ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ದಕ್ಷಿಣ ಕೊರಿಯಾ ಕಾರು ಉತ್ಪಾದನಾ ಕಂಪನಿಯಾಗಿರುವ ಕಿಯಾ(Kia) ಶೀಘ್ರದಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ತನ್ನ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಭಾರತದಲ್ಲೂ ಹೊಸ ವಿನ್ಯಾಸದ ಎಂಪಿವಿ ಆವೃತ್ತಿಯನ್ನು ಪರಿಚಯಿಸಲು ಸಿದ್ದವಾಗಿದೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ಕಿಯಾ ಇಂಡಿಯಾ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ 2022ರ ಅವಧಿಯಲ್ಲಿ ಮೂರು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರುಗಳಲ್ಲಿ ಬಹುನೀರಿಕ್ಷಿತ ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಮಾದರಿಯ ಸಹ ಸೇರಿದೆ. ಹೊಸ ಕಾರು ಇದೇ ತಿಂಗಳು 16ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳುತ್ತಿದ್ದು, ಹೊಸ ಕಾರು ಅನಾವರಣಕ್ಕೂ ಕಂಪನಿಯು ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಕಾರಿನ ಟೀಸರ್ ಪ್ರಕಟಿಸಿದೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ಹೊಸ ಟೀಸರ್ ಮೂಲಕ ಮಧ್ಯಮ ಕ್ರಮಾಂಕದ ಎಂಪಿವಿ ವಿಭಾಗದಲ್ಲಿ ಅತ್ಯುತ್ತಮ ಪೈಪೋಟಿ ನೀಡುವ ಸುಳಿವು ನೀಡಿದ್ದು, ಹೊಸ ಕಾರು ಸೆಲ್ಟೊಸ್ ಮತ್ತು ಸೊನೆಟ್ ಮಧ್ಯದ ಸ್ಥಾನದಲ್ಲಿ ಮಾರಾಟಗೊಳ್ಳಲಿದೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ಸದ್ಯ ಆಟೋ ಮಾರುಕಟ್ಟೆಯಲ್ಲಿ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ಉಳಿದ ಕಾರು ಮಾದರಿಗಳಿಂತಲೂ ಹೆಚ್ಚು ಬೇಡಿಕೆಯಲ್ಲಿದ್ದು, ತದನಂತರ ಎಸ್‌ಯುವಿ ಮತ್ತು ಎಂಪಿವಿ ಕಾರುಗಳು ಸಹ ಹೆಚ್ಚಿನ ಮಟ್ಟದ ಬೇಡಿಕೆಯಲ್ಲಿರುವ ಕಾರು ಮಾದರಿಗಳಾಗಿವೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ಆದರೆ ಎಂಪಿವಿ ಮಾದರಿಗಳಲ್ಲಿ ಕೆಲವು ಮಾದರಿಗಳಿರುವುದರಿಂದ ಪ್ರತಿಸ್ಪರ್ಧಿ ಕಡಿಮೆಯಿದ್ದು, ಮಾರುಕಟ್ಟೆಯಲ್ಲಿರುವ ಕೆಲವೇ ಕೆಲವು ಎಂಪಿವಿ ಕಾರು ಮಾದರಿಗಳು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿವೆ. ಇದೇ ಕಾರಣಕ್ಕೆ ಮಧ್ಯಮ ಗಾತ್ರದ ಎಂಪಿವಿ ವಿಭಾಗಕ್ಕೆ ಪ್ರವೇಶಿಸಲು ಸಿದ್ದವಾಗಿರುವ ಕಿಯಾ ಕಂಪನಿಯು ಹೊಸ ಮಾದರಿಯ ಎಂಪಿವಿ ಮಾದರಿಯೊಂದನ್ನು ಅಭಿವೃದ್ದಿಗೊಳಿಸಿದ್ದು, ಡಿಸೆಂಬರ್ 16ರಂದು ಅನಾವರಣಗೊಳ್ಳಲಿರುವ ಹೊಸ ಕಾರು 2022ರ ಆರಂಭದಲ್ಲಿ ಬಿಡುಗಡೆಯಾಗಲಿದೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ಕಿಯಾ ಹೊಸ ಕಾರು ಭಾರತ ಸೇರಿದಂತೆ ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಗೆ ಪ್ರವೇಶಿಸಲಿದ್ದು, ಕಾರು ಅನಾವರಣಕ್ಕೂ ಮುನ್ನ ಕಿಯಾ ಕಂಪನಿಯು ಈಗಾಗಲೇ ಹೊಸ ಕಾರಿನ ಉತ್ಪಾದನಾ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಅಧಿಕೃತವಾಗಿ ಚಾಲನೆ ನೀಡಿದೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಕೆರೆನ್ಸ್ ಕಾರು ಮಾದರಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಗಳಲ್ಲಿ ರೋಡ್ ಟೆಸ್ಟಿಂಗ್ ನಡೆಸಿರುವುದು ಬಹಿರಂಗವಾಗಿದೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ಹೊಸ ಕೆರೆನ್ಸ್ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಎಂಪಿವಿ ಮಾದರಿಯಾಗಿದ್ದು, ಹೊಸ ಕಾರನ್ನು ಮಧ್ಯಮ ವರ್ಗದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣ ಮಾಡುತ್ತಿದೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ಸದ್ಯ ಮಾರುಕಟ್ಟೆಯಲ್ಲಿರುವ ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಮಾದರಿಯು ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಹೊಸ ಕಾರಿನ ಬೆಲೆ ಇಳಿಕೆಗಾಗಿ ಸೊನೆಟ್ ಪ್ಲ್ಯಾಟ್‌ಫಾರ್ಮ್ ಮಾದರಿಯನ್ನು ಆಧರಿಸಿ ಹೊಸ ಎಂಪಿವಿ ಕಾರನ್ನು ಉತ್ಪಾದಿಸಲಾಗುತ್ತಿದೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಭರ್ಜರಿ ಬೇಡಿಕೆ ಗಿಟ್ಟಿಸಿಕೊಳ್ಳವ ನೀರಿಕ್ಷೆಯಲ್ಲಿದ್ದು, ಬೆಲೆಯಲ್ಲಿ ಎರ್ಟಿಗಾ ಕಾರಿಗಿಂತಲೂ ತುಸು ದುಬಾರಿಯಾದರೂ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗಿಂತಲೂ ಕಡಿಮೆ ಬೆಲೆಯೊಂದಿಗೆ ಮಾರಾಟಗೊಳ್ಳಲಿದೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಎರ್ಟಿಗಾ ಕಾರು ಅಧಿಕ ಬೇಡಿಕೆಯೊಂದಿಗೆ ಮೊದಲ ಸ್ಥಾನದಲ್ಲಿದ್ದು, ದುಬಾರಿ ಬೆಲೆ ನಡುವೆಯೂ ಟೊಯೊಟಾ ಇನೋವಾ ಕ್ರಿಸ್ಟಾ ಕಾರು ಎರ್ಟಿಗಾ ಮಾದರಿಯಷ್ಟೇ ಬೇಡಿಕೆಯೊಂದಿಗೆ ಎರಡನೇ ಸ್ಥಾನದಲ್ಲಿದೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ಆದರೆ ಎರ್ಟಿಗಾ ಕಾರಿಗಿಂತಲೂ ದುಪ್ಪಟ್ಟು ಬೆಲೆ ಹೊಂದಿರುವ ಇನೋವಾ ಕ್ರಿಸ್ಟಾ ಕಾರು ಐಷಾರಾಮಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದ್ದು, ಎರ್ಟಿಗಾ ಮತ್ತು ಇನೋವಾ ಕ್ರಿಸ್ಟಾ ನಡುವಿನ ಬೆಲೆ ಅಂತರವು ಸಾಕಷ್ಟಿದೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ಹೀಗಾಗಿ ಈ ಎರಡು ಕಾರುಗಳ ನಡುವಿನ ಸ್ಥಾನದಲ್ಲಿದ್ದ ಮಹೀಂದ್ರಾ ಮರಾಜೋ ಕಾರು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವಲ್ಲಿ ವಿಫಲವಾಗುತ್ತಿದ್ದು, ಇನೋವಾ ಮತ್ತು ಎರ್ಟಿಗಾ ನಡುವಿನ ಸ್ಥಾನವನ್ನು ತುಂಬಲು ಕಿಯಾ ಕಂಪನಿಯು ಹೊಸ ಎಂಪಿವಿ ಕಾರು ಉತ್ಪನ್ನವನ್ನು ಸಿದ್ದಪಡಿಸುತ್ತಿದೆ.

ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ಮೊದಲ ಟೀಸರ್ ಬಿಡುಗಡೆ

ಯೋಜನೆಯೆಂತೆ ಈ ವರ್ಷದ ಮಧ್ಯಂತರದಲ್ಲಿ ಬಿಡುಗಡೆಯಾಗಬೇಕಿದ್ದ ಹೊಸ ಕಾರನ್ನು ಕೋವಿಡ್ ಕಾರಣಕ್ಕೆ 2022ಕ್ಕೆ ಮುಂದೂಡಿಕೆ ಮಾಡಿರುವ ಕಿಯಾ ಕಂಪನಿಯು ಹೊಸ ಕಾರನ್ನು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಲಿದೆ.

More from DriveSpark

Article Published On: Wednesday, December 1, 2021, 16:52 [IST]
English summary
Kia carens teased ahead of debut on dec 16 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+