ಹೊಸ ಕಾರೆನ್ಸ್ ಎಸ್‌ಯುವಿ ಬುಕ್ಕಿಂಗ್ ಮಾಹಿತಿಯನ್ನು ಹಂಚಿಕೊಂಡ ಕಿಯಾ ಇಂಡಿಯಾ

ಕಿಯಾ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಕಾರೆನ್ಸ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಹೊಸ ಕಾರು ಮುಂಬರುವ ಫೆಬ್ರವರಿ ಅಂತ್ಯಕ್ಕೆ ಅಥವಾ ಮಾರ್ಚ್ ಆರಂಭದಲ್ಲಿ ಬಿಡುಗಡೆಯಾಗಲಿದೆ. ಹೀಗಾಗಿ ಸದ್ಯ ಅನಾವರಣಗೊಂಡಿರುವ ಕಾರು ಮಾದರಿಗಾಗಿ ಕಂಪನಿಯು ಜನವರಿ 14ರ ಸಂಕ್ರಾಂತಿ ವಿಶೇಷ ದಿನದಂದೆ ಅಧಿಕೃತ ಬುಕ್ಕಿಂಗ್ ಆರಂಭಿಸುವ ಮಾಹಿತಿ ಹಂಚಿಕೊಂಡಿದೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಕಾರೆನ್ಸ್ ಎಸ್‌ಯುವಿ ಮಾದರಿಗಾಗಿ ಕಿಯಾ ಪ್ರಮುಖ ಶೋರೂಂಗಳಲ್ಲಿ ಈಗಾಗಲೇ ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭವಾಗಿದ್ದರೂ ಜನವರಿ 14ರಿಂದ ಮಾಡಲಾಗುವ ಬುಕ್ಕಿಂಗ್ ಆಧಾರದ ಮೇಲೆ ಕಂಪನಿಯು ಹೊಸ ಕಾರಿನ ವಿತರಣೆ ಆರಂಭಿಸಲಿದೆ. ಹೊಸ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಅತ್ಯುತ್ತಮ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಹೊಸ ಕಾರು ಮೂರು ಸಾಲಿನ ಆಸನ ಸೌಲಭ್ಯಗಳನ್ನು ಹೊಂದಿರುವ ಎಂಪಿವಿ ಕಾರು ಮಾದರಿಗಳಿಗೂ ಉತ್ತಮ ಪೈಪೋಟಿ ನೀಡಲಿದ್ದು, ಸೆಲ್ಟೊಸ್ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿರುವ ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರಲಿದೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಕಾರೆನ್ಸ್ ಎಸ್‌ಯುವಿ ಕಾರು ಪ್ರಮುಖ ಆರು ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಸೆಲ್ಟೊಸ್ ಮಾದರಿಯಲ್ಲಿಯೇ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಗ್ರಾಹಕರು ತಮ್ಮ ಆದ್ಯತೆ ಮೇರೆಗೆ ಹೊಸ ಕಾರನ್ನು ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದ್ದು, ಕಾರೆನ್ಸ್ ಕಾರಿನ 1.5-ಲೀಟರ್ ಪೆಟ್ರೋಲ್ ಮಾದರಿಯು 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಹಾಗೆಯೇ 1.5-ಲೀಟರ್ ಡೀಸೆಲ್ ಮಾದರಿಯು 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಲ್ಲಿರುವು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರುವ ಹ್ಯುಂಡೈ ಅಲ್ಕಾಜರ್, ಮಹೀಂದ್ರಾ ಎಕ್ಸ್‌ಯುವಿ700 ಮತ್ತು ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ ಮತ್ತು ಎಂಪಿವಿ ಕಾರು ಮಾದರಿಗಳಾದ ಎರ್ಟಿಗಾ ಹಾಗೂ ಇನೋವಾ ಕ್ರಿಸ್ಟಾ ಮಾದರಿಗಳಿಗೂ ಇದು ಪೈಪೋಟಿ ನೀಡಲಿದೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಜೊತೆಗೆ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಐಷಾರಾಮಿ ಫೀಚರ್ಸ್ ಮತ್ತು ವಿಶಾಲವಾದ ಒಳಾಂಗಣವನ್ನು ಹೊಂದಿರಲಿದ್ದು, ಹೊಸ ಕಾರು 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಹೊಸ ಕಾರಿನ ಉದ್ದಳತೆಯು ಪ್ರಮುಖ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮವಾಗಿದ್ದು, ಮೂರನೇ ಸಾಲಿನ ಪ್ರಯಾಣಿಕರಿಗೂ ಉತ್ತಮ ಲೆಗ್ ರೂಂ ಒದಗಿಸಲಾಗಿದೆ. ಇದರಿಂದ ಇದು ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯುವ ಎಲ್ಲಾ ವೈಶಿಷ್ಟ್ಯತೆಗಳು ಈ ಕಾರಿನಲ್ಲಿದ್ದು, ಹೊಸ ಕಾರಿನ ಫೀಚರ್ಸ್ ಮತ್ತು ಬಣ್ಣ ಆಯ್ಕೆ ಕಾರಿನ ಆಯ್ಕೆ ಮೌಲ್ಯ ಹೆಚ್ಚಿಸಲಿವೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವ ಗ್ರಾಹಕರ ಆಯ್ಕೆಗೆ ಪ್ರಮುಖ ಅಂಶವಾಗಲಿದ್ದು, ಹೊಸ ಕಾರಿನಲ್ಲಿ ಕಂಪನಿಯು ಟೈಗರ್ ನೋಸ್ ಹೊಂದಿರುವ ಸಿಗ್ನಿಚೆರ್ ಗ್ರಿಲ್ ಜೊತೆ ಏರ್ ಡ್ಯಾಮ್, ವಿಭಜಿತವಾಗಿ ಎಲ್ಇಡಿ ಹೆಡ್‌ಲ್ಯಾಂಪ್, ವೈ ಆಕಾರದ ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ ಮತ್ತು ಬಲಿಷ್ಠವಾಗಿರುವ ಫ್ರಂಟ್ ಬಂಪರ್ ಜೋಡಿಸಲಾಗಿದೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ಫ್ರಂಟ್ ಹೆಡ್‌ಲ್ಯಾಂಪ್‌ಗೆ ಹೊಂದಿಕೊಂಡಂತೆ ನೀಡಲಾಗಿರುವ ಕ್ರಿಸ್ ಲೈನ್ ಕಾರನ್ನು ಸುತ್ತುವರಿದಿರುವುದು ಕೂಡಾ ಪ್ರೀಮಿಯಂ ಲುಕ್ ಹೆಚ್ಚಿಸಲು ಸಹಕಾರಿಯಾಗಿದ್ದು, ಬಾಡಿ ಕ್ಲ್ಯಾಡಿಂಗ್, 17 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್, ವ್ಹೀಲ್ ಆರ್ಚ್, ಎಲ್ಇಡಿ ಟೈಲ್ ಲ್ಯಾಂಪ್, ಸ್ಟೈಲಿಶ್ ರಿಯರ್ ಬಂಪರ್, ಫ್ಲಕ್ಸ್ ಸಿಲ್ವರ್ ಇನ್ಸರ್ಟ್ ಜೊತೆ ಆಕರ್ಷಕವಾದ ರಿಯರ್ ಸ್ಪಾಯ್ಲರ್ ನೀಡಲಾಗಿದೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ ಸಾಫ್ಟ್ ಟಚ್ ಡ್ಯಾಶ್‌ಬೋರ್ಡ್, 10.25 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಫೂರ್ಣ ಪ್ರಮಾಣದ ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ಮಲ್ಟಿ ಫಂಕ್ಷನ್ ಹೊಂದಿರುವ ಸ್ಟೀರಿಂಗ್ ವ್ಹೀಲ್, ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ನೀಡಲಾಗಿದೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಕಿಯಾ ಕಂಪನಿಯು ಹೊಸ ಕಾರಿನಲ್ಲಿ ಒಂದೇ ಸೂರಿನಡಿ ಹತ್ತಾರು ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸುವ ಯುವಿಓ ಕಾರ್ ಕನೆಕ್ಟ್ ಫೀಚರ್ಸ್ ಸಹ ನೀಡಿದ್ದು, ವೆಂಟಿಲೆಟೆಡ್ ಸೀಟುಗಳು, 64 ಆಂಬಿಯೆಂಟ್ ಲೈಟಿಂಗ್ಸ್, ಸೀಟ್ ಬ್ಯಾಕ್ ಟೇಬಲ್, ಕಪ್ ಹೋಲ್ಡರ್ಸ್, ಏರ್ ಪ್ಯೂರಿಫೈಯರ್ ಸೌಲಭ್ಯಗಳಿವೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

ಕಿಯಾ ಕಾರೆನ್ಸ್ ಬುಕ್ಕಿಂಗ್ ಮಾಹಿತಿ ಬಹಿರಂಗ

ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18 ಲಕ್ಷದ ತನಕ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದೆಂದು ಅಂದಾಜಿಸಲಾಗಿದ್ದು, ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಮಾಸ್ ಬ್ರೌನ್, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್ ಬಣ್ಣಗಳಲ್ಲಿ ಆಯ್ಕೆ ಮಾಡಬಹುದಾಗಿದೆ.

More from DriveSpark

Article Published On: Thursday, December 30, 2021, 18:01 [IST]
English summary
Kia carens officially booking opens on 14th january details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+