ಸೆಪ್ಟೆಂಬರ್ ತಿಂಗಳಿನಲ್ಲಿ 14,441 ಕಾರುಗಳನ್ನು ಮಾರಾಟ ಮಾಡಿದ Kia India

ಕೊರಿಯಾ ಮೂಲದ ಜನಪ್ರಿಯ ವಾಹನ ತಯಾರಕ ಕಂಪನಿಯಾದ ಕಿಯಾ ಇಂಡಿಯಾ(Kia India) 2021ರ ಆಗಸ್ಟ್ ತಿಂಗಳ ಮಾಸಿಕ ಮಾರಾಟ ವರದಿಯನ್ನು ಪ್ರಕಟಿಸಿದೆ. ವರದಿಗಳ ಪ್ರಕಾರ, ಕಿಯಾ ಇಂಡಿಯಾ ಕಂಪನಿಯು ಕಳೆದ ತಿಂಗಳಿನಲ್ಲಿ 14,441 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ 14,441 ಕಾರುಗಳನ್ನು ಮಾರಾಟ ಮಾಡಿದ Kia India

2021ರ ಆಗಸ್ಟ್ ತಿಂಗಳಿನಲ್ಲಿ ಕಿಯಾ ಇಂಡಿಯಾ ಕಂಪನಿಯು 16,750 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.13.7 ರಷ್ಟು ಇಳಿಕೆ ಕಂಡಿದೆ. ಇನ್ನು ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ 18,676 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ 22.6 ರಷ್ಟು ಇಳಿಕೆಯಾಗಿದೆ. ಕಳೆದ ತಿಂಗಳು ಕಿಯಾ ಕಾರುಗಳ ಮಾರಾಟದಲ್ಲಿ ಇಳಿಕೆಯಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ 14,441 ಕಾರುಗಳನ್ನು ಮಾರಾಟ ಮಾಡಿದ Kia India

ಕಳೆದ ತಿಂಗಳು ಕಿಯಾ ಸೆಲ್ಟೋಸ್ 9,583 ಯುನಿಟ್‌ಗಳೊಂದಿಗೆ ಉತ್ತಮ ಮಾರಾಟವಾದ ಮಾದರಿಯಾಯಿತು, ನಂತರ ಸೊನೆಟ್ 4,454 ಯುನಿಟ್‌ಗಳು ಮಾರಾಟವಾಗಿವೆ, ಕಂಪನಿಯು ಕಾರ್ನಿವಲ್ ಪ್ರೀಮಿಯಂ ಎಂಪಿವಿಯ 404 ಯುನಿಟ್‌ಗಳನ್ನು ಭಾರತದಲ್ಲಿ ಮಾರಾಟ ಮಾಡಿದೆ.ಕಳೆದ ತಿಂಗಳು ಕಿಯಾ ಶೇಕಡಾ 7.8 ರಷ್ಟು ಮಾರುಕಟ್ಟೆ ಪಾಲನ್ನು ಪಡೆದರು.

ಸೆಪ್ಟೆಂಬರ್ ತಿಂಗಳಿನಲ್ಲಿ 14,441 ಕಾರುಗಳನ್ನು ಮಾರಾಟ ಮಾಡಿದ Kia India

ಕಿಯಾ ಇಂಡಿಯಾದ ಉಪಾಧ್ಯಕ್ಷ ಮತ್ತು ಮಾರಾಟ ಮತ್ತು ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಹರ್ದೀಪ್ ಸಿಂಗ್ ಅವರು ಮಾತನಾಡಿ, ನಮ್ಮ ತಂಡಗಳು ಮತ್ತು ಪಾಲುದಾರರ ಅವಿರತ ಪ್ರಯತ್ನಗಳಿಂದ ಬೆಂಬಲಿತವಾದ ನಮ್ಮ ಪ್ರಬಲ ಮಾದರಿಗಳು ದೇಶದ ಅಗ್ರ ವಾಹನ ತಯಾರಕರಲ್ಲಿ ಒಬ್ಬರಾಗಿ ನಮ್ಮ ಪ್ರಬಲ ಓಟವನ್ನು ಮುಂದುವರಿಸಲು ನಮಗೆ ಸಹಾಯ ಮಾಡಿದೆ. ದೀರ್ಘಕಾಲದ ಜಾಗತಿಕ ಸೆಮಿಕಂಡಕ್ಟರ್ ಕೊರತೆ ಉತ್ಪಾದನೆಯನ್ನು ಉತ್ತಮಗೊಳಿಸಲು ಮತ್ತು ನಮ್ಮ ವಾಹನಗಳ ಕಾಯುವ ಅವಧಿಯನ್ನು ನಿಯಂತ್ರಣದಲ್ಲಿಡಲು ಕ್ರಮ ವಹಿಸುತ್ತಿದೆ ಎಂದು ಹೇಳಿದರು.

