ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಕಿಯಾ ಇವಿ6 ಸೋಲ್ಡ್ ಔಟ್

ಇವಿ ವಾಹನ ನೀತಿ ಪರಿಣಾಮವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಳವಾಗುತ್ತಿದ್ದು, ಇವಿ ವಾಹನ ಖರೀದಿದಾರರಿಗೆ ಮತ್ತು ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಹೊಸ ಬದಲಾವಣೆ ಕಾರಣವಾಗುತ್ತಿದೆ.

ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಕಿಯಾ ಇವಿ6 ಸೋಲ್ಡ್ ಔಟ್

ಕಿಯಾ ಮೋಟಾರ್ಸ್ ಕಂಪನಿಯು ಸಹ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭಾರೀ ಸಂಚಲನ ಮೂಡಿಸುತ್ತಿದ್ದು, ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಇವಿ6 ಕಾರು ಮಾದರಿಯ ಬಿಡುಗಡೆಗೆ ಸಿದ್ದವಾಗುತ್ತಿದೆ. ಕಿಯಾ ಕಂಪನಿಯು ಹೊಸ ಕಾರು ಬಿಡುಗಡೆಗೂ ಮುನ್ನ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಈ ವರ್ಷ ಮಾರಾಟ ಮಾಡಲು ಉದ್ದೇಶಿಸಿರುವ ಇವಿ6 ಯುನಿಟ್‌ಗಳು ಪೂರ್ತಿಯಾಗಿ ಬುಕ್ಕಿಂಗ್ ಭರ್ತಿಯಾಗಿವೆ.

ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಕಿಯಾ ಇವಿ6 ಸೋಲ್ಡ್ ಔಟ್

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಹೊಸ ಇವಿ ನೀತಿಯಿಂದಾಗಿ ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಕಿಯಾ ಇವಿ6 ಸೋಲ್ಡ್ ಔಟ್

2020ರಲ್ಲೇ ಅಮೆರಿಕ ಮತ್ತು ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 8 ಲಕ್ಷಕ್ಕೂ ಅಧಿಕ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಡೀಸೆಲ್ ಕಾರುಗಳ ಮಾರಾಟದಲ್ಲಿ ಸಾಕಷ್ಟು ಇಳಿಕೆಯಾಗಿದೆ.

ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಕಿಯಾ ಇವಿ6 ಸೋಲ್ಡ್ ಔಟ್

ಗ್ರಾಹಕರ ಬೇಡಿಕೆಯೆಂತೆ ದಕ್ಷಿಣ ಕೊರಿಯಾದ ಕಿಯಾ ಮೋಟಾರ್ಸ್ ಕಂಪನಿಯು ಇವಿ ವಾಹನ ಮಾರಾಟದಲ್ಲಿ ಹೊಸ ನೀರಿಕ್ಷೆಯೊಂದಿಗೆ ವಿವಿಧ ಇವಿ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಅಮರಿಕಾ ಮಾರುಕಟ್ಟೆಗಾಗಿ ಹೊಸ ತಂತ್ರಜ್ಞಾನ ಪ್ರೇರಿತ ಇವಿ6 ಕ್ರಾಸ್ ಓವರ್ ಎಸ್‌ಯುವಿ ಮಾದರಿಯನ್ನು ಅಭಿವೃದ್ದಿಗೊಳಿಸಿ ಅನಾವರಣಗೊಳಿಸಿದೆ.

ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಕಿಯಾ ಇವಿ6 ಸೋಲ್ಡ್ ಔಟ್

2022ರ ಆರಂಭದಲ್ಲಿ ಹೊಸ ಕಾರು ವಿತರಣೆ ಆರಂಭಿಸುವ ಸುಳಿವು ನೀಡಿರುವ ಕಂಪನಿಯು ಅಮೆರಿಕ ಮಾರುಕಟ್ಟೆಗಾಗಿಯೇ ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಳಿಸಿ ಬುಕ್ಕಿಂಗ್ ಆರಂಭಿಸಿದೆ. ಬುಕ್ಕಿಂಗ್ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಹೊಸ ಕಾರಿನ ಉತ್ಪಾದನಾ ಸಂಖ್ಯೆ ಲಭ್ಯತೆಯ ಆಧರಿಸಿ ಸಾವಿರಾರು ಗ್ರಾಹಕರು ಹೊಸ ಕಾರು ಖರೀದಿಗೆ ಬುಕ್ಕಿಂಗ್ ಸಲ್ಲಿಕೆ ಮಾಡಿದ್ದು, ಹೊಸ ಕಾರು ಸದ್ಯಕ್ಕೆ ಅಮೆರಿಕದಲ್ಲಿ ಮಾತ್ರ ಮಾರಾಟಗೊಳ್ಳಲಿದೆ.

ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಕಿಯಾ ಇವಿ6 ಸೋಲ್ಡ್ ಔಟ್

ಮಧ್ಯಮ ಕ್ರಮಾಂಕದ ಐಷಾರಾಮಿ ಕಾರು ಮಾದರಿಯಾಗಿ ಬಿಡುಗಡೆಯಾಗಲಿರುವ ಇವಿ6 ಮಾದರಿಯಲ್ಲಿ ಸಾಕಷ್ಟು ಹೊಸ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಆಕರ್ಷಕ ವಿನ್ಯಾಸದೊಂದಿಗೆ ಎಸ್‌ಯುವಿ ಕಾರು ಖರೀದಿದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಕಿಯಾ ಇವಿ6 ಸೋಲ್ಡ್ ಔಟ್

ಇವಿ6 ಕ್ರಾಸ್ ಓವರ್ ಎಸ್‌ಯುವಿ ಮಾದರಿಯು ಇ-ಜಿಎಂಪಿ ಪ್ಲ್ಯಾಟ್‌ಫಾರ್ಮ್ ಆಧರಿಸಿ ಅಭಿವೃದ್ದಿಗೊಂಡಿದ್ದು, 576-ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಹೊಸ ಕಾರು 400ವಿ ಮತ್ತು 800ವಿ ಸೂಪರ್ ಫಾಸ್ಟ್ ಚಾರ್ಜಿಂಗ್ ಸರ್ಪೋಟ್ ಹೊಂದಿದೆ.

ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಕಿಯಾ ಇವಿ6 ಸೋಲ್ಡ್ ಔಟ್

ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 480 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಸೂಪರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಗರಿಷ್ಠ ಪ್ರಮಾಣ ಚಾರ್ಜ್ ಮಾಡಬಹುದಾಗಿದೆ.

ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಕಿಯಾ ಇವಿ6 ಸೋಲ್ಡ್ ಔಟ್

ಸೂಪರ್ ಫಾಸ್ಟ್ ಚಾರ್ಜರ್ ಮೂಲಕ ಕೇವಲ 5 ನಿಮಿಷ ಚಾರ್ಜ್ ‌ಮಾಡಿದರೆ 112 ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದಾಗಿದ್ದು, 18 ನಿಮಿಷ ಚಾರ್ಜ್ ಮಾಡಿದ್ದಲ್ಲಿ 330 ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಕಿಯಾ ಇವಿ6 ಸೋಲ್ಡ್ ಔಟ್

ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಲು 50 ನಿಮಿಷ ಕಾಲ ಸಮಯಾವಕಾಶ ತೆಗೆದುಕೊಳ್ಳಲಿದ್ದು, ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಆದಲ್ಲಿ 480 ಕಿ.ಮೀ ಮೈಲೇಜ್ ಹಿಂಪಡೆಯಬಹುದಾಗಿದೆ. ಹೊಸ ಕಾರಿನಲ್ಲಿ ಹಲವಾರು ಹೊಸ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳಿಂದಾಗಿ ತುಸು ದುಬಾರಿಯಾಗಿರಲಿದ್ದು, ಈ ಹೊಸ ಕಾರು ಸದ್ಯಕ್ಕೆ ಅಮೆರಿಕ ಮತ್ತು ಯುರೋಪಿನ ಕೆಲವೇ ಕೆಲವು ರಾಷ್ಟ್ರಗಳಿಗಾಗಿ ಮಾತ್ರ ಅಭಿವೃದ್ದಿಪಡಿಸಲಾಗಿದೆ.

More from DriveSpark

Article Published On: Friday, June 11, 2021, 12:23 [IST]
English summary
Kia EV6 Sold Out In Hours In US Market. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+