shifter, India Launch Soon. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X