Seltos ಮತ್ತು Sonet ಕಾರುಗಳ ಬೆಲೆಯನ್ನು ಹೆಚ್ಚಿಸಿದ Kia India

ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಕಿಯಾ ಇಂಡಿಯಾ(Kia India) ಕಂಪನಿಯು ಸಹ ತನ್ನ ವಿವಿಧ ಕಾರು ಮಾದರಿಗಳ ಬೆಲೆ ಹೆಚ್ಚಿಸಿದೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಕೋವಿಡ್‌ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ಕೊರತೆಯು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಹೆಚ್ಚುತ್ತಿರುವ ವೆಚ್ಚಗಳ ನಿರ್ವಹಣೆಗಾಗಿ ಆಟೋ ಕಂಪನಿಗಳು ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿವೆ. ಕಿಯಾ ಇಂಡಿಯಾ ಸಹ ಸೆಪ್ಟೆಂಬರ್ 1ರಿಂದಲೇ ಅನ್ವಯವಾಗುವಂತೆ ಬೆಲೆ ಹೆಚ್ಚಳ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ವಾಹನ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಕೋವಿಡ್‌ಗೂ ಮುನ್ನ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ದರ ಹೆಚ್ಚಿಸುತ್ತಿದ್ದು, 2021ರಲ್ಲೇ ಕಿಯಾ ಇಂಡಿಯಾ ಕಂಪನಿಯು ಹೊಸ ಕಾರುಗಳ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಿಸುತ್ತಲೇ ಇದೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳ ಮೂಲ ಬೆಲೆಯಲ್ಲಿ ಶೇ.1 ರಿಂದ ಶೇ.2 ರಷ್ಟು ಬೆಲೆ ಹೆಚ್ಚಿಸುತ್ತಿದ್ದು, ಕಳೆದ ಕೆಲ ತಿಂಗಳಿನಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿ ರೂ. 60 ಸಾವಿರದಿಂದ ರೂ.1.20 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 80 ಸಾವಿರದಿಂದ ರೂ. 1.50 ಲಕ್ಷದವರೆಗೆ ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗುತ್ತಿರುವ ಪರಿಣಾಮವೇ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಕಳೆದ ಜನವರಿ, ಏಪ್ರಿಲ್‌ ಮತ್ತು ಜೂನ್‌ನಲ್ಲಿ ಬೆಲೆ ಏರಿಕೆ ಮಾಡಿದ ಕಿಯಾ ಇಂಡಿಯಾ ಕಂಪನಿಯು ಇದೀಗ ಮತ್ತೆ Seltos(ಸೆಲ್ಟೊಸ್) ಮತ್ತು Sonet(ಸೊನೆಟ್) ದರ ಹೆಚ್ಚಿಸಿದ್ದು, ಹೊಸ ದರ ಪಟ್ಟಿಯಲ್ಲಿ ಕಾರ್ನಿವಾಲ್(Carnival) ಮಾದರಿಯ ಬೆಲೆಯಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.10 ಸಾವಿರದಿಂದ ರೂ. 20 ಸಾವಿರ ತನಕ ಬೆಲೆ ಹೆಚ್ಚಳ ಮಾಡಿದ್ದು, ಹೊಸ ದರ ಪಟ್ಟಿ ಬಿಡುಗಡೆಯ ನಂತರ ಸೆಲ್ಟೊಸ್ ಬೆಲೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.95 ಲಕ್ಷದಿಂದ ಟಾಪ್ ಎಂಡ್ ಮಾದರಿಯ ಬೆಲೆಯು ರೂ.18.10 ಲಕ್ಷ ಬೆಲೆ ಹೊಂದಿದೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಹಾಗೆಯೇ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಸೊನೆಟ್ ಕಾರಿನ ಬೆಲೆಯು ಹೊಸ ದರ ಪಟ್ಟಿಯಲ್ಲಿ ರೂ. 