ಕೋವಿಡ್ ಸಂಕಷ್ಟ: ಸರ್ಕಾರಕ್ಕೆ ರೂ. 5 ಕೋಟಿ ನೆರವು ನೀಡಿದ ಕಿಯಾ ಇಂಡಿಯಾ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಕಠಿಣ ಕ್ರಮಗಳೊಂದಿಗೆ ಕೋವಿಡ್ 2ನೇ ಅಲೆಯ ನಿಯಂತ್ರಣಕ್ಕಾಗಿ ಹರಸಾಹಸಪಡುತ್ತಿದ್ದು, ಸರ್ಕಾರದ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕೂಡಾ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿಯಲ್ಲಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಸರ್ಕಾರಕ್ಕೆ ರೂ. 5 ಕೋಟಿ ನೆರವು ನೀಡಿದ ಕಿಯಾ ಇಂಡಿಯಾ

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯ ಸರ್ಕಾರಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸಲಾಗುತ್ತಿದೆ.

ಸರ್ಕಾರಕ್ಕೆ ರೂ. 5 ಕೋಟಿ ನೆರವು ನೀಡಿದ ಕಿಯಾ ಇಂಡಿಯಾ

ವೈರಸ್ ಹರಡುವಿಕೆ ತೀವ್ರವಾಗಿರುವುದರಿಂದ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳನ್ನು ಉನ್ನತೀಕರಿಸಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಕ್ಕೆ ಆಟೋ ಮೊಬೈಲ್ ಕಂಪನಿಗಳು ಕೂಡಾ ಸಾಕಷ್ಟು ಸಹಕಾರ ನೀಡುತ್ತಿವೆ.

ಸರ್ಕಾರಕ್ಕೆ ರೂ. 5 ಕೋಟಿ ನೆರವು ನೀಡಿದ ಕಿಯಾ ಇಂಡಿಯಾ

ವಾಹನ ಉತ್ಪಾದನೆ ಸ್ಥಗಿತವಾಗಿರುವುದರಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದ ನಡುವೆಯೂ ಆಟೋ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ವಿವಿಧ ರೀತಿಯ ಸಹಕಾರ ನೀಡುತ್ತಿದ್ದು, ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳಲ್ಲಿ ಒಂದಾಗಿರುವ ಕಿಯಾ ಇಂಡಿಯಾ ಕಂಪನಿಯು ಸಹ ವೈರಸ್ ನಿಯಂತ್ರಣಕ್ಕಾಗಿ ಹಲವಾರು ರೀತಿಯ ನೆರವು ನೀಡಿದೆ.

ಸರ್ಕಾರಕ್ಕೆ ರೂ. 5 ಕೋಟಿ ನೆರವು ನೀಡಿದ ಕಿಯಾ ಇಂಡಿಯಾ

ಕಳೆದ ವರ್ಷ ಕೋವಿಡ್ ಹೆಚ್ಚಳವಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ರೂ. 2 ಕೋಟಿ ಆರ್ಥಿಕ ನೆರವಿನ ಜೊತೆಗೆ 2 ಲಕ್ಷ ಎನ್95 ಮಾಸ್ಕ್‌ಗಳನ್ನು ವಿವಿಧ ರಾಜ್ಯಗಳಿಗೆ ವಿತರಿಸಿದ್ದ ಕಿಯಾ ಇಂಡಿಯಾ ಕಂಪನಿಯು ಇದೀಗ 2ನೇ ಅಲೆಯ ಸಂದರ್ಭದಲ್ಲಿ ವಿವಿಧ ರೀತಿಯ ಸಹಕಾರ ನೀಡುತ್ತಿದ್ದು, ಆಕ್ಸಿಜನ್ ಉತ್ಪಾದನೆ ಮತ್ತು ವೈದ್ಯಕೀಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ ಆಂಧ್ರಪ್ರದೇಶ ಸರ್ಕಾರಕ್ಕೆ ರೂ.5 ಕೋಟಿ ದೇಣಿಗೆ ನೀಡಿದೆ.

