2021ರ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳ ವಿತರಣೆಗೆ ಚಾಲನೆ ನೀಡಿದ ಕಿಯಾ ಇಂಡಿಯಾ

ಕಿಯಾ ಇಂಡಿಯಾ ಕಂಪನಿಯು ಕಳೆದ ವಾರವಷ್ಟೇ ತನ್ನ ಜನಪ್ರಿಯ ಕಾರು ಮಾದರಿಗಳಾದ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳ 2021ರ ಆವೃತ್ತಿಗಳನ್ನು ಬಿಡುಗಡೆ ಮಾಡಿದ್ದು, ಹೊಸ ಕಾರುಗಳ ವಿತರಣೆಯನ್ನು ಇದೀಗ ಆರಂಭಿಸಲಾಗಿದೆ.

2021ರ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳ ವಿತರಣೆಗೆ ಚಾಲನೆ ನೀಡಿದ ಕಿಯಾ ಇಂಡಿಯಾ

ಕೋವಿಡ್ ಸುರಕ್ಷಾ ಮಾರ್ಗಗಳೊಂದಿಗೆ ಸೀಮಿತ ಸಂಖ್ಯೆಯಲ್ಲಿ ಹೊಸ ವಾಹನಗಳ ವಿತರಣೆ ಆರಂಭಿಸಿರುವ ಕಿಯಾ ಇಂಡಿಯಾ ಕಂಪನಿಯು ಮುಂದಿನ ಕೆಲವೇ ವಾರಗಳಲ್ಲಿ ದೇಶಾದ್ಯಂತ ತನ್ನ ಪ್ರಮುಖ ಡೀಲರ್ಸ್‌ಗಳಲ್ಲಿ ಹೊಸ ಆವೃತ್ತಿಗಳ ಮಾರಾಟವನ್ನು ಆರಂಭಿಸಲಿದೆ. ಕೋವಿಡ್ ಹೆಚ್ಚಿರುವ ಕಾರಣ ಕೆಲವು ರಾಜ್ಯಗಳಲ್ಲಿ ವಾಣಜ್ಯ ಚಟುವಟಿಕೆಗಳಿಗೂ ನಿರ್ಬಂಧ ಹೇರಲಾಗಿದ್ದು, ಇನ್ನು ಕೆಲವು ರಾಜ್ಯಗಳಿಗೆ ವಾಣಿಜ್ಯ ಚಟುವಟಿಕೆಗಳಿಗೆ ಷರತ್ತುಬದ್ದ ಒಪ್ಪಿಗೆ ನೀಡಲಾಗಿದೆ.

2021ರ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳ ವಿತರಣೆಗೆ ಚಾಲನೆ ನೀಡಿದ ಕಿಯಾ ಇಂಡಿಯಾ

ಕಿಯಾ ಇಂಡಿಯಾ ಕೂಡಾ ಷರತ್ತುಬದ್ದ ವಾಣಿಜ್ಯ ಚಟುವಟಿಕೆಯೊಂದಿಗೆ ಹೊಸ ವಾಹನ ಮಾರಾಟವನ್ನು ಕೈಗೊಳ್ಳುತ್ತಿದ್ದು, ಸಾಧ್ಯವಿರುವ ಕಡೆಗಳಲ್ಲಿ ಹೊಸ ವಾಹನಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುತ್ತಿದೆ.

2021ರ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳ ವಿತರಣೆಗೆ ಚಾಲನೆ ನೀಡಿದ ಕಿಯಾ ಇಂಡಿಯಾ

ಕಾರುಗಳ ಖರೀದಿಯನ್ನು ಸುರಕ್ಷಿತವಾಗಿಸಲು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳ ಮೇಲೆ ಹೆಚ್ಚು ಗಮನಹರಿಸಲಾಗಿದ್ದು, ಕಿಯಾ ಕಂಪನಿಯು ಕೂಡಾ ಪರಿಸ್ಥಿತಿಗೆ ಅನುಗುಣವಾಗಿ ವಾಹನ ಉತ್ಪಾದನೆಯಲ್ಲಿ ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನೆ ಮುಂದುವರಿಸಿದೆ.

2021ರ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳ ವಿತರಣೆಗೆ ಚಾಲನೆ ನೀಡಿದ ಕಿಯಾ ಇಂಡಿಯಾ

ಇನ್ನು 2021ರ ಸೆಲ್ಟೊಸ್ ಮತ್ತು ಸೊನೆಟ್ ಆವೃತ್ತಿಗಳು ಬ್ರಾಂಡ್ ನ್ಯೂ ಲೊಗೊ ಸೇರಿದಂತೆ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಕಾರುಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.79 ಲಕ್ಷ(ಸೊನೆಟ್) ಮತ್ತು ರೂ. 9.95 ಲಕ್ಷ(ಸೆಲ್ಟೊಸ್) ಬೆಲೆ ಹೊಂದಿವೆ.

