ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಕಾರು ಮಾದರಿಗಳ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಕಿಯಾ ಇಂಡಿಯಾ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಕಿಯಾ ಕಂಪನಿಯ ಹೊಸ ಕಾರುಗಳಲ್ಲಿ ಬಹುನೀರಿಕ್ಷಿತ ಕಾರೆನ್ಸ್ ಎಸ್‌ಯುವಿ ಸೇರಿದಂತೆ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳು ಸಹ ಬಿಡುಗಡೆಯಾಗಲಿವೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

ಸದ್ಯ ಮಾರುಕಟ್ಟೆಯಲ್ಲಿ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ವಿಭಾಗವು ಉಳಿದ ಕಾರು ಮಾದರಿಗಳಿಂತಲೂ ಹೆಚ್ಚು ಬೇಡಿಕೆಯಲ್ಲಿದ್ದು, ತದನಂತರ ಎಸ್‌ಯುವಿ ಮತ್ತು ಎಂಪಿವಿ ಕಾರುಗಳು ಹೆಚ್ಚಿನ ಮಟ್ಟದ ಬೇಡಿಕೆಯಲ್ಲಿರುವ ಕಾರು ಮಾದರಿಗಳಾಗಿವೆ. ಇದೇ ಕಾರಣಕ್ಕೆ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ವಿಭಾಗದಲ್ಲಿ ಪ್ರಬಲ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿರುವ ಕಿಯಾ ಕಂಪನಿಯು ಸಾಂಪ್ರಾದಾಯಿಕ ವಾಹನಗಳ ಜೊತೆ ಇವಿ ಕಾರುಗಳ ಮೇಲೂ ಗಮನಹರಿಸುತ್ತಿದೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

ಹೆಚ್ಚುತ್ತಿರುವ ಮಾಲಿನ್ಯ ತಡೆ ಮತ್ತು ಇಂಧನಗಳ ಮೇಲಿನ ಅವಲಂಬನೆಯನ್ನು ತಗ್ಗಿಸಲು ವಿವಿಧ ರಾಷ್ಟ್ರಗಳು 2030ರಿಂದ ಹಂತ-ಹಂತವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲಾಗುತ್ತಿದೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ಹೊಸ ನಿರ್ಣಯಗಳಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

ಪ್ರಸಕ್ತ ವರ್ಷದಲ್ಲಿ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಡೀಸೆಲ್ ಕಾರುಗಳ ಮಾರಾಟದಲ್ಲಿ ಸಾಕಷ್ಟು ಇಳಿಕೆಯಾಗಿದೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

ಡೀಸೆಲ್ ಕಾರುಗಳ ಬಳಕೆಗೆ ಹಲವಾರು ನಿರ್ಬಂಧ ವಿಧಿಸುತ್ತಿರುವ ಯುರೋಪ್ ಒಕ್ಕೂಟವು ಎಲೆಕ್ಟ್ರಿಕ್ ವಾಹನಗಳ ಮಾರಾಟ ಮತ್ತು ಬಳಕೆಗೆ ಸಾಕಷ್ಟು ವಿನಾಯ್ತಿಗಳನ್ನು ನೀಡುತ್ತಿರುವುದೇ ಇವಿ ವಾಹನಗಳ ಬಳಕೆ ಹೆಚ್ಚಳವಾಗಲು ಪ್ರಮುಖ ಕಾರಣವಾಗಿದೆ. ಮುಂಬರುವ ದಿನಗಳಲ್ಲಿ ಡೀಸೆಲ್ ಜೊತೆಗೆ ಪೆಟ್ರೋಲ್ ವಾಹನಗಳ ಬಳಕೆಯನ್ನು ನಿರ್ಬಂಧಿಸುವತ್ತ ಹಲವಾರು ಹೊಸ ನೀತಿಗಳನ್ನು ಜಾರಿಗೆ ತರಲಾಗುತ್ತಿದ್ದು, ಇವಿ ವಾಹನಗಳ ಅಭಿವೃದ್ದಿ ಕುರಿತಂತೆ ಕಿಯಾ ಕಂಪನಿಯು ಕೂಡಾ ಹೊಸ ನಿರ್ಣಯ ಕೈಗೊಂಡಿದೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

ಜಗತ್ತಿನ ಎಂಟನೇ ಅತಿ ದೊಡ್ಡ ಕಾರು ಉತ್ಪಾದನಾ ಕಂಪನಿಯಾಗಿರುವ ದಕ್ಷಿಣ ಕೊರಿಯಾದ ಕಿಯಾ ಕಂಪನಿಯು ಕೂಡಾ 2040ರ ವೇಳೆಗೆ ಸಂಪೂರ್ಣವಾಗಿ ಇವಿ ವಾಹನಗಳನ್ನು ಮಾತ್ರ ಉತ್ಪಾದನೆ ಮಾಡುವುದಾಗಿ ನಿರ್ಣಯ ಕೈಗೊಂಡಿದ್ದು, ಹೊಸ ಗುರಿಸಾಧನೆಗಾಗಿ ಈಗಿನಿಂದಲೇ ಹೊಸ ಯೋಜನೆಗಳತ್ತ ಗಮನಹರಿಸಿದೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