ಸೆಪ್ಟೆಂಬರ್ ತಿಂಗಳಿನಲ್ಲಿ 14,441 ಕಾರುಗಳನ್ನು ಮಾರಾಟ ಮಾಡಿದ Kia India

ಭಾರತೀಯ ಮಾರುಕಟ್ಟೆಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲನ್ನು ಇತ್ತೀಚೆಗೆ ಸಾಧಿಸಿದೆ. ಕಿಯಾ ಇಂಡಿಯಾ 3 ಲಕ್ಷ ಯೂನಿಟ್‌ಗಳ ಮಾರಾಟದ ಮೈಲಿಗಲ್ಲನ್ನು ತಲುಪಿದ ಭಾರತದ ಅತಿ ವೇಗದ ಕಾರು ತಯಾರಕವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್‌ ಆಗಿರುವ ಕಿಯಾ ಸೆಲ್ಟೋಸ್ ಮತ್ತು ಸೊನೆಟ್ ಎಸ್‍ಯುವಿ ಮಾದರಿಗಳಿಗೆ ಬೇಡಿಕೆ ಹೆಚ್ಚುತ್ತಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ 14,441 ಕಾರುಗಳನ್ನು ಮಾರಾಟ ಮಾಡಿದ Kia India

ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‌ಯುವಿಯು ಅದರ ಒಟ್ಟಾರೆ ಮಾರಾಟದ ಶೇಕಡಾ 66 ರಷ್ಟಿದೆ. ಶೇಕಡಾ 32 ರಷ್ಟು ಮಾರಾಟವು ಕಿಯಾ ಸೋನೆಟ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿ ಮಾರಾಟವಾಗಿದೆ. ಬ್ರ್ಯಾಂಡ್ ಇದುವರೆಗೆ ಕಿಯಾ ಕಾರ್ನಿವಲ್ ಎಂಪಿವಿಯ 7310 ಯುನಿಟ್‌ಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟಗೊಳಿಸಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ 14,441 ಕಾರುಗಳನ್ನು ಮಾರಾಟ ಮಾಡಿದ Kia India

ಮಾರಾಟದಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಿತ್ತು. ಇದೀಗ ಕಿಯಾ ಸೆಲ್ಟೋಸ್ ಎಸ್‍ಯುವಿಯ ಎರಡು ಲಕ್ಷ ಯೂನಿಟ್‌ಗಳನ್ನು ಮಾರಾಟವಾಗಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಕೇವಲ ಎರಡು ವರ್ಷದಲ್ಲಿ ಕಿಯಾ ಸೆಲ್ಟೋಸ್ ಮಾದರಿಯ ಎರಡು ಲಕ್ಷ ಯೂನಿಟ್‌ಗಳು ಮಾರಾಟವಾಗಿವೆ.

ಸೆಪ್ಟೆಂಬರ್ ತಿಂಗಳಿನಲ್ಲಿ 14,441 ಕಾರುಗಳನ್ನು ಮಾರಾಟ ಮಾಡಿದ Kia India

ಇಂತಹ ಕಠಿಣವಾದ ಸಮಯದಲ್ಲಿಯು ಕಿಯಾ ಕಾರುಗಳು ಉತ್ತಮವಾದ ಬೇಡಿಕೆಯನ್ನು ಪಡೆದುಕೊಂಡಿದೆ. ಕಿಯಾ ಡಿಜಿಟಲ್ ಮಾರಾಟವು ಹೆಚ್ಚಿನ ಗ್ರಾಹಕರನು ತಲುಪುತ್ತಿದೆ. ಜನಪ್ರಿಯ ಕಾರು ತಯಾರಕರಾದ ಕಿಯಾ ಇಂಡಿಯಾ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಮಾದರಿ ಸೆಲ್ಟೋಸ್ ಎಸ್‍ಯುವಿಯಾಗಿದೆ. ಈ ಸೆಲ್ಟೋಸ್ ಎಸ್‍ಯುವಿಯು ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು.