2021ರ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳ ವಿತರಣೆಗೆ ಚಾಲನೆ ನೀಡಿದ ಕಿಯಾ ಇಂಡಿಯಾ

2021ರ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳಲ್ಲಿ ಹೊಸ ಲೊಗೊ ವಿನ್ಯಾಸವು ಕಾರುಗಳಿಗೆ ಮತ್ತಷ್ಟು ಮೆರಗು ನೀಡುತ್ತಿದ್ದು, ಸೊನೆಟ್ ಮಾದರಿಯಲ್ಲಿ ಹೊಸ ಲೊಗೊ ಹೊರತುಪಡಿಸಿ ಈ ಹಿಂದಿನ ತಾಂತ್ರಿಕ ಅಂಶಗಳನ್ನೆ ಮುಂದುವರಿಸಿದ್ದಲ್ಲಿ ಸೆಲ್ಟೊಸ್ ಮಾದರಿಯಲ್ಲಿ ಹೊಸ ಲೊಗೊ ಜೊತೆಗೆ ಕೆಲವು ಪ್ರಮುಖ ಬದಲಾವಣೆಗಳನ್ನು ಜೋಡಣೆ ಮಾಡಲಾಗಿದೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

2021ರ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳ ವಿತರಣೆಗೆ ಚಾಲನೆ ನೀಡಿದ ಕಿಯಾ ಇಂಡಿಯಾ

ಹೊಸ ಸೆಲ್ಟೊಸ್ ಕಾರು ಮಾದರಿಯು ಹಳೆಯ ಆವೃತ್ತಿಗಿಂತಲೂ ರೂ. 6 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದ್ದು, ಬೇಡಿಕೆಯ ಆಧಾರದ ಮೇಲೆ ಸೆಲ್ಟೊಸ್ ಹೆಚ್‌ಟಿಎಕ್ಸ್ ಪ್ಲಸ್ 1.5 ಡೀಸೆಲ್ ಆವೃತ್ತಿಯ ಮಾರಾಟವನ್ನು ಸ್ಥಗಿತಗೊಳಿಸಿದೆ.

2021ರ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳ ವಿತರಣೆಗೆ ಚಾಲನೆ ನೀಡಿದ ಕಿಯಾ ಇಂಡಿಯಾ

ಹಾಗೆಯೇ ಕಂಪನಿಯು ಹೆಚ್‌ಟಿಕೆ ಪ್ಲಸ್ 1.5-ಲೀಟರ್ ಪೆಟ್ರೋಲ್ ಮಾದರಿಯಲ್ಲಿ ಹೊಸದಾಗಿ ಐಎಂಟಿ(ಇಂಟಲಿಜೆನ್ಸ್ ಮ್ಯಾನುವಲ್ ಟ್ರಾನ್ಸ್‌ಮಿಷನ್) ಆಯ್ಕೆ ನೀಡಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಹೊಸದಾಗಿ ಕಂಪನಿಯು ಜಿಟಿಎಕ್ಸ್ ಆಪ್ಷನ್ ಆವೃತ್ತಿಯಲ್ಲಿ ಪೆಟ್ರೋಲ್ ಮ್ಯಾನುವಲ್ ಹೊಂದಿರುವ 1.4-ಲೀಟರ್ ಟರ್ಬೊ ಎಂಜಿನ್ ಆಯ್ಕೆ ನೀಡಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

2021ರ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳ ವಿತರಣೆಗೆ ಚಾಲನೆ ನೀಡಿದ ಕಿಯಾ ಇಂಡಿಯಾ

ಇನ್ನುಳಿದಂತೆ ಸೊನೆಟ್ ಕಾರು ಮಾದರಿಯು ಹೊಸ ಲೊಗೊ ಹೊರತುಪಡಿಸಿ ಪ್ರಸ್ತುತ ಮಾರುಕಟ್ಟೆಯಲ್ಲಿರುವಂತೆ ತಾಂತ್ರಿಕ ಅಂಶಗಳನ್ನು ಮುಂದುವರಿಸಿದ್ದು, ಹೊಸ ಕಾರು 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.

Image Courtesy: Nagarjuna

Most Read Articles

Kannada
English summary
2021 Kia Sonet, Seltos Delivery Starts. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X