ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ತನ್ನ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಕಿಯಾ ಇಂಡಿಯಾ
ದೇಶಾದ್ಯಂತ ಕೋವಿಡ್ 2ನೇ ಹೆಚ್ಚಿರುವ ಹಿನ್ನಲೆಯಲ್ಲಿ ಅಗತ್ಯ ಸೇವೆಯ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕ ಸಾರಿಗೆ ಸಂಪರ್ಕವು ಸಂಪೂರ್ಣವಾಗಿ ಸ್ತಬ್ದವಾಗಿದ್ದು, ಲಾಕ್‌ಡೌನ್ ಪರಿಣಾಮ ಆಟೋ ಉದ್ಯಮದ ಚಟುವಟಿಕೆಗಳು ಕೂಡಾ ಬಹುತೇಕ ಸ್ಥಗಿತಗೊಂಡಿವೆ.

ಲಾಕ್‌ಡೌನ್ ಸಂದರ್ಭದಲ್ಲಿ ವಾಹನ ಮಾರಾಟಕ್ಕೆ ಕೆಲವು ಕಡೆಗಳಲ್ಲಿ ಷರತ್ತು ಬದ್ದ ಅವಕಾಶಗಳಿದ್ದರೂ ಗ್ರಾಹಕರ ಸೇವೆಗಳನ್ನು ಪೂರೈಸುವುದು ಆಟೋ ಉತ್ಪಾದನಾ ಕಂಪನಿಗಳಿಗೆ ಸವಾಲಿನ ಕೆಲಸವಾಗಿದೆ. ಆದರೆ ನಿಗದಿತ ಅವಧಿಯ ಸೇವೆಗಳನ್ನು ಪಡೆದುಕೊಳ್ಳದ ವಾಹನಗಳ ವಾರಂಟಿ ಅವಧಿಯು ಮುಗಿದುಹೋಗಲಿದ್ದು, ಈ ವಿಚಾರವಾಗಿ ಹಲವಾರು ಹೊಸ ಕಾರು ಖರೀದಿದಾರರು ಗೊಂದಲದಲ್ಲಿದ್ದಾರೆ.

ಗ್ರಾಹಕರ ಗೊಂದಲಕ್ಕೆ ತೆರೆ ಎಳೆದಿರುವ ಕಿಯಾ ಇಂಡಿಯಾ ಕಂಪನಿಯು ಗ್ರಾಹಕರ ಸೇವೆಗಳಿಗಾಗಿ ಗ್ರಾಹಕರು ಹೊರಬರುವುದನ್ನು ತಪ್ಪಿಸಲು ಮತ್ತು ಗ್ರಾಹಕರ ಸೇವೆಗಳನ್ನು ಮನೆ ಬಾಗಲಿಗೆ ತಲುಪಿಸುವ ಉದ್ಯೋಗಿಗಳ ಆರೋಗ್ಯ ದೃಷ್ಠಿಯಿಂದ ಹೊಸ ನಿರ್ಧಾರ ಪ್ರಕಟಿಸಿದೆ.

ವಿವಿಧ ರಾಜ್ಯಗಳಲ್ಲಿ ವಿಧಿಸಲಾಗಿರುವ ಲಾಕ್‌ಡೌನ್ ಸಂದರ್ಭದಲ್ಲಿ ವಾರಂಟಿ ಪೂರ್ಣಗೊಳ್ಳುವ ವಾಹನಗಳಿಗೆ ಹೆಚ್ಚುವರಿ 2 ತಿಂಗಳ ಕಾಲ ಸ್ಟ್ಯಾಂಡರ್ಡ್ ವಾರಂಟಿ ಘೋಷಣೆ ಮಾಡಿದ್ದು, ಗ್ರಾಹಕರು ಮತ್ತು ಸಿಬ್ಬಂದಿಯ ಆರೋಗ್ಯ ದೃಷ್ಠಿಯಿಂದ ವಿಸ್ತರಿತ ವಾರಂಟಿ ಘೋಷಣೆ ಮಾಡಿದೆ.

ವಿಸ್ತರಿತ ವಾರಂಟಿಯಿಂದಾಗಿ ಗ್ರಾಹಕರು ಮುಂದಿನ ದಿನಗಳಲ್ಲಿ ಪರಿಸ್ಥಿತಿ ತುಸು ಸುಧಾರಣೆಗೊಂಡ ನಂತರ ಗ್ರಾಹಕರ ಸೇವೆಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಿದ್ದು, ವಾಹನಗಳ ಖರೀದಿ ಮತ್ತು ಗ್ರಾಹಕರ ಸೇವೆಗಳಿಗಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದೆ. ಕಿಯಾ ಮೋಟಾರ್ಸ್ ಕೂಡಾ ಪರಿಸ್ಥಿತಿಗೆ ಅನುಗುಣವಾಗಿ ವಾಹನ ಉತ್ಪಾದನೆಯಲ್ಲಿ ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನೆ ಮುಂದುವರಿಸಿದ್ದು, ಕಾರುಗಳ ಖರೀದಿಯನ್ನು ಸುರಕ್ಷಿತವಾಗಿಸಲು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೇಲೆ ಗಮನಹರಿಸಿದೆ.

ಕಿಯಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಗಳಾದ ಸೆಲ್ಟೊಸ್ ಮತ್ತು ಸೊನೆಟ್ ಆವೃತ್ತಿಯ 2021ರ ಮಾದರಿಗಳನ್ನು ಕಳೆದ ವಾರವಷ್ಟೇ ಬಿಡುಗಡೆಗೊಳಿಸಿದ್ದು, ಹೊಸ ಕಾರುಗಳು ಬ್ರಾಂಡ್ ನ್ಯೂ ಲೊಗೊ ಸೇರಿದಂತೆ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿವೆ.

ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಕಾರು ಮಾರಾಟ ಜಾಲ ಹೊಂದಿರುವ ಕಿಯಾ ಕಂಪನಿಯು ತನ್ನ ಹೊಸ ಕಾರು ಮಾದರಿಗಳಲ್ಲಿ ಬದಲಾವಣೆ ತರುವ ಉದ್ದೇಶದಿಂದ ವಿನೂತನ ಲೊಗೊ ಸೇರ್ಪಡೆಗೊಳಿಸಿದ್ದು, ಆರಂಭಿಕವಾಗಿ ಭಾರತದಲ್ಲಿ ಹೊಸ ಲೊಗೊ ಹೊಂದಿರುವ ಸೆಲ್ಟೊಸ್ ಮತ್ತು ಸೊನೆಟ್ ಮಾದರಿಗಳನ್ನು ಬಿಡುಗಡೆ ಮಾಡಿದೆ.

2021ರ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳಲ್ಲಿ ಹೊಸ ಲೊಗೊ ವಿನ್ಯಾಸವು ಕಾರುಗಳಿಗೆ ಮತ್ತಷ್ಟು ಮೆರಗು ನೀಡುತ್ತಿದ್ದು, ಹೊಸ ಕಾರುಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.79 ಲಕ್ಷ(ಸೊನೆಟ್) ಮತ್ತು ರೂ. 9.95 ಲಕ್ಷ(ಸೆಲ್ಟೊಸ್) ಬೆಲೆ ಹೊಂದಿವೆ.
MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

2021ರ ಸೆಲ್ಟೊಸ್ ಕಾರು ಮಾದರಿಯು ಹಳೆಯ ಆವೃತ್ತಿಗಿಂತಲೂ ರೂ. 6 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದ್ದು, ಬೇಡಿಕೆಯ ಆಧಾರದ ಮೇಲೆ ಸೆಲ್ಟೊಸ್ ಹೆಚ್‌ಟಿಎಕ್ಸ್ ಪ್ಲಸ್ 1.5 ಡೀಸೆಲ್ ಆವೃತ್ತಿಯ ಮಾರಾಟವನ್ನು ಸ್ಥಗಿತಗೊಳಿಸಿದೆ.

ಹಾಗೆಯೇ ಕಂಪನಿಯು ಹೆಚ್‌ಟಿಕೆ ಪ್ಲಸ್ 1.5-ಲೀಟರ್ ಪೆಟ್ರೋಲ್ ಮಾದರಿಯಲ್ಲಿ ಹೊಸದಾಗಿ ಐಎಂಟಿ(ಇಂಟಲಿಜೆನ್ಸ್ ಮ್ಯಾನುವಲ್ ಟ್ರಾನ್ಸ್‌ಮಿಷನ್) ಆಯ್ಕೆ ನೀಡಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಹೊಸದಾಗಿ ಕಂಪನಿಯು ಜಿಟಿಎಕ್ಸ್ ಆಪ್ಷನ್ ಆವೃತ್ತಿಯಲ್ಲಿ ಪೆಟ್ರೋಲ್ ಮ್ಯಾನುವಲ್ ಹೊಂದಿರುವ 1.4-ಲೀಟರ್ ಟರ್ಬೊ ಎಂಜಿನ್ ಆಯ್ಕೆ ನೀಡಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಇನ್ನುಳಿದಂತೆ ಸೊನೆಟ್ ಕಾರು ಮಾದರಿಯು ಹೊಸ ಲೊಗೊ ಹೊರತುಪಡಿಸಿ ಪ್ರಸ್ತುತ ಮಾರುಕಟ್ಟೆಯಲ್ಲಿರುವಂತೆ ತಾಂತ್ರಿಕ ಅಂಶಗಳನ್ನು ಮುಂದುವರಿಸಿದ್ದು, ಹೊಸ ಕಾರು 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.


Click it and Unblock the Notifications