ಸೆಪ್ಟೆಂಬರ್ ತಿಂಗಳಿನಲ್ಲಿ 14,441 ಕಾರುಗಳನ್ನು ಮಾರಾಟ ಮಾಡಿದ Kia India

ದೇಶಿಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಸೆಲ್ಟೋಸ್ ಎಸ್‍ಯುವಿಯು ಯಶ್ವಸಿಯಾಗಿದೆ. ಭಾರತದ ಗ್ರಾಹಕರು ಈ ಎಸ್‍‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫುಲ್ ಫಿದಾ ಆಗಿದ್ದಾರೆ. ಬಿಡುಗಡೆಯಾದಾಗಿನಿಂದ ಸೆಲ್ಟೋಸ್ ಎಸ್‍‍ಯುವಿ ಜನಪ್ರಿಯವಾಗುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿದೆ. ಮಾರಾಟದಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಿತ್ತು. ಇದರಿಂದ

ಸೆಪ್ಟೆಂಬರ್ ತಿಂಗಳಿನಲ್ಲಿ 14,441 ಕಾರುಗಳನ್ನು ಮಾರಾಟ ಮಾಡಿದ Kia India

ಕಿಯಾ ಕಂಪನಿಯು ಮಾರಾಟವನ್ನು ಮತ್ತಷ್ಟು ಹೆಚ್ಚಿಸಲು ಸೆಲ್ಟೋಸ್ ಎಸ್‍ಯುವಿಯ ಹೊಸ ಎಕ್ಸ್ ಲೈನ್ ವೆರಿಯೆಂಟ್ ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಕಿಯಾ ಸೆಲ್ಟೋಸ್ ಎಕ್ಸ್ ಲೈನ್ ವೆರಿಯೆಂಟ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.17.79 ಲಕ್ಷಗಳಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ 14,441 ಕಾರುಗಳನ್ನು ಮಾರಾಟ ಮಾಡಿದ Kia India

2020ರ ಆಟೋ ಎಕ್ಸ್‌ಪೋದಲ್ಲಿ ಕಿಯಾ ಎಕ್ಸ್ ಲೈನ್ ಕಾನ್ಸೆಪ್ಟ್ ಅನ್ನು ಪ್ರದರ್ಶಿಸಿದರು. ನಂತರ 2019ರ ಲಾಸ್ ಏಂಜಲೀಸ್ ಆಟೋ ಶೋನಲ್ಲಿ ತನ್ನ ಜಾಗತಿಕ ಪ್ರೀಮಿಯರ್ ನಲ್ಲಿ ಅನಾವರಣಗೊಳಿಸಿತು. 2021ರ ಕಿಯಾ ಸೆಲ್ಟೋಸ್ ಎಕ್ಸ್ ಲೈನ್ ವೆರಿಯೆಂಟ್ ಎಂಜಿನ್ ನಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಸೆಲ್ಟೋಸ್ ಎಸ್‍ಯುವಿಯ ಲೈನ್‌ಅಪ್‌ನಲ್ಲಿ ಹೊಸ ಟಾಪ್-ಆಫ್-ಲೈನ್ ವೆರಿಯೆಂಟ್ ಆಗಿದೆ. ಇದು ಟಾಪ್-ಸ್ಪೆಕ್ ಜಿಟಿ ಲೈನ್ ರೂಪಾಂತರವನ್ನು ಆಧರಿಸಿದೆ. ಹೊ

ಸೆಪ್ಟೆಂಬರ್ ತಿಂಗಳಿನಲ್ಲಿ 14,441 ಕಾರುಗಳನ್ನು ಮಾರಾಟ ಮಾಡಿದ Kia India

ಸೆಲ್ಟೋಸ್ ಎಸ್‍ಯುವಿಯಟಾಪ್-ಆಫ್-ಲೈನ್ ಎಕ್ಸ್ ಲೈನ್ ರೂಪಾಂತರವು ಕಾಸ್ಮೆಟಿಕ್ ವಿನ್ಯಾಸ ಮತ್ತು ಆಂತರಿಕ ಬದಲಾವಣೆಗಳನ್ನು ಪಡೆದುಕೊಂಡಿದೆ, ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಸ್ಪೋರ್ಟಿ ಲುಕ್ ಹೊಂದಿರುವ ವಾಹನಗಳು ಹೆಚ್ಚು ಗ್ರಾಹಕರನ್ನು ಸೆಳೆಯುತ್ತಿದೆ. ಇದರಿಂದ ಈ ಮಾದರಿಯು ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು. ಈ ಹೊಸ ವೆರಿಯೆಂಟ್ ಮಾರಾಟದಲ್ಲಿ ಕಂಪನಿಗೆ ಹೆಚ್ಚಿನ ಕೊಡುಗೆಯನ್ನು ನೀಡಬಹುದು.

More from DriveSpark

Article Published On: Monday, October 4, 2021, 9:57 [IST]
English summary
Kia india sold 14441 units in september 2021 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+