6.89 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.45 ಲಕ್ಷ ಬೆಲೆ ಹೊಂದಿದೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಇನ್ನು ಕಿಯಾ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ವಾಹನಗಳ ಖರೀದಿ ಪ್ರಕ್ರಿಯೆಗೆ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿದೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಆಟೋ ಉದ್ಯಮವು ಕಳೆದ ಕೆಲ ವರ್ಷಗಳಲ್ಲಿ ಹಲವಾರು ಬದಲಾವಣೆಗಳಿಗೆ ಸಾಕ್ಷಿಯಾಗಿದ್ದು, ಹೊಸ ವಾಹನಗಳ ಮಾರಾಟವು ಪರಿಸ್ಥಿತಿಗೆ ಅನುಗುಣವಾಗಿ ಏರಿಳಿಕೆ ಕಾಣುತ್ತಿರುತ್ತದೆ. ಆದರೆ ಕರೋನಾ ವೈರಸ್ ಪರಿಣಾಮದಿಂದಾಗಿ ಹೊಸ ವಾಹನ ಮಾರಾಟಕ್ಕಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಸಾಕಷ್ಟು ಬಳಕೆಯಾಗುತ್ತಿರುವುದು ಹೊಸ ಬೆಳವಣಿಗೆಗೆ ಕಾರಣವಾಗಿದೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಹೊಸ ವಾಹನ ಖರೀದಿಗಾಗಿ ಬಹುತೇಕ ಗ್ರಾಹಕರು ನೇರವಾಗಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಸಾಮಾನ್ಯವಾಗಿರುತ್ತದೆ. ಆದರೆ ಕರೋನಾ ವೈರಸ್ ಪರಿಣಾಮ ಗ್ರಾಹಕರನ್ನು ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಖರೀದಿ ಪ್ರಕ್ರಿಯೆಯತ್ತ ಸೆಳೆಯಲು ಆಟೋ ಕಂಪನಿಗಳು ಮಾಡಿದ ಹೊಸ ಪ್ರಯತ್ನವು ಇದೀಗ ಸಾಕಷ್ಟು ಪ್ರಯೋಜಕಾರಿಯಾಗುತ್ತಿದೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ವೈರಸ್ ಹರಡುವಿಕೆಯ ಸಂದರ್ಭದಲ್ಲಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಪ್ರಕ್ರಿಯೆಯನ್ನು ಸರಳಗೊಳಿಸಲು ಆನ್‌ಲೈನ್ ಮಾರಾಟ ಮಳಿಗೆಗಳು ಸಾಕಷ್ಟು ಸಹಕಾರಿಯಾಗಿದ್ದು, ಬಳಕೆದಾರರ ಸಂಖ್ಯೆಯಲ್ಲೂ ಕೂಡಾ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಕೋವಿಡ್ 19 ಹರಡುವಿಕೆಗೂ ಮೊದಲೇ ಹಲವಾರು ಆಟೋ ಕಂಪನಿಗಳು ಆನ್‌ಲೈನ್ ಪ್ಲ್ಯಾಟ್ ತೆರೆದಿದ್ದರೂ ಬಳಕೆದಾರರ ಸಂಖ್ಯೆಯು ತೀರಾ ವಿರಳವಾಗಿತ್ತು. ಆದರೆ ಕರೋನಾ ವೈರಸ್ ಹೆಚ್ಚಳವಾಗುತ್ತಿದ್ದಂತೆ ಸಾಮಾಜಿಕ ಅಂತರ ಅಗತ್ಯವಾಯಿತೋ ಆಗಿನಿಂದ ವಾಹನ ಮಾರಾಟಕ್ಕಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳ ಬಳಕೆಯು ಹೆಚ್ಚಳವಾಯ್ತು.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನಲ್ಲಿ ವರ್ಚುವಲ್ ಶೋರೂಂಗಳ ಮೂಲಕ ವಾಹನ ಕುರಿತಾದ ಮಾಹಿತಿಯನ್ನು ಅತಿ ಸುಲಭವಾಗಿ ಪಡೆಯಬಹುದಾಗಿದ್ದು, ಆನ್‌ಲೈನ್ ಮೂಲಕವೇ ವಾಹನಗಳಲ್ಲಿನ ತಾಂತ್ರಿಕ ಅಂಶಗಳ ಆಯ್ಕೆಯ ಮೂಲಕ ನಾವು ಖರೀದಿ ಮಾಡುವ ವಾಹನವು ಹೀಗೆ ಇರಬೇಕು ಎಂಬುವುದನ್ನು ನಿರ್ಧರಿಸಬಹುದಾಗಿದೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ವರ್ಚುವಲ್ ಶೋರೂಂ ಆಧಾರದ ಮೇಲೆಯೇ ಕಿಯಾ ಇಂಡಿಯಾ ಸಹ ಇದೀಗ ಡಿಜಿಟಲ್ ಶೋರೂಂ ತೆರೆದಿದ್ದು, ವಾಹನ ಮಾರಾಟ ಮಳಿಗೆಯಲ್ಲಿಯೇ ವಾಹನ ವೀಕ್ಷಣೆಗೆ ಬಯಸುವ ಗ್ರಾಹಕರಿಗೆ ಡಿಜಿಟಲ್ ಶೋರೂಂ ಸಹಕಾರಿಯಾಗಿದೆ.

Seltos, Sonet ಕಾರುಗಳ ಬೆಲೆ ಹೆಚ್ಚಿಸಿದ Kia

ಡಿಜಿಟಲ್ ಶೋರೂಂನಲ್ಲಿ ಕಿಯಾ ಕಂಪನಿಯು 3ಡಿ ಪರದೆಗಳ ಮೂಲಕ ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದ್ದು, ಶೋರೂಂ ಭೇಟಿ ನೀಡುವ ಗ್ರಾಹಕರು 3ಡಿ ಪರದೆ ಮೂಲಕ ತಮ್ಮ ಇಷ್ಟದ ಕಾರು ಮಾದರಿಯ ಕುರಿತು ಸಂಪೂರ್ಣ ಮಾಹಿತಿ ಪಡೆಯಬಹುದಾಗಿದೆ.

Most Read Articles

Kannada
English summary
Kia increased price for seltos and sonet models details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X