6 ಸೀಟರ್, 7 ಸೀಟರ್ ಆಯ್ಕೆ ಹೊಂದಿರುವ ಕಿಯಾ ಕಾರೆನ್ಸ್ ಎಸ್‌ಯುವಿ ವಿಡಿಯೋ

ಕಿಯಾ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ನಾಲ್ಕನೇ ಕಾರು ಮಾದರಿಯಾಗಿ ಕಾರೆನ್ಸ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆ, ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಹೊಂದಿರಲಿದೆ. ಹಾಗಾದ್ರೆ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಿಂತ ಹೇಗೆ ವಿಭಿನ್ನವಾಗಿದೆ ಮತ್ತು ಗ್ರಾಹಕರನ್ನು ಸೆಳೆಯಬಹುದಾದ ಹೊಸ ಕಾರಿನ ವಿಶೇಷತೆಗಳನ್ನು ಈ ವಿಡಿಯೋದಲ್ಲಿ ತಿಳಿಯೋಣ.

ಕಾರೆನ್ಸ್ ಹೊಸ ಎಸ್‌ಯುವಿ ಕಾರು ಮಾದರಿಯು ಸೆಲ್ಟೊಸ್ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದ್ದು, ಹೊಸ ಕಾರು ಪ್ರಮುಖ ಆರು ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ. ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರಲಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಐಷಾರಾಮಿ ಫೀಚರ್ಸ್ ಮತ್ತು ವಿಶಾಲವಾದ ಒಳಾಂಗಣವನ್ನು ಹೊಂದಿರಲಿದ್ದು, ಹೊಸ ಕಾರು ಎಸ್‌ಯುವಿ ಜೊತೆಗೆ ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯುವ ಎಲ್ಲಾ ವೈಶಿಷ್ಟ್ಯತೆಗಳನ್ನು ಹೊಂದಿದೆ.

ಹೊಸ ಕಾರು 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಕಾರು ಪ್ರಮುಖ ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿಲಿದೆ.

7 ಸೀಟರ್ ಆಯ್ಕೆ ಹೊಂದಿರುವ ಕಿಯಾ ಕಾರೆನ್ಸ್ ಎಸ್‌ಯುವಿ ವಿಡಿಯೋ

1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಗ್ರಾಹಕರು ತಮ್ಮ ಆದ್ಯತೆ ಮೇರೆಗೆ ಹೊಸ ಕಾರನ್ನು 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ.

ಹೊಸ ಕಾರು ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವ ಗ್ರಾಹಕರ ಆಯ್ಕೆಗೆ ಪ್ರಮುಖ ಅಂಶವಾಗಲಿದ್ದು, ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಆಕರ್ಷಕವಾಗಿದೆ. ಜೊತೆಗೆ ಹೊಸ ಕಾರಿನಲ್ಲಿ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳನ್ನು ಜೋಡಣೆ ಮಾಡಿದ್ದು, ಮಾರುತಿ ಎರ್ಟಿಗಾ ಮತ್ತು ಇನೋವಾ ಕ್ರಿಸ್ಟಾ ನಡುವಿನ ಸ್ಥಾನವನ್ನು ತುಂಬಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.

Most Read Articles

Kannada
English summary
Kia carens suv walkaround kannda video
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X