ಸರ್ಕಾರಕ್ಕೆ ರೂ. 5 ಕೋಟಿ ನೆರವು ನೀಡಿದ ಕಿಯಾ ಇಂಡಿಯಾ

ಕಿಯಾ ಇಂಡಿಯಾ ಕಂಪನಿಯ ಹಿರಿಯ ಅಧಿಕಾರಿಗಳು 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಗೆ ಚೆಕ್ ಹಸ್ತಾಂತರಿಸಿದ್ದು, ಆಂಧ್ರಪ್ರದೇಶದಲ್ಲಿ ತನ್ನ ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಕಾರಣ ಕಂಪನಿಯು ಸ್ಥಳೀಯ ಆಡಳಿತ ವ್ಯವಸ್ಥೆಗೆ ಹೆಚ್ಚಿನ ಮಟ್ಟದ ನೆರವು ಘೋಷಣೆ ಮಾಡಿದೆ.

MOST READ: ಲಾಕ್‌ಡೌನ್ ಉಲ್ಲಂಘನೆ ಮಾಡಿರುವ ವಾಹನ ಮಾಲೀಕರಿಗೆ ಜೈಲು ಶಿಕ್ಷೆ ಫಿಕ್ಸ್

ಸರ್ಕಾರಕ್ಕೆ ರೂ. 5 ಕೋಟಿ ನೆರವು ನೀಡಿದ ಕಿಯಾ ಇಂಡಿಯಾ

ಇನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿಯಲ್ಲಿ ಕಿಯಾ ಇಂಡಿಯಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಮಟ್ಟದ ನೆರವು ನೀಡಿದ್ದು, ಕೆಲವು ಕಂಪನಿಗಳು ಹಣಕಾಸು ನೆರವು ನೀಡಿದ್ದಲ್ಲಿ ಇನ್ನು ಕೆಲವು ವಾಹನ ಕಂಪನಿಗಳು ವೈದ್ಯಕೀಯ ಸೇವೆಗಳನ್ನು ಉನ್ನತೀಕರಿಸಲು ವೆಂಟಿಲೇಟರ್ ಉತ್ಪಾದನೆ ಮತ್ತು ಆಕ್ಸಿಜನ್ ಉತ್ಪಾದನೆಗೆ ಸಹಕಾರಿಯಾಗುತ್ತಿವೆ.

ಸರ್ಕಾರಕ್ಕೆ ರೂ. 5 ಕೋಟಿ ನೆರವು ನೀಡಿದ ಕಿಯಾ ಇಂಡಿಯಾ

ವಾಹನ ಉತ್ಪಾದನೆ ಮತ್ತು ಮಾರಾಟವಿಲ್ಲದೆ ನಷ್ಟದ ಸಂದರ್ಭದಲ್ಲೂ ವಿವಿಧ ವಾಹನ ಉತ್ಪಾದನಾ ಕಂಪನಿಗಳು ವೈರಸ್ ಹರಡುವಿಕೆ ತಡೆಯಲು ಪ್ರಯತ್ನಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆ ಕೈಜೋಡಿಸಿವೆ.

MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಸರ್ಕಾರಕ್ಕೆ ರೂ. 5 ಕೋಟಿ ನೆರವು ನೀಡಿದ ಕಿಯಾ ಇಂಡಿಯಾ

ಅದರಲ್ಲೂ ಎರಡನೇ ಅಲೆಯ ಕೋವಿಡ್ ಅಬ್ಬರದಿಂದ ಉಂಟಾಗಿರುವ ಆಕ್ಸಿಜನ್ ಕೊರತೆ ನಿಗಿಸಲು ಸರ್ಕಾರಕ್ಕೆ ಹೆಚ್ಚಿನ ನೆರವು ನೀಡುತ್ತಿರುವ ವಿವಿಧ ಆಟೋ ಉತ್ಪಾದನಾ ಕಂಪನಿಗಳು ವಾಹನ ಉತ್ಪಾದನಾ ಘಟಕದಲ್ಲೇ ಆಕ್ಸಿಜನ್ ಉತ್ಪಾದಿಸಲು ಅವಕಾಶ ನೀಡುತ್ತಿರುವುದು ಸದ್ಯದ ಪರಿಸ್ಥಿತಿಗೆ ಸಾಕಷ್ಟು ಸಹಕಾರಿಯಾಗಿದೆ.

More from DriveSpark

Article Published On: Friday, May 21, 2021, 13:03 [IST]
English summary
Kia India Pledges Rs 5 Crore To Andhra Pradesh Government To Fight The Pandemic. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+