ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Kia Seltos ಎಸ್‍ಯುವಿ
ಜನಪ್ರಿಯ ಕಾರು ತಯಾರಕರಾದ ಕಿಯಾ ಇಂಡಿಯಾ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಮಾದರಿ ಸೆಲ್ಟೋಸ್ ಎಸ್‍ಯುವಿಯಾಗಿದೆ. ಈ ಸೆಲ್ಟೋಸ್ ಎಸ್‍ಯುವಿಯು ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ಅಲ್ಲದೇ ದೇಶಿಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಸೆಲ್ಟೋಸ್ ಎಸ್‍ಯುವಿಯು ಯಶ್ವಸಿಯಾಗಿದೆ.

ಭಾರತದ ಗ್ರಾಹಕರು ಈ ಕಿಯಾ ಸೆಲ್ಟೋಸ್(Kia Seltos) ಎಸ್‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫುಲ್ ಫಿದಾ ಆಗಿದ್ದಾರೆ. ಬಿಡುಗಡೆಯಾದಾಗಿನಿಂದ ಸೆಲ್ಟೋಸ್ ಎಸ್‍ಯುವಿ ಜನಪ್ರಿಯವಾಗುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿದೆ. ಮಾರಾಟದಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಿತ್ತು. ಇದಕ್ಕೆ ಉತ್ತಮ ಉದಾಹರಣೆ ಎಂದರೆ, ಇತ್ತೀಚೆಗೆ ರಸ್ತೆಗಳಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿ ಮಾದರಿ ಹೆಚ್ಚಾಗಿ ಕಾಣುತ್ತದೆ.

2021ರ ಅಕ್ಟೋಬರ್ ತಿಂಗಳಿನಲ್ಲಿ ಕಿಯಾ ಕಂಪನಿಯು ಸೆಲ್ಟೋಸ್ ಮಾದರಿಯ 10,488 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಕಳೆದ ತಿಂಗಳಿನಲ್ಲಿ ಕಿಯಾ ಕಾರುಗಳ ಸರಣಿಯೆಲ್ಲಿ ಅತಿ ಹೆಚ್ಚು ಮಾರಾಟವಾದ ಮಾದರಿ ಸೆಲ್ಟೋಸ್ ಆಗಿದೆ. ಕಿಯಾ ಸೆಲ್ಟೋಸ್ ಕೇವಲ ಹ್ಯುಂಡೈ ಕ್ರೆಟಾವನ್ನು ಮೀರಿಸುವಲ್ಲಿ ಯಶಸ್ವಿಯಾಗಿದೆ, ಅಲ್ಲದೇ ಇಡೀ ದೇಶದಲ್ಲಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿ ಹೊರಹೊಮ್ಮಿತು

ಇನ್ನು ಇತ್ತೀಚೆಗೆ ಕಿಯಾ ಸೆಲ್ಟೋಸ್ ಎಸ್‍ಯುವಿಯ ಎರಡು ಲಕ್ಷ ಯೂನಿಟ್‌ಗಳನ್ನು ಮಾರಾಟವಾಗಿ ಹೊಸ ಮೈಲಿಗಲ್ಲನ್ನು ಸಾಧಿಸಿತ್ತು. ಕೇವಲ ಎರಡು ವರ್ಷದಲ್ಲಿ ಕಿಯಾ ಸೆಲ್ಟೋಸ್ ಮಾದರಿಯ ಎರಡು ಲಕ್ಷ ಯೂನಿಟ್‌ಗಳು ಮಾರಾಟವಾಗಿವೆ.

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಇಂಡಿಯಾ 3 ಒಟ್ಟು3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲನ್ನು ಇತ್ತೀಚೆಗೆ ಸಾಧಿಸಿದೆ. ಕಿಯಾ ಇಂಡಿಯಾ 3 ಲಕ್ಷ ಯೂನಿಟ್‌ಗಳ ಮಾರಾಟದ ಮೈಲಿಗಲ್ಲನ್ನು ತಲುಪಿದ ಭಾರತದ ಅತಿ ವೇಗದ ಕಾರು ತಯಾರಕವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್ ಆಗಿರುವ ಕಿಯಾ ಸೆಲ್ಟೋಸ್ ಮತ್ತು ಸೊನೆಟ್ ಎಸ್‍ಯುವಿ ಮಾದರಿಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ.

ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‌ಯುವಿಯು ಅದರ ಒಟ್ಟಾರೆ ಮಾರಾಟದ ಶೇಕಡಾ 66 ರಷ್ಟಿದೆ. ಇಂತಹ ಕಠಿಣವಾದ ಸಮಯದಲ್ಲಿಯು ಕಿಯಾ ಕಾರುಗಳು ಉತ್ತಮವಾದ ಬೇಡಿಕೆಯನ್ನು ಪಡೆದುಕೊಂಡಿದೆ. ಕಿಯಾ ಡಿಜಿಟಲ್ ಮಾರಾಟವು ಹೆಚ್ಚಿನ ಗ್ರಾಹಕರನು ತಲುಪುತ್ತಿದೆ.

