ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಕಿಯಾ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ನಾಲ್ಕನೇ ಕಾರು ಮಾದರಿಯಾಗಿ ಕಾರೆನ್ಸ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಸದ್ಯ ಅನಾವರಣಗೊಂಡಿರುವ ಹೊಸ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಅತ್ಯುತ್ತಮ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಸೆಲ್ಟೊಸ್, ಸೊನೆಟ್ ಮತ್ತು ಕಾರ್ನಿವಾಲ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಕಿಯಾ ಇಂಡಿಯಾ ಕಂಪನಿಯು ನಾಲ್ಕನೇ ಕಾರು ಮಾದರಿಯಾಗಿ ಕಾರೆನ್ಸ್ ಎಸ್‌ಯುವಿಯನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಹೊಸ ಕಾರು ಮಾದರಿಯನ್ನು ಸದ್ಯ ಅನಾವರಣಗೊಳಿಸಿರುವ ಕಿಯಾ ಕಂಪನಿಯು ಮುಂಬರುವ ಮಾರ್ಚ್ ವೇಳೆಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಜೊತೆಗೆ ಮೂರು ಸಾಲಿನ ಆಸನ ಸೌಲಭ್ಯಗಳನ್ನು ಹೊಂದಿರುವ ಎಂಪಿವಿ ಕಾರು ಮಾದರಿಗಳಿಗೂ ಉತ್ತಮ ಪೈಪೋಟಿ ನೀಡಲಿದೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಕಾರೆನ್ಸ್ ಎಸ್‌ಯುವಿ ಕಾರು ಸೆಲ್ಟೊಸ್ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದ್ದು, ಹೊಸ ಕಾರು ಪ್ರಮುಖ ಆರು ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ. ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರಲಿದ್ದು, ಎಂಜಿನ್ ಆಯ್ಕೆ ಕೂಡಾ ಉತ್ತಮವಾಗಿರಲಿದೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಸೆಲ್ಟೊಸ್ ಮಾದರಿಯಲ್ಲಿಯೇ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಿದ್ದು, ಗ್ರಾಹಕರು ತಮ್ಮ ಆದ್ಯತೆ ಮೇರೆಗೆ ಹೊಸ ಕಾರನ್ನು 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಕಾರೆನ್ಸ್ ಕಾರಿನ 1.5-ಲೀಟರ್ ಪೆಟ್ರೋಲ್ ಮಾದರಿಯು 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಹಾಗೆಯೇ 1.5-ಲೀಟರ್ ಡೀಸೆಲ್ ಮಾದರಿಯು 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಜೊತೆಗೆ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಐಷಾರಾಮಿ ಫೀಚರ್ಸ್ ಮತ್ತು ವಿಶಾಲವಾದ ಒಳಾಂಗಣವನ್ನು ಹೊಂದಿರಲಿದ್ದು, ಹೊಸ ಕಾರು 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಲ್ಲಿರುವು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರುವ ಹ್ಯುಂಡೈ ಅಲ್ಕಾಜರ್, ಮಹೀಂದ್ರಾ ಎಕ್ಸ್‌ಯುವಿ700 ಮತ್ತು ಎಂಜಿ ಹೆಕ್ಟರ್ ಪ್ಲಸ್ ಮತ್ತು ಟಾಟಾ ಸಫಾರಿ ಕಾರು ಮಾದರಿಗಳಿಗೆ ಇದು ನೇರ ಪೈಪೋಟಿಯಾಗಲಿದ್ದು, ಬೆಲೆ ಮತ್ತು ಫೀಚರ್ಸ್ ವಿಚಾರವಾಗಿ ಎಂಪಿವಿ ಆವೃತ್ತಿಯಾಗಿರುವ ಮಾರುತಿ ಸುಜುಕಿ ಎರ್ಟಿಗಾ ಮತ್ತು ಟೊಯೊಟಾ ಇನೋವಾ ಕ್ರಿಸ್ಟಾ ಮಾದರಿಗಳಿಗೂ ಪೈಪೋಟಿ ನೀಡಲಿದೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಹೊಸ ಕಾರಿನ ಉದ್ದಳತೆಯು ಪ್ರಮುಖ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮವಾಗಿದ್ದು, ಮೂರನೇ ಸಾಲಿನ ಪ್ರಯಾಣಿಕರಿಗೂ ಉತ್ತಮ ಲೆಗ್ ರೂಂ ಒದಗಿಸಲಾಗಿದೆ. ಇದರಿಂದ ಇದು ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯುವ ಎಲ್ಲಾ ವೈಶಿಷ್ಟ್ಯತೆಗಳು ಈ ಕಾರಿನಲ್ಲಿದ್ದು, ಹೊಸ ಕಾರಿನ ಫೀಚರ್ಸ್ ಮತ್ತು ಬಣ್ಣ ಆಯ್ಕೆ ಕಾರಿನ ಆಯ್ಕೆ ಮೌಲ್ಯ ಹೆಚ್ಚಿಸಲಿವೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಹೊಸ ಕಾರು ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವ ಗ್ರಾಹಕರ ಆಯ್ಕೆಗೆ ಪ್ರಮುಖ ಅಂಶವಾಗಲಿದ್ದು, ಹೊಸ ಕಾರಿನಲ್ಲಿ ಕಂಪನಿಯು ಟೈಗರ್ ನೋಸ್ ಹೊಂದಿರುವ ಸಿಗ್ನಿಚೆರ್ ಗ್ರಿಲ್ ಜೊತೆ ಏರ್ ಡ್ಯಾಮ್, ವಿಭಜಿತವಾಗಿ ಎಲ್ಇಡಿ ಹೆಡ್‌ಲ್ಯಾಂಪ್, ವೈ ಆಕಾರದ ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ ಮತ್ತು ಬಲಿಷ್ಠವಾಗಿರುವ ಫ್ರಂಟ್ ಬಂಪರ್ ಜೋಡಿಸಲಾಗಿದೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಹೊಸ ಕಾರಿನಲ್ಲಿ ಫ್ರಂಟ್ ಹೆಡ್‌ಲ್ಯಾಂಪ್‌ಗೆ ಹೊಂದಿಕೊಂಡಂತೆ ನೀಡಲಾಗಿರುವ ಕ್ರಿಸ್ ಲೈನ್ ಕಾರನ್ನು ಸುತ್ತುವರಿದಿರುವುದು ಕೂಡಾ ಪ್ರೀಮಿಯಂ ಲುಕ್ ಹೆಚ್ಚಿಸಲು ಸಹಕಾರಿಯಾಗಿದ್ದು, ಬಾಡಿ ಕ್ಲ್ಯಾಡಿಂಗ್, 17 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್, ವ್ಹೀಲ್ ಆರ್ಚ್, ಎಲ್ಇಡಿ ಟೈಲ್ ಲ್ಯಾಂಪ್, ಸ್ಟೈಲಿಶ್ ರಿಯರ್ ಬಂಪರ್, ಫ್ಲಕ್ಸ್ ಸಿಲ್ವರ್ ಇನ್ಸರ್ಟ್ ಜೊತೆ ಆಕರ್ಷಕವಾದ ರಿಯರ್ ಸ್ಪಾಯ್ಲರ್ ನೀಡಲಾಗಿದೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ ಸಾಫ್ಟ್ ಟಚ್ ಡ್ಯಾಶ್‌ಬೋರ್ಡ್, 10.25 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಫೂರ್ಣ ಪ್ರಮಾಣದ ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ಮಲ್ಟಿ ಫಂಕ್ಷನ್ ಹೊಂದಿರುವ ಸ್ಟೀರಿಂಗ್ ವ್ಹೀಲ್, ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ನೀಡಲಾಗಿದೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಕಿಯಾ ಕಂಪನಿಯು ಹೊಸ ಕಾರಿನಲ್ಲಿ ಒಂದೇ ಸೂರಿನಡಿ ಹತ್ತಾರು ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸುವ ಯುವಿಓ ಕಾರ್ ಕನೆಕ್ಟ್ ಫೀಚರ್ಸ್ ಸಹ ನೀಡಿದ್ದು, ವೆಂಟಿಲೆಟೆಡ್ ಸೀಟುಗಳು, 64 ಆಂಬಿಯೆಂಟ್ ಲೈಟಿಂಗ್ಸ್, ಸೀಟ್ ಬ್ಯಾಕ್ ಟೇಬಲ್, ಕಪ್ ಹೋಲ್ಡರ್ಸ್, ಏರ್ ಪ್ಯೂರಿಫೈಯರ್ ಸೌಲಭ್ಯಗಳಿವೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

ಪ್ರಮುಖ 7 ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರೆನ್ಸ್ ಎಸ್‌ಯುವಿ

ಹಾಗೆಯೇ ಹೊಸ ಕಾರನ್ನು ಗ್ರಾಹಕರು ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಮಾಸ್ ಬ್ರೌನ್, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್ ಬಣ್ಣಗಳಲ್ಲಿ ಆಯ್ಕೆ ಮಾಡಬಹುದಾಗಿದ್ದು, ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18 ಲಕ್ಷದ ತನಕ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Kia carens suv offered in 7 colours options details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X