ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಕೆರೆನ್ಸ್ ಎಂಪಿವಿ

ಕಿಯಾ(Kia) ಕಂಪನಿಯು ತನ್ನ ಬಹುನೀರಿಕ್ಷಿತ ಎಂಪಿವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಕಂಪನಿಯು ತನ್ನ ಹೊಸ ಎಂಪಿವಿ ಕಾರು ಮಾದರಿಯಾದ ಕೆರೆನ್ಸ್ ಆವೃತ್ತಿಯ ಉತ್ಪಾದನಾ ಮಾದರಿಯ ರೇಖಾಚಿತ್ರಗಳನ್ನು ಹಂಚಿಕೊಂಡಿದೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ತನ್ನ ಹಲವು ಹೊಸ ಕಾರು ಮಾದರಿಗಳನ್ನು ಕಿಯಾ ಕಂಪನಿಯು ಇದೇ ವರ್ಷಾಂತ್ಯಕ್ಕೆ ಬಿಡುಗಡೆ ಮಾಡುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಭಾರತದಲ್ಲೂ ಹೊಸ ವಿನ್ಯಾಸದ ಎಂಪಿವಿ ಆವೃತ್ತಿಯನ್ನು ಪರಿಚಯಿಸಲು ಸಿದ್ದವಾಗಿದೆ. ಕಿಯಾ ಇಂಡಿಯಾ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ 2022ರ ಅವಧಿಯಲ್ಲಿ ಮೂರು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರುಗಳಲ್ಲಿ ಬಹುನೀರಿಕ್ಷಿತ ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಮಾದರಿಯ ಸಹ ಸೇರಿದೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ಕೆರೆನ್ಸ್ ಕಾರು ಮಾದರಿಯು ಇದೇ ತಿಂಗಳು 16ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳುತ್ತಿದ್ದು, ಹೊಸ ಕಾರು ಅನಾವರಣಕ್ಕೂ ಕಂಪನಿಯು ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ರೇಖಾಚಿತ್ರಗಳನ್ನು ಹಂಚಿಕೊಂಡಿದೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ಸದ್ಯ ಆಟೋ ಮಾರುಕಟ್ಟೆಯಲ್ಲಿ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ಉಳಿದ ಕಾರು ಮಾದರಿಗಳಿಂತಲೂ ಹೆಚ್ಚು ಬೇಡಿಕೆಯಲ್ಲಿದ್ದು, ತದನಂತರ ಎಸ್‌ಯುವಿ ಮತ್ತು ಎಂಪಿವಿ ಕಾರುಗಳು ಸಹ ಹೆಚ್ಚಿನ ಮಟ್ಟದ ಬೇಡಿಕೆಯಲ್ಲಿರುವ ಕಾರು ಮಾದರಿಗಳಾಗಿವೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ಆದರೆ ಎಂಪಿವಿ ಮಾದರಿಗಳಲ್ಲಿ ಕೆಲವು ಮಾದರಿಗಳಿರುವುದರಿಂದ ಪ್ರತಿಸ್ಪರ್ಧಿ ಕಡಿಮೆಯಿದ್ದು, ಮಾರುಕಟ್ಟೆಯಲ್ಲಿರುವ ಕೆಲವೇ ಕೆಲವು ಎಂಪಿವಿ ಕಾರು ಮಾದರಿಗಳು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿವೆ. ಇದೇ ಕಾರಣಕ್ಕೆ ಮಧ್ಯಮ ಗಾತ್ರದ ಎಂಪಿವಿ ವಿಭಾಗಕ್ಕೆ ಪ್ರವೇಶಿಸಲು ಸಿದ್ದವಾಗಿರುವ ಕಿಯಾ ಕಂಪನಿಯು ಹೊಸ ಮಾದರಿಯ ಎಂಪಿವಿ ಮಾದರಿಯೊಂದನ್ನು ಅಭಿವೃದ್ದಿಗೊಳಿಸಿದ್ದು, ಡಿಸೆಂಬರ್ 16ರಂದು ಅನಾವರಣಗೊಳ್ಳಲಿರುವ ಹೊಸ ಕಾರು 2022ರ ಆರಂಭದಲ್ಲಿ ಬಿಡುಗಡೆಯಾಗಲಿದೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ಕಿಯಾ ಹೊಸ ಕಾರು ಭಾರತ ಸೇರಿದಂತೆ ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಗೆ ಪ್ರವೇಶಿಸಲಿದ್ದು, ಕಾರು ಅನಾವರಣಕ್ಕೂ ಮುನ್ನ ಕಿಯಾ ಕಂಪನಿಯು ಈಗಾಗಲೇ ಹೊಸ ಕಾರಿನ ಉತ್ಪಾದನಾ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಕೆರೆನ್ಸ್ ಕಾರು ಮಾದರಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಗಳಲ್ಲಿ ರೋಡ್ ಟೆಸ್ಟಿಂಗ್ ನಡೆಸಿರುವುದು ಈಗಾಗಲೇ ಬಹಿರಂಗವಾಗಿದೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ಹೊಸ ಕೆರೆನ್ಸ್ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಎಂಪಿವಿ ಮಾದರಿಯಾಗಿದ್ದು, ಹೊಸ ಕಾರನ್ನು ಮಧ್ಯಮ ವರ್ಗದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣ ಮಾಡುತ್ತಿದೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ಸದ್ಯ ಮಾರುಕಟ್ಟೆಯಲ್ಲಿರುವ ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಮಾದರಿಯು ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಹೊಸ ಕಾರಿನ ಬೆಲೆ ಇಳಿಕೆಗಾಗಿ ಸೊನೆಟ್ ಪ್ಲ್ಯಾಟ್‌ಫಾರ್ಮ್ ಮಾದರಿಯನ್ನು ಆಧರಿಸಿ ಹೊಸ ಎಂಪಿವಿ ಕಾರನ್ನು ಉತ್ಪಾದಿಸಲಾಗುತ್ತಿದೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಭರ್ಜರಿ ಬೇಡಿಕೆ ಗಿಟ್ಟಿಸಿಕೊಳ್ಳವ ನೀರಿಕ್ಷೆಯಲ್ಲಿದ್ದು, ಬೆಲೆಯಲ್ಲಿ ಎರ್ಟಿಗಾ ಕಾರಿಗಿಂತಲೂ ತುಸು ದುಬಾರಿಯಾದರೂ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗಿಂತಲೂ ಕಡಿಮೆ ಬೆಲೆಯೊಂದಿಗೆ ಮಾರಾಟಗೊಳ್ಳಲಿದೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಎರ್ಟಿಗಾ ಕಾರು ಅಧಿಕ ಬೇಡಿಕೆಯೊಂದಿಗೆ ಮೊದಲ ಸ್ಥಾನದಲ್ಲಿದ್ದು, ದುಬಾರಿ ಬೆಲೆ ನಡುವೆಯೂ ಟೊಯೊಟಾ ಇನೋವಾ ಕ್ರಿಸ್ಟಾ ಕಾರು ಎರ್ಟಿಗಾ ಮಾದರಿಯಷ್ಟೇ ಬೇಡಿಕೆಯೊಂದಿಗೆ ಎರಡನೇ ಸ್ಥಾನದಲ್ಲಿದೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ಆದರೆ ಎರ್ಟಿಗಾ ಕಾರಿಗಿಂತಲೂ ದುಪ್ಪಟ್ಟು ಬೆಲೆ ಹೊಂದಿರುವ ಇನೋವಾ ಕ್ರಿಸ್ಟಾ ಕಾರು ಐಷಾರಾಮಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದ್ದು, ಎರ್ಟಿಗಾ ಮತ್ತು ಇನೋವಾ ಕ್ರಿಸ್ಟಾ ನಡುವಿನ ಬೆಲೆ ಅಂತರವು ಸಾಕಷ್ಟಿದೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ಹೀಗಾಗಿ ಈ ಎರಡು ಕಾರುಗಳ ನಡುವಿನ ಸ್ಥಾನದಲ್ಲಿದ್ದ ಮಹೀಂದ್ರಾ ಮರಾಜೋ ಕಾರು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವಲ್ಲಿ ವಿಫಲವಾಗುತ್ತಿದ್ದು, ಇನೋವಾ ಮತ್ತು ಎರ್ಟಿಗಾ ನಡುವಿನ ಸ್ಥಾನವನ್ನು ತುಂಬಲು ಕಿಯಾ ಕಂಪನಿಯು ಹೊಸ ಎಂಪಿವಿ ಕಾರು ಉತ್ಪನ್ನವನ್ನು ಸಿದ್ದಪಡಿಸುತ್ತಿದೆ.

ಹೀಗಿರಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಪ್ರತಿಸ್ಪರ್ಧಿ ಕಿಯಾ ಹೊಸ ಕೆರೆನ್ಸ್ ಎಂಪಿವಿ

ಯೋಜನೆಯೆಂತೆ ಈ ವರ್ಷದ ಮಧ್ಯಂತರದಲ್ಲಿ ಬಿಡುಗಡೆಯಾಗಬೇಕಿದ್ದ ಹೊಸ ಕಾರನ್ನು ಕೋವಿಡ್ ಕಾರಣಕ್ಕೆ 2022ಕ್ಕೆ ಮುಂದೂಡಿಕೆ ಮಾಡಿರುವ ಕಿಯಾ ಕಂಪನಿಯು ಹೊಸ ಕಾರನ್ನು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಲಿದೆ.

Most Read Articles

Kannada
English summary
Kia carens official design sketches revealed
Story first published: Wednesday, December 8, 2021, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X