ಇನ್ನು 2021ರ ಕಿಯಾ ಸೆಲ್ಟೋಸ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದು ಹೊಸ ಲೋಗೋ ಪಡೆದುಕೊಂಡಿದೆ. ಈ ಸೆಲ್ಟೋಸ್ ಹೊಸ ಕಾರಿನಲ್ಲಿ ಕಂಪನಿಯು ಸ್ಯಾಂಡ್, ಮಡ್, ಸ್ನೋ ಎನ್ನುವ ಮೂರು ಟ್ರಾಕ್ಷನ್ ಸೌಲಭ್ಯದೊಂದಿಗೆ ನಾರ್ಮಲ್, ಇಕೋ ಮತ್ತು ಸ್ಪೋರ್ಟ್ ಡ್ರೈವಿಂಗ್ ಮೋಡ್‌ಗಳನ್ನು ನೀಡಲಾಗಿದೆ.

ಸೆಲ್ಟೋಸ್ ಹಲವು ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇವುಗಳಲ್ಲಿ 1.5 ಲೀಟರ್ ಪೆಟ್ರೋಲ್, 1.5 ಲೀಟರ್ ಡೀಸೆಲ್ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಗಳಾಗಿವೆ. ಈ ಎಸ್‍ಯುವಿ ಮಾದರಿಯ 1.5 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ 115 ಬಿಎಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 138 ಬಿಎಚ್‍ಪಿ ಪವರ್ ಮತ್ತು 242 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಎಲ್ಲಾ ಎಂಜಿನ್ ಗಳು ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಸಿವಿಟಿ, 1.5 ಲೀಟರ್ ಡೀಸೆಲ್‍ಗೆ ಐವಿಟಿ ಮತ್ತು 1.4 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 6 ಸ್ಪೀಡಿನ ಮ್ಯಾನುವಲ್ ಹಾಗೂ 7 ಸ್ಪೀಡಿನ ಟ್ವಿನ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗಳನ್ನು ಕೂಡ ಅಳವಡಿಸಲಾಗಿದೆ.

ಕಿಯಾ ಸೆಲ್ಟೋಸ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನದ ಫೀಚರ್ಸ್‍ಗಳನ್ನು ಒಳಗೊಂಡಿದೆ.

ಸೆಲ್ಟೋಸ್ ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಅಡ್ಜಸ್ಟ್ ಮಾಡಬಹುದಾದ ಚಾಲಕನ ಸೀಟು, ರೇರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಅನ್ನು ಒಳಗೊಂಡಿದೆ.

ಕೊರಿಯಾ ಮೂಲದ ಜನಪ್ರಿಯ ವಾಹನ ತಯಾರಕ ಕಂಪನಿಯಾದ ಕಿಯಾ ಇಂಡಿಯಾ 2021ರ ಅಕ್ಟೋಬರ್ ತಿಂಗಳ ಮಾಸಿಕ ಮಾರಾಟ ವರದಿಯನ್ನು ಪ್ರಕಟಿಸಿದೆ. ವರದಿಗಳ ಪ್ರಕಾರ, ಕಿಯಾ ಇಂಡಿಯಾ ಕಂಪನಿಯು ಕಳೆದ ತಿಂಗಳಿನಲ್ಲಿ 16,331 ಯುನಿಟ್‌ಗಳನ್ನು ಮಾರಾಟ ಮಾಡಿದೆ.ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಕಿಯಾ ಕಂಪನಿಯು 21,021 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಆದರೆ ಇದು ವರ್ಷದಿಂದ ವರ್ಷಕ್ಕೆ ಸುಮಾರು ಶೇ.22.31 ರಷ್ಟು ಮಾರಾಟದಲ್ಲಿ ಗಮನಾರ್ಹ ಕುಸಿತವನ್ನು ಕಂಡಿದೆ. ಇನ್ನು ಈ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಕಿಯಾ ಇಂಡಿಯಾ 14,441 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು.

ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.13.09 ರಷ್ಟು ಮಾರಾಟದ ಬೆಳವಣಿಗೆಯನ್ನು ಕಂಡಿದೆ. ಆದರೆ ವಾರ್ಷಿಕ ಮಾರಾಟದಲ್ಲಿ ದೊಡ್ಡ ಮಟ್ಟದ ಕುಸಿತವನ್ನು ಕಂಡಿದೆ. ಆದರೆ ಸೆಲ್ಟೋಸ್ ಎಸ್‍ಯುವಿ ಉತ್ತಮವಾಗಿ ಮಾರಾಟವಾಗುತ್ತಿದೆ. ಇನ್ನು ಕಿಯಾ ಸೆಲ್ಟೋಸ್ ಎಸ್‍ಯುವಿ ಮಾದರಿಯು ಭಾರತೀಯು ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್, ಎಂಜಿ ಹೆಕ್ಟರ್, ನಿಸ್ಸಾನ್ ಕಿಕ್ಸ್ ಮತ್ತು ರೆನಾಲ್ಟ್ ಡಸ್ಟರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತಿದೆ.


Click it and Unblock the Notifications