2025ರ ವೇಳೆ ವಿವಿಧ ರಾಷ್ಟ್ರಗಳಲ್ಲಿ ಸುಮಾರು 10ಕ್ಕೂ ಹೆಚ್ಚು ಹೊಸ ಇವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆ ಹೊಂದಿದ್ದು, ಭಾರತದಲ್ಲೂ ಕಿಯಾ ಕಂಪನಿಯು ವಿವಿಧ ಇವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ಸೊಲ್, ನಿರೋ ಮತ್ತು ಇವಿ6 ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಸೀಮಿತ ಮಾರುಕಟ್ಟೆಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರುವ ಪ್ರಸ್ತುತ ಇವಿ ಮಾದರಿಗಳು ಶೀಘ್ರದಲ್ಲೇ ವಿವಿಧ ರಾಷ್ಟ್ರಗಳಲ್ಲಿ ಮಾರಾಟಗೊಳ್ಳಲಿವೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

ಚಾರ್ಜಿಂಗ್ ಸೌಲಭ್ಯಗಳ ಆಧಾರದ ಮೇಲೆ ಇವಿ ವಾಹನ ಮಾರಾಟವನ್ನು ವಿಸ್ತರಿಸುತ್ತಿರುವ ಕಾರು ಕಂಪನಿಗಳು ಹೆಚ್ಚಿನ ಸಂಖ್ಯೆಯ ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೆ ಎದುರು ನೋಡುತ್ತಿದ್ದು, 2030ರ ವೇಳೆಗೆ ಭಾರತದಲ್ಲಿ ಸುಮಾರು ಶೇ.60 ರಷ್ಟು ಇವಿ ಮಾರಾಟವು ಹೆಚ್ಚಳವಾಗುವ ನೀರಿಕ್ಷೆಯಿದೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

2022ರಲ್ಲಿ ತನ್ನ ಮೊದಲ ಇವಿ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವ ನೀರಿಕ್ಷೆಯಲ್ಲಿರುವ ಕಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಕಾರೆನ್ಸ್ ಎಸ್‌ಯುವಿ ಬಿಡುಗಡೆ ನಂತರವಷ್ಟೇ ಇವಿ6 ಮಾದರಿಯನ್ನು ಬಿಡುಗಡೆ ಮಾಡಲಿದೆ ಎನ್ನಲಾಗಿದೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

ಕಾರೆನ್ಸ್ ಎಸ್‌ಯುವಿ ಮಾದರಿಯು ಮುಂದಿನ ಫೆಬ್ರವರಿ ಅಥವಾ ಮಾರ್ಚ್ ಹೊತ್ತಿಗೆ ಬಿಡುಗಡೆಯಾಗಲಿದ್ದು, ಕಾರೆನ್ಸ್ ಬಿಡುಗಡೆಯ ನಂತರ 2022ರ ವರ್ಷಾಂತ್ಯಕ್ಕೆ ಇವಿ6 ಕ್ರಾಸ್ಓವರ್ ಎಲೆಕ್ಟ್ರಿಕ್ ಕಾರು ಮಾದರಿಯು ಬಿಡುಗಡೆಯಾಗಬಹುದಾಗಿದೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

ಇವಿ6 ಕ್ರಾಸ್‌ಓವರ್ ಎಸ್‌ಯುವಿ ಮಾದರಿಯು ಇ-ಜಿಎಂಪಿ ಪ್ಲ್ಯಾಟ್‌ಫಾರ್ಮ್ ಆಧರಿಸಿ ಅಭಿವೃದ್ದಿಗೊಂಡಿದ್ದು, 576-ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಹೊಸ ಕಾರು 400ವಿ ಮತ್ತು 800ವಿ ಸೂಪರ್ ಫಾಸ್ಟ್ ಚಾರ್ಜಿಂಗ್ ಸರ್ಪೋಟ್ ಹೊಂದಿದೆ.

ಕಾರೆನ್ಸ್ ಎಸ್‌ಯುವಿ ಬಿಡುಗಡೆಯ ನಂತರ ಇವಿ6 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲಿದೆ ಕಿಯಾ

ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 480 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಸೂಪರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಗರಿಷ್ಠ ಪ್ರಮಾಣ ಚಾರ್ಜ್ ಮಾಡಬಹುದಾಗಿದೆ. ಸೂಪರ್ ಫಾಸ್ಟ್ ಚಾರ್ಜರ್ ಮೂಲಕ ಕೇವಲ 5 ನಿಮಿಷ ಚಾರ್ಜ್ ‌ಮಾಡಿದರೆ 112 ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದಾಗಿದ್ದು, 18 ನಿಮಿಷ ಚಾರ್ಜ್ ಮಾಡಿದ್ದಲ್ಲಿ 330 ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

Most Read Articles

Kannada
English summary
Kia ev6 electric suv expected launch in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X